ಕ್ರಿಶ್ಚಿಯನ್ ಧರ್ಮ
ಹಿಂದೆ

1 ಪೂರ್ವಕಾಲವೃತ್ತಾಂತ 12

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ದಾವೀದನು ಕೀಷನ ಮಗನಾದ ಸೌಲನಿಗೆ ಹೆದರಿ ಚಿಕ್ಲಗಿನಲ್ಲಿ ಅಡಗಿಕೊಂಡಿದ್ದಾಗ

2ಬಿಲ್ಲುಗಾರರೂ, ಎಡಗೈ ಬಲಗೈಗಳಿಂದ ಕಲ್ಲುಗಳನ್ನೂ ಮತ್ತು ಬಾಣಗಳನ್ನೂ ಎಸೆಯಬಲ್ಲವರೂ ಆಗಿದ್ದು ಯುದ್ಧದಲ್ಲಿ ಸಹಾಯಮಾಡುವುದಕ್ಕಾಗಿ ಅವನ ಬಳಿಗೆ ಬಂದ ಯುದ್ಧವೀರರ ಪಟ್ಟಿ.

3ಸೌಲನ ಕುಲಬಂಧುಗಳಾದ ಬೆನ್ಯಾಮೀನ್ಯರಲ್ಲಿ ಮುಖ್ಯಸ್ಥನಾದ ಅಹೀಯೆಜೆರ್ ಮತ್ತು ಯೋವಾಷ ಎಂಬ ಗಿಬೆಯ ಊರಿನ ಹಷ್ಷೆಮಾಹನ ಮಕ್ಕಳು. ಅಜ್ಮಾವೆತನ ಮಕ್ಕಳಾದ ಯೆಜೀಯೇಲ್ ಪೆಲೆಟರು. ಅನತೋತ್ ಊರಿನವರಾದ ಯೇಹು ಬೇರಾಕಾರು,

4ಮೂವತ್ತು ಭಟರಲ್ಲಿ ಶೂರನು ಮುಖ್ಯಸ್ಥನು ಆದ ಗಿಬ್ಯೋನಿನ ಇಷ್ಮಾಯ, ಗೆದೇರಾ ಊರಿನವರಾದ ಯೆರೆಮೀಯ ಯಹಜೀಯೇಲ್, ಯೋಹಾನಾನ್, ಯೋಜಾಬಾದರು,

5ಹರೀಫ್ಯರಾದ ಎಲ್ಲೂಜೈ, ಯೆರೀಮೋತ್, ಬೆಯಲ್ಯ, ಶೆಮರ್ಯ, ಶೆಫಟ್ಯರು,

6ಕೋರಹಿಯರಾದ ಎಲ್ಕಾನ್, ಇಷ್ಷೀಯ, ಅಜರೇಲ್, ಯೋವೆಜೆರ್, ಯಾಷೊಬ್ಬಾಮರು,

7ಗೆದೋರಿನ ಯೆರೋಹಾಮನ ಮಕ್ಕಳಾದ ಯೋವೇಲ ಮತ್ತು ಜೆಬದ್ಯರು ಇವರೇ.

8ಯುದ್ಧವೀರರೂ ಯುದ್ಧನಿಪುಣರೂ, ಗುರಾಣಿಬರ್ಜಿಗಳಲ್ಲಿ ಪ್ರವೀಣರೂ, ಸಿಂಹಮುಖರೂ, ಬೆಟ್ಟದ ಜಿಂಕೆಯಂತೆ ಓಡುವ ಚುರುಕು ಕಾಲಿನವರು ಆಗಿದ್ದು, ದಾವೀದನು ಅರಣ್ಯ ದುರ್ಗದಲ್ಲಿದ್ದಾಗ ಅವನನ್ನು ಸೇರಿಕೊಂಡ ಗಾದ್ಯರು:

9ಮುಖ್ಯಸ್ಥನು ಏಜೆರ್, ಎರಡನೆಯವನು ಓಬದ್ಯ, ಮೂರನೆಯವನು ಎಲೀಯಾಬ್,

10ನಾಲ್ಕನೆಯವನು ಮಷ್ಮನ್ನ, ಐದನೆಯವನು ಯೆರೆಮೀಯ,

11ಆರನೆಯವನು ಅತ್ತೈ, ಏಳನೆಯವನು ಎಲೀಯೇಲ್,

12ಎಂಟನೆಯವನು ಯೋಹಾನಾನ್, ಒಂಬತ್ತನೆಯವನು ಎಲ್ಜಾಬಾದ್,

13ಹತ್ತನೆಯವನು ಯೆರೆಮೀಯನು, ಹನ್ನೊಂದನೆಯವನು ಮಕ್ಬನ್ನೈ ಇವರೇ.

14ಗಾದ್ಯರಾದ ಇವರು ಸೇನಾಧಿಪತಿಗಳಾಗಿದ್ದರು. ಇವರಲ್ಲಿ ಕನಿಷ್ಠನಾದವನು ನೂರು ಜನರ ಮೇಲೆಯೂ, ಶ್ರೇಷ್ಠನಾದವನು ಸಾವಿರ ಜನರ ಮೇಲೆಯೂ ಇದ್ದರು.

15ಯೊರ್ದನ್ ನದಿಯು ಮೊದಲನೆಯ ತಿಂಗಳಿನಲ್ಲಿ ದಡ ತುಂಬಿ ಹರಿಯುತ್ತಿರುವಾಗ, ಇವರು ಅದನ್ನು ದಾಟಿ ನದಿಯ ತಗ್ಗಿನ ಪೂರ್ವ ಮತ್ತು ಪಶ್ಚಿಮ ಪ್ರದೇಶದಲ್ಲಿರವ ಎಲ್ಲರನ್ನೂ ಓಡಿಸಿಬಿಟ್ಟರು.

16ಬೆನ್ಯಾಮೀನ್ ಮತ್ತು ಯೂದ ಕುಲದವರಲ್ಲಿ ಕೆಲವರು ದಾವೀದನಿದ್ದ ದುರ್ಗದ ಬಳಿಗೆ ಬರಲು ದಾವೀದನು ಹೊರಗೆ ಹೋಗಿ ಅವರೆದುರಿಗೆ ನಿಂತು ಅವರಿಗೆ,

17“ನೀವು ಸ್ನೇಹಭಾವದಿಂದ ಸಹಾಯ ಮಾಡುವುದಕ್ಕಾಗಿ ನನ್ನ ಬಳಿಗೆ ಬಂದಿರುವುದಾದರೆ ನಿಮ್ಮೊಡನೆ ನನಗೆ ಐಕ್ಯಭಾವವಿರುವುದು. ನಿರಪರಾಧಿಯಾದ ನನ್ನನ್ನು ನನ್ನ ವಿರೋಧಿಗಳಿಗೆ ಒಪ್ಪಿಸುವ ಕುಯುಕ್ತಿಯಿಂದ ಬಂದಿರುವುದಾದರೆ ನಮ್ಮ ಪೂರ್ವಿಕರ ದೇವರು ನಿಮ್ಮನ್ನು ನೋಡಿ ದಂಡಿಸಲಿ” ಎಂದು ಹೇಳಿದನು.

18ಆಗ ಮೂವತ್ತು ಜನರಲ್ಲಿ ಮುಖ್ಯಸ್ಥನಾದ ಅಮಾಸೈಯು ಆತ್ಮಾವೇಶವುಳ್ಳವನಾಗಿ, “ದಾವೀದನೇ, ನಾವು ನಿನ್ನವರು; ಶುಭವಾಗಲಿ! ಇಷಯನ ಮಗನೇ, ನಾವು ನಿನ್ನ ಪಕ್ಷದವರು; ಶುಭವಾಗಲಿ! ನಿನಗೂ ನಿನ್ನ ಸಹಾಯಕರಿಗೂ ಶುಭವಾಗಲಿ! ನಿನ್ನ ದೇವರು ನಿನಗೆ ಜಯವನ್ನು ಕೊಡುವವನಾಗಿದ್ದಾನೆ” ಎಂದು ಹೇಳಿದನು. ಆಗ ದಾವೀದನು ಅವರನ್ನು ತನ್ನ ಜೊತೆಯಲ್ಲಿ ಸೇರಿಸಿಕೊಂಡು ಸೈನ್ಯಾಧಿಪತಿಗಳನ್ನಾಗಿ ನೇಮಿಸಿದನು.

19ಸೌಲನಿಗೆ ವಿರುದ್ಧವಾಗಿ ಯುದ್ಧಕ್ಕೆ ಹೋಗುವ ಫಿಲಿಷ್ಟಿಯರ ಜೊತೆಯಲ್ಲಿ ದಾವೀದನೂ ಹೋಗುತ್ತಿರುವಾಗ ಕೆಲವು ಜನ ಮನಸ್ಸೆಯವರು ಬಂದು ಅವನೊಡನೆ ಸೇರಿಕೊಂಡರು. ದಾವೀದನು ನಿಜವಾಗಿ ಫಿಲಿಷ್ಟಿಯರಿಗೆ ಸಹಾಯಕನು ಆಗಿರಲಾರನೆಂದು, ಅವರ ಪ್ರಭುಗಳು, “ಇವನು ನಮ್ಮ ತಲೆಗಳನ್ನು ಕಡಿದು ತಿರುಗಿ ತನ್ನ ಯಜಮಾನನಾದ ಸೌಲನೊಂದಿಗೆ ಸೇರಿಕೊಂಡಾನು” ಎಂಬುದಾಗಿ ಆಲೋಚಿಸಿ ಅವನನ್ನು ಹಿಂದಕ್ಕೆ ಕಳುಹಿಸಿದರು.

20ಅವನು ಹಿಂತಿರುಗಿ ಚಿಕ್ಲಗಿಗೆ ಹೋಗುವಾಗ ಮನಸ್ಸೆ ಕುಲದ ಸಹಸ್ರಾಧಿಪತಿಗಳಾದ ಅದ್ನ, ಯೋಜಾಬಾದ್, ಎದೀಗಯೇಲ್, ಮೀಕಾಯೇಲ್, ಯೋಜಾಬಾದ್, ಎಲೀಹು ಮತ್ತು ಚಿಲ್ಲೆತೈ ಎಂಬುವರು ಬಂದು ಅವನೊಂದಿಗೆ ಸೇರಿಕೊಂಡರು.

21ಯುದ್ಧವೀರರೂ, ಸೇನಾಧಿಪತಿಗಳೂ ಆದ ಇವರೆಲ್ಲರೂ ಸುಲಿಗೆ ಗುಂಪುಗಳಿಗೆ ವಿರೋಧವಾಗಿ ದಾವೀದನಿಗೆ ಸಹಾಯಮಾಡುವವರಾದರು.

22ದಾವೀದನ ಸಹಾಯಕ್ಕೆ ಪ್ರತಿದಿನವೂ ಹೊಸ ಗುಂಪುಗಳು ಬರುತ್ತಿದ್ದವು. ಅವನ ಸೈನ್ಯವು ದೇವರ ಸೈನ್ಯದಷ್ಟು ದೊಡ್ಡದಾಯಿತು.

23ಯೆಹೋವನ ಆಜ್ಞೆಯಂತೆ ಸೌಲನ ರಾಜ್ಯವನ್ನು ದಾವೀದನಿಗೆ ಒಪ್ಪಿಸುವುದಕ್ಕೋಸ್ಕರ ಹೆಬ್ರೋನಿನಲ್ಲಿದ್ದ ಅವನ ಬಳಿಗೆ ಗುಂಪುಗುಂಪುಗಳಾಗಿ ಬಂದ ಯುದ್ಧಸನ್ನದ್ಧರಾಗಿದ್ದವರ ಲೆಕ್ಕ;

24ಯೆಹೂದ್ಯರಿಂದ ಬರ್ಜಿ, ಗುರಾಣಿಗಳನ್ನು ಹಿಡಿದ ಸೈನಿಕರು ಆರು ಸಾವಿರದ ಎಂಟನೂರು.

25ಸಿಮೆಯೋನ್ಯರಿಂದ ಏಳು ಸಾವಿರದ ನೂರು ಯುದ್ಧವೀರರು.

26ಲೇವಿಯರಿಂದ ನಾಲ್ಕು ಸಾವಿರದ ಆರುನೂರು ಸೈನಿಕರಲ್ಲದೆ,

27ಆರೋನ್ಯರ ಮುಖ್ಯಸ್ಥನಾದ ಯೆಹೋಯಾದಾವನೂ ಮತ್ತು ಅವನ ಮೂರು ಸಾವಿರದ ಏಳು ನೂರು ಸೈನಿಕರೂ;

28ಪರಾಕ್ರಮಶಾಲಿಯಾದ ಚಾದೋಕನೆಂಬ ಯೌವನಸ್ಥನೂ, ಅವನ ಕುಟುಂಬದವರಾದ ಇಪ್ಪತ್ತೆರಡು ಅಧಿಪತಿಗಳೂ,

29ಸೌಲನ ಸಂಬಂಧಿಕರಾದ ಬೆನ್ಯಾಮೀನ್ಯರಲ್ಲಿ ಮೂರು ಸಾವಿರ ಸೈನಿಕರು ಬಂದರು. ಬೆನ್ಯಾಮೀನ್ಯರಲ್ಲಿ ಹೆಚ್ಚಿನ ಭಾಗದವರು ಸೌಲನ ಮನೆಯವರೊಂದಿಗೆ ಸೇರಿಕೊಂಡಿದ್ದರು.

30ಎಫ್ರಾಯೀಮಿನ ಆಯಾ ಗೋತ್ರಗಳಲ್ಲಿ ಪ್ರಸಿದ್ಧರಾದ ಇಪ್ಪತ್ತು ಸಾವಿರದ ಎಂಟುನೂರು ಮಹಾಯುದ್ಧವೀರರು,

31ಮನಸ್ಸೆಯ ಅರ್ಧ ಕುಲದಿಂದ ದಾವೀದನ ಪಟ್ಟಾಭಿಷೇಕಕ್ಕೆ ಹೋಗಬೇಕೆಂದು ಹೆಸರುಹೆಸರಾಗಿ ನೇಮಿಸಲ್ಪಟ್ಟವರು ಹದಿನೆಂಟು ಸಾವಿರ ಸೈನಿಕರು.

32ಇಸ್ಸಾಕಾರ್ಯರಿಂದ ಇನ್ನೂರು ಮುಖ್ಯಸ್ಥರು. ಇವರು ಸಮಯೋಚಿತಜ್ಞಾನವುಳ್ಳವರಾಗಿ ಇಸ್ರಾಯೇಲರು ಮಾಡತಕ್ಕದ್ದನ್ನು ಅರಿತವರಾಗಿದ್ದರು. ಇವರ ಸಹೋದರರೆಲ್ಲರೂ ಇವರ ಆಜ್ಞೆಗೆ ಬದ್ಧರಾಗಿದ್ದರು.

33ಜೆಬುಲೂನ್ಯರಿಂದ ಯುದ್ಧಪ್ರವೀಣರೂ, ಸರ್ವಾಯುಧಗಳನ್ನು ಧರಿಸಿ ವ್ಯೂಹಕಟ್ಟ ಬಲ್ಲವರೂ, ದೃಢಚಿತ್ತರೂ ಆದರು ಐವತ್ತು ಸಾವಿರ ಸೈನಿಕರು.

34ನಫ್ತಾಲಿಯರಿಂದ ಸಾವಿರ ನಾಯಕರೂ, ಗುರಾಣಿಬರ್ಜಿಗಳನ್ನು ಹಿಡಿದಿರುವ ಮೂವತ್ತೇಳು ಸಾವಿರ ಸೈನಿಕರೂ,

35ದಾನ್ಯರಿಂದ ಇಪ್ಪತ್ತೆಂಟು ಸಾವಿರದ ಆರುನೂರು ಯುದ್ಧನಿಪುಣರು.

36ಆಶೇರ್ಯರಿಂದ ಯುದ್ಧಕ್ಕೆ ಸಿದ್ಧರಾದ ನಲ್ವತ್ತು ಸಾವಿರ ಯುದ್ಧನಿಪುಣರು,

37ಯೊರ್ದನಿನ ಆಚೆಯಲ್ಲಿದ್ದ ರೂಬೇನ್, ಗಾದ್, ಅರ್ಧಮನಸ್ಸೆ ಕುಲಗಳಿಂದ ಸರ್ವಾಯುದ್ಧಧಾರಿಗಳಾದ ಒಂದು ಲಕ್ಷದ ಇಪ್ಪತ್ತು ಸಾವಿರ ಸೈನಿಕರು.

38ದಾವೀದನನ್ನು ಇಸ್ರಾಯೇಲರ ಅರಸನನ್ನಾಗಿ ಮಾಡುವುದಕ್ಕೋಸ್ಕರ ಯುದ್ಧನಿಪುಣರಾದ ಈ ಎಲ್ಲಾ ಸೈನಿಕರು ಪೂರ್ಣಮನಸ್ಸಿನಿಂದ ಹೆಬ್ರೋನಿಗೆ ಬಂದರು. ಉಳಿದ ಎಲ್ಲಾ ಇಸ್ರಾಯೇಲರು ದಾವೀದನಿಗೆ ರಾಜ್ಯಾಭಿಷೇಕಮಾಡುವುದರಲ್ಲಿ ಏಕಮನಸ್ಸುಳ್ಳವರಾಗಿದ್ದರು.

39ಅವರು ಅಲ್ಲಿ ಮೂರು ದಿನ ದಾವೀದನ ಸಂಗಡ ಇದ್ದು ಅನ್ನ ಪಾನಗಳನ್ನು ತೆಗೆದುಕೊಂಡರು. ಅವರ ಸಹೋದರರು ಅವರಿಗೋಸ್ಕರ ಎಲ್ಲವನ್ನೂ ಸಿದ್ಧಪಡಿಸಿದರು.

40ಇದಲ್ಲದೆ ಇಸ್ಸಾಕಾರ್, ಜೆಬುಲೂನ್, ನಫ್ತಾಲಿ ಮೊದಲುಗೊಂಡು ಎಲ್ಲಾ ಸಮೀಪ ಪ್ರಾಂತ್ಯಗಳವರು ಎತ್ತು, ಕತ್ತೆ, ಹೇಸರಗತ್ತೆ, ಒಂಟೆ ಇವುಗಳ ಮೇಲೆ ಆಹಾರ ಪದಾರ್ಥಗಳನ್ನು ಹೊತ್ತುಕೊಂಡು ಬಂದರು. ಅವರು ತರತರದ ರೊಟ್ಟಿ, ಅಂಜೂರಹಣ್ಣಿನ ಉಂಡೆ, ಒಣಗಿದ ದ್ರಾಕ್ಷಿಗೊಂಚಲು, ದ್ರಾಕ್ಷಾರಸ, ಎಣ್ಣೆ, ಅನೇಕ ದನಕುರಿಗಳು ಇವುಗಳನ್ನು ತಂದರು. ಇಸ್ರಾಯೇಲರೊಳಗೆ ಮಹಾ ಸಂಭ್ರಮ ಸಂತೋಷವಿತ್ತು.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath