1 ಕೊರಿಂಥದವರಿಗೆ 2
ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ
1ಸಹೋದರರೇ, ನಾನು ಗುಪ್ತವಾಗಿದ್ದ ದೇವರ ಸತ್ಯಾರ್ಥಗಳನ್ನು ತಿಳಿಸುವವನಾಗಿ ನಿಮ್ಮ ಬಳಿಗೆ ಬಂದಾಗ ವಾಕ್ಚಾತುರ್ಯದಿಂದಾಗಲಿ, ಜ್ಞಾನದಿಂದಾಗಲಿ ಬರಲಿಲ್ಲ.
2ನಾನು ಶಿಲುಬೆಗೆ ಹಾಕಲ್ಪಟ್ಟ ಯೇಸು ಕ್ರಿಸ್ತನನ್ನೇ ಹೊರತು ಬೇರೆ ಯಾವುದನ್ನೂ ತಿಳಿಯದವನಾಗಿ ನಿಮ್ಮಲ್ಲಿ ಇರುವೆನೆಂದು ತೀರ್ಮಾನಿಸಿಕೊಂಡೆನು.
3ಇದಲ್ಲದೆ ನಾನು ನಿಮ್ಮಲ್ಲಿಗೆ ಬಂದಾಗ ನಿಮ್ಮ ಬಳಿಯಲ್ಲಿ ಬಲಹೀನನೂ, ಭಯಪಡುವವನೂ, ಬಹು ನಡುಗುವವನೂ ಆಗಿದ್ದೆನು.
4ನಿಮ್ಮ ನಂಬಿಕೆಯು ಮನುಷ್ಯಜ್ಞಾನವನ್ನು ಆಧಾರ ಮಾಡಿಕೊಳ್ಳದೆ ದೇವರ ಶಕ್ತಿಯನ್ನು ಆಧಾರಮಾಡಿಕೊಳ್ಳಬೇಕೆಂದು ನನ್ನ ಬೋಧನೆಯಲ್ಲಿಯೂ, ಪ್ರಸಂಗದಲ್ಲಿಯೂ ಮನವೊಲಿಸುವ ಜ್ಞಾನವಾಕ್ಯಗಳನ್ನು ನಾನು ಪ್ರಯೋಗಿಸದೇ ದೇವರಾತ್ಮನ ಬಲವನ್ನು ತೋರ್ಪಡಿಸುವ ವಾಕ್ಯಗಳನ್ನೇ ಪ್ರಯೋಗಿಸಿದೆನು.
6ಆದರೆ ಪರಿಪಕ್ವತೆಯುಳ್ಳವರ ಮಧ್ಯದಲ್ಲಿ ಜ್ಞಾನವನ್ನೇ ಹೇಳುತ್ತೇವೆ. ಅದು ಇಹಲೋಕದ ಜ್ಞಾನವಲ್ಲ, ಗತಿಸಿ ಹೋಗುವ ಇಹಲೋಕಾಧಿಕಾರಿಗಳ ಜ್ಞಾನವೂ ಅಲ್ಲ.
7ಇದುವರೆಗೆ ಗುಪ್ತವಾಗಿದ್ದ ಸತ್ಯಾರ್ಥವನ್ನು ತಿಳಿಸುವಲ್ಲಿ ದೇವರ ಜ್ಞಾನವನ್ನೇ ಹೇಳುತ್ತೇವೆ. ಅದು ಯಾವುದೆಂದರೆ ದೇವರು ನಮ್ಮ ಮಹಿಮೆಗಾಗಿ ಲೋಕೋತ್ಪತ್ತಿಗಿಂತ ಮೊದಲೇ ನೇಮಿಸಿ ಮರೆಮಾಡಿದ್ದ ದೇವರ ಜ್ಞಾನದ ಮರ್ಮವೇ ಆಗಿದೆ.
8ಇದನ್ನು ಇಹಲೋಕಾಧಿಕಾರಿಗಳಲ್ಲಿ ಯಾರೂ ಅರಿತಿರಲಿಲ್ಲ; ಅರಿತಿದ್ದರೆ ಅವರು ಮಹಿಮೆಯುಳ್ಳ ಕರ್ತನನ್ನು ಶಿಲುಬೆಗೆ ಹಾಕಿಸುತ್ತಿರಲಿಲ್ಲ;
9ಆದರೆ ದೇವರ ವಾಕ್ಯಗಳಲ್ಲಿ ಬರೆದಿರುವ ಪ್ರಕಾರ, “ದೇವರು ತನ್ನನ್ನು ಪ್ರೀತಿಸುವವರಿಗಾಗಿ ಸಿದ್ಧಮಾಡಿರುವಂಥದೆಲ್ಲವನ್ನು ಕಣ್ಣು ಕಾಣಲಿಲ್ಲ, ಕಿವಿ ಕೇಳಲಿಲ್ಲ, ಅದರ ಭಾವನೆಯು ಮನುಷ್ಯನ ಹೃದಯದಲ್ಲಿ ಹುಟ್ಟಲಿಲ್ಲ.”
10ನಮಗಾದರೋ ದೇವರು ತನ್ನ ಆತ್ಮನ ಮೂಲಕ ಅದನ್ನು ಪ್ರಕಟಪಡಿಸಿದನು. ಆ ಆತ್ಮನು ಎಲ್ಲಾ ವಿಷಯಗಳನ್ನು, ದೇವರ ಅಗಾಧವಾದ ವಿಷಯಗಳನ್ನು ಕೂಡ ಪರಿಶೋಧಿಸುವವನಾಗಿದ್ದಾನೆ.
11ಮನುಷ್ಯನೊಳಗಿನ ಆಲೋಚನೆಗಳು ಅವನಲ್ಲಿರುವ ಮನುಷ್ಯತ್ಮನಿಗಲ್ಲದೆ ಮತ್ತಾರಿಗೆ ತಿಳಿಯುವುದು? ಹಾಗೆಯೇ ದೇವರಾಲೋಚನೆಗಳನ್ನು ದೇವರ ಆತ್ಮನೇ ಹೊರತು ಬೇರೆ ಯಾರಿಂದಲೂ ಗ್ರಹಿಸಲು ಸಾಧ್ಯವಿಲ್ಲ.
12ನಾವು ಇಹಲೋಕದ ಆತ್ಮವನ್ನು ಹೊಂದದೆ ದೇವರು ನಮಗೆ ಉಚಿತವಾಗಿ ದಯಪಾಲಿಸಿರುವ ವರಗಳನ್ನು ತಿಳಿದುಕೊಳ್ಳುವುದಕ್ಕಾಗಿ ದೇವರಿಂದ ಬಂದ ಆತ್ಮವನ್ನೇ ಹೊಂದಿದವರಾಗಿದ್ದೇವೆ.
13ಇವುಗಳನ್ನು ಮನುಷ್ಯ ಜ್ಞಾನವು ಕಲಿಸಿದ ಮಾತುಗಳಿಂದ ಹೇಳದೆ ಪವಿತ್ರಾತ್ಮನೇ ಕಲಿಸಿಕೊಟ್ಟ ಮಾತುಗಳಿಂದ ಹೇಳಿ ಆತ್ಮೀಕವಾದವುಗಳನ್ನು ಆತ್ಮೀಕರಾದವರಿಗೆ ಯುಕ್ತವಾದ ರೀತಿಯಲ್ಲಿ ಸ್ಪಷ್ಟಪಡಿಸುತ್ತೇವೆ.
14ಪ್ರಾಪಂಚಿಕನಾದವನು ದೇವರಾತ್ಮನ ವಿಷಯಗಳನ್ನು ಬೇಡವೆನ್ನುತ್ತಾನೆ; ಅವು ಅವನಿಗೆ ಹುಚ್ಚುಮಾತನಾಗಿ ತೋರುತ್ತವೆ; ಅವು ಆಧ್ಯಾತ್ಮದ ಮೂಲಕ ತಿಳಿದುಕೊಳ್ಳ ಬೇಕಾಗಿರುವುದರಿಂದ ಅವನು ಅವುಗಳನ್ನು ಗ್ರಹಿಸಲಾರನು.
15ಪವಿತ್ರಾತ್ಮನಿಂದ ನಡಿಸಿಕೊಳ್ಳುವವನೋ ಎಲ್ಲವನ್ನೂ ವಿವೇಚಿಸಿ ತಿಳಿದುಕೊಳ್ಳುತ್ತಾನೆ; ಆದರೆ ಅವನಿಗೆ ಯಾರೂ ವಿವೇಚಿಸಿ ತಿಳಿಸಿಕೊಡಬೇಕಾಗಿಲ್ಲ.
16“ಕರ್ತನ ಮನಸ್ಸನ್ನು ತಿಳಿದುಕೊಂಡು ಆತನಿಗೆ ಉಪದೇಶಿಸುವವನಾರು?” ಎಂದು ಬರೆದಿದೆಯಲ್ಲಾ. ನಾವಾದರೋ ಕ್ರಿಸ್ತನ ಮನಸ್ಸನ್ನು ಹೊಂದಿದವರಾಗಿದ್ದೇವೆ.
WEBREATH · 11:11
«He himself gives everyone life and breath and everything else» — Acts 17:25
Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.
WEBREATH — the Minute at 11:11, your own local time — we are One Breath