ಕ್ರಿಶ್ಚಿಯನ್ ಧರ್ಮ
ಹಿಂದೆ

1 ಪೂರ್ವಕಾಲವೃತ್ತಾಂತ 24

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ಆರೋನನ ಸಂತಾನದವರೂ ವರ್ಗಗಳಾಗಿ ವಿಭಾಗಿಸಲ್ಪಟ್ಟರು. ಆರೋನನ ಮಕ್ಕಳು ನಾದಾಬ್, ಅಬೀಹೂ, ಎಲ್ಲಾಜಾರ್ ಮತ್ತು ಈತಾಮಾರ್ ಎಂಬುವರು.

2ನಾದಾಬ್ ಮತ್ತು ಅಬೀಹೂ ಎಂಬುವರು ಮಕ್ಕಳಿಲ್ಲದೆ ತಮ್ಮ ತಂದೆಗಿಂತ ಮೊದಲೇ ಸತ್ತು ಹೋದುದರಿಂದ ಎಲ್ಲಾಜಾರನೂ, ಈತಾಮಾರನೂ ಯಾಜಕ ಉದ್ಯೋಗವನ್ನು ನಡೆಸುತ್ತಿದ್ದರು.

3ದಾವೀದನು ಎಲ್ಲಾಜಾರನ ಸಂತಾನದವನಾದ ಚಾದೋಕನೂ, ಈತಾಮಾರನ ಸಂತಾನದವನಾದ ಅಹೀಮೆಲೆಕನು ಯಾಜಕರನ್ನು ಸರದಿಯ ಮೇಲೆ ಸೇವೆಮಾಡತಕ್ಕ ವರ್ಗಗಳನ್ನಾಗಿ ವಿಭಾಗಿಸಿದರು.

4ಎಲ್ಲಾಜಾರನ ಸಂತಾನದ ಕುಟುಂಬ ಪ್ರಧಾನರು ಈತಾಮಾರ್ಯರಿಗಿಂತ ಹೆಚ್ಚೆಂದು ಕಂಡು ಬಂದುದರಿಂದ ಎಲ್ಲಾಜಾರರ ಕುಟುಂಬಗಳನ್ನು ಪ್ರಧಾನರ ಲೆಕ್ಕದ ಪ್ರಕಾರ ಹದಿನಾರು ವರ್ಗಗಳನ್ನಾಗಿಯೂ, ಈತಾಮಾರ್ಯರ ಕುಟುಂಬಗಳನ್ನು ಎಂಟು ವರ್ಗಗಳನ್ನಾಗಿಯೂ ಮಾಡಿ,

5ಈ ವರ್ಗಗಳ ವಿಷಯವಾಗಿ ಚೀಟು ಹಾಕಿದರು. ಎಲ್ಲಾಜಾರನ ಸಂತಾನದವರಲ್ಲಿ ಹೇಗೋ ಹಾಗೆಯೇ ಈತಾಮಾರನ ಸಂತಾನದವರಲ್ಲಿಯೂ ಪವಿತ್ರಾಲಯದ ಅಧಿಪತಿಗಳು, ದೈವಿಕ ಕಾರ್ಯಗಳ ಅಧ್ಯಕ್ಷರೂ ಇರುವುದರಿಂದ ಉಭಯ ಸಂತಾನದವರು ಸಮಾನ ಸ್ಥಾನದವರಾಗಿದ್ದರು.

6ನೆತನೇಲನ ಮಗನಾದ ಶೆಮಾಯನೆಂಬ ಲೇವಿಯ ಲೇಖಕನು ಅರಸನ ಮುಂದೆಯೂ, ಅಧಿಪತಿಗಳು, ಯಾಜಕನಾದ ಚಾದೋಕ್, ಎಬ್ಯಾತಾರನ ಮಗನಾದ ಅಹೀಮೆಲೆಕ್, ಯಾಜಕರ ಮತ್ತು ಲೇವಿಯರ ಕುಟುಂಬ ಪ್ರಧಾನರು ಇವರ ಮುಂದೆಯೂ ಆ ವರ್ಗಗಳ ಪಟ್ಟಿಯನ್ನು ಬರೆದನು. ಎಲ್ಲಾಜಾರನ ಒಂದು ವರ್ಗದವರಾದ ನಂತರ ಈತಾಮಾರ್ಯರ ಒಂದು ವರ್ಗದವರು ಸೇವಿಸಬೇಕೆಂದು ನೇಮಿಸಿ ಎಲ್ಲಾ ವರ್ಗಗಳ ಸರದಿಯನ್ನು ಚೀಟಿನಿಂದಲೇ ಗೊತ್ತುಮಾಡಿದರು.

7ಮೊದಲನೆಯ ಚೀಟು ಯೆಹೋಯಾರೀಬನಿಗೆ, ಎರಡನೆಯದು ಯೆದಾಯನಿಗೆ,

8ಮೂರನೆಯದು ಹಾರೀಮನಿಗೆ, ನಾಲ್ಕನೆಯದು ಸೆಯೋರೀಮನಿಗೆ,

9ಐದನೆಯದು ಮಲ್ಕೀಯನಿಗೆ, ಆರನೆಯದು ಮಿಯ್ಯಾಮೀನನಿಗೆ,

10ಏಳನೆಯದು ಹಕ್ಕೋಚನಿಗೆ, ಎಂಟನೆಯದು ಅಬೀಯನಿಗೆ,

11ಒಂಬತ್ತನೆಯದು ಯೆಷೂವನಿಗೆ, ಹತ್ತನೆಯದು ಶೆಕನ್ಯನಿಗೆ,

12ಹನ್ನೊಂದನೆಯದು ಎಲ್ಯಾಷೀಬನಿಗೆ, ಹನ್ನೆರಡನೆಯದು ಯಾಕೀಮನಿಗೆ,

13ಹದಿಮೂರನೆಯದು ಹುಪ್ಪನಿಗೆ, ಹದಿನಾಲ್ಕನೆಯದು ಎಷೆಬಾಬನಿಗೆ,

14ಹದಿನೈದನೆಯದು ಬಿಲ್ಗನಿಗೆ, ಹದಿನಾರನೆಯದು ಇಮ್ಮೇರನಿಗೆ,

15ಹದಿನೇಳನೆಯದು ಹೇಜೀರನಿಗೆ, ಹದಿನೆಂಟನೆಯದು ಹಪ್ಪಿಚ್ಚೇಚನಿಗೆ,

16ಹತ್ತೊಂಬತ್ತನೆಯದು ಪೆತಹ್ಯನಿಗೆ, ಇಪ್ಪತ್ತನೆಯದು ಯೆಹೆಜ್ಕೇಲನಿಗೆ,

17ಇಪ್ಪತ್ತೊಂದನೆಯದು ಯಾಕೀನನಿಗೆ, ಇಪ್ಪತ್ತೆರಡನೆಯದು ಗಾಮೂಲನಿಗೆ,

18ಇಪ್ಪತ್ತ ಮೂರನೆಯದು ದೆಲಾಯನಿಗೆ, ಇಪ್ಪತ್ತ ನಾಲ್ಕನೆಯದು ಮಾಜ್ಯನಿಗೆ ಬಿದ್ದಿತು.

19ಆರೋನ್ಯರು ಈ ವರ್ಗ ಕ್ರಮದಿಂದ ಯೆಹೋವನ ಆಲಯಕ್ಕೆ ಬಂದು ಇಸ್ರಾಯೇಲಿನ ದೇವರಾದ ಯೆಹೋವನಿಗೆ ಲೇವಿಯರ ಮೂಲಪುರುಷನಾದ ಆರೋನನ ಮುಖಾಂತರವಾಗಿ ನೇಮಿಸಿದ ಸೇವೆಯನ್ನು ನಡೆಸತಕ್ಕದ್ದು.

20ಉಳಿದ ಲೇವಿಯರ ಪಟ್ಟಿ. ಅಮ್ರಾಮನ ಸಂತಾನದವರಾದ ಶೂಬಾಯೇಲನ ಕುಟುಂಬದವರಲ್ಲಿ ಯೆಹ್ದೆಯಾಹನು.

21ರೆಹಬ್ಯನ ಸಂತಾನದವರಲ್ಲಿ ಇಷ್ಷೀಯನೂ,

22ಇಚ್ಹಾರನ ಸಂತಾನದ ಶೆಲೋಮೋತನ ಕುಟುಂಬದವರಲ್ಲಿ ಯಹತನೂ ಪ್ರಧಾನರು.

23ಹೆಬ್ರೋನನ ಸಂತಾನದವರಲ್ಲಿ ಯೆರೀಯನು ಪ್ರಧಾನನು, ಅಮರ್ಯನು ಎರಡನೆಯವನು, ಯಹಜೀಯೇಲನು, ಮೂರನೆಯವನು ಮತ್ತು ಯೆಕಮ್ಮಾಮನು ನಾಲ್ಕನೆಯವನು,

24ಉಜ್ಜೀಯೇಲನ ಮಗನಾದ ಮೀಕನ ಸಂತಾನದವರಲ್ಲಿ ಶಾಮೀರನೂ,

25ಮೀಕನ ತಮ್ಮನಾದ ಇಷ್ಷೀಯನ ಸಂತಾನದವರಲ್ಲಿ ಜೆಕರ್ಯನು ಪ್ರಧಾನರು.

26ಮೆರಾರೀಯ ಮಕ್ಕಳು ಮಹ್ಲೀ ಮತ್ತು ಮೂಷೀ ಎಂಬುವವರು. ಅವನ ಮತ್ತೊಬ್ಬ ಮಗನಾದ ಯಾಜ್ಯನ ವಂಶದವನು ಬೆನೋ.

27ಮೆರಾರೀಯ ಸಂತಾನದವರಲ್ಲಿ ಯಾಜ್ಯ, ಬೆನೋ, ಶೋಹಮ್, ಜಕ್ಕೂರ್ ಮತ್ತು ಇಬ್ರೀ ಇವರೇ.

28ಮಹ್ಲೀಯನ ಮಗನಾದ ಎಲ್ಲಾಜಾರನೂ ಮಕ್ಕಳಿಲ್ಲದೆ ಸತ್ತನು.

29ಕೀಷನಿಂದ ಯೆರಹ್ಮೇಲನು ಹುಟ್ಟಿದನು.

30ಮೂಷೀಯನ ಮಕ್ಕಳು ಮಹ್ಲೀ, ಏದೆರ್ ಮತ್ತು ಯೆರೀಮೋತ್ ಎಂಬುವವರು.

31ಇವರೆಲ್ಲಾ ಲೇವಿ ಸಂತಾನದವರು. ಇವರ ಕುಟುಂಬಗಳಲ್ಲಿ ಎಲ್ಲಾ ಹಿರಿಯರೂ, ಕಿರಿಯರೂ ತಮ್ಮ ಕುಲ ಬಂಧುಗಳಾದ ಆರೋನ್ಯರಂತೆ ಅರಸನಾದ ದಾವೀದ ಚಾದೋಕ್ ಅಹೀಮೆಲೆಕ್ ಇವರ ಮುಂದೆಯೂ, ಯಾಜಕರ ಮತ್ತು ಲೇವಿಯರ ಕುಟುಂಬ ಪ್ರಧಾನರ ಮುಂದೆಯೂ, ಚೀಟಿನಿಂದ ತಮ್ಮಲ್ಲಿ ಸರದಿಗಳನ್ನು ನೇಮಿಸಿಕೊಂಡರು.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath