2 ಪೂರ್ವಕಾಲವೃತ್ತಾಂತ 1
ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ
1ದಾವೀದನ ಮಗನಾದ ಸೊಲೊಮೋನನು ತನ್ನ ರಾಜ್ಯದಲ್ಲಿ ಸಂಪೂರ್ಣ ಪ್ರಭುತ್ವ ಹೊಂದಿದನು. ಅವನ ದೇವರಾದ ಯೆಹೋವನು ಅವನ ಸಂಗಡ ಇದ್ದು ಅವನನ್ನು ಬಲಾಢ್ಯನಾಗುವಂತೆ ಆಶೀರ್ವದಿಸಿ ನಡೆಸಿದನು.
2ಆಗ ಸೊಲೊಮೋನನು ಸಮಸ್ತ ಇಸ್ರಾಯೇಲರ ಶತಾಧಿಪತಿಗಳೊಂದಿಗೂ, ಸಹಸ್ರಾಧಿಪತಿಗಳೊಂದಿಗೂ, ನ್ಯಾಯಾಧಿಪತಿಗಳೊಂದಿಗೂ, ಗೋತ್ರ ಪ್ರಧಾನರಾದವರೊಂದಿಗೂ, ಇಸ್ರಾಯೇಲ್ ಪ್ರಭುಗಳೊಂದಿಗೂ ಮಾತನಾಡಿದನು.
3ಅವನ ಸಂಗಡ ಇದ್ದ ಸರ್ವಸಮೂಹದೊಡನೆ ಗಿಬ್ಯೋನಿನಲ್ಲಿರುವ ಪೂಜಾಸ್ಥಳಕ್ಕೆ ಹೋದನು. ಏಕೆಂದರೆ ಯೆಹೋವನ ಸೇವಕನಾದ ಮೋಶೆಯು ಅರಣ್ಯದಲ್ಲಿ ಮಾಡಿದ ದೇವದರ್ಶನದ ಗುಡಾರವು ಅಲ್ಲಿತ್ತು.
4ದಾವೀದನು ದೇವರ ಮಂಜೂಷವನ್ನು ಕಿರ್ಯತ್ಯಾರೀಮಿನಿಂದ ತಾನು ಅದನ್ನಿರಿಸಲು ಸಿದ್ಧ ಮಾಡಿದ ಸ್ಥಳಕ್ಕೆ ತೆಗೆದುಕೊಂಡು ಬಂದಿದ್ದನು. ಅವನು ಯೆರೂಸಲೇಮಿನಲ್ಲಿ ಅದಕ್ಕಾಗಿ ಗುಡಾರವನ್ನು ಮಾಡಿಸಿದ್ದನು.
5ಇದಲ್ಲದೆ ಹೂರನ ಮಗನಾದ ಊರಿಯ, ಈತನ ಮಗನಾದ ಬೆಚಲೇಲನು ಮಾಡಿದ ತಾಮ್ರದ ಯಜ್ಞವೇದಿಯು ಅಲ್ಲೇ ಯೆಹೋವನ ಗುಡಾರದ ಮುಂದಿತ್ತು. ಸೊಲೊಮೋನನೂ ಆ ಸಮೂಹದವರೂ ಅಲ್ಲಿಗೆ ಹೋದರು.
6ಆಗ ಸೊಲೊಮೋನನು ದೇವದರ್ಶನ ಗುಡಾರದ ಬಳಿಯಲ್ಲಿ ಯೆಹೋವನ ಮುಂದೆ ಇರುವ ತಾಮ್ರದ ಯಜ್ಞವೇದಿಯ ಬಳಿಗೆ ಹೋಗಿ ಅದರ ಮೇಲೆ ಸಾವಿರ ಸರ್ವಾಂಗಹೋಮಗಳನ್ನು ಸಮರ್ಪಿಸಿದನು.
7ಅದೇ ರಾತ್ರಿಯಲ್ಲಿ ದೇವರು ಸೊಲೊಮೋನನಿಗೆ ಕಾಣಿಸಿಕೊಂಡು ಅವನಿಗೆ, “ನಿನಗೆ, ಯಾವ ವರ ಬೇಕು ಕೇಳಿಕೋ” ಎಂದು ಹೇಳಲು
8ಸೊಲೊಮೋನನು ದೇವರಿಗೆ, “ನೀನು ನನ್ನ ತಂದೆಯಾದ ದಾವೀದನಿಗೆ ಮಹಾ ದಯೆಯನ್ನು ತೋರಿಸಿ ಅವನಿಗೆ ಬದಲಾಗಿ ನಾನು ಅರಸನಾಗುವಂತೆ ಮಾಡಿದೆ.
9ಈಗ ಯೆಹೋವನಾದ ದೇವರೇ, ನೀನು ನನ್ನ ತಂದೆಯಾದ ದಾವೀದನಿಗೆ ಮಾಡಿದ ವಾಗ್ದಾನವು ನೆರವೇರಲಿ. ಏಕೆಂದರೆ ಭೂಮಿಯ ಧೂಳಿನಷ್ಟು ಅಸಂಖ್ಯವಾದ ಜನಾಂಗದವರಿಗೆ ನನ್ನನ್ನು ಅರಸನನ್ನಾಗಿ ನೇಮಿಸಿದ್ದೀ.
10ನಿನ್ನ ಪ್ರಜೆಗಳಾದ ಈ ಮಹಾ ಜನಾಂಗವನ್ನು ಮುನ್ನಡೆಸುವುದಕ್ಕೂ, ಆಳುವುದಕ್ಕೂ, ನ್ಯಾಯತೀರಿಸುವುದಕ್ಕೂ ಜ್ಞಾನ ವಿವೇಕಗಳನ್ನು ಅನುಗ್ರಹಿಸು” ಎಂದು ಕೇಳಿದನು.
11ಆಗ ದೇವರು ಸೊಲೊಮೋನನಿಗೆ, “ಇದು ನಿನ್ನ ಆಕಾಂಕ್ಷೆಯಾಗಿ ಇದ್ದುದರಿಂದಲೂ ಘನವನ್ನೂ, ಧನವನ್ನೂ, ಐಶ್ವರ್ಯವನ್ನೂ, ನಿನ್ನ ವೈರಿಗಳ ಪ್ರಾಣವನ್ನಾಗಲಿ, ದೀರ್ಘಾಯುಷ್ಯವನ್ನಾಗಲಿ ಕೇಳದೆ, ನಾನು ಯಾರನ್ನು ಮುನ್ನಡೆಸಲು ನಿನ್ನನ್ನು ಅರಸನನ್ನಾಗಿ ಮಾಡಿದೆನೋ ಆ ನನ್ನ ಜನರಿಗೆ ನ್ಯಾಯ ತೀರಿಸುವ ಹಾಗೆ ಜ್ಞಾನ, ವಿವೇಕಗಳನ್ನು ನೀನು ಕೇಳಿಕೊಂಡದ್ದರಿಂದಲೂ ಜ್ಞಾನವೂ, ವಿವೇಕವೂ ನಿನಗೆ ಕೊಡಲ್ಪಟ್ಟಿವೆ.
12ಇದಲ್ಲದೆ ನಿನಗಿಂತ ಮೊದಲು ಇದ್ದ ಅರಸುಗಳಲ್ಲಿ ಯಾರಿಗೂ ಇಲ್ಲದಂಥ, ನಿನ್ನ ತರುವಾಯ ಯಾರಿಗೂ ಇರದಂಥ ಘನ, ಧನ, ಐಶ್ವರ್ಯಗಳನ್ನೂ ಅನುಗ್ರಹಿಸುವೆನು” ಎಂದನು.
13ಆನಂತರ ಸೊಲೊಮೋನನು ದೇವದರ್ಶನದ ಗುಡಾರವನ್ನು ಬಿಟ್ಟು, ಗಿಬ್ಯೋನಿನಲ್ಲಿರುವ ಪೂಜಾಸ್ಥಳದಿಂದ ಯೆರೂಸಲೇಮಿಗೆ ಬಂದು, ಇಸ್ರಾಯೇಲ್ ರಾಜ್ಯವನ್ನು ಆಳಿದನು.
14ಅರಸನಾದ ಸೊಲೊಮೋನನು ರಥಗಳನ್ನೂ ರಾಹುತರನ್ನೂ ಸಂಗ್ರಹಿಸಿದನು. ಸಾವಿರದ ನಾನೂರು ರಥಗಳೂ ಮತ್ತು ಹನ್ನೆರಡು ಸಾವಿರ ರಾಹುತರೂ ಅವನಿಗೆ ಇದ್ದರು. ಇವರನ್ನು ರಥದ ಪಟ್ಟಣಗಳಲ್ಲಿಯೂ ಕೆಲವರನ್ನು ಯೆರೂಸಲೇಮಿನಲ್ಲಿ ಅರಸನೊಂದಿಗೂ ಇರಿಸಿದನು. ಉಳಿದವುಗಳನ್ನು ರಥಗಳಿಗಾಗಿ ನೇಮಿಸಿದ ಪಟ್ಟಣದಲ್ಲಿ ಇರಿಸಿದನು.
15ಅರಸನು ಯೆರೂಸಲೇಮಿನಲ್ಲಿ ಬೆಳ್ಳಿ ಬಂಗಾರವು ಹೇರಳವಾಗಿದ್ದು ಅವು ಕಲ್ಲಿನಂತೆಯೂ, ಹಾಗು ದೇವದಾರು ಮರಗಳು ತಗ್ಗಿನಲ್ಲಿರುವ ಅತ್ತಿಮರಗಳಂತೆ ಹೇರಳವಾಗಿರುವಂತೆ ಮಾಡಿದನು.
16ಅರಸನಾದ ಸೊಲೊಮೋನನ ಕುದುರೆಗಳು ಐಗುಪ್ತ್ಯ ದೇಶದವುಗಳಾಗಿದ್ದವು. ಅವನ ವರ್ತಕರು ಅವುಗಳನ್ನು ಹಿಂಡು ಹಿಂಡಾಗಿ ಕೊಂಡುಕೊಂಡು ಬರುತ್ತಿದ್ದರು.
17ರಥಕ್ಕೆ ಆರುನೂರು ಬೆಳ್ಳಿ ನಾಣ್ಯಗಳಂತೆ, ಕುದುರೆಗೆ ನೂರೈವತ್ತು ಬೆಳ್ಳಿನಾಣ್ಯಗಳಂತೆ ಕೊಟ್ಟು, ರಥಗಳನ್ನೂ, ಕುದುರೆಗಳನ್ನೂ ಐಗುಪ್ತ್ಯ ದೇಶದಿಂದ ತರಿಸುತ್ತಿದ್ದರು. ಇವುಗಳನ್ನು ಹಿತ್ತಿಯರ ಮತ್ತು ಅರಾಮ್ಯರ ಅರಸರ ಮುಖಾಂತರವೇ ತರಿಸುತ್ತಿದ್ದರು.
WEBREATH · 11:11
«He himself gives everyone life and breath and everything else» — Acts 17:25
Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.
WEBREATH — the Minute at 11:11, your own local time — we are One Breath