1 ಪೂರ್ವಕಾಲವೃತ್ತಾಂತ 25
ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ
1ಆಮೇಲೆ ದಾವೀದನು ಮತ್ತು ಗುಡಾರದ ಸೇವೆ ಸಲ್ಲಿಸುತ್ತಿದ್ದ ಪ್ರಧಾನರು ಆಸಾಫ್ಯ, ಹೇಮಾನ್ಯ ಮತ್ತು ಯೆದುತೂನ್ಯರ ಮಕ್ಕಳನ್ನು ಸೇವೆ ಮಾಡುವುದಕ್ಕೋಸ್ಕರ ಆಯ್ಕೆಮಾಡಿದರು. ಇವರು ಕಿನ್ನರಿ, ಸ್ವರಮಂಡಲ, ತಾಳ, ಇವುಗಳನ್ನು ನುಡಿಸುತ್ತಾ, ಪ್ರವಾದಿಸುತ್ತ, ಗಾಯನಮಾಡುತ್ತಿದ್ದರು. ಆ ಸೇವೆಯನ್ನು ಮಾಡತಕ್ಕ ಪುರುಷರ ಪಟ್ಟಿ,
2ಆಸಾಫ್ಯರಲ್ಲಿ ಜಕ್ಕೂರ್, ಯೋಸೇಫ್, ನೆತನ್ಯ, ಅಶರೇಲ ಎಂಬವರು. ಇವರು ಅರಮನೆಯ ಗಾಯಕನಾದ ಆಸಾಫನ ಸಹಾಯಕರು.
3ಯೆದುತೂನ್ಯರಲ್ಲಿ ಗೆದಲ್ಯ, ಚೆರೀ, ಯೆಶಾಯ, ಶಿಮ್ಮೀ, ಹಷಬ್ಯ, ಮತ್ತಿತ್ಯ ಇವರೇ. ಕಿನ್ನರಿಯನ್ನು ನುಡಿಸುತ್ತಾ ಪರವಶರಾಗಿ ಯೆಹೋವನ ಕೀರ್ತನೆ ಮಾಡುವ ತಮ್ಮ ತಂದೆಯಾದ ಯೆದುತೂನ್ಯನಿಗೆ ಈ ಆರು ಜನರೂ ಸಹಾಯಕರಾಗಿದ್ದರು.
4ಹೇಮಾನ್ಯರಲ್ಲಿ ಬುಕ್ಕೀಯ, ಮತ್ತನ್ಯ, ಉಜ್ಜೀಯೇಲ್, ಶೆಬೂವೇಲ್, ಯೆರೀಮೋತ್, ಹನನ್ಯ, ಹನಾನೀ, ಎಲೀಯಾತ, ಗಿದ್ದಲ್ತಿ, ರೋಮಮ್ತಿಯೆಜೆರ್, ಯೊಷ್ಬೆಕಾಷ, ಮಲ್ಲೋತಿ, ಹೋತೀರ್ ಮತ್ತು ಮಹಜೀಯೋತ್.
5ಇವರೆಲ್ಲರು ಅರಸನ ದರ್ಶಿಯಾದ ಹೇಮಾನನ ಮಕ್ಕಳು. ದೇವರು ಹೇಮಾನನಿಗೆ, “ನೀನು ಅಭಿವೃದ್ಧಿ ಹೊಂದುವಹಾಗೆ ಮಾಡುವೆನು” ಎಂಬುದಾಗಿ ವಾಗ್ದಾನ ಮಾಡಿದ್ದನು. ಅದರಂತೆಯೇ ಆತನು ಅವನಿಗೆ ಹದಿನಾಲ್ಕು ಗಂಡುಮಕ್ಕಳನ್ನೂ, ಮೂರು ಹೆಣ್ಣುಮಕ್ಕಳನ್ನೂ ದಯಪಾಲಿಸಿದನು.
6ದೇವರಾದ ಯೆಹೋವನ ಆಲಯದಲ್ಲಿ ಆರಾಧನೆ ನಡೆಯುತ್ತಿರುವಾಗ ಇವರೆಲ್ಲರೂ ತಮ್ಮ ತಂದೆಯ ಕೈಕೆಳಗಿದ್ದುಕೊಂಡು ತಾಳ, ಸ್ವರಮಂಡಲ, ಕಿನ್ನರಿ ಇವುಗಳಿಂದ ಗಾಯನ ಮಾಡುತ್ತಿದ್ದರು. ಆಸಾಫ ಯೆದುತೂನ್ ಹೇಮಾನರು ಅರಸನ ಸೇವೆಯಲ್ಲಿದ್ದರು.
7ಇವರು ಯೆಹೋವನ ಕೀರ್ತನೆಗಳನ್ನು ಕಲಿತ ಇವರ ಸಹೋದರರು ಒಟ್ಟು ಇನ್ನೂರ ಎಂಭತ್ತೆಂಟು ಜನರು. ಇವರೆಲ್ಲರೂ ಗಾಯಕ ಪ್ರವೀಣರಾಗಿದ್ದರು.
8ಇವರಲ್ಲಿ ಹಿರಿಯರು, ಕಿರಿಯರು, ಗುರುಶಿಷ್ಯರೂ ಕೂಡಿಕೊಂಡು ಚೀಟಿನಿಂದ ತಮ್ಮ ಸೇವಾ ಕ್ರಮವನ್ನು ಗೊತ್ತುಮಾಡಿಕೊಂಡರು.
9ಚೀಟಿನ ಪ್ರಕಾರವಾಗಿ, ಮೊದಲನೆಯದಾಗಿ ಆಸಾಫ್ಯನಾದ ಯೋಸೇಫನು. ಎರಡನೆಯವನು ಗೆದಲ್ಯ. ಇವನೂ ಇವನ ಸಹೋದರರೂ, ಮಕ್ಕಳು ಒಟ್ಟು ಹನ್ನೆರಡು ಜನರು.
10ಮೂರನೆಯವನು ಜಕ್ಕೂರ್. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.
11ನಾಲ್ಕನೆಯವನು ಇಚ್ರೀ. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.
12ಐದನೆಯವನು ನೆತನ್ಯ. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.
13ಆರನೆಯವನು ಬುಕ್ಕೀಯ. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.
14ಏಳನೇಯವನು ಯೆಸರೇಲ. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.
15ಎಂಟನೆಯವನು ಯೆಶಾಯ. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.
16ಒಂಬತ್ತನೆಯದು ಮತ್ತನ್ಯ. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.
17ಹತ್ತನೆಯವನು ಶಿಮ್ಮೀ. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.
18ಹನ್ನೊಂದನೆಯವನು ಅಜರೇಲ್. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.
19ಹನ್ನೆರಡನೆಯವನು ಹಷಬ್ಯ. ಇವನೂ ಇವನ ಸಹೋದರರೂ ಮಕ್ಕಳು ಒಟ್ಟು ಹನ್ನೆರಡು ಜನರು.
20ಹದಿಮೂರನೆಯದು ಶೂಬಾಯೇಲ್. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.
21ಹದಿನಾಲ್ಕನೆಯವನು ಮತ್ತಿತ್ಯ. ಇವನೂ, ಇವನ ಸಹೋದರರೂ ಮತ್ತು ಮಕ್ಕಳೂ ಒಟ್ಟು ಹನ್ನೆರಡು ಜನರು.
22ಹದಿನೈದನೆಯವನು ಯೆರೆಮೋತ್. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.
23ಹದಿನಾರನೆಯವನು ಹನನ್ಯ. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.
24ಹದಿನೇಳನೆಯವನು ಯೊಷ್ಬೆಕಾಷ. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.
25ಹದಿನೆಂಟನೆಯವನು ಹನಾನೀ. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.
26ಹತ್ತೊಂಬತ್ತನೆಯವನು ಮಲ್ಲೋತಿ. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.
27ಇಪ್ಪತ್ತನೆಯವನು ಎಲೀಯಾತ. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.
28ಇಪ್ಪತ್ತೊಂದನೆಯವನು ಹೋತೀರ್. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.
29ಇಪ್ಪತ್ತೆರಡನೆಯವನು ಗಿದ್ದಲ್ತಿ. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.
30ಇಪ್ಪತ್ತಮೂರನೆಯವನು ಮಹಜೀಯೋತ್. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.
31ಇಪ್ಪತ್ತನಾಲ್ಕನೆಯವನು ರೋಮಮ್ತಿಯೆಜೆರ್. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.
WEBREATH · 11:11
«He himself gives everyone life and breath and everything else» — Acts 17:25
Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.
WEBREATH — the Minute at 11:11, your own local time — we are One Breath