ಕ್ರಿಶ್ಚಿಯನ್ ಧರ್ಮ
ಹಿಂದೆ

2 ಅರಸುಗಳು 20

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ಆ ಕಾಲದಲ್ಲಿ ಹಿಜ್ಕೀಯನನ್ನು ಮರಣಕರವಾದ ರೋಗವು ಬಾಧಿಸಿತು. ಆಗ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನ ಬಳಿಗೆ ಬಂದು ಅವನಿಗೆ, “‘ನಿನ್ನ ಮನೆಯ ಕಾರ್ಯಗಳನ್ನೆಲ್ಲಾ ಕ್ರಮಪಡಿಸಿ ಸೂಕ್ತಮಾಡಿಕೋ, ನೀನು ಮರಣ ಹೊಂದುವಿ’ ಎಂದು ಯೆಹೋವನು ತಿಳಿಸಿದ್ದಾನೆ” ಎಂದು ಹೇಳಿದನು.

2ಇದನ್ನು ಕೇಳಿದೊಡನೆ ಹಿಜ್ಕೀಯನು ಗೋಡೆಯ ಕಡೆಗೆ ತಿರುಗಿಕೊಂಡು ಯೆಹೋವನಿಗೆ ಪ್ರಾರ್ಥಿಸಿ, ಹೀಗೆ ವಿಜ್ಞಾಪಿಸಿಕೊಂಡನು.

3“ಯೆಹೋವನೇ, ದಯವಿಟ್ಟು ನಾನು ನಂಬಿಗಸ್ತನಾಗಿಯೂ ನಿನಗೆ, ಪ್ರಾಮಾಣಿಕನಾಗಿಯೂ ಶ್ರದ್ಧೆಯಿಂದಲೂ ನಡೆದುಕೊಂಡು ನಿನ್ನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದುದನ್ನು ನೆನಪುಮಾಡಿಕೋ” ಎಂದು ಹೇಳಿ ಹಿಜ್ಕೀಯನು ಬಹಳವಾಗಿ ಕಣ್ಣೀರಿಟ್ಟು ಪ್ರಾರ್ಥಿಸಿದನು.

4ಯೆಶಾಯನು ಅರಮನೆಯ ಮಧ್ಯಪ್ರಾಕಾರವನ್ನು ದಾಟುವುದಕ್ಕೆ ಮೊದಲು ಯೆಹೋವನಿಂದ ಅಪ್ಪಣೆಯಾಯಿತು.

5“ನೀನು ಹಿಂದಿರುಗಿ ಹೋಗಿ, ನನ್ನ ಜನಗಳ ಪ್ರಭುವಾಗಿರುವ ಹಿಜ್ಕೀಯನಿಗೆ, ‘ನಿನ್ನ ಪಿತೃವಾದ ದಾವೀದನ ದೇವರಾದ ಯೆಹೋವನು ಹೇಳಿದ್ದೇನೆಂದರೆ, ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನು ನೋಡಿದ್ದೇನೆ. ನೀನು ಗುಣಹೊಂದಿ ಮೂರನೆಯ ದಿನ ನನ್ನ ಆಲಯಕ್ಕೆ ಬರುವೆ.

6ಇದಲ್ಲದೆ, ನಿನ್ನ ಆಯುಷ್ಯಕ್ಕೆ ಹದಿನೈದು ವರ್ಷಗಳನ್ನು ಹೆಚ್ಚಿಸಿದ್ದೇನೆ, ನಿನ್ನನ್ನೂ, ಈ ಪಟ್ಟಣವನ್ನೂ ಅಶ್ಶೂರನ ಅರಸನ ಕೈಗೆ ಬೀಳದಂತೆ ತಪ್ಪಿಸುವೆನು. ನನಗಾಗಿಯೂ, ನನ್ನ ಸೇವಕನಾದ ದಾವೀದನಿಗಾಗಿಯೂ ಈ ಪಟ್ಟಣವನ್ನು ಉಳಿಸಿ ಕಾಪಾಡುವೆನು’ ಎಂಬುದಾಗಿ ನಿನ್ನ ಪೂರ್ವಿಕನಾದ ದಾವೀದನ ದೇವರಾಗಿರುವ ಯೆಹೋವನು ಹೇಳುತ್ತಾನೆ ಎಂದು ತಿಳಿಸು” ಅಂದನು.

7ಅನಂತರ ಯೆಶಾಯನು, ಒಂದು ಅಂಜೂರಹಣ್ಣನ್ನು ತೆಗೆದು ಅವನ ಗಾಯದ ಮೇಲೆ ಇಟ್ಟಾಗ ಹಿಜ್ಕೀಯನು ಗುಣಹೊಂದಿದನು.

8ಹಿಜ್ಕೀಯನು ಯೆಶಾಯನಿಗೆ, “ಯೆಹೋವನು ನನ್ನನ್ನು ಗುಣಪಡಿಸುವನೆಂಬುವುದಕ್ಕೂ, ನಾನು ಮೂರನೆಯ ದಿನ ಆತನ ಆಲಯಕ್ಕೆ ಹೋಗುವೆನೆಂಬುವುದಕ್ಕೂ, ಇರುವ ಗುರುತು ಏನು?” ಎಂದು ಕೇಳಿದನು.

9ಅದಕ್ಕೆ ಯೆಶಾಯನು, “ಯೆಹೋವನು ನುಡಿದಿದ್ದನ್ನು ನೆರವೇರಿಸುವನು ಎಂಬುದಕ್ಕೆ ಯೆಹೋವನಿಂದ ಉಂಟಾದ ಗುರುತು ಕೇಳುತ್ತಿರುವೆ, ಹಾಗಾದರೆ ನೆರಳು ಹತ್ತು ಮೆಟ್ಟಲು ಮುಂದೆ ಹೋಗಬೇಕೋ? ಹಿಂದೆ ಬರಬೇಕೋ? ಹೇಳು ಹಿಂದೆ ಹೋಗಬೇಕೋ ಹೇಳು?” ಎಂದು ಕೇಳಿದನು.

10ಅದಕ್ಕೆ ಹಿಜ್ಕೀಯನು, “ನೆರಳು ಮುಂದೆ ಹೋಗುವುದು ಸುಲಭ, ಆದುದರಿಂದ ಹತ್ತು ಮೆಟ್ಟಲು ಹಿಂದೆ ಬರುವಂತೆ ಮಾಡು” ಎಂದು ಹೇಳಿದನು.

11ಆಗ ಪ್ರವಾದಿಯಾದ ಯೆಶಾಯನು ಯೆಹೋವನಿಗೆ ಮೊರೆಯಿಡಲು ಆತನು ಆಹಾಜನ ಗಡಿಯಾರದ ವೇಳಾನುಸಾರ ಹತ್ತು ಮೆಟ್ಟಲು ಮುಂದೆ ಹೋಗಿದ್ದ ನೆರಳನ್ನು ಹತ್ತು ಮೆಟ್ಟಲು ಹಿಂದೆ ಬರುವಂತೆ ಮಾಡಿದನು.

12ಅದೇ ಕಾಲದಲ್ಲಿ ಬಲದಾನನ ಮಗನೂ, ಬಾಬೆಲಿನ ಅರಸನೂ ಆದ ಬೆರೋದಕಬಲದಾನ ಎಂಬುವವನು ಹಿಜ್ಕೀಯನು ಅಸ್ವಸ್ಥನಾಗಿದ್ದಾನೆಂದು ಕೇಳಿ, ದೂತರ ಮುಖಾಂತರವಾಗಿ ಅವನಿಗೆ ಪತ್ರವನ್ನೂ, ಬಹುಮಾನವನ್ನೂ ಕಳುಹಿಸಿದನು.

13ಹಿಜ್ಕೀಯನು ಬಂದಂಥ ದೂತರ ಮಾತನ್ನು ಕೇಳಿ, ಅವರಿಗೆ ಬೆಳ್ಳಿಬಂಗಾರ, ಸುಗಂಧದ್ರವ್ಯ, ಪರಿಮಳತೈಲ, ಮೊದಲಾದ ಪದಾರ್ಥಗಳಿರುವ ಮನೆಯನ್ನೂ, ಆಯುಧಶಾಲೆಯನ್ನೂ, ತನ್ನ ಭಂಡಾರದಲ್ಲಿದ್ದದೆಲ್ಲವನ್ನೂ ತೋರಿಸಿದನು. ಅವನ ಅರಮನೆಯಲ್ಲಿಯೂ, ರಾಜ್ಯದಲ್ಲಿಯೂ ಅವರಿಗೆ ತೋರಿಸದಿದ್ದ ವಸ್ತುವು ಒಂದೂ ಇರಲಿಲ್ಲ.

14ಆಗ ಪ್ರವಾದಿಯಾದ ಯೆಶಾಯನು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನನ್ನು, “ಆ ಮನುಷ್ಯರು ಎಲ್ಲಿಯವರು? ಏನು ಹೇಳಿದರು?” ಎಂದು ಕೇಳಲು ಅವನು, “ಅವರು ಬಹು ದೂರ ದೇಶವಾದ ಬಾಬೆಲಿನಿಂದ ಬಂದವರು” ಎಂದು ಉತ್ತರ ಕೊಟ್ಟನು.

15ಯೆಶಾಯನು ತಿರುಗಿ ಹಿಜ್ಕೀಯನನ್ನು, “ಅವರು ನಿನ್ನ ಮನೆಯಲ್ಲಿ ಏನು ನೋಡಿದರು?” ಎಂದು ಕೇಳಲು ಅವನು, “ಅರಮನೆಯಲ್ಲಿ ಇರುವುದೆಲ್ಲವನ್ನೂ ನೋಡಿದರು. ನನ್ನ ಭಂಡಾರದಲ್ಲಿ ನಾನು ಅವರಿಗೆ ತೋರಿಸದಿದ್ದ ಒಂದು ವಸ್ತುವು ಇರುವುದಿಲ್ಲ” ಎಂದನು.

16ಆಗ ಯೆಶಾಯನು ಹಿಜ್ಕೀಯನಿಗೆ, “ಯೆಹೋವನ ಮಾತನ್ನು ಕೇಳು,

17‘ಆತನು ನಿನ್ನ ಪೂರ್ವಿಕರ ಕಾಲದಿಂದ ಇಂದಿನವರೆಗೂ ಅರಮನೆಯಲ್ಲಿ ಸಂಗ್ರಹವಾದದ್ದೆಲ್ಲವನ್ನು ಬಾಬಿಲೋನಿಗೆ ಒಯ್ಯಲ್ಪಡುವ ದಿನವು ಬರುವುದು, ಇಲ್ಲಿ ಏನೂ ಉಳಿಯುವುದಿಲ್ಲ ಎಂದು ಯೆಹೋವನು ಹೇಳುತ್ತಾನೆ.

18ಬಾಬೆಲಿನ ಅರಸನು ಬಂದು ನಿನ್ನಿಂದ ಹುಟ್ಟುವಂಥ ಮಕ್ಕಳನ್ನು ತೆಗೆದುಕೊಂಡು ಹೋಗಿ, ಅವರನ್ನು ತಮ್ಮ ಅರಮನೆಯಲ್ಲಿ ಕಂಚುಕಿಗಳನ್ನಾಗಿ ನೇಮಿಸಿಕೊಳ್ಳುವರು ಎಂದು ಯೆಹೋವನು ಅನ್ನುತ್ತಾನೆ’” ಎಂದು ಹೇಳಿದನು.

19ಹಿಜ್ಕೀಯನು ಯೆಶಾಯನಿಗೆ, “ನೀನು ತಿಳಿಸಿದ ಯೆಹೋವನ ಮಾತು ಒಳ್ಳೆಯದಾಗಿದೆ. ನನ್ನ ಜೀವಮಾನ ಕಾಲದಲ್ಲಿ ಸಮಾಧಾನವೂ, ಭದ್ರತೆಯೂ ಇರುವುದಲ್ಲವೇ?” ಎಂದು ಕೊಂಡನು.

20ಹಿಜ್ಕೀಯನ ಉಳಿದ ಚರಿತ್ರೆಯೂ, ಅವನ ಪರಾಕ್ರಮಕೃತ್ಯಗಳೂ, ಅವನು ಕೆರೆಕಾಲುವೆಗಳನ್ನು ಮಾಡಿಸಿ ಊರೊಳಗೆ ನೀರನ್ನು ತಂದ ವಿವರವೂ ಯೆಹೂದ ರಾಜಕಾಲವೃತ್ತಾಂತ ಪುಸ್ತಕ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.

21ಹಿಜ್ಕೀಯನು ಪೂರ್ವಿಕರ ಬಳಿಗೆ ಸೇರಲು ಅವನಿಗೆ ಬದಲಾಗಿ ಅವನ ಮಗನಾದ ಮನಸ್ಸೆಯು ಅರಸನಾದನು.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath