ಕ್ರಿಶ್ಚಿಯನ್ ಧರ್ಮ
ಹಿಂದೆ

2 ಪೂರ್ವಕಾಲವೃತ್ತಾಂತ 4

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ಇದಲ್ಲದೆ ಸೊಲೊಮೋನನು ತಾಮ್ರದ ಯಜ್ಞವೇದಿಯನ್ನು ಮಾಡಿಸಿದನು. ಅದರ ಉದ್ದ ಇಪ್ಪತ್ತು ಮೊಳ, ಅಗಲ ಇಪ್ಪತ್ತು ಮೊಳ, ಎತ್ತರ ಹತ್ತು ಮೊಳವು ಆಗಿತ್ತು.

2ಸೊಲೊಮೋನನು ಒಂದು ಕಂಚಿನ ಕಡಲು ಎಂಬ ಪಾತ್ರೆಯನ್ನು ಮಾಡಿಸಿದನು. ಅದು ಚಕ್ರಾಕಾರವಾಗಿ ಅಂಚಿನಿಂದ ಅಂಚಿಗೆ ಹತ್ತು ಮೊಳವಾಗಿಯೂ ಇತ್ತು. ಅದರ ಎತ್ತರವು ಐದು ಮೊಳವಾಗಿಯೂ, ಸುತ್ತಳತೆ ಮೂವತ್ತು ಮೊಳ ನೂಲಳತೆಯಾಗಿತ್ತು.

3ಅದರ ಕೆಳಭಾಗದಲ್ಲಿ ಅದರ ಸುತ್ತಲೂ ಎತ್ತುಗಳ ರೂಪಗಳಿದ್ದವು. ಅವು ಒಂದೊಂದು ಮೊಳಕ್ಕೆ ಹತ್ತರಂತೆ ಆ ಕೊಳದ ಪಾತ್ರೆಯ ಸುತ್ತಲೂ ಇದ್ದವು. ಇದು ಎರಕ ಹೊಯ್ಯಲ್ಪಡುವಾಗ ಎತ್ತುಗಳ ರೂಪ ಎರಡು ಸಾಲಾಗಿ ಎರಕ ಹೊಯ್ಯಲ್ಪಟ್ಟಿದ್ದವು.

4ಅದು ಹನ್ನೆರಡು ಎರಕದ ಎತ್ತುಗಳ ಮೇಲೆ ನಿಂತಿತ್ತು. ಮೂರು ಉತ್ತರ ದಿಕ್ಕಿಗೂ, ಮೂರು ಪಶ್ಚಿಮ ದಿಕ್ಕಿಗೂ, ಮೂರು ದಕ್ಷಿಣ ದಿಕ್ಕಿಗೂ, ಮೂರು ಪೂರ್ವ ದಿಕ್ಕಿಗೂ ಮುಖ ಮಾಡಿಕೊಂಡಿದ್ದವು. ಆ ಕಂಚಿನ ಕಡಲು ಪಾತ್ರೆ ಅವುಗಳ ಬೆನ್ನಿನ ಮೇಲೆ ಇತ್ತು. ಅವುಗಳ ಹಿಂಭಾಗಗಳೆಲ್ಲಾ ಒಳಭಾಗದಲ್ಲಿತ್ತು.

5ಕಡಲಿನ ಪಾತ್ರೆಯು ನಾಲ್ಕು ಬೆರಳಿನಷ್ಟು ದಪ್ಪವಾಗಿತ್ತು. ಅದರ ಅಂಚುಪಾತ್ರೆಯ ಅಂಚಿನ ಹಾಗೆಯೂ ಅರಳಿದ ಕಮಲಪುಷ್ಪದ ಹಾಗೆ ಇತ್ತು. ಅದರೊಳಗೆ ಮೂರು ಸಾವಿರ ಕೊಳಗ ನೀರು ಹಿಡಿಯುತ್ತಿತ್ತು.

6ಇದಲ್ಲದೆ ಅವನು ಹತ್ತು ಬೋಗುಣಿಗಳನ್ನು ಮಾಡಿಸಿ, ಅವುಗಳಲ್ಲಿ ಸರ್ವಾಂಗಹೋಮ ಸಮರ್ಪಣೆಯ ಸಾಮಾನುಗಳನ್ನು ತೊಳೆದು ಶುದ್ಧ ಮಾಡುವುದಕ್ಕಾಗಿ ಐದನ್ನು ಬಲಗಡೆಯಲ್ಲಿಯೂ, ಐದನ್ನು ಎಡಗಡೆಯಲ್ಲಿಯೂ ಇರಿಸಿದನು. ಆದರೆ ಆ ಕಡಲಿನೊಳಗಿನ ನೀರು ಯಾಜಕರ ಸ್ನಾನಮಾಡಿ ತಮ್ಮನ್ನು ಶುದ್ಧಮಾಡಿಕೊಳ್ಳುವುದಕ್ಕಾಗಿ ಇತ್ತು.

7ಅವನು ಬಂಗಾರದ ಹತ್ತು ದೀಪಸ್ತಂಭಗಳನ್ನು ಮಾಡಿಸಿ ಐದನ್ನು ದೇವಾಲಯದೊಳಗೆ ಬಲಗಡೆಯಲ್ಲಿ, ಐದನ್ನು, ಎಡಗಡೆಯಲ್ಲಿಯೂ ಇರಿಸಿದನು.

8ಹತ್ತು ಮೇಜುಗಳನ್ನು ಮಾಡಿಸಿ, ದೇವಾಲಯದೊಳಗೆ ಬಲಗಡೆಯಲ್ಲಿ ಐದನ್ನೂ, ಎಡಗಡೆಯಲ್ಲಿ ಐದನ್ನೂ ಇರಿಸಿ ನೂರು ಬಂಗಾರದ ಬೋಗುಣಿಗಳನ್ನು ಮಾಡಿಸಿದನು.

9ಇದಲ್ಲದೆ ಯಾಜಕರ ಪ್ರಾಕಾರವನ್ನೂ, ಮಹಾಪ್ರಾಕಾರವನ್ನೂ, ಮಹಾಪ್ರಾಕಾರಕ್ಕೆ ಬಾಗಿಲುಗಳನ್ನೂ ಮಾಡಿಸಿದನು; ಅವುಗಳ ಬಾಗಿಲುಗಳನ್ನು ತಾಮ್ರದ ತಗಡಿನಿಂದ ಹೊದಿಸಿದನು.

10ಕಡಲು ಎನಿಸಿಕೊಳ್ಳುವ ಪಾತ್ರೆಯನ್ನು ದೇವಾಲಯದ ಬಲಗಡೆಯಲ್ಲಿ ಅಂದರೆ ಪೂರ್ವಭಾಗದ ಬಲಗಡೆಯಲ್ಲಿ ದಕ್ಷಿಣಕ್ಕೆ ಎದುರಾಗಿ ಇರಿಸಿದನು.

11ಇದಲ್ಲದೆ ಹೂರಾಮನು ಹಂಡೆಗಳನ್ನೂ, ಸಲಿಕೆಗಳನ್ನೂ ಬೋಗುಣಿಗಳನ್ನೂ ಮಾಡಿದನು. ಹೀಗೆಯೇ ಹೂರಾಮನು ದೇವಾಲಯಕ್ಕೋಸ್ಕರ ಅರಸನಾದ ಸೊಲೊಮೋನನ ಅಪ್ಪಣೆಯಂತೆ ದೇವಾಲಯ ಕಾರ್ಯಕ್ಕಾಗಿ ಮಾಡಿ ಮುಗಿಸಿದನು.

12ಎರಡು ಸ್ತಂಭಗಳು ಅವುಗಳ ಮೇಲಿರುವ ಕುಂಭಾಕಾರದ ಎರಡು ತಲೆಗಳು, ಕುಂಭಗಳ ಮೇಲೆ ಹಾಕುವುದಕ್ಕೋಸ್ಕರ ಎರಡು ಜಾಲರಿಗಳು,

13ಸ್ತಂಭಗಳ ತುದಿಯಲ್ಲಿರುವ ಕುಂಭಗಳ ಜಾಲರಿಗಳ ಮೇಲೆ ಎರಡೆರಡನ್ನು ಸಾಲಾಗಿ ಸಿಕ್ಕಿಸುವುದಕ್ಕೋಸ್ಕರ ತಾಮ್ರದ ನಾನೂರು ದಾಳಿಂಬೆ ಹಣ್ಣುಗಳು, ಪೀಠಗಳು,

14ಅವುಗಳ ಮೇಲಣ ಬೋಗುಣಿಗಳು, ಕಡಲು ಎನಿಸಿಕೊಳ್ಳುವ ಎರಕದ ಪಾತ್ರೆ,

15ಅದನ್ನು ಹೊರುವ ಹನ್ನೆರಡು ಎರಕದ ಹೋರಿಗಳು,

16ಹಂಡೆ, ಸಲಿಕೆ, ಮುಳ್ಳುಸೌಟುಗಳು ಹೀಗೆ ಹೂರಾಮಾಬೀವನು ಅರಸನಾದ ಸೊಲೊಮೋನನ ಅಪ್ಪಣೆಯ ಮೇರೆಗೆ ಯೆಹೋವನ ಆಲಯಕ್ಕಾಗಿ ಅದರ ಎಲ್ಲಾ ಸಾಮಾನುಗಳನ್ನು ಒಪ್ಪ ಹಾಕಿದ ತಾಮ್ರದಿಂದ ಮಾಡಿ ಮುಗಿಸಿದನು.

17ಅರಸನು ಯೊರ್ದನ್ ತಗ್ಗಿನಲ್ಲಿ ಸುಕ್ಕೋತಿಗೂ ಚೆರೇದಕ್ಕೂ ಮಧ್ಯದಲ್ಲಿರುವ ಕುಲುಮೆಯ ಜೇಡಿಮಣ್ಣಿನ ಸ್ಥಳದಲ್ಲಿ ಎರಕ ಹೊಯ್ಯಿಸಿದನು.

18ಹೀಗೆ ಸೊಲೊಮೋನನು ಮಾಡಿಸಿದ ಸಾಮಾನುಗಳು ಅನೇಕವಾಗಿದ್ದುದರಿಂದ ಅವುಗಳ ತಾಮ್ರದ ತೂಕ ಎಷ್ಟೆಂಬುದು ಗೊತ್ತಾಗದೆ ಹೋಯಿತು.

19ಸೊಲೊಮೋನನು ಯೆಹೋವನ ದೇವಾಲಯಕ್ಕಾಗಿ ಮಾಡಿಸಿದ ಒಳಗಿನ ಸಾಮಾನುಗಳು ಯಾವುದೆಂದರೆ: ಬಂಗಾರದ ಧೂಪವೇದಿ, ನೈವೇದ್ಯ ರೊಟ್ಟಿಗಳನ್ನಿಡುವ ಮೇಜುಗಳು,

20ನಿಯಮದ ಪ್ರಕಾರ ಮಹಾಪರಿಶುದ್ಧ ಸ್ಥಳದ ಮುಂದೆ ಉರಿಯುತ್ತಿರುವುದಕ್ಕಾಗಿ ಪುಷ್ಟಾಲಂಕಾರವುಳ್ಳ ಬಂಗಾರದ ದೀಪ ಸ್ತಂಭಗಳು,

21ಅವುಗಳ ದೀಪಗಳು, ಹೂವುಗಳು, ಹಣತೆಗಳು, ಇಕ್ಕಳಗಳು ಇವು ಸ್ವಚ್ಛ ಬಂಗಾರದಿಂದ ಮಾಡಿದವುಗಳಾಗಿದ್ದವು.

22ಹಾಗೆಯೇ ಕತ್ತರಿಗಳನ್ನೂ, ಬೋಗುಣಿಗಳನ್ನೂ ಧೂಪಾರತಿಗಳನ್ನೂ, ಅಗ್ಗಿಷ್ಟಿಕೆಗಳನ್ನು, ದೇವಾಲಯದ ಮಹಾಪರಿಶುದ್ಧ ಸ್ಥಳಕ್ಕಾಗಿರುವ ಬಂಗಾರದ ಕದಗಳು, ಪರಿಶುದ್ಧ ಸ್ಥಳದ ಬಂಗಾರದ ಕದಗಳು ಇವುಗಳೇ.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath