2 ಸಮುವೇಲನು 10
ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ
1ಇದಾದ ನಂತರ ಅಮ್ಮೋನಿಯರ ಅರಸನು ಸತ್ತನು. ಅವನ ನಂತರ ಅವನ ಮಗನಾದ ಹಾನೂನನು ಅರಸನಾದನು.
2ದಾವೀದನು, “ನಾಹಾಷನು ನನಗೆ ದಯೆತೋರಿಸಿದ್ದರಿಂದ, ನಾನು ಅವನ ಮಗ ಹಾನೂನನಿಗೂ ದಯೆತೋರಿಸುವೆನು” ಎಂದುಕೊಂಡು, ಪಿತೃಶೋಕದಲ್ಲಿದ್ದ ಹಾನೂನನನ್ನು ಸಂತೈಸುವುದಕ್ಕೋಸ್ಕರ ತನ್ನ ಪ್ರತಿನಿಧಿಗಳನ್ನು ಕಳುಹಿಸಿದನು. ದಾವೀದನ ಪ್ರತಿನಿಧಿಗಳು ಅಮ್ಮೋನಿಯರ ದೇಶಕ್ಕೆ ಬಂದರು.
3ಅಮ್ಮೋನಿಯರ ರಾಜ ಪ್ರತಿನಿಧಿಗಳು ತಮ್ಮ ಒಡೆಯನಾದ ಹಾನೂನನಿಗೆ, “ದಾವೀದನು ನಿನ್ನ ಬಳಿಗೆ ಸಂತೈಸುವವರನ್ನು ಕಳುಹಿಸಿದ್ದರಿಂದ ಅವನು ನಿನ್ನ ತಂದೆಯನ್ನು ಸನ್ಮಾನಿಸುವವನು ಎಂದು ನೀನು ತಿಳಿದುಕೊಂಡಿರಬಹುದೋ? ಅವರು ಪಟ್ಟಣವನ್ನು ಸಂಚರಿಸಿ ನೋಡಿ, ಸ್ವಾಧಿನಮಾಡಿಕೊಳ್ಳಬೇಕೆಂದು ತನ್ನ ಪ್ರತಿನಿಧಿಗಳನ್ನು ಕಳುಹಿಸಿದ್ದಾನೆ” ಎಂದು ಹೇಳಿದರು.
4ಇದರಿಂದ ಹಾನೂನನು ದಾವೀದನ ಪ್ರತಿನಿಧಿಗಳನ್ನು ಹಿಡಿಸಿ, ಗಡ್ಡದ ಅರ್ಧ ಭಾಗವನ್ನು ಬೋಳಿಸಿ, ಸೊಂಟದಿಂದ ಕೆಳಗೆ ಅವರ ನಗ್ನತೆಯು ಕಾಣುವಂತೆ ನಿಲುವಂಗಿಗಳನ್ನು ಕತ್ತರಿಸಿ ಕಳುಹಿಸಿಬಿಟ್ಟನು.
5ಅವರು ಈ ವರ್ತಮಾನವನ್ನು ದಾವೀದನಿಗೆ ಹೇಳಿ ಕಳುಹಿಸಿದಾಗ ಅವನು ಬಹಳವಾಗಿ ಅಪಮಾನ ಹೊಂದಿದ ಅವರಿಗೆ “ನಿಮ್ಮ ಗಡ್ಡ ಬೆಳೆಯುವವರೆಗೆ ನೀವು ಯೆರಿಕೋ ಪಟ್ಟಣದಲ್ಲಿದ್ದು ಅನಂತರ ಹಿಂತಿರುಗಿ ಬನ್ನಿರಿ” ಎಂದು ತನ್ನ ಸೇವಕರ ಮೂಲಕ ಹೇಳಿಕಳುಹಿಸಿದ.
6ತಾವು ದಾವೀದನ ಕೋಪಕ್ಕೂ, ಅಸಮಾಧಾನಕ್ಕೂ ಗುರಿಯಾಗಿದ್ದೇವೆ ಎಂದು ತಿಳಿದು ಅಮ್ಮೋನಿಯರು ಬೇತ್ ರೆಹೋಬ್ ಮತ್ತು ಚೋಬಾ ಎಂಬ ಪಟ್ಟಣಗಳಿಂದ ಅರಾಮ್ಯರ ಇಪ್ಪತ್ತು ಸಾವಿರ ಕಾಲಾಳುಗಳನ್ನೂ, ಮಾಕದ ರಾಜನಿಂದ ಸಾವಿರ ಮಂದಿ ಸೈನಿಕರನ್ನೂ ಮತ್ತು ಟೋಬ್ ದೇಶದಿಂದ ಹನ್ನೆರಡು ಸಾವಿರ ದಂಡಾಳುಗಳನ್ನೂ ಹಣಕೊಟ್ಟು ತರಿಸಿದನು
7ಈ ಸುದ್ದಿಯು ದಾವೀದನಿಗೆ ಮುಟ್ಟಿದಾಗ ಅವನು ಯೋವಾಬನನ್ನೂ, ಎಲ್ಲಾ ಶೂರ ಸೈನಿಕರನ್ನೂ ಕಳುಹಿಸಿದನು.
8ಕೂಡಲೆ ಅಮ್ಮೋನಿಯರು ಹೊರಗೆ ಬಂದು ಊರ ಬಾಗಿಲಿನ ಬಳಿಯಲ್ಲಿ ವ್ಯೂಹರಚಿಸಿದರು. ಚೋಬ, ರೆಹೋಬ್ ಎಂಬ ಸ್ಥಳಗಳ ಅರಾಮ್ಯರೂ ಟೋಬ್ ಮತ್ತು ಮಾಕಾ ದೇಶಗಳವರೂ ಪ್ರತ್ಯೇಕವಾಗಿ ಮೈದಾನದಲ್ಲಿ ಇಳಿದುಕೊಂಡಿದ್ದರು.
9ಯೋವಾಬನು ತನ್ನ ಮುಂದೆಯೂ, ಹಿಂದೆಯೂ ಯುದ್ಧ ಪ್ರಾರಂಭವಾದದ್ದನ್ನು ಕಂಡು ಇಸ್ರಾಯೇಲ್ಯರಲ್ಲಿ ಶ್ರೇಷ್ಠರಾದ ಸೈನಿಕರನ್ನು ಆರಿಸಿಕೊಂಡು, ಅವರನ್ನು ಅರಾಮ್ಯರಿಗೆ ವಿರೋಧವಾಗಿ ನಿಲ್ಲಿಸಿದನು.
10ಉಳಿದ ಜನರನ್ನು ತನ್ನ ತಮ್ಮನಾದ ಅಬೀಷೈಯ ವಶಕ್ಕೆ ಕೊಟ್ಟನು.
11ಯೋವಾಬನು ಅವನಿಗೆ, “ಅರಾಮ್ಯರು ನನ್ನನ್ನು ಸೋಲಿಸುವಂತೆ ಕಂಡರೆ ನೀನು ನನ್ನ ಸಹಾಯಕ್ಕೆ ಬಾ. ಅಮ್ಮೋನಿಯರು ನಿನ್ನನ್ನು ಸೋಲಿಸುವಂತೆ ಕಂಡರೆ ನಾನು ನಿನ್ನ ಸಹಾಯಕ್ಕೆ ಬರುವೆನು.
12ಧೈರ್ಯದಿಂದಿರು, ನಮ್ಮ ಜನರಿಗೋಸ್ಕರವೂ ಮತ್ತು ನಮ್ಮ ದೇವರ ಪಟ್ಟಣಗಳಿಗೋಸ್ಕರವೂ ನಮ್ಮ ಶೌರ್ಯವನ್ನು, ಪೌರುಷವನ್ನು ತೋರಿಸೋಣ. ಯೆಹೋವನು ತನ್ನ ಚಿತ್ತದಂತೆ ಮಾಡಲಿ” ಎಂದು ಹೇಳಿ ಅವನನ್ನು ಅಮ್ಮೋನಿಯರಿಗೆ ವಿರೋಧವಾಗಿ ಕಳುಹಿಸಿದನು.
13ಯೋವಾಬನು ಅವನ ಜನರು ಅರಾಮ್ಯರಿಗೆ ವಿರೋಧವಾಗಿ ಯುದ್ಧ ಪ್ರಾರಂಭಿಸಿದಾಗ ಅರಾಮ್ಯರು ಓಡಿಹೋದರು.
14ಇವರು ಓಡಿಹೋಗುವುದನ್ನು ಅಮ್ಮೋನಿಯರು ಕಂಡು ಅವರೂ ಅಬೀಷೈಯ ಎದುರಿನಿಂದ ಓಡಿಹೋಗಿ, ಪಟ್ಟಣವನ್ನು ಪ್ರವೇಶಿಸಿದರು. ಯೋವಾಬನು ಅಮ್ಮೋನಿಯರೊಡನೆ ಯುದ್ಧ ಮಾಡುವುದನ್ನು ಬಿಟ್ಟು ಯೆರೂಸಲೇಮಿಗೆ ಹೋದನು.
15ಅರಾಮ್ಯರಿಗೆ ತಮ್ಮ ಸೈನ್ಯವು ಇಸ್ರಾಯೇಲ್ಯರಿಂದ ಅಪಜಯಹೊಂದಿತೆಂದು ಗೊತ್ತಾದಾಗ ಅವರೆಲ್ಲರೂ ಒಟ್ಟಾಗಿ ಕೂಡಿಬಂದರು.
16ಹದದೆಜೆರನು ಯೂಫ್ರೆಟಿಸ್ ನದಿಯ ಆಚೆಯಲ್ಲಿದ್ದ ಅರಾಮ್ಯರನ್ನು ಬರಲು ಹೇಳಿ ಕಳುಹಿಸಿದನು. ಅವರು ಹೇಲಾಮಿಗೆ ಬಂದರು. ಹದದೆಜೆರನ ಸೇನಾಧಿಪತಿಯಾದ ಶೋಬಕನು ಅವರ ನಾಯಕನಾದನು.
17ಈ ಸುದ್ದಿಯು ದಾವೀದನಿಗೆ ತಲುಪಿದಾಗ ಅವನು ಇಸ್ರಾಯೇಲರೆಲ್ಲರನ್ನು ಕೂಡಿಸಿಕೊಂಡು ಯೊರ್ದನ್ ಹೊಳೆಯನ್ನು ದಾಟಿ ಹೇಲಾಮಿಗೆ ಬಂದನು. ಅರಾಮ್ಯರು ವ್ಯೂಹರಚಿಸಿ ದಾವೀದನೊಡನೆ ಯುದ್ಧಕ್ಕೆ ನಿಂತಾಗ,
18ಅರಾಮ್ಯರು ಇಸ್ರಾಯೇಲ್ಯರ ಮುಂದೆ ಸೋತು ಓಡಿಹೋದರು. ದಾವೀದನು ಅರಾಮ್ಯರ ಏಳುನೂರು ರಥ ಸಾರಥಿಗಳನ್ನು ನಾಶ ಮಾಡಿ, ನಲ್ವತ್ತು ಸಾವಿರ ಮಂದಿ ರಾಹುತರನ್ನು ಹತ್ಯೆಮಾಡಿದನು. ಸೇನಾಧಿಪತಿಯಾದ ಶೋಬಕನು ಗಾಯಗೊಂಡು ಅಲ್ಲೇ ಸತ್ತನು.
19ಹದದೆಜೆರನಿಗೆ ದಾಸರಾಗಿದ್ದ ಅರಸರೆಲ್ಲರೂ ಇಸ್ರಾಯೇಲ್ಯರಿಂದ ತಾವು ಸೋತುಹೋದೆವೆಂದು ತಿಳಿದು, ಅವರೊಡನೆ ಒಪ್ಪಂದ ಮಾಡಿಕೊಂಡು, ಅವರಿಗೆ ದಾಸರಾದರು. ಅಂದಿನಿಂದ ಅರಾಮ್ಯರು ಅಮ್ಮೋನಿಯರಿಗೆ ಸಹಾಯಮಾಡುವುದಕ್ಕೆ ಧೈರ್ಯದಿಂದ ಮುಂದೆ ಬರಲಿಲ್ಲ.
WEBREATH · 11:11
«He himself gives everyone life and breath and everything else» — Acts 17:25
Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.
WEBREATH — the Minute at 11:11, your own local time — we are One Breath