1 ಕೊರಿಂಥದವರಿಗೆ 5
ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ
1ನಿಮ್ಮಲ್ಲಿ ಜಾರತ್ವವುಂಟೆಂಬ ಸುದ್ದಿಯನ್ನು ನಾನು ಕೇಳಿದ್ದೇನೆ. ಒಬ್ಬನು ತನ್ನ ತಂದೆಯ ಹೆಂಡತಿಯನ್ನು ಇಟ್ಟುಕೊಂಡಿದ್ದಾನಂತೆ. ಅಂಥ ಜಾರತ್ವವು ಅನ್ಯಜನರಲ್ಲಿಯೂ ಸಹ ಇಲ್ಲ.
2ಹೀಗಿದ್ದರೂ ನೀವು ದುಃಖಿಸದೆ, ಈ ಕಾರ್ಯಮಾಡಿದವನನ್ನು ನಿಮ್ಮೊಳಗಿಂದ ಬಹಿಷ್ಕರಿಸದೆ, ಉಬ್ಬಿಕೊಂಡಿದ್ದೀರಲ್ಲಾ.
3ನಾನಂತೂ ಶಾರೀರಿಕವಾಗಿ ನಿಮ್ಮಿಂದ ದೂರವಾಗಿದ್ದರೂ, ಆತ್ಮದಿಂದ ಹತ್ತಿರದಲ್ಲಿದ್ದು ಈ ಕಾರ್ಯ ಮಾಡಿದವನನ್ನು ಕುರಿತು ಆಗಲೇ ನಿಮ್ಮ ಹತ್ತಿರವಿದ್ದವನಂತೆ ತೀರ್ಪು ಮಾಡಿದ್ದೇನೆ.
4ನಮ್ಮ ಕರ್ತನಾದ ಯೇಸುವಿನ ನಾಮದಲ್ಲಿ ನೀವೆಲ್ಲರೂ ಸೇರಿ ಬರುವಾಗ ನಾನು ಆತ್ಮದಿಂದ ನಿಮ್ಮೊಂದಿಗಿರುತ್ತೇನೆ ಹಾಗೂ
5ಅವನನ್ನು ಸೈತಾನನಿಗೆ ಒಪ್ಪಿಸಿರಿ ಯಾಕೆಂದರೆ ಕರ್ತನಾದ ಯೇಸುವಿನ ಪ್ರತ್ಯಕ್ಷತೆಯ ದಿನದಲ್ಲಿ ಅಂಥವನ ಆತ್ಮವು ರಕ್ಷಣೆ ಹೊಂದುವುದಕ್ಕಾಗಿ ಅವನ ಶರೀರಭಾವವು ನಾಶವಾಗುವಂತೆ ಕರ್ತನಾದ ಯೇಸುವಿನ ಶಕ್ತಿಯಿಂದ ತೀರ್ಪು ಮಾಡಿದ್ದೇನೆ.
6ನೀವು ಹೊಗಳಿಕೊಳ್ಳುವುದು ಒಳ್ಳೆಯದಲ್ಲ. ಸ್ವಲ್ಪ ಹುಳಿ ಕಲಸಿದರೆ ಕಣಕವೆಲ್ಲಾ ಹುಳಿಯಾಗುತ್ತದೆಂಬುದು ನಿಮಗೆ ತಿಳಿಯದೋ?
7ನೀವು ಹುಳಿಯಿಲ್ಲದವರೆನಿಸಿಕೊಂಡದ್ದರಿಂದ ಹಳೇ ಹುಳಿಯನ್ನು ತೆಗೆದುಹಾಕಿ ಹೊಸ ಕಣಕದಂತಾಗಿರಿ. ಯಾಕೆಂದರೆ ಈಗಾಗಲೇ ನಮ್ಮ ಪಸ್ಕ ಯಜ್ಞದ ಕುರಿಮರಿಯು ಬಲಿಯಾಗಿದೆ; ಆ ಕುರಿಮರಿ ಯಾವುದೆಂದರೆ ಕ್ರಿಸ್ತನೇ.
8ಆದಕಾರಣ ನಾವು ಹಳೇ ಹುಳಿಯನ್ನು ಅಂದರೆ ದುರ್ಮಾರ್ಗತ್ವ ಮತ್ತು ದುಷ್ಟತ್ವ ಎಂಬ ಹುಳಿಯನ್ನು ಇಟ್ಟುಕೊಳ್ಳದೇ ಪ್ರಾಮಾಣಿಕತೆ ಹಾಗೂ ಸತ್ಯತೆ ಎಂಬ ಹುಳಿಯಿಲ್ಲದ ರೊಟ್ಟಿಯನ್ನೇ ತೆಗೆದುಕೊಂಡು ಹಬ್ಬವನ್ನು ಆಚರಿಸೋಣ.
9ಜಾರರ ಸಹವಾಸ ಮಾಡಬಾರದೆಂದು ನನ್ನ ಪತ್ರಿಕೆಯಲ್ಲಿ ಬರೆದಿದ್ದೇನೆ.
10ಅದು ಈ ಲೋಕದಲ್ಲಿರುವ ಜಾರರು, ಆಸೆಬುರುಕರು, ಸುಲುಕೊಳ್ಳುವವರು, ವಿಗ್ರಹಾರಾಧಕರು, ಮೊದಲಾದವರ ಸಹವಾಸವನ್ನು ಬಿಟ್ಟುಬಿಡಬೇಕೆಂಬ ಅರ್ಥದಲ್ಲಿ ಅಲ್ಲ; ಹಾಗೆ ಬಿಡಬೇಕಾದರೆ ನೀವು ಈ ಲೋಕವನ್ನೇ ಬಿಟ್ಟುಹೋಗಬೇಕಾದೀತು.
11ಆದರೆ ಕ್ರೈಸ್ತ ಸಹೋದರನೆನಿಸಿಕೊಂಡವನು ಜಾರನು, ಲೋಭಿಯು, ವಿಗ್ರಹಾರಾಧಕನು, ಜಗಳಗಂಟನೂ, ಕುಡುಕನು, ಸುಲುಕೊಳ್ಳುವವನೂ ಆಗಿದ್ದ ಪಕ್ಷದಲ್ಲಿ ಅವನ ಸಹವಾಸ ಮಾಡಬಾರದು. ಅಂಥವನ ಸಂಗಡ ಊಟ ಸಹ ಮಾಡಬಾರದು ಎಂದು ಬರೆದಿದ್ದೇನೆ.
12ಸಭೆಯ ಹೊರಗಿರುವವರನ್ನು ತೀರ್ಪುಮಾಡುವುದಕ್ಕೆ ನನಗೇನಧಿಕಾರವಿದೆ? ಒಳಗಿನವರನ್ನು ತೀರ್ಪುಮಾಡುವವರು ನೀವೇ ಅಲ್ಲವೇ.
13ಹೊರಗಿರುವವರನ್ನು ತೀರ್ಪುಮಾಡುವವನು ದೇವರು. “ನಿಮ್ಮ ಮಧ್ಯದಲ್ಲಿರುವ ಆ ದುಷ್ಟ ವ್ಯಕ್ತಿಯನ್ನು ತೆಗೆದುಹಾಕಿರಿ.”
WEBREATH · 11:11
«He himself gives everyone life and breath and everything else» — Acts 17:25
Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.
WEBREATH — the Minute at 11:11, your own local time — we are One Breath