ಕ್ರಿಶ್ಚಿಯನ್ ಧರ್ಮ
ಹಿಂದೆ

2 ಪೂರ್ವಕಾಲವೃತ್ತಾಂತ 22

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ಯೆರೂಸಲೇಮಿನವರು ಯೆಹೋರಾಮನ ಮರಣದ ನಂತರ, ಅವನ ಕಿರಿಯ ಮಗನಾದ ಅಹಜ್ಯನನ್ನು ಅರಸನನ್ನಾಗಿ ಮಾಡಿದರು. ಅರಬಿಯರೊಡನೆ ಯೆಹೋರಾಮನ ಪಾಳೆಯಕ್ಕೆ ಬಂದ ಕೊಳ್ಳೆಗಾರರು ಅವನ ಹಿರಿಯ ಮಕ್ಕಳನ್ನೆಲ್ಲಾ ಕೊಂದುಬಿಟ್ಟಿದ್ದರು. ಆದುದರಿಂದ ಯೆಹೂದದ ಅರಸನಾದ ಯೆಹೋರಾಮನ ಮಗ ಅಹಜ್ಯನು ಅರಸನಾದನು.

2ಅಹಜ್ಯನು ಪಟ್ಟಕ್ಕೆ ಬಂದಾಗ ಅವನಿಗೆ ನಲ್ವತ್ತೆರಡು ವರ್ಷವಾಗಿತ್ತು. ಅವನು ಯೆರೂಸಲೇಮಿನಲ್ಲಿ ಒಂದು ವರ್ಷ ಆಡಳಿತ ನಡೆಸಿದನು. ಒಮ್ರಿಯನ ಮೊಮ್ಮಗಳಾದ ಅತಲ್ಯ ಎಂಬಾಕೆಯು ಇವನ ತಾಯಿ.

3ತನ್ನ ತಾಯಿಯ ದುರ್ಬೋಧನೆಗೆ ಕಿವಿಗೊಟ್ಟು, ಇವನೂ ದುರಾಚಾರಿಯಾಗಿ ಅಹಾಬನ ಮನೆಯವರ ಮಾರ್ಗದಲ್ಲೇ ನಡೆದನು.

4ಅವನ ತಂದೆ ತೀರಿಹೋದ ಮೇಲೆ ಅಹಾಬನ ಕುಟುಂಬದವರೇ, ಅವನಿಗೆ ತಪ್ಪಾದ ಸಲಹೆ ಕೊಡುವವರಾದರು. ಆದುದರಿಂದ ಅವನು ಯೆಹೋವನಿಗೆ ವಿರುದ್ಧವಾಗಿ ದ್ರೋಹಿಯಾಗಿ ನಡೆದನು.

5ಅವರ ಪ್ರೇರಣೆಯಿಂದಲೇ ಅವನು ಇಸ್ರಾಯೇಲರ ಅರಸನೂ ಅಹಾಬನ ಮಗನೂ ಆದ ಯೋರಾಮನ ಜೊತೆಯಲ್ಲಿ ಅರಾಮ್ಯರ ಅರಸನಾದ ಹಜಾಯೇಲನಿಗೆ ವಿರುದ್ಧವಾಗಿ ಯುದ್ಧಮಾಡುವುದಕ್ಕೆ, ರಾಮೋತ್ ಗಿಲ್ಯಾದಿಗೆ ಹೋದನು. ಅರಾಮ್ಯರು ಯೋರಾಮನನ್ನು ಯುದ್ಧದಲ್ಲಿ ಗಾಯಪಡಿಸಿದರು.

6ಅರಾಮ್ಯರು ಯೋರಾಮನಿಗೆ ರಾಮದಲ್ಲಿ ಮಾಡಿದ ಗಾಯಗಳಿಗೆ ಚಿಕಿತ್ಸೆ ಮಾಡಿಸಿಕೊಳ್ಳುವುದಕ್ಕಾಗಿ ಅವನು ಇಜ್ರೇಲಿಗೆ ಬಂದನು. ಯೋರಾಮನು ಅಸ್ವಸ್ಥನಾಗಿದ್ದುದರಿಂದ ಯೆಹೂದ್ಯರ ಅರಸನಾದ ಯೆಹೋರಾಮನ ಮಗನಾಗಿರುವ ಅಹಜ್ಯನು ಅವನನ್ನು ನೋಡುವುದಕ್ಕಾಗಿ ಅಲ್ಲಿಗೆ ಹೋದನು.

7ಅಹಜ್ಯನು ಯೋರಾಮನ ಬಳಿಗೆ ಹೋದದ್ದು ದೈವಸಂಕಲ್ಪದಿಂದಲೇ. ಅವನು ಅಲ್ಲಿ ಮುಟ್ಟಿದ ಕೂಡಲೆ ಯೋರಾಮನ ಜೊತೆಯಲ್ಲಿ ನಿಂಷಿಯ ಮಗನಾದ ಯೇಹುವನ್ನು ಎದುರುಗೊಳ್ಳುವುದಕ್ಕೆ ಹೋದನು. ಯೆಹೋವನು ಅಹಾಬನ ಮನೆಯನ್ನು ನಿರ್ನಾಮ ಮಾಡುವುದಕ್ಕಾಗಿಯೇ ಯೇಹುವಿಗೆ ಪಟ್ಟಾಭಿಷೇಕ ಮಾಡಿಸಿದ್ದನು.

8ಯೇಹುವು, ಅಹಾಬನ ಮನೆಯವರ ಮೇಲೆ ಆ ನಿರ್ಣಯವನ್ನು ನೆರವೇರಿಸುತ್ತಿರುವಾಗ, ತನಗೆ ಸಿಕ್ಕಿದ ಯೆಹೂದ್ಯ ಪ್ರಧಾನರನ್ನೂ, ಅಹಜ್ಯನಿಗೆ ಸೇವೆಮಾಡುತ್ತಿದ್ದ, ಅವನ ಅಣ್ಣತಮ್ಮಂದಿರ ಮಕ್ಕಳನ್ನೂ ಕೊಲ್ಲಿಸಿದನು.

9ಆಮೇಲೆ ಅಹಜ್ಯನನ್ನು ಹುಡುಕಿಸಿದನು; ಅವನು ಸಮಾರ್ಯದಲ್ಲಿ ಅಡಗಿಕೊಂಡಿದ್ದನು. ಜನರು ಅವನನ್ನು ಯೇಹುವಿನ ಬಳಿಗೆ ಹಿಡಿದು ತಂದು ಕೊಂದರು, “ಇವನು ಪೂರ್ಣಹೃದಯದಿಂದ ಯೆಹೋವನನ್ನು ಹುಡುಕಿದ, ಯಥಾರ್ಥಭಕ್ತನಾದ ಯೆಹೋಷಾಫಾಟನ ಮೊಮ್ಮಗನಲ್ಲವೇ” ಎಂದುಕೊಂಡು ಅವನನ್ನು ಸಮಾಧಿಮಾಡಿದರು. ರಾಜ್ಯಾಧಿಕಾರವನ್ನು ವಹಿಸಿಕೊಳ್ಳುವುದಕ್ಕೆ ಅಹಜ್ಯನ ಮನೆಯವರಲ್ಲಿ ಸಮರ್ಥರಾರೂ ಉಳಿಯಲಿಲ್ಲ.

10ಅಹಜ್ಯನು ಮರಣ ಹೊಂದಿದನೆಂದು ಅವನ ತಾಯಿಯಾದ ಅತಲ್ಯಳು ಕೇಳಿದ ಕೂಡಲೆ ಯೆಹೂದ ರಾಜ ಸಂತಾನದವರನ್ನೆಲ್ಲಾ ಸಂಹರಿಸಿಬಿಟ್ಟಳು.

11ಆದರೆ ರಾಜಪುತ್ರಿಯಾದ ಯೆಹೋಷಬತ್ ಎಂಬಾಕೆಯು, ಹತರಾಗುತ್ತಿದ್ದ ರಾಜಪುತ್ರರ ಮಧ್ಯದಿಂದ ಅಹಜ್ಯನ ಮಗನಾದ ಯೆಹೋವಾಷನನ್ನು, ಯಾರಿಗೂ ತಿಳಿಯದಂತೆ ಅವನ ದಾದಿಯೊಡನೆ ತೆಗೆದುಕೊಂಡು ಹೋಗಿ ಮಲಗುವ ಕೋಣೆಯಲ್ಲಿ ಅಡಗಿಸಿಟ್ಟಳು. ಅರಸನಾದ ಯೆಹೋರಾಮನ ಮಗಳೂ, ಅಹಜ್ಯನ ಸಹೋದರಿಯೂ, ಯಾಜಕನಾದ ಯೆಹೋಯಾದನ ಹೆಂಡತಿಯೂ, ಆಗಿದ್ದ ಯೆಹೋಷಬತಳು ಹೀಗೆ ಅವನನ್ನು ಅತಲ್ಯಳಿಂದ ಹತನಾಗದಂತೆ ರಕ್ಷಿಸಿದಳು.

12ಅವನು ಆರು ವರ್ಷಗಳವರೆಗೂ ಅವರೊಡನೆ ಗುಪ್ತವಾಗಿ ದೇವಾಲಯದಲ್ಲಿ ಇದ್ದನು. ಆಗ ಅತಲ್ಯಳೇ ದೇಶವನ್ನಾಳುತ್ತಿದ್ದಳು.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath