ಕ್ರಿಶ್ಚಿಯನ್ ಧರ್ಮ
ಹಿಂದೆ

2 ಪೂರ್ವಕಾಲವೃತ್ತಾಂತ 27

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ಯೋತಾಮನು ಪಟ್ಟಕ್ಕೆ ಬಂದಾಗ ಅವನು ಇಪ್ಪತ್ತೈದು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ಹದಿನಾರು ವರ್ಷಗಳ ಕಾಲ ಆಳಿದನು. ಚಾದೋಕನ ಮಗಳಾದ ಯೆರೂಷ ಎಂಬಾಕೆಯು ಇವನ ತಾಯಿ.

2ಅವನು ತನ್ನ ತಂದೆಯಾದ ಉಜ್ಜೀಯನಂತೆ ಯೆಹೋವನ ಚಿತ್ತಾನುಸಾರವಾಗಿ ನಡೆದನು. ಆದರೆ ಅವನಂತೆ ಯೆಹೋವನ ಆಲಯವನ್ನು ಪ್ರವೇಶಿಸಲಿಲ್ಲ. ಪ್ರಜೆಗಳಾದರೋ ದುರಾಚಾರಿಗಳಾಗಿಯೇ ಇದ್ದರು.

3ಯೆಹೋವನ ಆಲಯಕ್ಕೆ ಮೇಲಣ ಹೆಬ್ಬಾಗಿಲನ್ನು ಇಡಿಸಿ, ಓಫೇಲ್ ಗೋಡೆಯ ಹೆಚ್ಚಿನ ಭಾಗವನ್ನು ಕಟ್ಟಿಸಿದವನು ಇವನೇ.

4ಇದಲ್ಲದೆ, ಇವನು ಯೆಹೂದ ಪರ್ವತ ಪ್ರದೇಶದಲ್ಲಿ ಪಟ್ಟಣಗಳನ್ನೂ, ಕಾಡುಗಳಲ್ಲಿ ದುರ್ಗಗಳನ್ನೂ, ಗೋಪುರಗಳನ್ನೂ ಕಟ್ಟಿಸಿದನು.

5ಅಮ್ಮೋನಿಯರ ಅರಸರೊಡನೆ ಯುದ್ಧ ಮಾಡಿ ಅವರನ್ನು ಗೆದ್ದನು. ಅಮ್ಮೋನಿಯರು ಆ ವರ್ಷದಲ್ಲಿ ಇವನಿಗೆ ನೂರು ತಲಾಂತು ಬೆಳ್ಳಿ, ಹತ್ತು ಸಾವಿರ ಕೋರ್ (ಸಾವಿರ ಮೆಟ್ರಿಕ್ ಟನ್) ಗೋದಿ, ಹತ್ತು ಸಾವಿರ ಕೋರ್ ಜವೆಗೋದಿ ಇವುಗಳನ್ನು ಕೊಡಬೇಕಾಯಿತು. ಅಮ್ಮೋನಿಯರು ಅವನಿಗೆ ಎರಡನೆಯ ಮತ್ತು ಮೂರನೆಯ ವರ್ಷಗಳಲ್ಲಿಯೂ ಹೀಗೆಯೇ ಕೊಟ್ಟರು.

6ಯೋತಾಮನು ತನ್ನ ದೇವರಾದ ಯೆಹೋವನ ಚಿತ್ತಾನುಸಾರವಾಗಿ ನಡೆದುಕೊಂಡದ್ದರಿಂದ ಬಲವುಳ್ಳವನಾದನು.

7ಯೋತಾಮನ ಉಳಿದ ಚರಿತ್ರೆಯೂ, ಅವನು ನಡೆಸಿದ ಯುದ್ಧಗಳು ಹಾಗೂ ಕಾರ್ಯ ಚಟುವಟಿಕೆಗಳು ಇಸ್ರಾಯೇಲರ ಮತ್ತು ಯೆಹೂದ್ಯರ ರಾಜ ಗ್ರಂಥಗಳಲ್ಲಿ ಬರೆಯಲ್ಪಟ್ಟಿದೆ.

8ಅವನು ತನ್ನ ಇಪ್ಪತ್ತೈದನೆಯ ವರ್ಷದಲ್ಲಿ ಪಟ್ಟಕ್ಕೆ ಬಂದು ಯೆರೂಸಲೇಮಿನಲ್ಲಿ ಹದಿನಾರು ವರ್ಷ ಆಳ್ವಿಕೆ ನಡೆಸಿದನು.

9ಯೋತಾಮನು ತನ್ನ ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಆಹಾಜನು ಅರಸನಾದನು.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath