ಕ್ರಿಶ್ಚಿಯನ್ ಧರ್ಮ
ಹಿಂದೆ

1 ತಿಮೊಥೆಯನಿಗೆ 5

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ವೃದ್ಧರನ್ನು ಗದರಿಸದೆ ತಂದೆಯೆಂದು ಭಾವಿಸಿ ಬುದ್ಧಿಹೇಳು. ಯೌವನಸ್ಥರನ್ನು ಅಣ್ಣತಮ್ಮಂದಿರೆಂದೂ,

2ವೃದ್ಧಸ್ತ್ರೀಯರನ್ನು ತಾಯಿಯಂತೆಯೂ, ಯೌವನಸ್ತ್ರೀಯರನ್ನು ಪೂರ್ಣ ಶುದ್ಧಭಾವದಿಂದ ಅಕ್ಕತಂಗಿಯರೆಂದೂ ಎಣಿಸಿ ಅವರವರಿಗೆ ತಕ್ಕ ಹಾಗೆ ಬುದ್ಧಿಹೇಳು.

3ದಿಕ್ಕಿಲ್ಲದ ವಿಧವೆಯರನ್ನು ಸಂರಕ್ಷಿಸು. ಆದರೆ ಒಬ್ಬ ವಿಧವೆಗೆ ಮಕ್ಕಳಾಗಲಿ ಮೊಮ್ಮಕ್ಕಳಾಗಲಿ ಇದ್ದರೆ ಅವರೇ ಮೊದಲು ತಮ್ಮ ಮನೆಯವರಿಗೆ ಭಕ್ತಿತೋರಿಸುವುದಕ್ಕೂ ತಂದೆತಾಯಿಗಳಿಗೆ ಪ್ರತ್ಯುಪಕಾರ ಮಾಡುವುದಕ್ಕೂ ಕಲಿತುಕೊಳ್ಳಲಿ. ಇದು ದೇವರ ದೃಷ್ಟಿಯಲ್ಲಿ ಮೆಚ್ಚಿಕೆಯಾಗಿದೆ.

5ದಿಕ್ಕಿಲ್ಲದೆ ಒಬ್ಬೊಂಟಿಗಳಾಗಿರುವ ವಿಧವೆಯು, ದೇವರ ಮೇಲೆ ನಿರೀಕ್ಷೆಯನ್ನಿಟ್ಟು, ಹಗಲಿರುಳು ವಿಜ್ಞಾಪನೆಗಳಲ್ಲಿಯೂ ಪ್ರಾರ್ಥನೆಗಳಲ್ಲಿಯೂ ನೆಲೆಗೊಂಡಿರುವಳು.

6ಆದರೆ ಸುಖಭೋಗದಲ್ಲಿರುವ ವಿಧವೆಯು ಬದುಕಿದ್ದರೂ ಸತ್ತಂತೆಯೇ.

7ವಿಧವೆಯರು ನಿಂದೆಗೆ ಗುರಿಯಾಗದಂತೆ ಈ ವಿಷಯಗಳನ್ನು ಆಜ್ಞಾಪಿಸು.

8ಯಾವನಾದರೂ ಸ್ವಂತ ಜನರನ್ನು, ವಿಶೇಷವಾಗಿ ತನ್ನ ಮನೆಯವರನ್ನು ಸಂರಕ್ಷಿಸದೆ ಹೋದರೆ ಅವನು ಕ್ರಿಸ್ತ ನಂಬಿಕೆಯನ್ನು ತಿರಸ್ಕರಿಸಿದವನೂ ನಂಬದವನಿಗಿಂತ ಕೀಳಾದವನೂ ಆಗಿದ್ದಾನೆ.

9ವಯಸ್ಸಿನಲ್ಲಿ ಅರುವತ್ತು ವರ್ಷ ಮೇಲ್ಪಟ್ಟ, ವಿಧವೆಯನ್ನು ವಿಧವೆಯರ ಪಟ್ಟಿಯಲ್ಲಿ ಸೇರಿಸಬಹುದು. ಅಂಥವಳಾದರೂ ಒಬ್ಬ ಗಂಡನಿಗೆ ಮಾತ್ರ ಹೆಂಡತಿಯಾಗಿದ್ದವಳಾಗಿ,

10ಸತ್ಕ್ರಿಯೆಗಳನ್ನು ಮಾಡುವವಳೆಂದು ಹೆಸರುಗೊಂಡವಳೂ ಆಗಿದ್ದಲ್ಲಿ, ಅವರು ಮಕ್ಕಳನ್ನು ಸಾಕಿಕೊಂಡು, ಅತಿಥಿಸತ್ಕಾರವನ್ನು ಮಾಡುತ್ತಾ, ದೇವಜನರಿಗೆ ಉಪಚಾರಮಾಡಿದವಳಾಗಲಿ, ಸಂಕಟದಲ್ಲಿ ಬಿದ್ದವರಿಗೆ ಸಹಾಯಮಾಡುತ್ತಾ ಎಲ್ಲಾ ಸತ್ಕಾರ್ಯಗಳಲ್ಲಿ ಆಸಕ್ತಿಯುಳ್ಳವಳಾಗಿರಲಿ.

11ಯೌವನ ಪ್ರಾಯದ ವಿಧವೆಯರನ್ನು ಪಟ್ಟಿಯಲ್ಲಿ ಸೇರಿಸಬೇಡ, ಅವರು ದೈಹಿಕ ಆಸೆಗಳಿಂದ ಸೋಲಿಸಲ್ಪಟ್ಟು, ಕ್ರಿಸ್ತನಿಗೆ ವಿಮುಖರಾಗಿ ಮದುವೆಮಾಡಿಕೊಳ್ಳಬೇಕೆಂದು ಇಷ್ಟಪಟ್ಟಾರು.

12ಅಂಥವರು ತಾವು ಮೊದಲು ಮಾಡಿದ ಪ್ರತಿಜ್ಞೆಯನ್ನು ಉಲ್ಲಂಘಿಸಿ ತೀರ್ಪಿಗೆ ಗುರಿಯಾಗಿರುವರು.

13ಇದಲ್ಲದೆ ಅವರು ಮನೆಮನೆಗೆ ತಿರುಗಾಡುತ್ತಾ ಮೈಗಳ್ಳತನವನ್ನು ಕಲಿಯುತ್ತಾರೆ. ಮೈಗಳ್ಳರಾಗುವುದಲ್ಲದೆ, ಹರಟೆಮಾತನಾಡುವವರೂ, ಇತರರ ವಿಷಯಗಳಲ್ಲಿ ತಲೆ ಹಾಕುವವರೂ ಆಗಿ ಆಡಬಾರದ ಮಾತುಗಳನ್ನಾಡುತ್ತಾರೆ.

14ಆದ್ದರಿಂದ ಯೌವನ ಪ್ರಾಯದ ವಿಧವೆಯರು ಮದುವೆಮಾಡಿಕೊಂಡು ಮಕ್ಕಳನ್ನು ಹೆತ್ತು ಮನೆಯನ್ನು ನಿರ್ವಹಿಸುವವರಾಗಿರುವುದು ನನಗೆ ಒಳ್ಳೆಯದಾಗಿ ತೋಚುತ್ತದೆ. ಹಾಗೆ ಮಾಡುವುದರಿಂದ ವಿರೋಧಿಗಳ ನಿಂದೆಗೆ ಆಸ್ಪದಕೊಡದೆ ಇರುವರು.

15ಇಷ್ಟರೊಳಗೆ ಕೆಲವರು ಅಡ್ಡದಾರಿ ಹಿಡಿದು ಸೈತಾನನನ್ನು ಹಿಂಬಾಲಿಸಿದ್ದಾರೆ.

16ನಂಬುವವಳಾದ ಸ್ತ್ರೀಯ ಬಂಧುಭಾಂಧವರಲ್ಲಿ ವಿಧವೆಯರಿದ್ದರೆ ಆಕೆಯೇ ಅವರನ್ನು ಸಂರಕ್ಷಿಸಲಿ. ಸಭೆಯು ದಿಕ್ಕಿಲ್ಲದ ವಿಧವೆಯರಿಗೆ ಸಹಾಯ ಮಾಡಬೇಕಾಗಿರುವುದರಿಂದ ಆಕೆಯು ಆ ಭಾರವನ್ನು ಸಭೆಯ ಮೇಲೆ ಹಾಕಬಾರದು.

17ಚೆನ್ನಾಗಿ ಅಧಿಕಾರ ನಡಿಸುವ ಸಭೆಯ ಹಿರಿಯರನ್ನು, ಅವರೊಳಗೆ ವಿಶೇಷವಾಗಿ ದೇವರ ವಾಕ್ಯವನ್ನು ಸಾರುವುದರಲ್ಲಿಯೂ ಉಪದೇಶಿಸುವುದರಲ್ಲಿಯೂ ಕಷ್ಟಪಡುವವರನ್ನು ಎರಡುಪಟ್ಟು ಗೌರವಕ್ಕೆ ಯೋಗ್ಯರೆಂದು ಎಣಿಸಬೇಕು.

18“ಕಣತುಳಿಯುವ ಎತ್ತಿನ ಬಾಯಿ ಕಟ್ಟಬಾರದು,” ಮತ್ತು “ ಆಳು ತನ್ನ ಕೂಲಿಗೆ ಯೋಗ್ಯನಾಗಿದ್ದಾನೆ” ಎಂದು ಶಾಸ್ತ್ರದಲ್ಲಿ ಹೇಳಿದೆಯಲ್ಲಾ.

19ಸಭೆಯ ಹಿರಿಯನ ಮೇಲೆ ಯಾರಾದರೂ ದೂರು ಹೇಳಿದರೆ ಇಬ್ಬರು ಮೂವರು ಸಾಕ್ಷಿಗಳಿದ್ದ ಹೊರತಾಗಿ ಅದನ್ನು ಒಪ್ಪಿಕೊಳ್ಳಬೇಡ.

20ಪಾಪದಲ್ಲಿ ನಡೆಯುವವರನ್ನು ಎಲ್ಲರ ಮುಂದೆಯೇ ಗದರಿಸು. ಇವರಿಂದ ಉಳಿದವರಿಗೂ ಭಯವುಂಟಾಗುವುದು.

21ನೀನು ವಿಚಾರಿಸುವುದಕ್ಕೆ ಮೊದಲೇ ತಪ್ಪುಹೊರಿಸದೆಯೂ, ಪಕ್ಷಪಾತದಿಂದ ಏನೂ ಮಾಡದೆಯೂ, ನಾನು ಹೇಳಿರುವ ಮಾತುಗಳ ಪ್ರಕಾರವೇ ನಡೆಯಬೇಕೆಂದು ದೇವರ ಮುಂದೆಯೂ, ಕ್ರಿಸ್ತ ಯೇಸುವಿನ ಮುಂದೆಯೂ, ಆರಿಸಲ್ಪಟ್ಟಿರುವ ದೇವದೂತರ ಮುಂದೆಯೂ ಖಂಡಿತವಾಗಿ ಹೇಳುತ್ತೇನೆ.

22ಅವಸರದಿಂದ ಯಾರ ತಲೆಯ ಮೇಲೆಯಾದರೂ ಹಸ್ತವನ್ನಿಟ್ಟು ಸಭೆಯ ನಾಯಕತ್ವಕ್ಕೆ ನೇಮಿಸಬೇಡ. ಮತ್ತೊಬ್ಬರು ಮಾಡಿದ ಪಾಪದಲ್ಲಿ ನೀನು ಪಾಲುಗಾರನಾಗದೆ, ನೀನು ಶುದ್ಧನಾಗಿರುವ ಹಾಗೆ ನೋಡಿಕೋ.

23ಇನ್ನು ಮೇಲೆ ನೀರನ್ನು ಮಾತ್ರ ಕುಡಿಯುವವನಾಗಿರದೆ, ನಿನ್ನ ಅಜೀರ್ಣದ ಮತ್ತು ನಿನಗೆ ಆಗಾಗ್ಗೆ ಉಂಟಾಗುವ ಅಸ್ವಸ್ಥತೆಯ ಪರಿಹಾರಕ್ಕಾಗಿ ದ್ರಾಕ್ಷಾರಸವನ್ನು ಸ್ವಲ್ಪವಾಗಿ ತೆಗೆದುಕೊ.

24ಕೆಲವರ ಪಾಪಕೃತ್ಯಗಳು ತೀರ್ಪಿಗೆ ಮುಂಚೆಯೇ ಬಯಲಾಗುತ್ತವೆ, ಬೇರೆ ಕೆಲವರ ಪಾಪಕೃತ್ಯಗಳು ಮರೆಯಾಗಿದ್ದು ತರುವಾಯ ತಿಳಿದುಬರುತ್ತವೆ.

25ಹಾಗೆಯೇ ಕೆಲವು ಸತ್ಕ್ರಿಯೆಗಳು ಪ್ರಸಿದ್ಧವಾಗಿವೆ, ಬೇರೆ ಕೆಲವು ಸತ್ಕ್ರಿಯೆಗಳು ಬೆಳಕಿಗೆ ಬಾರದ್ದಿದ್ದರೂ ಮರೆಯಾಗಿರಲಾರವು.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath