ಕ್ರಿಶ್ಚಿಯನ್ ಧರ್ಮ
ಹಿಂದೆ

1 ಪೂರ್ವಕಾಲವೃತ್ತಾಂತ 26

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ದೇವಾಲಯದ ದ್ವಾರಪಾಲಕ ವರ್ಗಗಳ ವಿಷಯ: ಕೋರಹೀಯನಾದ ಮೆಷೆಲೆಮ್ಯ ಎಂಬವನು, ಕೊರೇಯನ ಮಗ ಹಾಗೂ ಆಸಾಫನ ಮೊಮ್ಮಗ.

2ಮೆಷೆಲೆಮ್ಯನ ಮಕ್ಕಳಲ್ಲಿ ಜೆಕೆರ್ಯನು ಚೊಚ್ಚಲ ಮಗ, ಎದೀಯಯೇಲನು ಎರಡನೆಯವನು, ಜೆಬೆದ್ಯನು ಮೂರನೆಯವನು, ಯೆತ್ನಿಯೇಲನು ನಾಲ್ಕನೆಯವನು.

3ಏಲಾಮನು ಐದನೆಯವನು, ಯೆಹೋಹಾನಾನನು ಆರನೆಯವನು, ಎಲ್ಯೆಹೋಯೇನೈ ಏಳನೆಯವನು.

4ಓಬೇದೆದೋಮನ ಮಕ್ಕಳಲ್ಲಿ ಶೆಮಾಯನು ಚೊಚ್ಚಲನು, ಯೆಹೋಜಾಬಾದನು ಎರಡನೆಯವನು. ಯೋವಾಹನು ಮೂರನೆಯವನು, ಸಾಕಾರನು ನಾಲ್ಕನೆಯವನು, ನೆತನೇಲನು ಐದನೆಯವನು,

5ಅಮ್ಮೀಯೇಲನು ಆರನೆಯವನು, ಇಸ್ಸಾಕಾರನು ಏಳನೆಯವನು, ಪೆಯುಲ್ಲೆತೈಯು ಎಂಟನೆಯವನು. ಓಬೇದೆದೋಮನು ದೇವರ ಆಶೀರ್ವಾದಕ್ಕೆ ಪಾತ್ರನಾಗಿದ್ದನಷ್ಟೆ.

6ಅವನ ಮಗನಾದ ಶೆಮಾಯನ ಮಕ್ಕಳು ಗೋತ್ರಪ್ರಧಾನರೂ ಮಹಾಸಮರ್ಥರೂ ಆಗಿದ್ದರು.

7ಅವರು ಯಾರೆಂದರೆ: ಒತ್ನೀ, ರೆಫಾಯೇಲ್, ಓಬೇದ್ ಮತ್ತು ಎಲ್ಜಾಬಾದ್. ಇವರೂ ಬಹುಸಮರ್ಥರಾದ ಎಲೀಹು, ಸೆಮಕ್ಯ ಎಂಬುವವರು ಇವರ ಸಹೋದರರು.

8ಇವರೆಲ್ಲರೂ ಓಬೇದೆದೋಮನ ಸಂತಾನದವರು. ಇವರು, ಇವರ ಮಕ್ಕಳು ಸಮರ್ಥರೂ, ಸೇವೆಯಲ್ಲಿ ಗಟ್ಟಿಗರೂ ಆಗಿದ್ದವರೂ. ಇವರೂ ಇವರ ಸಹೋದರರೂ ಕೂಡಿ ಅರವತ್ತೆರಡು ಜನರು.

9ಮೆಷೆಲೆಮ್ಯನ ಮಕ್ಕಳೂ ಮತ್ತು ಸಹೋದರರೂ ಹದಿನೆಂಟು ಜನರು. ಇವರೂ ಸಮರ್ಥರಾಗಿದ್ದರು.

10ಮೆರಾರೀಯನಾದ ಹೋಸನಿಗೂ ಮಕ್ಕಳಿದ್ದರು; ಅವರಲ್ಲಿ ಶಿಮ್ರಿ ಎಂಬುವವನು ಪ್ರಧಾನನಾಗಿದ್ದನು. ಇವನು ಚೊಚ್ಚಲ ಮಗನಲ್ಲದಿದ್ದರೂ ಅವನ ತಂದೆಯು ಅವನನ್ನೇ ಪ್ರಧಾನನನ್ನಾಗಿ ನೇಮಿಸಿದನು.

11ಹಿಲ್ಕೀಯನು ಎರಡನೆಯವನು, ಟೆಬಲ್ಯನು ಮೂರನೆಯವನು, ಜೆಕರ್ಯನು ನಾಲ್ಕನೆಯವನು. ಹೋಸನ ಮಕ್ಕಳು ಸಹೋದರರೂ ಒಟ್ಟಿಗೆ ಹದಿಮೂರು ಜನರು.

12ಈ ದ್ವಾರಪಾಲಕರ ವರ್ಗಗಳು ಪ್ರಧಾನಪುರುಷರು ತಮ್ಮ ಕುಲಬಂಧುಗಳಂತೆ ಯೆಹೋವನ ಆಲಯದಲ್ಲಿ ಸೇವೆಮಾಡುವವರಾಗಿದ್ದರು.

13ಅವರು ಕನಿಷ್ಠ ಕುಟುಂಬವೆಂದೂ, ಶ್ರೇಷ್ಠ ಕುಟುಂಬವೆಂದೂ ವ್ಯತ್ಯಾಸ ಮಾಡದೆ ತಮ್ಮಲ್ಲಿ ಪ್ರತಿಯೊಬ್ಬನು ಕಾಯತಕ್ಕ ಹೆಬ್ಬಾಗಿಲುಗಳನ್ನು ಚೀಟಿನಿಂದಲೇ ಗೊತ್ತುಮಾಡಿಕೊಂಡರು.

14ಪೂರ್ವ ದಿಕ್ಕಿನ ಕಾವಲಿಗೆ ಚೀಟು ಶೆಲೆಮ್ಯನ ಹೆಸರಿಗೆ ಬಿದ್ದಿತು. ಬಹು ವಿವೇಕವುಳ್ಳ ಸಲಹೆಗಾರನಾಗಿರುವ ಅವನ ಮಗನಾದ ಜೆಕೆರ್ಯನ ಹೆಸರಿಗೆ ಉತ್ತರ ದಿಕ್ಕಿನ ಚೀಟು ಬಿದ್ದಿತು.

15ಓಬೇದೆದೋಮನಿಗೆ ದಕ್ಷಿಣದ ಬಾಗಿಲು, ಅವನ ಮಕ್ಕಳಿಗೆ ಉಗ್ರಾಣ ಮಂದಿರವೂ,

16ಶುಪ್ಪೀಮ್ ಮತ್ತು ಹೋಸ ಎಂಬುವರಿಗೆ ಪಶ್ಚಿಮದ ಬಾಗಿಲೂ ಅದರ ಸಮೀಪದಲ್ಲಿರುವ ಶಲ್ಲೆಕೆತ್ ಎಂಬ ಬಾಗಿಲು ಚೀಟಿನಿಂದ ನೇಮಕವಾದವು. ಶೆಲ್ಲೆಕೆತ್ ಬಾಗಿಲು ಪಟ್ಟಣದಿಂದ ದೇವಾಲಯಕ್ಕೆ ಏರಿಹೋಗುವ ದಾರಿಯಲ್ಲಿದೆ.

17ಲೇವಿಯರಲ್ಲಿ ಪ್ರತಿದಿನವೂ ಪೂರ್ವದಿಕ್ಕಿನ ಬಾಗಿಲನ್ನು ಆರು ಜನರು, ದಕ್ಷಿಣ ಬಾಗಿಲನ್ನು ನಾಲ್ಕು ಜನರು, ಉಗ್ರಾಣ ಮಂದಿರದ ಎರಡು ಬಾಗಿಲನ್ನು ಇಬ್ಬಿಬ್ಬರು,

18ಪರ್ಬರೆಂಬ ಕಟ್ಟಡವಿರುವ ಪಶ್ಚಿಮ ದಿಕ್ಕಿನ ದಾರಿ ಬಾಗಿಲನ್ನು ನಾಲ್ಕು ಜನರು, ಪರ್ಬರನ್ನು ಇಬ್ಬರು ಕಾಯುತ್ತಿದ್ದರು.

19ಕೋರಹೀಯರ ಮತ್ತು ಮೆರಾರೀಯರ ದ್ವಾರಪಾಲಕರ ವರ್ಗಗಳು ಇವೇ.

20ಲೇವಿಯನಾದ ಅಹೀಯನು ಮೇಲೆ ಹೇಳಿರುವವರ ಕುಲಬಂಧುಗಳೂ, ದೇವಾಲಯದ ಭಂಡಾರ, ಪರಿಶುದ್ಧ ವಸ್ತುಗಳ ಭಂಡಾರ ಇವುಗಳನ್ನು ಕಾಯುತ್ತಿದ್ದರು.

21ಗೇರ್ಷೋಮನಿಗೆ ಹುಟ್ಟಿದ ಲದ್ದಾನ ಸಂತಾನದವರಾದ ಲದ್ದಾನ್ಯ ಕುಟುಂಬಗಳ ಪ್ರಧಾನರಲ್ಲಿ ಯೆಹೀಯೇಲೀ ಮತ್ತು ಅವನ ಮಕ್ಕಳು,

22ಯೆಹೀಯೇಲ್ಯರಾದ ಜೇತಾಮನೂ ಮತ್ತು ಅವನ ತಮ್ಮನಾದ ಯೋವೇಲನು ಯೆಹೋವನ ಆಲಯದ ಭಂಡಾರಗಳನ್ನು ಕಾಯುವವರಾಗಿದ್ದರು.

23ಅಮ್ರಾಮ್, ಇಚ್ಹಾರ್, ಹೆಬ್ರೋನ್ ಮತ್ತು ಉಜ್ಜೀಯೇಲ್,

24ಇವರ ಸಂತಾನದವರಲ್ಲಿ ಗೇರ್ಷೋಮನ ಮಗನೂ ಮೋಶೆಯ ಮೊಮ್ಮಗನೂ ಆಗಿರುವ ಶೆಬೂವೇಲನು ಭಂಡಾರಗಳನ್ನು ಕಾಯುವವರ ಮುಖ್ಯಸ್ಥನಾಗಿದ್ದನು.

25ಎಲೀಯೆಜೆರನ ಮಗ ರೆಹಬ್ಯ, ರೆಹಬ್ಯನ ಮಗ ಯೆಶಾಯ ಯೆಶಾಯನ ಮಗ ಯೋರಾಮ ಯೋರಾಮನ ಮಗ ಜಿಕ್ರೀ ಜಿಕ್ರೀಯನ ಮಗ ಶೆಲೋಮೋತನು.

26ಶೆಲೋಮೋತನು ಅವನ ಸಹೋದರರೂ ಪ್ರತಿಷ್ಠಿತ ವಸ್ತುಗಳ ಭಂಡಾರವನ್ನು ಕಾಯುವವರು. ಇವರು ಶೆಬೂವೇಲನ ಗೋತ್ರಬಂಧುಗಳು. ಈ ವಸ್ತುಗಳನ್ನು ಅರಸನಾದ ದಾವೀದನೂ, ಗೋತ್ರ ಪ್ರಧಾನರೂ ಸಹಸ್ರಾಧಿಪತಿಗಳೂ, ಶತಾಧಿಪತಿಗಳೂ, ಸೇನಾಧಿಪತಿಗಳೂ ಪ್ರತಿಷ್ಠಿಸಿದ್ದರು.

27ಇವರು ಯೆಹೋವನ ಆಲಯದ ವೃದ್ಧಿಗೋಸ್ಕರ ತಮಗೆ ಯುದ್ಧದಲ್ಲಿ ಸಿಕ್ಕಿದ ಕೊಳ್ಳೆಯ ಒಂದು ಭಾಗವನ್ನು ಯೆಹೋವನಿಗೆಂದು ಮುಡುಪಾಗಿ ಇಟ್ಟರು.

28ಇದಲ್ಲದೆ ದೇವ ದರ್ಶಿಯಾದ ಸಮುವೇಲನೂ, ಕೀಷನ ಮಗನಾದ ಸೌಲನೂ, ನೇರನ ಮಗನಾದ ಅಬ್ನೇರನೂ, ಚೆರೂಯಳ ಮಗನಾದ ಯೋವಾಬನೂ ಹಾಗೆಯೇ ಮಾಡಿದರು. ಈ ಪ್ರಕಾರ ಪ್ರತಿಷ್ಠಿತವಾದದ್ದೆಲ್ಲವೂ ಶೆಲೋಮೋತನ ಮತ್ತು ಅವನ ಸಹೋದರರ ವಶದಲ್ಲಿತ್ತು.

29ಇಚ್ಹಾರ್ಯರಲ್ಲಿ ಕೆನನ್ಯನೂ ಅವನ ಮಕ್ಕಳು ಲೌಕೀಕೋದ್ಯೋಗದಲ್ಲಿದ್ದರು. ಅವರು ಇಸ್ರಾಯೇಲರ ಅಧಿಕಾರಿಗಳೂ ಮತ್ತು ನ್ಯಾಯಾಧಿಪತಿಗಳೂ ಆಗಿದ್ದರು.

30ಹೆಬ್ರೋನ್ಯರಲ್ಲಿ ಹಷಬ್ಯನೂ ಅವನ ಸಹೋದರರೂ ಯೊರ್ದನ್ ಹೊಳೆಯ ಪಶ್ಚಿಮ ಪ್ರಾಂತ್ಯಗಳಲ್ಲಿದ್ದ ಇಸ್ರಾಯೇಲ್ಯರೊಳಗೆ ಯೆಹೋವನ ಸೇವೆಯ ಎಲ್ಲಾ ಕಾರ್ಯಗಳನ್ನೂ ಮತ್ತು ರಾಜಕೀಯ ಕಾರ್ಯಗಳನ್ನೂ ನಡೆಸುತ್ತಿದ್ದರು. ಸಮರ್ಥರಾದ ಅವರು ಸಾವಿರದ ಏಳುನೂರು ಜನರು.

31ದಾವೀದನ ಆಳ್ವಿಕೆಯ ನಲವತ್ತನೆಯ ವರ್ಷದಲ್ಲಿ ಹೆಬ್ರೋನ್ಯರಿಗೆ ಸೇರಿದವರು ಯಾರಾರೆಂದು ವಿಚಾರಣೆ ನಡೆಸಿದಾಗ ಗಿಲ್ಯಾದಿನ ಯಾಜೇರಿನ ಶ್ರೀಮಂತರಿಗೆ ಅನೇಕರು ಅವರ ಗೋತ್ರದವರಾಗಿರುತ್ತಾರೆಂದು ಗೊತ್ತಾಯಿತು. ಈ ಹೆಬ್ರೋನ್ಯರಲ್ಲಿ ಯೆರೀಯನು ಪ್ರಧಾನನು.

32ಶ್ರೀಮಂತರೂ ಕುಟುಂಬ ಪ್ರಧಾನರೂ ಆದ ಅವನ ಗೋತ್ರಬಂಧುಗಳು ಎರಡು ಸಾವಿರದ ಏಳುನೂರು ಜನರು. ಅರಸನಾದ ದಾವೀದನು ರೂಬೇನ್, ಗಾದ್ ಅರ್ಧಮನಸ್ಸೆ ಕುಲಗಳವರ ಮೇಲೆ ಇವರನ್ನೇ ದೈವಿಕ ಕಾರ್ಯಗಳಲ್ಲಿಯೂ, ರಾಜಕೀಯ ಕಾರ್ಯಗಳಲ್ಲಿಯೂ ಅಧಿಕಾರಿಗಳನ್ನಾಗಿ ನೇಮಿಸಿದನು.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath