1 ಸಮುವೇಲನು 31
ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ
1ಫಿಲಿಷ್ಟಿಯರು ಇಸ್ರಾಯೇಲರೊಡನೆ ಯುದ್ಧಮಾಡಿದರು. ಇಸ್ರಾಯೇಲರು ಅವರಿಂದ ಅಪಜಯಹೊಂದಿ ಗಿಲ್ಬೋವ ಬೆಟ್ಟದಲ್ಲಿ ಹತರಾದರು.
2ಫಿಲಿಷ್ಟಿಯರು ಸೌಲನನ್ನೂ ಅವನ ಮಕ್ಕಳನ್ನೂ ಬಿಡದೆ ಹಿಂದಟ್ಟಿ, ಅವನ ಮಕ್ಕಳಾದ ಯೋನಾತಾನನನ್ನೂ ಅಬೀನಾದಾಬನನ್ನೂ ಮಲ್ಕೀಷೂವನನ್ನೂ ಕೊಂದರು.
3ಸೌಲನಿದ್ದ ಕಡೆಯಲ್ಲಿ ಯುದ್ಧವು ಬಹು ಘೋರವಾಗಿತ್ತು. ಬಿಲ್ಲುಗಾರನು ಅವನಿಗೆ ಗುರಿಯಿಟ್ಟನು.
4ಆದುದರಿಂದ ಸೌಲನು ಬಹು ಭೀತನಾಗಿ ತನ್ನ ಆಯುಧವಾಹಕನಿಗೆ “ನಿನ್ನ ಕತ್ತಿಯನ್ನು ಹಿರಿದು ನನ್ನನ್ನು ತಿವಿದು ಕೊಲ್ಲು. ಇಲ್ಲವಾದರೆ ಸುನ್ನತಿಯಿಲ್ಲದ ಈ ಜನರು ಬಂದು ನನ್ನನ್ನು ತಿವಿದು, ಅಪಕೀರ್ತಿಯನ್ನು ಉಂಟುಮಾಡಾರು” ಎಂದು ಹೇಳಲು ಅವನು ಹೆದರಿ, “ನಾನು ಕೊಲ್ಲಲಾರೆ” ಎಂದನು. ಆದುದರಿಂದ ಸೌಲನು ತಾನೇ ಕತ್ತಿಯನ್ನು ಹಿರಿದು ಅದರ ಮೇಲೆ ಬಿದ್ದನು.
5ಸೌಲನು ಮರಣ ಹೊಂದಿರುವುದನ್ನು ಅವನ ಆಯುಧವಾಹಕನು ಕಂಡು ತಾನೂ ತನ್ನ ಕತ್ತಿಯ ಮೇಲೆ ಬಿದ್ದು ಅಲ್ಲಿಯೇ ಸತ್ತನು.
6ಹೀಗೆ ಸೌಲನೂ ಅವನ ಮೂರು ಮಂದಿ ಮಕ್ಕಳೂ, ಅವನ ಆಯುಧವಾಹಕನು, ಎಲ್ಲಾ ಆಳುಗಳೂ ಅದೇ ದಿನದಲ್ಲಿ ಸತ್ತರು.
7ಇಸ್ರಾಯೇಲರ ಭಟರು ಸೋತುಹೋದರು. ಸೌಲನೂ ಅವನ ಮಕ್ಕಳೂ ಸತ್ತರು ಎಂಬ ವರ್ತಮಾನವನ್ನು ತಗ್ಗಿನ ಆಚೆಯಲ್ಲಿಯೂ ಯೊರ್ದನಿನ ಆಚೆಯಲ್ಲಿಯೂ ವಾಸವಾಗಿದ್ದ ಇಸ್ರಾಯೇಲರು ಕೇಳಿ ತಮ್ಮ ಪಟ್ಟಣಗಳನ್ನು ಬಿಟ್ಟು ಓಡಿಹೋದರು. ಫಿಲಿಷ್ಟಿಯರು ಬಂದು ಅವುಗಳಲ್ಲಿ ವಾಸಮಾಡಿದರು.
8ಮರುದಿನ ಬೆಳಿಗ್ಗೆ ಫಿಲಿಷ್ಟಿಯರು ಸತ್ತವರ ಒಡವೆಗಳನ್ನು ಸುಲಿದುಕೊಳ್ಳುವುದಕ್ಕೆ ಬಂದಾಗ, ಸೌಲನೂ ಅವನ ಮೂರು ಮಂದಿ ಮಕ್ಕಳೂ ಗಿಲ್ಬೋವ ಬೆಟ್ಟದಲ್ಲಿ ಸತ್ತುಬಿದ್ದಿರುವುದನ್ನು ಕಂಡು
9ಸೌಲನ ತಲೆಯನ್ನು ಕಡಿದು ಅವನ ಆಯುಧಗಳನ್ನು ತೆಗೆದುಕೊಂಡನು. ಅವುಗಳನ್ನು ತಮ್ಮ ದೇಶದ ಎಲ್ಲಾ ಕಡೆಗೂ ಕಳುಹಿಸಿ, ತಮ್ಮ ಎಲ್ಲ ಜನರಿಗೂ ದೇವಸ್ಥಾನಗಳಿಗೂ ಜಯವಾರ್ತೆಯನ್ನು ಮುಟ್ಟಿಸಿದರು.
10ಅವನ ಆಯುಧಗಳನ್ನು ಅಷ್ಟೋರೆತ್ ದೇವತೆಯ ಗುಡಿಯಲ್ಲಿಟ್ಟರು. ಅವನ ಶವವನ್ನು ಬೇತ್ಷೆಯಾನಿನ ಕೋಟೆ ಗೋಡೆಗೆ ನೇತುಹಾಕಿದರು.
11ಫಿಲಿಷ್ಟಿಯರು ಸೌಲನಿಗೆ ಏನೇನು ಮಾಡಿದರೆಂಬ ವರ್ತಮಾನ ಯಾಬೆಷ್ ಗಿಲ್ಯಾದಿನವರಿಗೆ ಮುಟ್ಟಿದಾಗ
12ಅವರಲ್ಲಿದ್ದ ಶೂರರೆಲ್ಲರೂ ಹೊರಟು, ರಾತ್ರಿಯೆಲ್ಲಾ ನಡೆದುಹೋಗಿ, ಸೌಲನ ಮತ್ತು ಅವನ ಮಕ್ಕಳ ಶವಗಳನ್ನು ಬೇತ್ಷೆಯಾನಿನ ಗೋಡೆಯಿಂದ ಇಳಿಸಿ, ಯಾಬೇಷಿಗೆ ತೆಗೆದುಕೊಂಡು ಬಂದು ಅಲ್ಲಿ ಅವುಗಳನ್ನು ಸುಟ್ಟುಬಿಟ್ಟರು.
13ಅವರ ಎಲುಬುಗಳನ್ನು ಯಾಬೇಷಿನಲ್ಲಿದ್ದ ಪಿಚುಲ ವೃಕ್ಷದ ಕೆಳಗೆ ಸಮಾಧಿಮಾಡಿ, ಏಳು ದಿನ ಉಪವಾಸ ಮಾಡಿದರು.
WEBREATH · 11:11
«He himself gives everyone life and breath and everything else» — Acts 17:25
Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.
WEBREATH — the Minute at 11:11, your own local time — we are One Breath