1 ತಿಮೊಥೆಯನಿಗೆ 2
ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ
1ಎಲ್ಲಾದಕ್ಕಿಂತ ಮೊದಲು ಎಲ್ಲಾ ಜನರಿಗೋಸ್ಕರ ದೇವರಿಗೆ ವಿಜ್ಞಾಪನೆಗಳನ್ನೂ, ಪ್ರಾರ್ಥನೆಗಳನ್ನೂ, ಮನವಿಗಳನ್ನೂ, ಕೃತಜ್ಞತಾಸ್ತುತಿಗಳನ್ನೂ ಮಾಡಬೇಕೆಂದು ಕೇಳಿಕೊಳ್ಳುತ್ತೇನೆ.
2ನಮಗೆ ಸುಖಸಮಾಧಾನಗಳು ಉಂಟಾಗಿ ನಾವು ಪೂರ್ಣಭಕ್ತಿಯಿಂದಲೂ, ಗೌರವದಿಂದಲೂ ಜೀವಿಸುವಂತೆ, ಅರಸುಗಳಿಗಾಗಿಯೂ ಎಲ್ಲಾ ಅಧಿಕಾರಿಗಳಿಗಾಗಿಯೂ ವಿಜ್ಞಾಪನೆಗಳನ್ನು ಮಾಡಬೇಕು.
3ಹಾಗೆ ಮಾಡುವುದು ನಮ್ಮ ರಕ್ಷಕನಾದ ದೇವರ ಸನ್ನಿಧಿಯಲ್ಲಿ ಒಳ್ಳೆಯದು, ಮೆಚ್ಚಿಕೆಯಾಗಿಯೂ ಇದೆ.
4ಎಲ್ಲಾ ಜನರೂ ರಕ್ಷಣೆಯನ್ನು ಹೊಂದಿ ಸತ್ಯದ ಜ್ಞಾನಕ್ಕೆ ಸೇರಬೇಕೆಂಬುದೇ ಆತನ ಚಿತ್ತವಾಗಿದೆ.
5ಏಕೆಂದರೆ ದೇವರು ಒಬ್ಬನೇ, ದೇವರಿಗೂ ಮನುಷ್ಯರಿಗೂ ಮಧ್ಯಸ್ಥನು ಒಬ್ಬನೇ, ಆತನು ಮನುಷ್ಯನಾಗಿರುವ ಕ್ರಿಸ್ತ ಯೇಸುವೇ.
6ಆತನು ಎಲ್ಲರ ವಿಮೋಚನಾರ್ಥವಾಗಿ ತನ್ನನ್ನು ಒಪ್ಪಿಸಿಕೊಟ್ಟನು. ಇದೇ ತಕ್ಕ ಸಮಯಗಳಲ್ಲಿ ಹೇಳಬೇಕಾದ ಸಾಕ್ಷಿಯಾಗಿದೆ.
7ಆ ಸಾಕ್ಷಿಯನ್ನು ಪ್ರಸಿದ್ಧಿಪಡಿಸುವುದಕ್ಕಾಗಿಯೇ ನಾನು ಸಂದೇಶಕನಾಗಿಯೂ, ಅಪೊಸ್ತಲನಾಗಿಯೂ, ನಂಬಿಕೆಯಿಂದಲೂ ಸತ್ಯದಿಂದಲೂ ಅನ್ಯಜನರಿಗೆ ಬೋಧಿಸುವವನಾಗಿಯೂ ನೇಮಿಸಲ್ಪಟ್ಟಿದ್ದೇನೆ. ನಾನು ಸುಳ್ಳಾಡದೇ ಸತ್ಯವನ್ನೇ ಹೇಳುತ್ತೇನೆ.
8ಹೀಗಿರಲಾಗಿ ಪುರುಷರು ಎಲ್ಲಾ ಸ್ಥಳಗಳಲ್ಲಿ ಕೋಪವೂ ವಾಗ್ವಾದವೂ ಇಲ್ಲದವರಾಗಿ, ಭಕ್ತಿಪೂರ್ವಕವಾಗಿ ಪವಿತ್ರ ಕೈಗಳನ್ನೆತ್ತಿ ಪ್ರಾರ್ಥಿಸಬೇಕೆಂದು ಅಪೇಕ್ಷಿಸುತ್ತೇನೆ.
9ಹಾಗೆಯೇ ಸ್ತ್ರೀಯರು ಮಾನಸ್ಥೆಯರಾಗಿಯೂ, ಸಭ್ಯತೆಯುಳ್ಳವರಾಗಿಯೂ ಇದ್ದು, ಗೌರವಕ್ಕೆ ತಕ್ಕ ಉಡುಪನ್ನೂ ಧರಿಸಿಕೊಳ್ಳಬೇಕೆಂದು ಅಪೇಕ್ಷಿಸುತ್ತೇನೆ. ಅವರು ಜಡೆಯನ್ನು ಹೆಣೆಯುವುದು, ಚಿನ್ನ, ಮುತ್ತು, ಬೆಲೆಯುಳ್ಳ ವಸ್ತ್ರ
10ಮುಂತಾದವುಗಳಿಂದ ತಮ್ಮನ್ನು ಅಲಂಕರಿಸಿಕೊಳ್ಳದೆ ದೇವಭಕ್ತೆಯರೆನಿಸಿಕೊಳ್ಳುವ ಸ್ತ್ರೀಯರಿಗೆ ಯುಕ್ತವಾಗಿರುವ ಪ್ರಕಾರ ಸತ್ಕ್ರಿಯೆಗಳಿಂದಲೇ ಅಲಂಕರಿಸಿಕೊಳ್ಳಬೇಕು.
11ಸ್ತ್ರೀಯರು ಮೌನವಾಗಿದ್ದು ಪೂರ್ಣ ಅಧೀನತೆಯಿಂದ ಉಪದೇಶವನ್ನು ಕಲಿಯಬೇಕು.
12ಉಪದೇಶಮಾಡುವುದಕ್ಕಾಗಲಿ ಪುರುಷರ ಮೇಲೆ ಅಧಿಕಾರ ನಡಿಸುವುದಕ್ಕಾಗಲಿ ಸ್ತ್ರೀಯರಿಗೆ ನಾನು ಅಪ್ಪಣೆ ಕೊಡುವುದಿಲ್ಲ. ಅವರು ಮೌನವಾಗಿರಬೇಕು.
13ಮೊದಲು ಸೃಷ್ಟಿಸಲ್ಪಟವನು ಆದಾಮನಲ್ಲವೇ, ಆಮೇಲೆ ಹವ್ವಳು.
14ಇದಲ್ಲದೆ ಆದಾಮನು ವಂಚಿಸಲ್ಪಡಲಿಲ್ಲ, ಸ್ತ್ರೀಯು ವಂಚಿಸಲ್ಪಟ್ಟು ಅಪರಾಧಿಯಾದಳು.
15ಆದರೂ ಸ್ತ್ರೀಯರು ಸ್ವಸ್ಥಬುದ್ಧಿಯಿಂದ ನಂಬಿಕೆಯಲ್ಲಿಯೂ, ಪ್ರೀತಿಯಲ್ಲಿಯೂ, ಪರಿಶುದ್ಧತೆಯಲ್ಲಿಯೂ ನೆಲೆಗೊಂಡಿದ್ದರೆ ಮಕ್ಕಳನ್ನು ಹೆರುವುದರಲ್ಲಿ ರಕ್ಷಣೆಹೊಂದುವರು.
WEBREATH · 11:11
«He himself gives everyone life and breath and everything else» — Acts 17:25
Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.
WEBREATH — the Minute at 11:11, your own local time — we are One Breath