1 ಕೊರಿಂಥದವರಿಗೆ 13
ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ
1ನಾನು ಮನುಷ್ಯರ ಭಾಷೆಗಳನ್ನೂ, ದೇವದೂತರ ಭಾಷೆಗಳನ್ನೂ ಮಾತನಾಡುವವನಾದರೂ ಪ್ರೀತಿಯಿಲ್ಲದವನಾಗಿದ್ದರೆ ನಾದಕೊಡುವ ಕಂಚಿನ ಜಾಗಟೆ, ಗಣಗಣಿಸುವ ಘಂಟೆ ಆಗಿದ್ದೇನೆ.
2ನನಗೆ ಪ್ರವಾದನ ವರವಿದ್ದರೂ, ಎಲ್ಲಾ ರಹಸ್ಯಗಳೂ, ಸಕಲ ವಿಧವಾದ ವಿದ್ಯೆಗಳನ್ನು ತಿಳಿದ್ದರೂ, ಬೆಟ್ಟಗಳನ್ನೂ ತೆಗೆದಿಡುವುಷ್ಟು ನಂಬಿಕೆಯಿದ್ದರೂ, ಪ್ರೀತಿಯಿಲ್ಲದವನಾಗಿದ್ದರೆ ನಾನು ಏನೂ ಅಲ್ಲದವನಾಗಿದ್ದೇನೆ.
3ನನಗಿರುವುದೆಲ್ಲವನ್ನು ಬಡವರಿಗೆ ಅನ್ನದಾನಮಾಡಿದರೂ, ನನ್ನ ದೇಹವನ್ನು ಸುಡುವುದಕ್ಕೆ ಒಪ್ಪಿಸಿದರೂ, ಪ್ರೀತಿಯು ನನಗಿಲ್ಲದಿದ್ದರೆ ನನಗೇನು ಪ್ರಯೋಜನವಿಲ್ಲ. ನಾನು ಬರಿದಾಗಿರುವನು.
4ಪ್ರೀತಿಯು ಬಹು ತಾಳ್ಮೆಯುಳ್ಳದ್ದು, ದಯೆಯುಳ್ಳದ್ದು. ಪ್ರೀತಿಯು ಹೊಟ್ಟೆಕಿಚ್ಚುಪಡುವುದಿಲ್ಲ, ಹೊಗಳಿಕೊಳ್ಳುವುದಿಲ್ಲ. ಅದು ಗರ್ವಪಡುವುದಿಲ್ಲ, ಅಸಭ್ಯವಾಗಿ ನಡೆಯುವುದಿಲ್ಲ.
5ಸ್ವಪ್ರಯೋಜನವನ್ನು ಚಿಂತಿಸುವುದಿಲ್ಲ. ಬೇಗ ಸಿಟ್ಟುಗೊಳ್ಳುವುದಿಲ್ಲ. ಅಪಕಾರವನ್ನು ಮನಸ್ಸಿನಲ್ಲಿ ಇಟ್ಟುಕೊಳ್ಳುವುದಿಲ್ಲ.
6ಅನ್ಯಾಯದಲ್ಲಿ ಸಂತೋಷಪಡುವುದಿಲ್ಲ ಆದರೆ ಸತ್ಯದಲ್ಲಿ ಸಂತೋಷಪಡುತ್ತದೆ.
7ಎಲ್ಲವನ್ನು ತಾಳಿಕೊಳ್ಳುತ್ತದೆ. ಎಲ್ಲವನ್ನು ನಂಬುತ್ತದೆ. ಎಲ್ಲವನ್ನು ನಿರೀಕ್ಷಿಸುತ್ತದೆ. ಎಲ್ಲವನ್ನು ಸಹಿಸಿಕೊಳ್ಳುತ್ತದೆ.
8ಪ್ರೀತಿಯು ಎಂದಿಗೂ ನಿಂತುಹೋಗುವುದಿಲ್ಲ. ಪ್ರವಾದನೆಗಳಾದರೂ ಇಲ್ಲದಂತಾಗುವವು. ಅನ್ಯಭಾಷೆಗಳೋ ನಿಂತುಹೋಗುವವು. ತಿಳಿವಳಿಕೆಯೋ ಇಲ್ಲದಂತಾಗುವುದು.
9ಅಪೂರ್ಣವಾಗಿ ತಿಳಿದುಕೊಳ್ಳುತ್ತೇವೆ; ಅಪೂರ್ಣವಾಗಿ ಪ್ರವಾದಿಸುತ್ತೇವೆ.
10ಆದರೆ ಸಂಪೂರ್ಣವಾದದ್ದು ಬಂದಾಗ ಅಪೂರ್ಣವಾದದ್ದು ಇಲ್ಲದಂತಾಗುವುದು.
11ನಾನು ಬಾಲಕನಾಗಿದ್ದಾಗ ಬಾಲಕನ ರೀತಿಯಲ್ಲಿ ಮಾತನಾಡಿದೆನು. ಬಾಲಕನ ಹಾಗೆ ಯೋಚಿಸಿದೆನು. ಬಾಲಕನಂತೆ ವಿವೇಚಿಸಿದೆನು. ಪ್ರಾಯಸ್ಥನಾದ ಮೇಲೆ ಬಾಲ್ಯದವುಗಳನ್ನು ಬಿಟ್ಟುಬಿಟ್ಟೆನು.
12ಈಗ ಕನ್ನಡಿಯಲ್ಲಿ ಕಾಣಿಸುವಂತೆ ದೇವರ ಮುಖವು ನಮಗೆ ಮೊಬ್ಬಾಗಿ ಕಾಣಿಸುತ್ತದೆ, ಆದರೆ ಆಗ ನೇರವಾಗಿ ಮುಖಾಮುಖಿಯಾಗಿ ಆತನನ್ನು ನೋಡುವೆವು. ಈಗ ಅಪೂರ್ಣವಾಗಿ ನನಗೆ ತಿಳಿದಿದೆ. ಆದರೆ ಆಗ ದೇವರು ನನ್ನನ್ನು ಸಂಪೂರ್ಣವಾಗಿ ತಿಳಿದುಕೊಂಡಂತೆ ನಾನು ಸಂಪೂರ್ಣವಾಗಿ ತಿಳಿದುಕೊಳ್ಳುವೆನು.
13ಹೀಗಿರುವುದರಿಂದ, ನಂಬಿಕೆ, ನಿರೀಕ್ಷೆ, ಪ್ರೀತಿ ಈ ಮೂರೇ ನಿಲ್ಲುತ್ತದೆ. ಇವುಗಳಲ್ಲಿ ದೊಡ್ಡದು ಪ್ರೀತಿಯೇ.
WEBREATH · 11:11
«He himself gives everyone life and breath and everything else» — Acts 17:25
Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.
WEBREATH — the Minute at 11:11, your own local time — we are One Breath