1 ಯೋಹಾನನು 5
ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ
1ಯೇಸುವೇ ಕ್ರಿಸ್ತನೆಂದು ನಂಬುವ ಪ್ರತಿಯೊಬ್ಬನೂ ದೇವರಿಂದ ಹುಟ್ಟಿದವನಾಗಿದ್ದಾನೆ. ಯಾವನು ತನ್ನನ್ನು ಹುಟ್ಟಿಸಿದ ತಂದೆಯನ್ನು ಪ್ರೀತಿಸುತ್ತಾನೋ, ಅವನು ತಂದೆಯಿಂದ ಹುಟ್ಟಿದವರೆಲ್ಲರನ್ನೂ ಪ್ರೀತಿಸುತ್ತಾನೆ.
2ನಾವು ದೇವರನ್ನು ಪ್ರೀತಿಸಿ ಆತನ ಆಜ್ಞೆಗಳನ್ನು ಅನುಸರಿಸುವುದರಿಂದಲೇ ದೇವರ ಮಕ್ಕಳನ್ನು ಪ್ರೀತಿಸುತ್ತೇವೆಂಬುದನ್ನು ತಿಳಿದುಕೊಳ್ಳುತ್ತೇವೆ.
3ದೇವರ ಮೇಲಿನ ಪ್ರೀತಿ ಏನೆಂದರೆ ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವುದೇ. ಆತನ ಆಜ್ಞೆಗಳು ಕಷ್ಟಕರವಾದವುಗಳಲ್ಲ.
4ಏಕೆಂದರೆ ದೇವರಿಂದ ಹುಟ್ಟಿದವನು ಲೋಕವನ್ನು ಜಯಿಸುತ್ತಾನೆ. ಲೋಕವನ್ನು ಜಯಿಸುವಂಥದ್ದು ನಮ್ಮ ನಂಬಿಕೆಯೇ.
5ಯೇಸುಕ್ರಿಸ್ತನು ದೇವರ ಮಗನೆಂದು ಒಪ್ಪಿಕೊಂಡು ನಂಬಿದವರಲ್ಲದೆ ಮತ್ತಾರು ಲೋಕವನ್ನು ಜಯಿಸಿದವರಾಗಿದ್ದಾರೆ?
6ಈತನು ಅಂದರೆ ಯೇಸು ಕ್ರಿಸ್ತನು ನೀರಿನಿಂದಲೂ, ರಕ್ತದಿಂದಲೂ ಬಂದಾತನು. ನೀರಿನಿಂದ ಮಾತ್ರವಲ್ಲದೆ ನೀರಿನಿಂದಲೂ, ರಕ್ತದಿಂದಲೂ ಸಾಕ್ಷಿ ಹೊಂದಿದವನಾಗಿದ್ದಾನೆ. ಆತ್ಮವು ಸಾಕ್ಷಿಯನ್ನು ಕೊಡುತ್ತದೆ. ಏಕೆಂದರೆ ಆತ್ಮನು ಸತ್ಯಸ್ವರೂಪನೇ.
7ಇದಲ್ಲದೆ ಸಾಕ್ಷಿ ಕೊಡುವವರು ಮೂವರಿದ್ದಾರೆ.
8ಆತ್ಮ, ನೀರು, ರಕ್ತ ಎಂಬ ಮೂರು ಸಾಕ್ಷಿಗಳುಂಟು. ಈ ಮೂರು ಒಂದೇ ಅಭಿಪ್ರಾಯವನ್ನು ಒಪ್ಪಿಕೊಳ್ಳುತ್ತವೆ.
9ನಾವು ಮನುಷ್ಯರ ಸಾಕ್ಷಿಯನ್ನು ಒಪ್ಪಿಕೊಳ್ಳುತ್ತೇವಲ್ಲಾ, ಹಾಗೆ ದೇವರ ಸಾಕ್ಷಿಯು ಅದಕ್ಕಿಂತಲೂ ಶ್ರೇಷ್ಠವಾಗಿದೆ. ಏಕೆಂದರೆ ದೇವರು ಕೊಟ್ಟ ಸಾಕ್ಷಿಯು ತನ್ನ ಮಗನ ಕುರಿತದ್ದಾಗಿದೆ.
10ದೇವರ ಮಗನಲ್ಲಿ ನಂಬಿಕೆ ಇಟ್ಟವನು ಆ ಸಾಕ್ಷಿಯನ್ನು ತನ್ನಲ್ಲೇ ಹೊಂದಿದ್ದಾನೆ. ದೇವರನ್ನು ನಂಬದವನು ಆತನನ್ನು ಸುಳ್ಳುಗಾರನನ್ನಾಗಿ ಮಾಡಿದ್ದಾನೆ. ಹೇಗೆಂದರೆ ದೇವರು ತನ್ನ ಮಗನ ಪರವಾಗಿ ಕೊಟ್ಟ ಸಾಕ್ಷಿಯಲ್ಲಿ ಅವನು ನಂಬಿಕೆಯಿಡಲಿಲ್ಲ.
11ಆ ಸಾಕ್ಷಿ ಯಾವುದೆಂದರೆ, ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದ್ದಾನೆ. ಆ ಜೀವವು ಆತನ ಮಗನಲ್ಲಿದೆ ಎಂಬುದೇ.
12ಯಾರು ದೇವರ ಮಗನನ್ನು ನಂಬುತ್ತಾರೋ ಅವರಲ್ಲಿ ಆ ಜೀವ ಉಂಟು, ಆದರೆ ಯಾರು ದೇವರ ಮಗನನ್ನು ನಂಬುವುದಿಲ್ಲವೋ ಅವರಲ್ಲಿ ಆ ಜೀವವಿಲ್ಲ.
13ದೇವರ ಮಗನ ಹೆಸರಿನಲ್ಲಿ ನಂಬಿಕೆಯಿಟ್ಟಿರುವವರಾದ ನಿಮ್ಮಲ್ಲಿ ಆ ನಿತ್ಯಜೀವ ಉಂಟೆಂಬುದು ಗೊತ್ತಾಗುವುದಕ್ಕಾಗಿ ನಿಮಗೆ ಈ ವಿಷಯಗಳನ್ನು ಬರೆದಿದ್ದೇನೆ.
14ಮತ್ತು ದೇವರ ಚಿತ್ತಾನುಸಾರವಾಗಿ ಏನಾದರೂ ಬೇಡಿಕೊಂಡರೆ ಆತನು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾನೆಂಬ ಭರವಸೆಯು ಆತನಲ್ಲಿ ನಮಗುಂಟು.
15ನಾವು ಏನು ಬೇಡಿಕೊಂಡರೂ ಆತನು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾನೆಂಬುದು ನಮಗೆ ತಿಳಿದಿದ್ದರೆ, ನಾವು ಬೇಡಿದವುಗಳು ಆತನಿಂದ ನಮಗೆ ದೊರೆಯುತ್ತವೆಂಬುದು ನಮಗೆ ತಿಳಿಯುತ್ತದೆ.
16ಯಾವನಾದರೂ ತನ್ನ ಸಹೋದರನು ಮರಣಕರವಲ್ಲದ ಪಾಪಮಾಡುವುದನ್ನು ಕಂಡರೆ ಅವನು ದೇವರನ್ನು ಬೇಡಿಕೊಳ್ಳಲಿ. ಆಗ ದೇವರು ಮರಣಕರವಲ್ಲದ ಪಾಪಮಾಡುವವರಿಗೆ ಜೀವವನ್ನು ದಯಪಾಲಿಸುವನು. ಮರಣಕರವಾದ ಪಾಪವುಂಟು ಈ ಪಾಪದ ವಿಷಯವಾಗಿ ಅವನು ಬೇಡಿಕೊಳ್ಳಬೇಕೆಂದು ನಾನು ಹೇಳುವುದಿಲ್ಲ.
17ನೀತಿಗೆ ವಿರುದ್ಧವಾದದ್ದೆಲ್ಲವೂ ಪಾಪವಾಗಿದೆ. ಆದರೂ ಮರಣಕರವಲ್ಲದ ಪಾಪವುಂಟು.
18ದೇವರಿಂದ ಹುಟ್ಟಿರುವವನು ಪಾಪಮಾಡುವುದಿಲ್ಲವೆಂಬುದು ನಮಗೆ ಗೊತ್ತದೆ. ದೇವರಿಂದ ಹುಟ್ಟಿದವನು ತನ್ನನ್ನು ತಾನು ಕಾಪಾಡಿಕೊಳ್ಳುವನು. ಕೆಡುಕನು ಅವನನ್ನು ಮುಟ್ಟುವುದಿಲ್ಲ.
19ಇಡೀ ಲೋಕವು ಕೆಡುಕನ ವಶದಲ್ಲಿ ಇದ್ದರು ಸಹ ನಾವು ದೇವರಿಗೆ ಸಂಬಂಧಪಟ್ಟವರಾಗಿದ್ದೇವೆಂಬುದು ನಮಗೆ ತಿಳಿದಿದೆ.
20ದೇವರ ಮಗನು ಈ ಲೋಕಕ್ಕೆ ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬುದು ನಮಗೆ ಗೊತ್ತಿದೆ, ಮತ್ತು ನಾವು ದೇವರ ಮಗನಾದ ಯೇಸುಕ್ರಿಸ್ತನಲ್ಲಿ ಇರುವವರಾಗಿ ಸತ್ಯದೇವರಾಗಿರುವಾತನಲ್ಲಿದ್ದೇವೆ. ಈ ಕ್ರಿಸ್ತನೇ ಸತ್ಯದೇವರೂ, ನಿತ್ಯಜೀವವೂ ಆಗಿದ್ದಾನೆ.
21ಪ್ರಿಯಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ.
WEBREATH · 11:11
«He himself gives everyone life and breath and everything else» — Acts 17:25
Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.
WEBREATH — the Minute at 11:11, your own local time — we are One Breath