1 ಸಮುವೇಲನು 29
ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ
1ಫಿಲಿಷ್ಟಿಯರು ತಮ್ಮ ಸೈನ್ಯವನ್ನು ಕೂಡಿಸಿಕೊಂಡು ಬಂದು ಅಫೇಕಿನಲ್ಲಿ ಪಾಳೆಯಮಾಡಿಕೊಂಡರು. ಇಸ್ರಾಯೇಲರು ಇಜ್ರೇಲಿನ ಬೈಲಿನಲ್ಲಿರುವ ಬುಗ್ಗೆಯ ಬಳಿಯಲ್ಲಿ ಇಳಿದುಕೊಂಡರು.
2ಫಿಲಿಷ್ಟಿಯ ಪ್ರಭುಗಳ ಸೈನಿಕರು ನೂರು ನೂರು ಮಂದಿಯಾಗಿಯೂ, ಸಾವಿರ ಸಾವಿರ ಮಂದಿಯಾಗಿ, ಬರುತ್ತಿರುವಾಗ ದಾವೀದನು ಅವನ ಜನರ ಸಹಿತವಾಗಿ ಆಕೀಷನ ಸಂಗಡ ಹಿಂಬಾಲಿಸುತ್ತಿದ್ದನು.
3ಆಗ ಫಿಲಿಷ್ಟಿಯ ಪ್ರಭುಗಳು, “ಈ ಇಬ್ರಿಯರು ಯಾಕೆ?” ಎಂದು ಆಕೀಷನನ್ನು ಕೇಳಿದರು. ಅವನು ಅವರಿಗೆ, “ಇವನು ಇಸ್ರಾಯೇಲರ ಅರಸನಾದ ಸೌಲನ ಸೇವಕ ದಾವೀದನಲ್ಲವೋ, ಇವನು ಇಷ್ಟು ವರ್ಷ, ಇಷ್ಟು ದಿನಗಳಿಂದ ನನ್ನ ಬಳಿಯಲ್ಲಿದ್ದಾನೆ. ಸೌಲನನ್ನು ಬಿಟ್ಟು ನನ್ನ ಹತ್ತಿರ ಬಂದ ದಿನ ಮೊದಲುಗೊಂಡು ಇಂದಿನವರೆಗೂ ನಾನು ಇವನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲ” ಎಂದು ಉತ್ತರಕೊಟ್ಟನು.
4ಆದರೆ ಫಿಲಿಷ್ಟಿಯ ಪ್ರಭುಗಳು ಅವನ ಮೇಲೆ ಕೋಪಗೊಂಡು ಅವನಿಗೆ, “ಈ ಮನುಷ್ಯನನ್ನು ಕಳುಹಿಸಿಬಿಡು, ಇವನು ಹಿಂದಿರುಗಿ ಹೋಗಿ ನೀನು ನೇಮಿಸಿದ ಸ್ಥಳದಲ್ಲೇ ವಾಸಿಸಲಿ. ನಮ್ಮ ಜೊತೆಯಲ್ಲಿ ಯುದ್ಧಕ್ಕೆ ಬರಬಾರದು. ಬಂದರೆ ನಮಗೆ ಶತ್ರುವಾಗಿ ನಿಂತಾನು, ಫಿಲಿಷ್ಟಿಯರ ತಲೆಗಳನ್ನು ಕಡಿದಿದ್ದರಿಂದಲೇ ಇವನು ತನ್ನ ಯಜಮಾನನ ಮೆಚ್ಚಿಕೆಯನ್ನು ಪಡೆಯಬಹುದಲ್ಲವೇ?
5‘ಸೌಲನು ಸಾವಿರಾರು ಶತ್ರುಗಳನ್ನು ಕೊಂದನು. ದಾವೀದನು ಹತ್ತು ಸಾವಿರಾರು ಶತ್ರುಗಳನ್ನು ಕೊಂದನು’ ಎಂದು ಸ್ತ್ರೀಯರು ಕುಣಿಯುತ್ತಾ ಹಾಡಿದ್ದು ಈ ದಾವೀದನನ್ನು ಕುರಿತೇ ಅಲ್ಲವೇ?” ಅಂದರು.
6ಆಗ ಆಕೀಷನು ದಾವೀದನನ್ನು ಕರೆದು ಅವನಿಗೆ, “ಯೆಹೋವನಾಣೆ ನೀನು ಯಥಾರ್ಥನು. ನೀನು ನನ್ನ ಸಂಗಡ ಪಾಳೆಯದಲ್ಲಿದ್ದುಕೊಂಡು ಯುದ್ಧಕ್ಕೆ ಹೋಗುತ್ತಾ ಬರುತ್ತಾ ಇರುವುದು ಯುಕ್ತವೆಂದು ನನಗೆ ತೋರಿತು. ನೀನು ಬಂದಂದಿನಿಂದ ಇಂದಿನವರೆಗೂ ನಾನು ನಿನ್ನಲ್ಲಿ ಯಾವ ದೋಷವನ್ನೂ ಕಾಣಲಿಲ್ಲ.
7ಆದರೆ ಪ್ರಭುಗಳು ನಿನ್ನನ್ನು ಮೆಚ್ಚುವುದಿಲ್ಲ. ಆದ್ದರಿಂದ ನೀನು ಸಮಾಧಾನದಿಂದ ಹಿಂದಿರುಗಿ ಹೋಗು ಅವರನ್ನು ಸಿಟ್ಟುಗೊಳಿಸಬಾರದು” ಎಂದು ಹೇಳಿದನು.
8ದಾವೀದನು ಆಕೀಷನಿಗೆ, “ನಾನೇನು ಮಾಡಿದೆನು? ನಿನ್ನ ದಾಸನಾದ ನಾನು ನಿನ್ನ ಬಳಿಗೆ ಬಂದ ದಿನದಿಂದ ಇಂದಿನವರೆಗೂ ನನ್ನಲ್ಲಿ ಯಾವ ಅಪರಾಧವನ್ನು ಕಂಡಿ? ಅರಸನಾದ ನನ್ನ ಒಡೆಯನ ಜೊತೆಯಲ್ಲಿ ಹೋಗಿ, ಅವನ ಶತ್ರುಗಳೊಡನೆ ನಾನೇಕೆ ಯುದ್ಧ ಮಾಡಬಾರದು?” ಅಂದನು.
9ಆಗ ಆಕೀಷನು ದಾವೀದನಿಗೆ, “ನೀನು ಒಳ್ಳೆಯವನೆಂದು ನನಗೆ ಗೊತ್ತದೆ, ನನ್ನ ದೃಷ್ಟಿಯಲ್ಲಿ ನೀನು ದೇವದೂತನಂತಿರುತ್ತೀ. ಆದರೆ ಫಿಲಿಷ್ಟಿಯ ಪ್ರಭುಗಳು, ‘ಇವನು ನಮ್ಮ ಜೊತೆಯಲ್ಲಿ ಯುದ್ಧಕ್ಕೆ ಹೊರಡಬಾರದು’ ಎಂದು ಹೇಳುತ್ತಾರಲ್ಲಾ.
10ಆದುದ್ದರಿಂದ ನೀನೂ, ನಿನ್ನ ಸಂಗಡ ಬಂದ ನಿನ್ನ ಒಡೆಯನ ಸೇವಕರೂ, ನಾಳೆ ಬೆಳಿಗ್ಗೆ ಎದ್ದು ಹೊತ್ತು ಮೂಡಿದ ಕೂಡಲೆ ಹಿಂದಿರುಗಿ ಹೋಗಿರಿ” ಎಂದು ಹೇಳಿದನು.
11ದಾವೀದನು ತನ್ನ ಜನರೊಡನೆ ಬೆಳಿಗ್ಗೆ ಎದ್ದು ಹಿಂದಿರುಗಿ ಫಿಲಿಷ್ಟಿಯರ ದೇಶಕ್ಕೆ ಹೊರಟನು. ಫಿಲಿಷ್ಟಿಯರು ಇಜ್ರೇಲಿಗೆ ಹೋದರು.
WEBREATH · 11:11
«He himself gives everyone life and breath and everything else» — Acts 17:25
Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.
WEBREATH — the Minute at 11:11, your own local time — we are One Breath