ಕ್ರಿಶ್ಚಿಯನ್ ಧರ್ಮ
ಹಿಂದೆ

1 ಪೂರ್ವಕಾಲವೃತ್ತಾಂತ 17

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ದಾವೀದನು ತನ್ನ ಅರಮನೆಯಲ್ಲಿ ವಾಸಿಸುತ್ತಿದ್ದಾಗ ಒಂದು ದಿನ ಅವನು ಪ್ರವಾದಿಯಾದ ನಾತಾನನನ್ನು ಬರಲು ಹೇಳಿ, “ನೋಡು, ನಾನು ದೇವದಾರುಮರದ ಅರಮನೆಯಲ್ಲಿ ವಾಸವಾಗಿದ್ದೇನೆ. ಯೆಹೋವನ ಒಡಂಬಡಿಕೆ ಮಂಜೂಷವಾದರೋ ಬಟ್ಟೆಯ ಮನೆಯಲ್ಲಿ ಇರುತ್ತದೆ” ಎಂದು ಹೇಳಿದನು.

2ನಾತಾನನು ದಾವೀದನಿಗೆ, “ನಿನಗೆ ಮನಸ್ಸಿದ್ದಂತೆ ಮಾಡು, ದೇವರು ನಿನ್ನ ಸಂಗಡ ಇರುತ್ತಾನೆ” ಎಂದನು.

3ಅದೇ ರಾತ್ರಿಯಲ್ಲಿ ದೇವರು ನಾತಾನನಿಗೆ ಆಜ್ಞಾಪಿಸಿದ್ದೇನೆಂದರೆ,

4“ಹೋಗಿ ನನ್ನ ಸೇವಕನಾದ ದಾವೀದನಿಗೆ, ‘ನೀನು ನನಗೆ ಆಲಯವನ್ನು ಕಟ್ಟಬಾರದು.

5ನಾನು ಇಸ್ರಾಯೇಲರನ್ನು ಐಗುಪ್ತದೇಶದಿಂದ ಬರಮಾಡಿದಂದಿನಿಂದ ಇಂದಿನ ವರೆಗೂ ಮನೆಯಲ್ಲಿ ವಾಸಮಾಡಲಿಲ್ಲ. ಗುಡಾರಗಳಲ್ಲಿ ವಾಸಿಸುತ್ತಾ ಇದ್ದೆನು.

6ನಾನು ಇಸ್ರಾಯೇಲರ ಮಧ್ಯದಲ್ಲಿ ಸಂಚರಿಸುತ್ತಿದ್ದಾಗೆಲ್ಲಾ ನನ್ನ ಜನರಾದ ಇಸ್ರಾಯೇಲರನ್ನು ಪಾಲಿಸುವುದಕ್ಕೋಸ್ಕರ ನನ್ನಿಂದ ನೇಮಿಸಲ್ಪಟ್ಟ ಯಾವ ನ್ಯಾಯಸ್ಥಾಪಕನ್ನಾದರೂ ನೀವು ನನಗೋಸ್ಕರ ದೇವದಾರುಮರದ ಮನೆಯನ್ನು ಏಕೆ ಕಟ್ಟಲಿಲ್ಲ ಎಂದು ಕೇಳಿದೆನೋ ಎಂಬುದಾಗಿ ಯೆಹೋವನು ಅನ್ನುತ್ತಾನೆ’” ಎಂದು ಹೇಳು ಎಂದನು.

7ಇದಲ್ಲದೆ ನೀನು ನನ್ನ ಸೇವಕನಾದ ದಾವೀದನಿಗೆ ಹೇಳಬೇಕಾದದ್ದೇನೆಂದರೆ, “ಸೇನಾಧೀಶ್ವರನಾದ ಯೆಹೋವನು ಹೀಗೆನ್ನುತ್ತಾನೆ, ಕುರಿಗಳ ಹಿಂದೆ ಹೋಗುತ್ತಿದ್ದ ನಿನ್ನನ್ನು ಅಡವಿಯಿಂದ ಕರೆದುಕೊಂಡು ಬಂದು ನನ್ನ ಪ್ರಜೆಗಳಾದ ಇಸ್ರಾಯೇಲರಿಗೆ ನಾಯಕನನ್ನಾಗಿ ನೇಮಿಸಿದೆನು.

8ನೀನು ಹೋದಲ್ಲೆಲ್ಲಾ ನಾನು ನಿನ್ನ ಸಂಗಡ ಇದ್ದೆನು. ನಿನ್ನ ಶತ್ರುಗಳನ್ನೆಲ್ಲಾ ನಿನ್ನೆದುರಿನಲ್ಲಿಯೇ ಸಂಹರಿಸಿಬಿಟ್ಟೆನು. ಲೋಕದ ಮಹಾಪುರುಷರ ಹೆಸರಿನಂತೆ ನಿನ್ನ ಹೆಸರನ್ನೂ ಪ್ರಸಿದ್ಧಪಡಿಸುವೆನು.

9ನನ್ನ ಪ್ರಜೆಗಳಾದ ಇಸ್ರಾಯೇಲರಿಗೆ ಒಂದು ಸ್ಥಳವನ್ನು ಕೊಟ್ಟು ಅದರಲ್ಲಿ ಅವರನ್ನು ನೆಲೆಗೊಳಿಸುವೆನು. ಅವರು ಇನ್ನು ಮೇಲೆ ಯಾವ ಭಯವೂ ಇಲ್ಲದೆ ಅಲ್ಲಿ ವಾಸಮಾಡುವರು.

10ಪೂರ್ವಕಾಲದಲ್ಲೂ, ನಾನು ನನ್ನ ಜನರಾದ ಇಸ್ರಾಯೇಲರಿಗಾಗಿ ನೇಮಿಸಿದ ನ್ಯಾಯಸ್ಥಾಪಕರ ಕಾಲದಿಂದೀಚೆಗೆ ದುಷ್ಟರು ಅವರನ್ನು ಕುಗ್ಗಿಸಿದಂತೆ ಇನ್ನು ಕುಗ್ಗಿಸುವುದಿಲ್ಲ. ನಿನ್ನ ಶತ್ರುಗಳನ್ನು ನಿನಗೆ ಅಧೀನಮಾಡುವೆನು. ಇದಲ್ಲದೆ ಯೆಹೋವನಾದ ನಾನು ನಿನಗೋಸ್ಕರ ಒಂದು ಮನೆಯನ್ನು ಕಟ್ಟುವೆನು ಎಂದು ಮಾತುಕೊಡುತ್ತೇನೆ.

11ನಿನ್ನ ಆಯುಷ್ಕಾಲವು ಮುಗಿದು ನೀನು ಪೂರ್ವಿಕರ ಬಳಿಗೆ ಸೇರಿದ ಮೇಲೆ, ನಿನ್ನ ಮಕ್ಕಳಲ್ಲಿ ಒಬ್ಬನನ್ನು ಅಭಿವೃದ್ಧಿಪಡಿಸಿ, ಅವನ ರಾಜ್ಯವನ್ನು ಸ್ಥಿರಪಡಿಸುವೆನು.

12ಅವನು ನನಗಾಗಿ ಒಂದು ಮನೆಯನ್ನು ಕಟ್ಟುವನು. ನಾನು ಅವನ ಸಿಂಹಾಸನವನ್ನು ನಿರಂತರವಾಗಿ ಸ್ಥಿರಪಡಿಸುವೆನು.

13ನಾನು ಅವನಿಗೆ ತಂದೆಯಾಗಿರುವೆನು, ಅವನು ನನಗೆ ಮಗನಾಗಿರುವನು. ನನ್ನ ಕೃಪೆಯನ್ನು ನಿನಗಿಂತ ಮುಂಚೆ ಇದ್ದವನಿಂದ ತೆಗೆದು ಹಾಕಿದ ಹಾಗೆ ಅವನಿಂದ ತೆಗೆಯುವುದಿಲ್ಲ.

14ಅವನನ್ನು ನನ್ನ ಮನೆಯಲ್ಲಿಯೂ, ನನ್ನ ರಾಜ್ಯದಲ್ಲಿಯೂ ಸದಾ ಸ್ಥಿರಗೊಳಿಸುವೆನು. ಅವನ ಸಿಂಹಾಸನವು ಶಾಶ್ವತವಾಗಿರುವುದು” ಎಂಬುದೇ.

15ನಾತಾನನು ತನಗುಂಟಾದ ದರ್ಶನದ ಈ ಎಲ್ಲಾ ಮಾತುಗಳನ್ನು ದಾವೀದನಿಗೆ ಹೇಳಿದನು.

16ಆಗ ಅರಸನಾದ ದಾವೀದನು ಹೋಗಿ ಯೆಹೋವನ ಸನ್ನಿಧಿಯಲ್ಲಿ ಕುಳಿತುಕೊಂಡು ಹೇಳಿದ್ದೇನೆಂದರೆ, “ದೇವರೇ, ಯೆಹೋವನೇ, ನನ್ನಂಥವನಿಗೆ ಈ ಪದವಿಯನ್ನು ಅನುಗ್ರಹಿಸಿದ್ದಿ, ನಾನೆಷ್ಟರವನು? ನನ್ನ ಮನೆ ಎಷ್ಟರದು?

17ದೇವರೇ, ಇದು ಸಾಲದೆಂದೆಣಿಸಿ, ನಿನ್ನ ಸೇವಕನ ಮುಂಬರುವ ಸಂತಾನದ ವಿಷಯವಾಗಿಯೂ ನನಗೆ ವಾಗ್ದಾನಮಾಡಿರುವೆ. ದೇವರೇ, ಯೆಹೋವನೇ, ನಾನು ನಿನ್ನ ದೃಷ್ಟಿಯಲ್ಲಿ ಅಲ್ಪನಾಗಿದ್ದರೂ ನೀನು ನನ್ನನ್ನು ಕಟಾಕ್ಷಿಸಿದ್ದೀ.

18ನೀನು ನಿನ್ನ ಸೇವಕನಾದ ದಾವೀದನನ್ನು ಬಲ್ಲೆ. ಅವನು ತನಗುಂಟಾದ ಘನತೆಯನ್ನು ಕುರಿತು ಇನ್ನೇನು ಹೇಳಾನು.

19ಯೆಹೋವನೇ, ನಿನ್ನ ಸೇವಕನ ಮೇಲಿಗಾಗಿಯೂ, ನಿನ್ನ ಚಿತ್ತಾನುಸಾರವಾಗಿಯೂ ಈ ಎಲ್ಲಾ ಮಹತ್ಕಾರ್ಯಗಳನ್ನು ನಡೆಸಿ, ನಿನ್ನ ಸತ್ಯ ಮಹತ್ವವನ್ನು ತೋರ್ಪಡಿಸಿರುವೆ.

20ಯೆಹೋವನೇ, ನಿನಗೆ ಸಮಾನರು ಯಾರೂ ಇಲ್ಲ. ನಾವು ಕೇಳಿದವುಗಳನ್ನೆಲ್ಲಾ ಆಲೋಚಿಸಿ ನೋಡಿದರೆ ನಿನ್ನ ಹೊರತು ಬೇರೆ ದೇವರೇ ಇಲ್ಲವೆಂಬುದು ನಿಶ್ಚಯ.

21ನಿನ್ನ ಇಸ್ರಾಯೇಲ್ ಪ್ರಜೆಗೆ ಸಮಾನವಾದ ಜನಾಂಗವು ಭೂಲೋಕದಲ್ಲಿ ಯಾವುದಿರುತ್ತದೆ? ದೇವರಾದ ನೀನೇ ಚಿತ್ತೈಯಿಸಿ, ಅದನ್ನು ವಿಮೋಚಿಸಿ, ಸ್ವಪ್ರಜೆಯಾಗಿ ಮಾಡಿಕೊಂಡಿ. ಭಯಂಕರವಾದ ಮಹತ್ಕಾರ್ಯಗಳಿಂದ ನಿನ್ನ ಹೆಸರನ್ನು ಪ್ರಸಿದ್ಧಿಪಡಿಸಿದಿ. ನೀನು ಐಗುಪ್ತರ ಕೈಯೊಳಗಿಂದ ತಪ್ಪಿಸಿ ರಕ್ಷಿಸಿದ ನಿನ್ನ ಪ್ರಜೆಯ ಎದುರಿನಿಂದ ಅನ್ಯಜನಾಂಗಗಳನ್ನು ಹೊರಡಿಸಿಬಿಟ್ಟಿ.

22ಇಸ್ರಾಯೇಲರು ಸದಾಕಾಲವು ನಿನ್ನ ಪ್ರಜೆಗಳಾಗಿರಬೇಕೆಂದು ನಿರ್ಣಯಿಸಿದ್ದೀ. ಯೆಹೋವನೇ, ನೀನು ಅವರಿಗೆ ದೇವರಾಗಿದ್ದಿ.

23ಯೆಹೋವನೇ, ನೀನು ನಿನ್ನ ಸೇವಕನನ್ನೂ ಅವನ ಮನೆಯನ್ನೂ ಕುರಿತು ಮಾಡಿದ ವಾಗ್ದಾನವನ್ನು ಶಾಶ್ವತಪಡಿಸಿ ನೆರವೇರಿಸು. ಅದು ಸದಾ ಸ್ಥಿರವಾಗಿರಲಿ.

24ಜನರು ‘ಸೇನಾಧೀಶ್ವರನಾದ ಯೆಹೋವನು ಇಸ್ರಾಯೇಲ್ ದೇವರೂ, ಶರಣನೂ ಆಗಿದ್ದಾನೆ. ತನ್ನ ಸೇವಕನಾದ ದಾವೀದನ ಮನೆಯನ್ನು ತನ್ನ ಸನ್ನಿಧಿಯಲ್ಲಿ ಸ್ಥಿರವಾಗಿ ಇಟ್ಟುಕೊಳ್ಳುತ್ತಾನೆ’ ಎಂದು ನಿನ್ನ ನಾಮವನ್ನು ಕೊಂಡಾಡಲಿ.

25ನನ್ನ ದೇವರೇ, ನೀನು ನಿನ್ನ ಸೇವಕನಿಗೆ, ‘ನಾನು ನಿನಗೊಂದು ಮನೆಯನ್ನು ಕಟ್ಟುವೆನು’ ಎಂದು ವಾಗ್ದಾನ ಮಾಡಿದ್ದರಿಂದ ಅವನು ನಿನ್ನನ್ನು ಪ್ರಾರ್ಥಿಸುವುದಕ್ಕೆ ಧೈರ್ಯಗೊಂಡನು.

26ಯೆಹೋವನೇ, ನಿನ್ನ ಸೇವಕನಿಗೆ ಈ ಶ್ರೇಷ್ಠ ವಾಗ್ದಾನಗಳನ್ನು ಮಾಡಿದ ನೀನು ನನ್ನ ದೇವರಾಗಿರುತ್ತೀ.

27ಈಗ ನೀನು ನಿನ್ನ ಸೇವಕನ ಮನೆಯನ್ನು ಆಶೀರ್ವದಿಸಿ, ಅದನ್ನು ಸದಾಕಾಲವೂ ನಿನ್ನ ಆಶ್ರಯದಲ್ಲಿಟ್ಟುಕೊಳ್ಳಬೇಕೆಂದು ಮನಸ್ಸು ಮಾಡಿದ್ದೀ. ಯೆಹೋವನೇ, ನೀನು ಅದನ್ನು ಆಶೀರ್ವದಿಸಿದ್ದೀ. ಅದು ನಿತ್ಯವೂ ಸೌಭಾಗ್ಯದಿಂದಿರುವುದು” ಎಂದು ಪ್ರಾರ್ಥಿಸಿದನು.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath