1 ಪೂರ್ವಕಾಲವೃತ್ತಾಂತ 28
ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ
1ದಾವೀದನು ಇಸ್ರಾಯೇಲರ ಎಲ್ಲಾ ಗೋತ್ರಗಳ ಅಧಿಪತಿಗಳನ್ನು, ಅರಸನ ಸೇವೆಮಾಡುತ್ತಿರುವ ವರ್ಗನಾಯಕರು, ಸಹಸ್ರಾಧಿಪತಿಗಳು, ಶತಾಧಿಪತಿಗಳು ಅರಸನ ದನಕುರಿ ಮೊದಲಾದ ಸಂಪತ್ತಿನ ಮೇಲ್ವಿಚಾರಕರು, ರಾಜಪುತ್ರ ಪಾಲಕರು, ಕಂಚುಕಿಗಳು, ಯುದ್ಧವೀರರು ಹಾಗೂ ಎಲ್ಲಾ ಪ್ರಧಾನರನ್ನು ಯೆರೂಸಲೇಮಿಗೆ ಕರೆಯಿಸಿದನು.
2ಅವರು ಸೇರಿ ಬಂದಾಗ ಅರಸನಾದ ದಾವೀದನು ಎದ್ದು ನಿಂತು ಅವರಿಗೆ ಹೇಳಿದ್ದೇನೆಂದರೆ, “ನನ್ನ ಸಹೋದರರೇ, ನನ್ನ ಪ್ರಜೆಗಳೇ, ನನ್ನ ಮಾತನ್ನು ಕೇಳಿರಿ, ಯೆಹೋವನ ಒಡಂಬಡಿಕೆಯ ಮಂಜೂಷಕ್ಕೋಸ್ಕರ ನಮ್ಮ ದೇವರ ಪಾದಪೀಠಕ್ಕೋಸ್ಕರ ಆಲಯವನ್ನು ಕಟ್ಟಬೇಕೆಂದು ಮನಸ್ಸು ಮಾಡಿ ಅದಕ್ಕಾಗಿ ಎಲ್ಲವನ್ನೂ ಸಿದ್ಧಪಡಿಸಿದೆನು.
3ಆಗ ದೇವರು ನನಗೆ, ‘ನೀನು ಮಹಾಯುದ್ಧಗಳನ್ನು ಮಾಡಿ ಬಹಳ ರಕ್ತವನ್ನು ಸುರಿಸಿದವನು, ನನ್ನ ಹೆಸರಿಗೋಸ್ಕರ ಆಲಯವನ್ನು ಕಟ್ಟಬಾರದು’ ಎಂದು ಹೇಳಿದನು.
4ಇಸ್ರಾಯೇಲರ ದೇವರಾದ ಯೆಹೋವನು ತನ್ನ ತಂದೆಯ ಮನೆಯವರೆಲ್ಲರಲ್ಲಿ ನನ್ನನ್ನೇ ಸದಾ ಇಸ್ರಾಯೇಲರ ಅರಸನಾಗುವುದಕ್ಕೆ ಆರಿಸಿಕೊಂಡನು. ಆತನು ಯೆಹೂದ ಕುಲವು ರಾಜಕುಲವಾಗಬೇಕೆಂದು ನೇಮಿಸಿ, ಆ ಕುಲದಲ್ಲಿ ನನ್ನ ತಂದೆಯ ಕುಟುಂಬವನ್ನು ಆರಿಸಿಕೊಂಡನು. ನನ್ನ ತಂದೆಯ ಎಲ್ಲಾ ಮಕ್ಕಳಲ್ಲಿ ನನ್ನನ್ನೇ ಮೆಚ್ಚಿ ಇಸ್ರಾಯೇಲ್ಯರ ಅರಸನನ್ನಾಗಿ ಮಾಡಿದನು.
5ನನಗೆ ದಯಪಾಲಿಸಿದ ಅನೇಕ ಮಕ್ಕಳಲ್ಲಿ ನನ್ನ ಮಗನಾದ ಸೊಲೊಮೋನನನ್ನು ಯೆಹೋವನ ರಾಜ್ಯ ಸಿಂಹಾಸನವಾಗಿರುವ ಇಸ್ರಾಯೇಲ್ ಸಿಂಹಾಸನದ ಮೇಲೆ ಕುಳ್ಳಿರಿಸುವುದಕ್ಕೋಸ್ಕರ ಆರಿಸಿಕೊಂಡನು.
6ಆತನು ನನಗೆ, ‘ನಿನ್ನ ಮಗನಾದ ಸೊಲೊಮೋನನೇ ನನ್ನ ಆಲಯವನ್ನೂ, ಅದರ ಪ್ರಾಕಾರಗಳನ್ನೂ ಕಟ್ಟಿಸುವನು. ಅವನು ನನಗೆ ಮಗನಾಗಿರಬೇಕೆಂದು ಅವನನ್ನು ಆರಿಸಿಕೊಂಡಿದ್ದೇನೆ. ನಾನು ಅವನಿಗೆ ತಂದೆಯಾಗಿರುವೆನು.
7ಅವನು ಈಗಿನಂತೆ ಯಾವಾಗಲೂ ನನ್ನ ಆಜ್ಞಾವಿಧಿಗಳನ್ನು ಕೈಕೊಂಡು ನಡೆಯುವುದಾದರೆ ಅವನ ರಾಜ್ಯವನ್ನು ಸದಾಕಾಲವೂ ಸ್ಥಿರಪಡಿಸುವೆನು ಎಂದು ಹೇಳಿದ್ದಾನೆ.’
8ಆದುದರಿಂದ ನಿಮ್ಮ ದೇವರಾದ ಯೆಹೋವನ ಎಲ್ಲಾ ಆಜ್ಞೆಗಳನ್ನು ಧ್ಯಾನಿಸಿ ಕೈಕೊಳ್ಳಬೇಕೆಂದು ಯೆಹೋವನ ಸಭೆಯಾದ ಸಮಸ್ತ ಇಸ್ರಾಯೇಲರ ಎದುರಿನಲ್ಲಿ ನಮ್ಮ ದೇವರಿಗೆ ಕೇಳಿಸುವಂತೆ ನಿಮ್ಮನ್ನು ಎಚ್ಚರಿಸುತ್ತೇನೆ. ಹಾಗೆ ಮಾಡಿದರೆ ಈ ಒಳ್ಳೆಯ ದೇಶವು ಸದಾಕಾಲ ನಿಮ್ಮ ಮತ್ತು ನಿಮ್ಮ ಸಂತಾನದವರ ಸ್ವತ್ತಾಗಿರುವುದು.
9ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ, ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು. ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ, ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವುದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಕಡೆಗಣಿಸಿದರೆ ಆತನು ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.
10ಆದುದರಿಂದ ಎಚ್ಚರಿಕೆಯಿಂದಿರು, ಯೆಹೋವನು ತನಗೋಸ್ಕರ ಪವಿತ್ರಾಲಯವನ್ನು ಕಟ್ಟಬೇಕೆಂದು ನಿನ್ನನ್ನು ಆರಿಸಿಕೊಂಡಿದ್ದಾನೆ. ಧೈರ್ಯದಿಂದ ಕೆಲಸ ಮಾಡು” ಎಂಬುದೇ.
11ತರುವಾಯ ದಾವೀದನು ತನ್ನ ಮಗನಾದ ಸೊಲೊಮೋನನಿಗೆ ದೇವಾಲಯದ ಮಂಟಪ, ಕಟ್ಟಡಗಳು, ಭಂಡಾರಗಳು, ಮೇಲುಪ್ಪರಿಗೆಗಳು, ಒಳಗಣ ಕೋಣೆಗಳು, ಕೃಪಾಸನ ಮಂದಿರ ಇವುಗಳ ನಕ್ಷೆಯನ್ನು ಕೊಟ್ಟನು.
12ಇವನು ಯೆಹೋವನ ಆಲಯದ ಅಂಗಳಗಳು, ಸುತ್ತಣ ಕೋಣೆಗಳು, ದೇವಾಲಯದ ಭಂಡಾರಗಳು, ಪ್ರತಿಷ್ಠಿತ ವಸ್ತುಗಳು, ಭಂಡಾರಗಳು ಇವುಗಳ ವಿಷಯವಾಗಿಯೂ,
13ಯಾಜಕರ ಮತ್ತು ಲೇವಿಯರ ವರ್ಗಗಳು, ಯೆಹೋವನ ಆಲಯದಲ್ಲಿ ನಡೆಯತಕ್ಕ ಎಲ್ಲಾ ಆರಾಧನೆ, ಆರಾಧನೆಯ ಎಲ್ಲಾ ಸಾಮಗ್ರಿಗಳು
14ಇವುಗಳ ವಿಷಯವಾಗಿ ಪವಿತ್ರಾತ್ಮನು ತನ್ನ ಮನಸ್ಸಿನಲ್ಲಿ ಕೊಟ್ಟಿದ್ದ ಯೋಜನೆಗಳನ್ನು ವಿವರಿಸಿದನು.
15ಇದಲ್ಲದೆ ಆರಾಧನೆಯ ಆಯಾ ಆಚಾರಗಳಲ್ಲಿ ಉಪಯೋಗವಾಗಬೇಕಾದ ಎಲ್ಲಾ ಸಾಮಾನುಗಳ ಬೆಳ್ಳಿ ಬಂಗಾರದ ತೂಕ, ಅಂದರೆ ಬಂಗಾರದ ಹಣತೆಗಳಿರುವ ಬಂಗಾರದ ಪ್ರತಿಯೊಂದು ದೀಪಸ್ತಂಭದ ತೂಕ, ಬೇರೆ ಬೇರೆ ಕೆಲಸಗಳಿಗೆ ಉಪಯೋಗವಾಗುವ ಪ್ರತಿಯೊಂದು ಬೆಳ್ಳಿಯ ದೀಪಸ್ತಂಭದ ಮತ್ತು ಅದರ ಹಣತೆಗಳ ತೂಕ,
16ಮೀಸಲು ರೊಟ್ಟಿಗಳನ್ನಿಡುವ ಬಟ್ಟಲುಗಳು ಹಾಗೂ ಪ್ರತಿಯೊಂದು ಮೇಜಿಗೆ ಉಪಯೋಗಿಸಬೇಕಾದ ಬಂಗಾರದ ತೂಕ, ಬೆಳ್ಳಿಯ ಮೇಜುಗಳ ಬೆಳ್ಳಿಯ ತೂಕ,
17ಚೊಕ್ಕ ಬಂಗಾರದ ಮುಳ್ಳು ಬೋಗುಣಿ, ಹೂಜಿಗಳ ಮತ್ತು ಬೆಳ್ಳಿ ಬಂಗಾರದ ಆಯಾ ಪಾತ್ರೆಗಳ ತೂಕ,
18ಧೂಪವೇದಿಗೆ ಉಪಯೋಗಿಸಬೇಕಾದ ಚೊಕ್ಕ ಬಂಗಾರದ ತೂಕ ಎಷ್ಟೆಷ್ಟಾಗಿರಬೇಕೆಂಬುದನ್ನು ವಿವರಿಸಿ, ರೆಕ್ಕೆಗಳನ್ನು ಹರಡಿಕೊಂಡು ಯೆಹೋವನ ಒಡಂಬಡಿಕೆ ಮಂಜೂಷವನ್ನು ಮರೆಮಾಡುವ ಬಂಗಾರದ ಕೆರೂಬಿವಾಹನದ ನಕ್ಷೆಯನ್ನು ಕೊಟ್ಟನು.
19ಆ ನಕ್ಷೆಯಲ್ಲಿ ಸೂಚಿಸಿದ ಎಲ್ಲಾ ಕೆಲಸಗಳ ವಿವರವಾದ ಜ್ಞಾನವು ತನಗೆ ಯೆಹೋವನು ಸೂಚಿಸಿದಂತೆ ಪ್ರಾಪ್ತವಾಯಿತೆಂದು ಹೇಳಿದನು.
20ಆ ಮೇಲೆ ದಾವೀದನು ತನ್ನ ಮಗನಾದ ಸೊಲೊಮೋನನಿಗೆ, “ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಕೆಲಸಕ್ಕೆ ಕೈಹಾಕು, ಅಂಜಬೇಡ, ಕಳವಳಗೊಳ್ಳಬೇಡ, ನನ್ನ ದೇವರಾದ ಯೆಹೋವ ದೇವರು ನಿನ್ನ ಸಂಗಡ ಇರುತ್ತಾನೆ. ಆತನು ತನ್ನ ಆಲಯದ ಎಲ್ಲಾ ಕೆಲಸಗಳು ತೀರುವವರೆಗೂ ನಿನ್ನನ್ನು ಕೈಬಿಡುವುದಿಲ್ಲ ತೊರೆಯುವುದಿಲ್ಲ.
21ಇಗೋ, ಯಾಜಕರ ಮತ್ತು ಲೇವಿಯರ ವರ್ಗಗಳವರು ದೇವಾಲಯಕ್ಕೆ ಸಂಬಂಧಪಟ್ಟ ಕೆಲಸವನ್ನು ಮಾಡುವುದಕ್ಕೆ ಸಿದ್ಧರಾಗಿದ್ದಾರೆ. ಯಾವ ಕೆಲಸವಿದ್ದರೂ ಎಲ್ಲವನ್ನು ಜಾಣತನದಿಂದ ಮಾಡುವುದಕ್ಕೆ ಸಿದ್ಧಮನಸ್ಸು ಉಳ್ಳವರು ನಿನ್ನ ಹತ್ತಿರ ಬೆಂಬಲವಾಗಿ ಇರುತ್ತಾರೆ. ಅಧಿಪತಿಗಳೂ, ಎಲ್ಲಾ ಪ್ರಜೆಗಳೂ ನಿನ್ನ ಆಜ್ಞೆಗೆ ಒಳಗಾಗುವರು” ಎಂದು ಹೇಳಿದನು.
WEBREATH · 11:11
«He himself gives everyone life and breath and everything else» — Acts 17:25
Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.
WEBREATH — the Minute at 11:11, your own local time — we are One Breath