ಕ್ರಿಶ್ಚಿಯನ್ ಧರ್ಮ
ಹಿಂದೆ

1 ಪೂರ್ವಕಾಲವೃತ್ತಾಂತ 27

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ಇಸ್ರಾಯೇಲರ ಕುಲಪ್ರಧಾನರು, ಸಹಸ್ರಾಧಿಪತಿಗಳು, ಶತಾಧಿಪತಿಗಳೂ, ಅರಸನ ವಿಧವಿಧವಾದ ಸೇವೆಯನ್ನು ಮಾಡಬೇಕಾದ ವರ್ಗಗಳ ಅಧಿಪತಿಗಳ ವಿವರ: ವರ್ಷದ ಎಲ್ಲಾ ತಿಂಗಳುಗಳಲ್ಲಿ ತಿಂಗಳಿಗೆ ಒಂದು ವರ್ಗದಂತೆ ಸರದಿಯ ಪ್ರಕಾರ ಕೆಲಸಕ್ಕಾಗಿ ಬರುವ ಪ್ರತಿಯೊಂದು ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು ಇದ್ದರು.

2ಪೆರೆಚನ ಸಂತಾನದವನೂ, ಜಬ್ದೀಯೇಲನ ಮಗನೂ ಆದ ಯಾಷೊಬ್ಬಾಮನು ಮೊದಲನೆಯ ವರ್ಗದ ನಾಯಕನು.

3ಇವನು ಮೊದಲನೆಯ ತಿಂಗಳಿನ ಸೈನ್ಯಾಧಿಪತಿಯ ಮುಖ್ಯಸ್ಥನು. ಮೊದಲನೆಯ ತಿಂಗಳಿನಲ್ಲಿ ಸೇವೆ ಮಾಡತಕ್ಕ ಅವನ ವರ್ಗದವರ ಸಂಖ್ಯೆ ಇಪ್ಪತ್ತ್ನಾಲ್ಕು ಸಾವಿರ.

4ಅಹೋಹಿಯನಾದ ದೋದೈಯು ಎರಡನೆಯ ತಿಂಗಳಿನ ವರ್ಗದ ನಾಯಕನು. ಆ ವರ್ಗದಲ್ಲಿ ಮಿಕ್ಲೋತನೆಂಬವನು ನಾಯಕನು. ಅವನ ವರ್ಗದವರ ಸಂಖ್ಯೆ ಇಪ್ಪತ್ತ್ನಾಲ್ಕು ಸಾವಿರ.

5ಯಾಜಕನಾದ ಯೆಹೋಯಾದನ ಮಗನೂ ಪ್ರಧಾನನೂ ಆದ ಬೆನಾಯನು ಮೂರನೆಯ ವರ್ಗದ ನಾಯಕನು. ಮೂರನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು.

6ಈ ಬೆನಾಯನು ಮೂವತ್ತು ಜನರಲ್ಲಿ ಪ್ರಸಿದ್ಧನಾದ ಯುದ್ಧವೀರನೂ ಅವರ ಮುಖ್ಯಸ್ಥನೂ ಆಗಿದ್ದನು. ಅವನ ವರ್ಗದಲ್ಲಿ ಅವನ ಮಗನಾದ ಅಮ್ಮೀಜಾಬಾದನು ಇದ್ದನು.

7ಯೋವಾಬನ ತಮ್ಮನಾದ ಅಸಾಹೇಲನು. ಅವನು ಸತ್ತ ನಂತರ ಅವನ ಮಗನಾದ ಜೆಬದ್ಯನು ನಾಲ್ಕನೆಯ ವರ್ಗದ ನಾಯಕನು. ನಾಲ್ಕನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ.

8ಇಜ್ರಾಹ್ಯನಾದ ಶಮ್ಹೂತನು ಐದನೆಯ ವರ್ಗದ ನಾಯಕನು. ಐದನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ.

9ತೆಕೋವಿನ ಇಕ್ಕೇಷನ ಮಗನಾದ ಈರ ಎಂಬುವನು ಆರನೆಯ ವರ್ಗದ ನಾಯಕನು. ಆರನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ.

10ಎಫ್ರಾಯೀಮ್ ಕುಲದ ಪೆಲೋನ್ಯನಾದ ಹೆಲೆಚನು ಏಳನೆಯ ವರ್ಗದ ನಾಯಕನು. ಏಳನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ.

11ಹುಷ ಊರಿನ ಜೆರಹೀಯನಾದ ಸಿಬ್ಬೆಕೈಯು ಎಂಟನೆಯ ವರ್ಗದ ನಾಯಕನು. ಎಂಟನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ.

12ಬೆನ್ಯಾಮೀನ್ ಕುಲದ ಅನತೋತ್ ಊರಿನವನಾದ ಅಬೀಯೆಜೆರನು ಒಂಬತ್ತನೆಯ ವರ್ಗದ ನಾಯಕನು. ಒಂಬತ್ತನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ.

13ನೆಟೋಫ ಊರಿನವನಾದ ಜೆರಹೀಯನಾದ ಮಹರೈಯು ಹತ್ತನೆಯ ವರ್ಗದ ನಾಯಕನು. ಹತ್ತನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ.

14ಎಫ್ರಾಯೀಮ್ ಕುಲದ ಪಿರ್ರಾತೋನ್ಯನಾದ ಬೆನಾಯನು ಹನ್ನೊಂದನೆಯ ವರ್ಗದ ನಾಯಕನು. ಹನ್ನೊಂದನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ.

15ನೆಟೋಫ ಊರಿನವನಾದ ಒತ್ನೀಯೇಲನ ಸಂತಾನದವನಾದ ಹೆಲ್ದೈಯು ಹನ್ನೆರಡನೆಯ ವರ್ಗದ ನಾಯಕನು. ಹನ್ನೆರಡನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ.

16ಇಸ್ರಾಯೇಲಿನ ಕುಲ ಪ್ರಭುಗಳು: ರೂಬೇನ್ಯರಲ್ಲಿ ಜಿಕ್ರೀಯ ಮಗನಾದ ಎಲೀಯೆಜೆರನು; ಸಿಮೆಯೋನ್ಯರಲ್ಲಿ ಮಾಕನ ಮಗನಾದ ಶೆಪಟ್ಯನು;

17ಲೇವಿಯರಲ್ಲಿ ಕೆಮುವೇಲನ ಮಗನಾದ ಹಷಬ್ಯ; ಆರೋನ್ಯರಲ್ಲಿ ಚಾದೋಕ್;

18ಯೆಹೂದ್ಯರಲ್ಲಿ ದಾವೀದನ ಅಣ್ಣನಾದ ಎಲೀಹು; ಇಸ್ಸಾಕಾರ್ಯರಲ್ಲಿ ಮೀಕಾಯೇಲನ ಮಗನಾದ ಒಮ್ರಿ;

19ಜೆಬುಲೂನ್ಯರಲ್ಲಿ ಓಬದ್ಯನ ಮಗನಾದ ಇಷ್ಮಾಯ; ನಫ್ತಾಲ್ಯರಲ್ಲಿ ಅಜ್ರೀಯೇಲನ ಮಗನಾದ ಯೆರೀಮೋತ್;

20ಎಫ್ರಾಯೀಮ್ಯರಲ್ಲಿ ಅಜಜ್ಯನ ಮಗನಾದ ಹೊಷೇಯ; ಮನಸ್ಸೆಯ ಅರ್ಧ ಕುಲದವರಲ್ಲಿ ಪೆದಾಯನ ಮಗನಾದ ಯೋವೇಲ್;

21ಗಿಲ್ಯಾದಿನಲ್ಲಿರುವ ಮನಸ್ಸೆಯ ಅರ್ಧ ಕುಲದವರಲ್ಲಿ ಜೆಕರ್ಯಯನ ಮಗನಾದ ಇದ್ದೋ; ಬೆನ್ಯಾಮೀನ್ಯರಲ್ಲಿ ಅಬ್ನೇರನ ಮಗನಾದ ಯಗಸೀಯೇಲ್;

22ದಾನ್ಯರಲ್ಲಿ ಯೆರೋಹಾಮನ ಮಗನಾದ ಅಜರೇಲನು ಇವರೇ.

23ಇಸ್ರಾಯೇಲರನ್ನು ಆಕಾಶದ ನಕ್ಷತ್ರಗಳಂತೆ ಅಸಂಖ್ಯವಾಗಿ ಮಾಡುವೆನೆಂಬುದಾಗಿ ಯೆಹೋವನು ಕೊಟ್ಟ ಮಾತನ್ನು ದಾವೀದನು ನಂಬಿ ಇಪ್ಪತ್ತು ವರ್ಷಕ್ಕಿಂತ ಕಡಿಮೆ ವಯಸ್ಸುಳ್ಳವರನ್ನು ಪರಿಗಣಿಸಲಿಲ್ಲ.

24ಚೆರೂಯಳ ಮಗನಾದ ಯೋವಾಬನು ಅವರನ್ನು ಲೆಕ್ಕಿಸಲಾರಂಭಿಸಿದರೂ, ಇದರ ನಿಮಿತ್ತ ಇಸ್ರಾಯೇಲರ ಮೇಲೆ ದೇವರ ಕೋಪವುಂಟಾದ್ದರಿಂದ ಅದನ್ನು ಪೂರ್ತಿಗೊಳಿಸಲು ಸಾಧ್ಯವಾಗಲಿಲ್ಲ. ಈ ಜನಗಣತಿಯು ದಾವೀದನ ರಾಜ್ಯದ ವೃತ್ತಾಂತ ಗ್ರಂಥದಲ್ಲಿ ಲಿಖಿತವಾಗಲಿಲ್ಲ.

25ಅರಸನಾದ ದಾವೀದನ ಸೊತ್ತಿನ ಮೇಲೆ ಮೇಲ್ವಿಚಾರಕರಾಗಿ ನೇಮಿಸಲ್ಪಟ್ಟವರು ಯಾರೆಂದರೆ: ಅರಸನ ಭಂಡಾರಗಳ ಮೇಲೆ ಅದೀಯೇಲನ ಮಗನಾದ ಅಜ್ಮಾವೆತ್, ಹೊಲಗಳಲ್ಲಿಯೂ, ಪಟ್ಟಣಗಳಲ್ಲಿಯೂ, ಹಳ್ಳಿಗಳಲ್ಲಿಯೂ, ಬುರುಜಗಳ ಮೇಲೆಯೂ ಇದ್ದ ಉಗ್ರಾಣಗಳ ಮೇಲೆ ಉಜ್ಜೀಯನ ಮಗನಾದ ಯೋನಾತಾನನು,

26ಹೊಲಗಳನ್ನು ವ್ಯವಸಾಯ ಮಾಡುವ ಆಳುಗಳ ಮೇಲೆ ಕೆಲೂಬನ ಮಗನಾದ ಎಜ್ರೀ,

27ದ್ರಾಕ್ಷಿ ತೋಟಗಳ ಮೇಲೆ ರಾಮಾ ಊರಿನ ಶಿಮ್ಮೀ, ದ್ರಾಕ್ಷಿ ತೋಟಗಳಲ್ಲಿರುವ ದ್ರಾಕ್ಷಾರಸದ ಉಗ್ರಾಣಗಳ ಮೇಲೆ ಶಿಪ್ಮೀಯನಾದ ಜಬ್ದೀ,

28ಎಣ್ಣೇ ಮರದ ತೋಪುಗಳ ಮೇಲೆಯೂ ಇಳುಕಲಿನ ಪ್ರದೇಶದಲ್ಲಿರುವ ಅತ್ತಿಮರಗಳ ತೋಪುಗಳ ಮೇಲೆಯೂ ಗೆದೇರಾ ಊರಿನವನಾದ ಬಾಳ್ಹಾನಾನ್ ಮತ್ತು ಎಣ್ಣೆಯ ಉಗ್ರಾಣಗಳ ಮೇಲೆ ಯೋವಾಷ್,

29ಶಾರೋನಿನಲ್ಲಿ ಮೇಯುವ ಹಸುಗಳ ಮೇಲೆ ಶಾರೋನ್ಯನಾದ ಶಿಟ್ರೈ, ತಗ್ಗುಗಳಲ್ಲಿ ಮೇಯುವ ಹಸುಗಳ ಮೇಲೆ ಅದ್ಲೈಯ ಮಗನಾದ ಶಾಫಾಟನು,

30ಒಂಟೆಗಳ ಮೇಲೆ ಇಷ್ಮಾಯೇಲ್ಯನಾದ ಓಬೀಲ್, ಹೆಣ್ಣುಕತ್ತೆಗಳ ಮೇಲೆ ಮೇರೊನೋತ್ಯನಾದ ಯೆಹ್ದೆಯ,

31ಆಡುಕುರಿಗಳ ಮೇಲೆ ಹಗ್ರೀಯನಾದ ಯಾಜೀಜ್.

32ವಿವೇಕಿಯೂ, ಶಾಸ್ತ್ರಜ್ಞನೂ ಆದ ಯೋನಾತಾನನೆಂಬ ದಾವೀದನ ಚಿಕ್ಕಪ್ಪನು, ಮಂತ್ರಿಯೂ ಹಕ್ಮೋನಿಯ ಮಗನಾದ ಯೆಹೀಯೇಲನು ರಾಜಪುತ್ರಪಾಲಕನೂ ಆಗಿದ್ದರು.

33ಅಹೀತೋಫೆಲನು ಅರಸನ ಮಂತ್ರಿಯೂ, ಅರ್ಕೀಯನಾದ ಹೂಷೈಯು ಅವನ ಮಿತ್ರನಾಗಿದ್ದನು.

34ಬೆನಾಯನ ಮಗನಾದ ಯೆಹೋಯಾದಾವನೂ, ಎಬ್ಯಾತಾರನೂ, ಅಹೀತೋಫೆಲನ ಉತ್ತರಾಧಿಕಾರಿಗಳಾದರು. ಯೋವಾಬನು ಅರಸನ ಸೈನ್ಯಾಧಿಪತಿಯಾಗಿದ್ದನು.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath