ಕ್ರಿಶ್ಚಿಯನ್ ಧರ್ಮ
ಹಿಂದೆ

1 ಪೂರ್ವಕಾಲವೃತ್ತಾಂತ 3

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ಹೆಬ್ರೋನಿನಲ್ಲಿ ದಾವೀದನಿಗೆ ಹುಟ್ಟಿದ ಮಕ್ಕಳು: ಚೊಚ್ಚಲಮಗನು ಅಮ್ನೋನನು, ಇವನು ಇಜ್ರೇಲಿನವಳಾದ ಅಹೀನೋವಮಳಲ್ಲಿ ಹುಟ್ಟಿದವನು. ಎರಡನೆಯವನು ದಾನಿಯೇಲನು, ಇವನು ಕರ್ಮೇಲ್ಯಳಾದ ಅಬೀಗೈಲಳಲ್ಲಿ ಹುಟ್ಟಿದವನು.

2ಮೂರನೆಯವನು ಅಬ್ಷಾಲೋಮ್, ಇವನು ಗೆಷೂರಿನ ಅರಸನಾದ ತಲ್ಮೈ ಎಂಬುವನ ಮಗಳಾದ ಮಾಕಳ ಮಗನು. ನಾಲ್ಕನೆಯವನು ಅದೋನೀಯ. ಇವನು ಹಗ್ಗೀತಳ ಪುತ್ರನು.

3ಐದನೆಯವನು ಶೆಫಟ್ಯ, ಇವನು ಅಬೀಟಲಳ ಮಗನು. ಆರನೆಯವನು ಇತ್ರಾಮ್. ಇವನು ದಾವೀದನ ಹೆಂಡತಿಯಾದ ಎಗ್ಲಳಿಂದ ಹುಟ್ಟಿದವನು.

4ಹೆಬ್ರೋನಿನಲ್ಲಿರುವಾಗ ದಾವೀದನಿಗೆ ಆರು ಜನರು ಮಕ್ಕಳು ಹುಟ್ಟಿದರು. ಅಲ್ಲಿ ಅವನು ಏಳು ವರ್ಷ ಆರು ತಿಂಗಳು ಆಡಳಿತ ನಡೆಸಿದನು ಮತ್ತು ಯೆರೂಸಲೇಮನ್ನು ಮೂವತ್ತಮೂರು ವರ್ಷ ಆಳಿದನು.

5ಯೆರೂಸಲೇಮಿನಲ್ಲಿರುವಾಗ ಅವನಿಗೆ ಶಿಮ್ಮ, ಶೋಬಾಬ್, ನಾತಾನ್, ಸೊಲೊಮೋನ್ ಎಂಬ ನಾಲ್ಕು ಮಕ್ಕಳು ಅಮ್ಮೀಯೇಲನ ಮಗಳಾದ ಬತ್ಷೂವಳಲ್ಲಿ ಹುಟ್ಟಿದರು.

6ಇದಲ್ಲದೆ ಇಬ್ಹಾರ್, ಎಲೀಷಾಮ್, ಎಲೀಫೆಲೆಟ್,

7ನೋಗ, ನೆಫೆಗ್, ಯಾಫೀಯ,

8ಎಲೀಷಾಮ್, ಎಲ್ಯಾದ್, ಎಲೀಫೆಲೆಟ್ ಎಂಬ ಒಂಬತ್ತು ಮಕ್ಕಳು ಅವನಿಗೆ ಅಲ್ಲಿಯೇ ಹುಟ್ಟಿದರು.

9ಉಪಪತ್ನಿಯಾರಿಂದಲೂ ಗಂಡು ಮಕ್ಕಳು ಹುಟ್ಟಿದರು. ತಾಮಾರ್ ಎಂಬ ಹೆಣ್ಣುಮಗಳೂ ದಾವೀದನಿಗೆ ಇದ್ದಳು.

10ಸೊಲೊಮೋನನ ಮಗ ರೆಹಬ್ಬಾಮ; ರೆಹಬ್ಬಾಮನ ಮಗ ಅಬೀಯನು. ಅಬೀಯನ ಮಗ ಆಸ; ಆಸನ ಮಗ ಯೆಹೋಷಾಫಾಟ;

11ಯೆಹೋಷಾಫಾಟನ ಮಗ ಯೆಹೋರಾಮ್; ಯೆಹೋರಾಮನ ಮಗ ಅಹಜ್ಯನು, ಅಹಜ್ಯನ ಮಗ ಯೋವಾಷನು.

12ಯೋವಾಷನ ಮಗ ಅಮಚ್ಯ. ಅಮಚ್ಯ ಮಗ ಅಜರ್ಯ; ಅಜರ್ಯನ ಮಗ ಯೋತಾಮ್.

13ಯೋತಾಮನ ಮಗ ಆಹಾಜ; ಆಹಾಜನ ಮಗ ಹಿಜ್ಕೀಯನು. ಹಿಜ್ಕೀಯನ ಮಗ ಮನಸ್ಸೆಯು.

14ಮನಸ್ಸೆಯ ಮಗ ಆಮೋನ್; ಆಮೋನನ ಮಗ ಯೋಷೀಯ.

15ಯೋಷೀಯನ ಮಕ್ಕಳು: ಚೊಚ್ಚಲ ಮಗ ಯೋಹಾನಾನ್, ಎರಡನೆಯವನು ಯೆಹೋಯಾಕೀಮ್, ಮೂರನೆಯವನು ಚಿದ್ಕೀಯ, ನಾಲ್ಕನೆಯವನು ಶಲ್ಲೂಮ್.

16ಯೆಹೋಯಾಕೀಮನ ಮಗ ಯೆಕೊನ್ಯನು; ಯೆಕೊನ್ಯನ ಮಗ ಚಿದ್ಕೀಯನು.

17ಬಾಬಿಲೋನಿಯರಿಂದ ಸೆರೆಗೆ ಒಯ್ಯಲ್ಪಟ್ಟ ಯೆಕೊನ್ಯನಿಗೆ ಹುಟ್ಟಿದ ಮಕ್ಕಳು ಶೆಯಲ್ತೀಯೇಲ್,

18ಮಲ್ಕೀರಾಮ್, ಪೆದಾಯ್, ಶೆನಚ್ಚರ್, ಯೆಕಮ್ಯ, ಹೋಷಾಮ್ ಮತ್ತು ನೆದಬ್ಯ ಎಂಬ ಏಳು ಗಂಡುಮಕ್ಕಳು.

19ಪೆದಾಯನ ಮಕ್ಕಳು: ಜೆರುಬ್ಬಾಬೆಲ್ ಮತ್ತು ಶಿಮ್ಮೀ. ಜೆರುಬ್ಬಾಬೆಲನ ಮಕ್ಕಳು: ಮೆಷುಲ್ಲಾಮ್ ಮತ್ತು ಹನನ್ಯ. ಶೆಲೋಮೀತ್ ಎಂಬ ಮಗಳೂ ಇದ್ದಳು.

20ಇವರಲ್ಲದೆ ಪೆದಾಯನಿಗೆ ಹಷುಬ, ಓಹೆಲ್, ಬೆರೆಕ್ಯ, ಹಸದ್ಯ ಮತ್ತು ಯೂಷಬ್ ಹೆಸೆದ್ ಎಂಬ ಐದು ಗಂಡು ಮಕ್ಕಳಿದ್ದರು.

21ಹನನ್ಯನ ಸಂತಾನದವರು: ಪೆಲಟ್ಯ, ಯೆಶಾಯ ಮತ್ತು ರೆಫಾಯನ ಮಕ್ಕಳಾದ ಅರ್ನಾನ್, ಓಬದ್ಯ ಮತ್ತು ಶೇಕನ್ಯ.

22ಶೆಕನ್ಯನ ಮಗ ಶೆಮಾಯ. ಶೆಮಾಯನಿಗೆ ಆರು ಗಂಡು ಮಕ್ಕಳು: ಹಟ್ಟೂಷ್, ಇಗಾಲ್, ಬಾರೀಹ, ನೆಯರ್ಯ ಮತ್ತು ಶಾಫಾಟ್.

23ನೆಯರ್ಯನ ಮೂರು ಗಂಡು ಮಕ್ಕಳು: ಎಲ್ಯೋಗೆನೈ, ಹಿಜ್ಕೀಯ ಮತ್ತು ಅಜ್ರೀಕಾಮ್.

24ಎಲ್ಯೋಗೆನೈಯನ ಏಳು ಗಂಡು ಮಕ್ಕಳು: ಹೋದವ್ಯ, ಎಲ್ಯಾಷೀಬ್, ಪೆಲಾಯ, ಅಕ್ಕೂಬ್, ಯೋಹಾನಾನ್, ದೆಲಾಯ ಮತ್ತು ಅನಾನೀ.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath