1 ತಿಮೊಥೆಯನಿಗೆ 3
ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ
1ಸಭಾಧ್ಯಕ್ಷನ ಉದ್ಯೋಗವನ್ನು ಪಡೆದುಕೊಳ್ಳಬೇಕೆಂದಿರುವವನು ಒಳ್ಳೆಯ ಕೆಲಸವನ್ನು ಅಪೇಕ್ಷಿಸುವವನಾಗಿದ್ದಾನೆಂಬ ಮಾತು ನಂಬತಕ್ಕದ್ದಾಗಿದೆ.
2ಸಭಾಧ್ಯಕ್ಷನು ದೋಷಾರೋಪಣೆಯಿಲ್ಲದವನೂ, ಏಕಪತ್ನಿಯುಳ್ಳವನೂ, ಶಾಂತನೂ, ಜಿತೇಂದ್ರಿಯನೂ, ಮಾನಸ್ಥನೂ, ಅತಿಥಿಸತ್ಕಾರಮಾಡುವವನೂ, ಬೋಧಿಸಲು ಶಕ್ತನಾಗಿರಬೇಕು.
3ಅವನು ಕುಡಕನು, ಜಗಳವಾಡುವವನೂ ಆಗಿರದೆ, ಸಾತ್ವಿಕನೂ, ಹೊಡೆದಾಡದವನೂ ದ್ರವ್ಯಾಶೆಯಿಲ್ಲದವನೂ ಆಗಿರಬೇಕು.
4ಪೂರ್ಣಗೌರವದಿಂದ ತನ್ನ ಮಕ್ಕಳನ್ನು ಅಧೀನದಲ್ಲಿಟ್ಟುಕೊಂಡು, ಸ್ವಂತ ಮನೆಯವರನ್ನು ಚೆನ್ನಾಗಿ ನಡೆಸುವವನಾಗಿರಬೇಕು.
5ಸ್ವಂತ ಮನೆಯವರನ್ನು ನಡೆಸುವುದಕ್ಕೆ ತಿಳಿಯದವನು ದೇವರ ಸಭೆಯನ್ನು ಹೇಗೆ ಪರಾಂಬರಿಸುವನು?
6ಅವನು ಹೊಸದಾಗಿ ಸಭೆಯಲ್ಲಿ ಸೇರಿದವನಾಗಿರಬಾರದು, ಅಂಥವನಾದರೆ ಉಬ್ಬಿಕೊಂಡು ಸೈತಾನನಿಗೆ ಪ್ರಾಪ್ತವಾದ ಶಿಕ್ಷಾವಿಧಿಗೆ ಒಳಗಾದಾನು.
7ಇದಲ್ಲದೆ ಅವನು ಹೊರಗಣವರಿಂದ ಒಳ್ಳೆಯವನೆನ್ನಿಸಿಕೊಂಡಿರಬೇಕು, ಇಲ್ಲದಿದ್ದರೆ ನಿಂದೆಗೆ ಗುರಿಯಾಗುವನು ಮತ್ತು ಸೈತಾನನ ತಂತ್ರಗಳೊಳಗೆ ಸಿಕ್ಕಿಬಿದ್ದಾನು.
8ಅದೇ ರೀತಿಯಾಗಿ ಸಭಾಸೇವಕರು ಗೌರವವುಳ್ಳವರಾಗಿರಬೇಕು. ಅವರು ಎರಡು ಮಾತಿನವರೂ, ಮದ್ಯಾಸಕ್ತರೂ, ನೀಚಲಾಭವನ್ನು ಅಪೇಕ್ಷಿಸುವವರೂ ಆಗಿರದೆ,
9ನಂಬಿಕೆಯಿಂದ ಪ್ರಕಟವಾಗಿರುವ ಸತ್ಯಾರ್ಥವನ್ನು ಶುದ್ಧ ಮನಸ್ಸಾಕ್ಷಿಯಿಂದ ಕೈಕೊಳ್ಳುವವರಾಗಿರಬೇಕು.
10ಇದಲ್ಲದೆ ಅವರು ಮೊದಲು ಪರೀಕ್ಷಿಸಲ್ಪಡಬೇಕು, ತರುವಾಯ ಅವರ ಮೇಲೆ ಯಾರೂ ತಪ್ಪುಹೊರಿಸದಿದ್ದರೆ ಸಭಾಸೇವಕರ ಉದ್ಯೋಗವನ್ನು ನೆರವೇರಿಸಲಿ.
11ಹಾಗೆಯೇ ಸಭಾಸೇವಕಿಯರಾದ ಸ್ತ್ರೀಯರೂ ಗೌರವವುಳ್ಳವರಾಗಿರಬೇಕು, ಚಾಡಿಹೇಳುವವರಾಗಿರದೆ, ಸ್ವಸ್ಥಬುದ್ಧಿಯುಳ್ಳವರೂ, ಎಲ್ಲಾ ವಿಷಯಗಳಲ್ಲಿ ನಂಬಿಗಸ್ತರಾಗಿಯೂ ಇರಬೇಕು.
12ಸಭಾಸೇವಕರು ಏಕಪತ್ನಿಯುಳ್ಳವರೂ, ತಮ್ಮ ಮಕ್ಕಳನ್ನೂ ಮನೆಯವರನ್ನೂ ಚೆನ್ನಾಗಿ ನಡಿಸುವವರೂ ಆಗಿರಬೇಕು.
13ಸಭಾಸೇವಕರಾಗಿ ಚೆನ್ನಾಗಿ ಕೆಲಸ ಮಾಡಿರುವವರು ತಮಗೆ ಒಳ್ಳೆಯ ಪದವಿಯನ್ನೂ, ಕ್ರಿಸ್ತಯೇಸುವಿನಲ್ಲಿರುವ ನಂಬಿಕೆಯ ಸಂಬಂಧವಾಗಿ ಬಹುಧೈರ್ಯವನ್ನೂ ಸಂಪಾದಿಸಿಕೊಳ್ಳುತ್ತಾರೆ.
14ಬೇಗನೆ ನಿನ್ನ ಬಳಿಗೆ ಬರುವೆನೆಂಬ ನಿರೀಕ್ಷೆಯಿಂದಲೇ ನಿನಗೆ ಈ ವಿಷಯಗಳನ್ನು ಬರೆದಿದ್ದೇನೆ.
15ಆದರೆ ಒಂದು ವೇಳೆ ನಾನು ತಡಮಾಡಿದರೂ, ದೇವರ ಮನೆಯಲ್ಲಿ ಅಂದರೆ ಜೀವಸ್ವರೂಪನಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ತಿಳಿದಿರಬೇಕೆಂದು ಈ ಸಂಗತಿಗಳನ್ನು ಬರೆದಿದ್ದೇನೆ. ಯಾಕೆಂದರೆ ಸಭೆಯು ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿದೆ.
16ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥದ ರಹಸ್ಯವು ಗಂಭೀರವಾದದ್ದೆಂಬುದನ್ನು ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ, ಅದೇನಂದರೆ, ಕ್ರಿಸ್ತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು, ಆತ್ಮಸಂಬಂಧವಾಗಿ ಕ್ರಿಸ್ತನೇ ನೀತಿವಂತನೆಂದು ಪರಿಗಣಿಸಲ್ಪಟ್ಟನು, ದೇವದೂತರಿಗೆ ಕಾಣಿಸಿಕೊಂಡನು, ಅನ್ಯಜನರ ಮಧ್ಯದಲ್ಲಿ ಸಾರಲ್ಪಟ್ಟನು, ಲೋಕದಲ್ಲಿ ನಂಬಲ್ಪಟ್ಟನು, ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.
WEBREATH · 11:11
«He himself gives everyone life and breath and everything else» — Acts 17:25
Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.
WEBREATH — the Minute at 11:11, your own local time — we are One Breath