ಕ್ರಿಶ್ಚಿಯನ್ ಧರ್ಮ
ಹಿಂದೆ

1 ಸಮುವೇಲನು 5

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ಫಿಲಿಷ್ಟಿಯರು ದೇವರ ಮಂಜೂಷವನ್ನು ಎಬೆನೆಜೆರಿನಿಂದ ಅಷ್ಡೋದಿನಲ್ಲಿರುವ

2ದಾಗೋನನ ಗುಡಿಗೆ ತೆಗೆದುಕೊಂಡು ಹೋಗಿ ಅಲ್ಲಿ ದಾಗೋನನ ಮಗ್ಗುಲಲ್ಲೇ ಇಟ್ಟರು.

3ಅಷ್ಡೋದಿನವರು ಮರುದಿನ ಬೆಳಿಗ್ಗೆ ಎದ್ದು ನೋಡಲಾಗಿ ದಾಗೋನ್ ವಿಗ್ರಹವು ಯೆಹೋವನ ಮಂಜೂಷದ ಮುಂದೆ ಬೋರಲಬಿದ್ದಿರುವುದನ್ನು ಕಂಡು ಅದನ್ನು ಎತ್ತಿ ತಿರುಗಿ ಅದರ ಸ್ಥಳದಲ್ಲಿಟ್ಟರು.

4ಮಾರನೆಯ ದಿನ ಬೆಳಿಗ್ಗೆ ನೋಡುವಾಗ ದಾಗೋನನ ತಲೆಯೂ, ಕೈಗಳೂ ಕಡಿಯಲ್ಪಟ್ಟು ಹೊಸ್ತಿಲಿನ ಮೇಲೆ ಬಿದ್ದಿದ್ದವು; ಮುಂಡ ಮಾತ್ರ ಯೆಹೋವನ ಮಂಜೂಷದ ಮುಂದೆ ಬಿದ್ದಿತ್ತು;

5ಆದ್ದರಿಂದ ಈ ದಿನದ ವರೆಗೂ ದಾಗೋನನ ಯಾಜಕರೂ ಮತ್ತು ದಾಗೋನನ ಮನೆಗೆ ಬರುವವರೆಲ್ಲರೂ ಅಷ್ಡೋದಿನ ಗುಡಿಯ ಹೊಸ್ತಿಲನ್ನು ಇಂದಿಗೂ ತುಳಿಯದಿರುವುದಕ್ಕೆ ಇದೇ ಕಾರಣ.

6ಯೆಹೋವನ ಹಸ್ತವು ಅಷ್ಡೋದಿನವರಿಗೆ ಬಾಧಕವಾಗಿತ್ತು; ಆತನು ಆ ನಗರದಲ್ಲಿಯೂ, ಅದರ ಗ್ರಾಮಗಳಲ್ಲಿಯೂ ಗಡ್ಡೆ ರೋಗವನ್ನು ಬರಮಾಡಿ ಅವರನ್ನು ನಾಶಮಾಡಿದನು.

7ಅಷ್ಡೋದಿನ ಜನರು ಅದನ್ನು ನೋಡಿ, “ಇಸ್ರಾಯೇಲಿನ ದೇವರ ಮಂಜೂಷವು ನಮ್ಮ ಬಳಿಯಲ್ಲಿ ಇರಬಾರದು; ಏಕೆಂದರೆ ಆತನ ಹಸ್ತವು ನಮಗೂ, ನಮ್ಮ ದೇವರಾದ ದಾಗೋನನಿಗೂ ಬಾಧಕವಾಗಿದೆ” ಎಂದು ಹೇಳಿ

8ಫಿಲಿಷ್ಟಿಯ ಪ್ರಭುಗಳೆಲ್ಲರನ್ನೂ ಕೂಡಿಸಿ, “ಇಸ್ರಾಯೇಲಿನ ದೇವರ ಮಂಜೂಷವನ್ನು ಏನು ಮಾಡೋಣ?” ಎಂದು ಕೇಳಲು ಅವರು, “ಅದನ್ನು ಗತ್ ಊರಿಗೆ ಕಳುಹಿಸಿ ಕೊಡಬೇಕೆಂದು ನಿರ್ಣಯಿಸಿದರು.” ಅವರು ಹಾಗೆಯೇ ಇಸ್ರಾಯೇಲಿನ ದೇವರ ಮಂಜೂಷವನ್ನು ಅಲ್ಲಿಗೆ ಕಳುಹಿಸಿದರು.

9ಮಂಜೂಷವು ಅಲ್ಲಿ ಹೋದ ಮೇಲೆ ಯೆಹೋವನ ಹಸ್ತವು ಆ ಊರಿನವರಿಗೂ ಬಾಧಕವಾದುದರಿಂದ ಅಲ್ಲಿ ದೊಡ್ಡ ಗದ್ದಲವಾಯಿತು. ಯೆಹೋವನು ಊರಿನ ಚಿಕ್ಕವರಲ್ಲಿಯೂ, ದೊಡ್ಡವರಲ್ಲಿಯೂ ಗಡ್ಡೆಗಳನ್ನು ಬರಮಾಡಿದನು.

10ಆದ್ದರಿಂದ ಅವರು ದೇವರ ಮಂಜೂಷವನ್ನು ಎಕ್ರೋನಿಗೆ ಕಳುಹಿಸಿದರು. ಅದು ಅಲ್ಲಿಗೆ ಬಂದಾಗ ಆ ಊರಿನವರು, “ನೋಡಿರಿ, ನಮ್ಮನ್ನೂ, ನಮಗೆ ಸೇರಿದವರನ್ನೂ ಕೊಲ್ಲುವುದಕ್ಕೋಸ್ಕರ ಇಸ್ರಾಯೇಲಿನ ದೇವರ ಮಂಜೂಷವನ್ನು ಇಲ್ಲಿಗೆ ಕಳುಹಿಸಿದ್ದಾರೆ” ಎಂದು ಕೂಗಿಕೊಂಡರು.

11ದೇವರ ಹಸ್ತವು ಅವರಿಗೂ ಬಾಧಕವಾಗಿದ್ದುದರಿಂದ ಅವರಿಗೆ ಮರಣಭಯವುಂಟಾಯಿತು. ಅವರು ಫಿಲಿಷ್ಟಿಯ ಪ್ರಭುಗಳೆಲ್ಲರನ್ನೂ ಕೂಡಿಸಿ ಅವರಿಗೆ, “ಇಸ್ರಾಯೇಲಿನ ದೇವರ ಮಂಜೂಷವನ್ನು ಹಾಗೆಯೇ ಅದರ ಸ್ಥಳಕ್ಕೆ ಕಳುಹಿಸಿಬಿಡಿರಿ” ಅಂದರು.

12ಸಾಯದೆ ಉಳಿದ ಜನರಿಗೂ ಗಡ್ಡೆರೋಗ ಬಂದಿತ್ತು. ಪಟ್ಟಣದ ಗೋಳಾಟವು ಆಕಾಶವನ್ನು ಮುಟ್ಟಿತು.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath