ಕ್ರಿಶ್ಚಿಯನ್ ಧರ್ಮ
ಹಿಂದೆ

2 ಪೂರ್ವಕಾಲವೃತ್ತಾಂತ 13

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ಅರಸನಾದ ಯಾರೊಬ್ಬಾಮನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಅಬೀಯನು ಯೆಹೂದದ ಅರಸನಾಗಿ,

2ಯೆರೂಸಲೇಮಿನಲ್ಲಿ ಮೂರು ವರ್ಷ ಆಳಿದನು; ಗಿಬೆಯದ ಊರೀಯೇಲನ ಮಗಳಾದ ಮೀಕಾಯ ಎಂಬಾಕೆಯು ಅಬೀಯನ ತಾಯಿ. ಇವನಿಗೂ ಯಾರೊಬ್ಬಾಮನಿಗೂ ಯುದ್ಧ ನಡೆಯಿತು.

3ಅಬೀಯನು ನಾಲ್ಕು ಲಕ್ಷ ಮಂದಿ ಯುದ್ಧವೀರರನ್ನು ಆರಿಸಿಕೊಂಡು ಬಂದು ಯುದ್ಧ ಪ್ರಾರಂಭಿಸಿದನು; ಯಾರೊಬ್ಬಾಮನೂ ಎಂಟು ಲಕ್ಷ ಶ್ರೇಷ್ಠರಾದ ಭಟರೊಡನೆ ಅವನಿಗೆ ವಿರುದ್ಧವಾಗಿ ಬಂದು ವ್ಯೂಹಕಟ್ಟಿದನು.

4ಆಗ ಅಬೀಯನು ಎಫ್ರಾಯೀಮ್ ಪರ್ವತಪ್ರದೇಶದಲ್ಲಿರುವ ಚೆಮಾರೈಮ್ ಎಂಬ ಬೆಟ್ಟದಲ್ಲಿ ನಿಂತು, “ಯಾರೊಬ್ಬಾಮನೇ, ಎಲ್ಲಾ ಇಸ್ರಾಯೇಲರೇ, ನನ್ನ ಮಾತನ್ನು ಕೇಳಿರಿ.

5ಯೆಹೋವನು ಉಪ್ಪಿನ ಒಡಂಬಡಿಕೆಯಿಂದ ದಾವೀದನಿಗೂ ಅವನ ಸಂತಾನದವರಿಗೂ ಇಸ್ರಾಯೇಲರ ಮೇಲೆ ಶಾಶ್ವತವಾದ ಅರಸುತನವನ್ನು ಕೊಟ್ಟಿದ್ದಾನೆಂದು ನಿಮಗೆ ಗೊತ್ತಿಲ್ಲವೋ?

6ಹೀಗಿದ್ದರೂ ದಾವೀದನ ಮಗನಾದ ಸೊಲೊಮೋನನ ಸೇವೆಯಲ್ಲಿದ್ದ ನೆಬಾಟನ ಮಗನಾದ ಯಾರೊಬ್ಬಾಮನು ಎದ್ದು ತನ್ನ ದಣಿಗೆ ವಿರುದ್ಧವಾಗಿ ತಿರುಗಿ ಬಿದ್ದನು.

7ಕಾಕಪೋಕರೂ ದುಷ್ಟರೂ ಆಗಿರುವ ಜನರು ಅವನನ್ನು ಕೂಡಿಕೊಂಡರು. ಆ ಸಮಯದಲ್ಲಿ ಎಳೇಪ್ರಾಯದವನೂ, ಮೃದುಸ್ವಭಾವವುಳ್ಳವನೂ, ತಮ್ಮೆದುರಿನಲ್ಲಿ ನಿಲ್ಲಲಾರದವನೂ ಆದ ಸೊಲೊಮೋನನ ಮಗ ರೆಹಬ್ಬಾಮನನ್ನು ಇವರು ಪ್ರತಿಭಟಿಸಿ ಬಲಗೊಂಡರು.

8ಈಗ ನೀವು ದೊಡ್ಡ ಗುಂಪಾಗಿ ಇರುವುದರಿಂದ ಹಾಗು ಯಾರೊಬ್ಬಾಮನು ನಿಮಗೆ ದೇವರುಗಳೆಂದು ಮಾಡಿಕೊಟ್ಟ ಬಂಗಾರದ ಹೋರಿ ಕುರಿಗಳ ಮೂರ್ತಿಗಳು ನಿಮ್ಮಲ್ಲಿರುವುದರಿಂದ, ದಾವೀದನ ಸಂತಾನದವರ ಕೈಯಲ್ಲಿರುವ ಯೆಹೋವನ ರಾಜ್ಯಕ್ಕೆ ವಿರುದ್ಧವಾಗಿ ನಿಂತು ಗೆಲ್ಲಬಹುದೆಂದು ನೆನಸುತ್ತೀರೋ?

9ನೀವು ಯೆಹೋವನ ಯಾಜಕರಾದ ಆರೋನನ ಸಂತಾನದವರನ್ನೂ, ಲೇವಿಯರನ್ನೂ ಓಡಿಸಿಬಿಟ್ಟು ಅನ್ಯದೇಶಗಳವರಂತೆ ನಿಮಗೋಸ್ಕರ ಪೂಜಾರಿಗಳನ್ನು ನೇಮಿಸಿಕೊಂಡಿದ್ದೀರಿ; ತಾನು ಪೂಜಾರಿಯಾಗಿ ಪ್ರತಿಷ್ಠಿತನಾಗಬೇಕೆಂದು ಒಂದು ಎಳೇ ಹೋರಿಯನ್ನೂ, ಏಳು ಟಗರುಗಳನ್ನೂ ತೆಗೆದುಕೊಂಡು ಬಂದ ಪ್ರತಿಯೊಬ್ಬನೂ ದೇವರಲ್ಲದವುಗಳಿಗೆ ಪೂಜಾರಿಯಾದನಷ್ಟೆ.

10ನಮಗಾದರೋ ಯೆಹೋವನು ದೇವರಾಗಿರುತ್ತಾನೆ; ನಾವು ಆತನನ್ನು ಬಿಡಲಿಲ್ಲ. ಯೆಹೋವನ ಆರಾಧನೆ ನಡೆಸಲು ಆರೋನನ ಸಂತಾನದವರಾದ ಯಾಜಕರೂ, ತಮಗೆ ನೇಮಕವಾದ ಕೆಲಸದಲ್ಲಿ ನಿರತರಾದ ಲೇವಿಯರೂ ನಮಗಿದ್ದಾರೆ.

11ಈ ಯಾಜಕರು ಪ್ರತಿದಿನ ಬೆಳಿಗ್ಗೆ ಹಾಗು ಸಾಯಂಕಾಲ ಯೆಹೋವನಿಗೋಸ್ಕರ ಸರ್ವಾಂಗಹೋಮಗಳನ್ನು ಸಮರ್ಪಿಸುತ್ತಾ ಸುಗಂಧದ್ರವ್ಯ ಧೂಪವನ್ನು ಹಾಕುತ್ತಾ ಶುದ್ಧ ಬಂಗಾರದ ಮೇಜಿನ ಮೇಲೆ ನೈವೇದ್ಯವಾದ ರೊಟ್ಟಿಗಳನ್ನಿಡುತ್ತಾ ಪ್ರತಿ ಸಾಯಂಕಾಲದಲ್ಲಿ ಬಂಗಾರದ ದೀಪಸ್ತಂಭದ ದೀಪಗಳನ್ನು ಹಚ್ಚುತ್ತಾ ಇರುತ್ತಾರೆ. ಹೀಗೆ ನಾವು ನಮ್ಮ ದೇವರಾದ ಯೆಹೋವನ ಕಟ್ಟಳೆಗಳನ್ನು ಕೈಕೊಳ್ಳುತ್ತೇವೆ; ನೀವಾದರೋ ಆತನನ್ನು ಬಿಟ್ಟವರು.

12ಇಗೋ, ದೇವರು ನಾಯಕನಾಗಿ ನಮ್ಮೊಂದಿಗಿದ್ದಾನೆ; ನಿಮಗೆ ವಿರುದ್ಧವಾಗಿ ಅರ್ಭಟದಿಂದ ಊದತಕ್ಕ ತುತ್ತೂರಿಗಳನ್ನು ಹಿಡಿದಿರುವ ಯಾಜಕರೂ ನಮ್ಮೊಂದಿಗಿದ್ದಾರೆ. ಇಸ್ರಾಯೇಲರೇ, ನಿಮ್ಮ ಪೂರ್ವಿಕರ ದೇವರಾದ ಯೆಹೋವನೊಡನೆ ಯುದ್ಧ ಮಾಡಬೇಡಿರಿ, ನೀವು ಜಯಿಸಲಾರಿರಿ” ಎಂದು ಕೂಗಿ ಹೇಳಿದನು.

13ಯಾರೊಬ್ಬಾಮನು ಯೆಹೂದ್ಯರ ಹಿಂದೆ ಹೊಂಚು ಹಾಕುವುದಕ್ಕೋಸ್ಕರ ತನ್ನ ಸೈನ್ಯದ ಒಂದು ಗುಂಪನ್ನು ಕಳುಹಿಸಿದನು. ಹೀಗೆ ಸೈನ್ಯವು ಯೆಹೂದ್ಯರ ಎದುರಿನಲ್ಲಿಯೂ ಹೊಂಚುಹಾಕುವರು ಅವರ ಹಿಂದೆಯೂ ಇದ್ದರು.

14ಯೆಹೂದ್ಯರು ತಿರುಗಿಕೊಂಡು ತಮ್ಮ ಮುಂದೆಯೂ ಹಿಂದೆಯೂ ಯುದ್ಧ ಪ್ರಾರಂಭವಾಗಿರುವುದನ್ನು ಕಂಡು ಯೆಹೋವನಿಗೆ ಮೊರೆಯಿಟ್ಟರು, ಯಾಜಕರು ತುತ್ತೂರಿಗಳನ್ನು ಊದಿದರು.

15ಅನಂತರ ಜನರು ಆರ್ಭಟಿಸಿದರು. ಅವರು ಆರ್ಭಟಿಸಿದ ಕೂಡಲೆ ಯೆಹೋವನಾದ ದೇವರು ಯಾರೊಬ್ಬಾಮನನ್ನೂ, ಎಲ್ಲಾ ಇಸ್ರಾಯೇಲರನ್ನೂ ಅಬೀಯನಿಂದಲೂ ಹಾಗೂ ಯೆಹೂದ್ಯರಿಂದಲೂ ಅಪಜಯಗೊಳಿಸಿದನು.

16ಹೀಗಾಗಿ ಇಸ್ರಾಯೇಲರು ಯೆಹೂದ್ಯರ ಎದುರಿನಿಂದ ಓಡಿಹೋದರು. ಯೆಹೋವನಾದ ದೇವರು ಅವರನ್ನು ಯೆಹೂದ್ಯರ ಕೈಗೆ ಒಪ್ಪಿಸಿದನು.

17ಅಬೀಯನೂ ಅವನ ಜನರೂ ಅವರಲ್ಲಿ ಅನೇಕರನ್ನು ಸಂಹರಿಸಿಬಿಟ್ಟರು. ಇಸ್ರಾಯೇಲಿನ ಭಟರಲ್ಲಿ ಹತರಾಗಿ ಬಿದ್ದವರು ಐದು ಲಕ್ಷ ಮಂದಿ.

18ಹೀಗೆ ಇಸ್ರಾಯೇಲರು ಆ ಕಾಲದಲ್ಲಿ ತಗ್ಗಿಸಲ್ಪಟ್ಟರು; ಯೆಹೂದ್ಯರು ತಮ್ಮ ಪೂರ್ವಿಕರ ದೇವರಾದ ಯೆಹೋವನಲ್ಲಿ ಭರವಸವಿಟ್ಟಿದ್ದರಿಂದ ಜಯಶಾಲಿಗಳಾದರು.

19ಅಬೀಯನು, ಯಾರೊಬ್ಬಾಮನನ್ನು ಹಿಂದಟ್ಟಿ, ಅವನಿಂದ ಬೇತೇಲ್, ಯೆಷಾನಾ, ಎಪ್ರೋನ್ ಎಂಬ ಪಟ್ಟಣಗಳನ್ನೂ ಅವುಗಳಿಗೆ ಸೇರಿದ ಗ್ರಾಮಗಳನ್ನೂ ಕಿತ್ತುಕೊಂಡನು.

20ಯಾರೊಬ್ಬಾಮನು ಅಬೀಯನ ಜೀವಮಾನದಲ್ಲಿ ತಿರುಗಿ ಬಲಗೊಳ್ಳಲೇ ಇಲ್ಲ. ಯೆಹೋವನು ಅವನನ್ನು ಬಾಧಿಸಿದ್ದರಿಂದ ಅವನು ಸತ್ತನು.

21ಅಬೀಯನು ಬಲಗೊಂಡನು; ಅವನು ಹದಿನಾಲ್ಕು ಮಂದಿ ಹೆಂಡತಿಯರಿಂದ ಇಪ್ಪತ್ತೆರಡು ಮಂದಿ ಗಂಡುಮಕ್ಕಳನ್ನೂ ಹದಿನಾರು ಮಂದಿ ಹೆಣ್ಣುಮಕ್ಕಳನ್ನೂ ಪಡೆದನು.

22ಅಬೀಯನ ಉಳಿದ‍ ಚರಿತ್ರೆಯೂ ಅವನ ನಡೆನುಡಿಗಳೂ ಪ್ರವಾದಿಯಾದ ಇದ್ದೋವಿನ ಚರಿತ್ರೆ ಪುಸ್ತಕದಲ್ಲಿ ಬರೆದಿರುತ್ತವೆ.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath