2 ಸಮುವೇಲನು 8
ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ
1ಅನಂತರ ದಾವೀದನು ಹೋಗಿ ಫಿಲಿಷ್ಟಿಯರ ಮೇಲೆ ಮುತ್ತಿಗೆ ಹಾಕಿ, ಅವರನ್ನು ಸೋಲಿಸಿ, ಅವರ ರಾಜಧಾನಿಯನ್ನು ವಶಪಡಿಸಿಕೊಂಡು, ಆಡಳಿತವನ್ನು ತನ್ನ ಸ್ವಾಧೀನದಲ್ಲಿಟ್ಟುಕೊಂಡನು.
2ಇದಲ್ಲದೆ ಅವನು ಮೋವಾಬ್ಯರನ್ನು ಸೋಲಿಸಿ, ಅವರನ್ನು ನೆಲಕ್ಕೆ ಉರುಳಿಸಿ, ಹಗ್ಗದಿಂದ ಅಳತೆಮಾಡಿಸಿ, ಪ್ರತಿ ಮೂರನೆಯ ಎರಡು ಭಾಗದ ಜನರನ್ನು ಕೊಲ್ಲಿಸಿ, ಮೂರನೆ ಭಾಗದ ಜನರನ್ನು ಉಳಿಸಿದನು. ಉಳಿದ ಮೋವಾಬ್ಯರು ದಾವೀದನ ದಾಸರಾಗಿ ಅವನಿಗೆ ಕಪ್ಪಕೊಡಬೇಕಾಯಿತು.
3ದಾವೀದನು ಯೂಫ್ರೆಟಿಸ್ ನದಿಯ ಸುತ್ತಣ ಪ್ರದೇಶದಲ್ಲಿ ತನ್ನ ರಾಜ್ಯಾಧಿಕಾರವನ್ನು ಸ್ಥಾಪಿಸುವುದಕ್ಕೆ ಹೋಗುತ್ತಿದ್ದ ರೆಹೋಬನ ಮಗನೂ ಚೋಬದ ಅರಸನೂ ಆದ ಹದದೆಜೆರನನ್ನು ಸೋಲಿಸಿದನು.
4ಅವನು ಅವರ ಸಾವಿರದ ಏಳುನೂರು ರಾಹುತರನ್ನೂ ಇಪ್ಪತ್ತು ಸಾವಿರ ಮಂದಿ ಕಾಲಾಳುಗಳನ್ನೂ ಸೆರೆಹಿಡಿದು ನೂರು ಕುದುರೆಗಳನ್ನಿಟ್ಟುಕೊಂಡು ಮಿಕ್ಕಾದ ಕುದುರೆಗಳ ಹಿಂಗಾಲಿನ ನರಗಳನ್ನು ಕತ್ತರಿಸಿಬಿಟ್ಟನು.
5ದಮಸ್ಕದ ಅರಾಮ್ಯರು, ಚೋಬದ ಅರಸನಾದ ಹದದೆಜೆರನನ್ನು ರಕ್ಷಿಸಲು ಬಂದಾಗ ದಾವೀದನು ಅವರನ್ನೂ ಸೋಲಿಸಿ ಅವರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಕೊಂದನು.
6ಅನಂತರ ದಾವೀದನು ದಮಸ್ಕದ ಅರಾಮ್ಯ ದೇಶದಲ್ಲಿ ಕಾವಲುದಂಡನ್ನಿರಿಸಿದನು. ಹೀಗೆ ಅರಾಮ್ಯರು ಅವನ ಸೇವಕರಾಗಿ ಅವನಿಗೆ ಕಪ್ಪಕೊಡುವವರಾದರು. ಯೆಹೋವನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯದೊರಕಿತು.
7ಅವನು ಹದದೆಜೆರನ ಸೇವಕರ ಬಳಿ ಇದ್ದ ಬಂಗಾರದ ಗುರಾಣಿಗಳನ್ನು ಯೆರೂಸಲೇಮಿಗೆ ತೆಗೆದುಕೊಂಡು ಹೋದನು.
8ಇದಲ್ಲದೆ ಅರಸನಾದ ದಾವೀದನು ಹದದೆಜೆರನ ಪಟ್ಟಣಗಳಾದ ಬೆಟಹದಿಂದಲೂ ಬೇರೋತೈಯಿಂದಲೂ ಬಹಳ ತಾಮ್ರವನ್ನು ತೆಗೆದುಕೊಂಡು ಹೋದನು.
9ದಾವೀದನು ಹದದೆಜೆರನ ಸೈನ್ಯವನ್ನು ಸೋಲಿಸಿದನೆಂಬ ವರ್ತಮಾನವು ಹಮಾತಿನ ಅರಸನಾದ ತೋವಿಗೆ ಮುಟ್ಟಿತು.
10ತೋವಿಗೂ ಹದದೆಜೆರನಿಗೂ ವಿರೋಧವಿತ್ತು. ದಾವೀದನು ಹದದೆಜೆರನ ಮೇಲೆ ದಾಳಿಮಾಡಿ, ಅವನನ್ನು ಸೋಲಿಸಿದ್ದರಿಂದ ತೋವು ದಾವೀದನನ್ನು ವಂದಿಸುವುದಕ್ಕೂ ಹರಸುವುದಕ್ಕೂ ತನ್ನ ಮಗನಾದ ಯೋರಾಮನನ್ನು ಕಳುಹಿಸಿದನು. ಇವನು ಬರುವಾಗ ದಾವೀದನಿಗೋಸ್ಕರ ತಾಮ್ರ, ಬೆಳ್ಳಿ, ಬಂಗಾರದ ಪಾತ್ರೆಗಳನ್ನು ತಂದನು.
11ಅರಸನಾದ ದಾವೀದನು ಇವುಗಳನ್ನು ತನ್ನಿಂದ ಅಪಜಯಹೊಂದಿದ ಅರಾಮ್ಯರೂ, ಮೋವಾಬ್ಯರೂ, ಅಮ್ಮೋನಿಯರೂ, ಫಿಲಿಷ್ಟಿಯರೂ, ಅಮಾಲೇಕ್ಯರೂ ಎಂಬ ಈ ಸುತ್ತಣ ಜನಾಂಗಗಳಿಂದಲೂ,
12ಚೋಬದ ಅರಸನಾದ ರೆಹೋಬನ ಮಗ ಹದದೆಜೆರನಿಂದಲೂ ಪಡೆದುಕೊಂಡ ಬೆಳ್ಳಿ, ಬಂಗಾರವನ್ನೂ ಯೆಹೋವನಿಗೋಸ್ಕರ ಪ್ರತಿಷ್ಠಿಸಿದನು.
13ಇದಲ್ಲದೆ ದಾವೀದನು ಹೋಗಿ ಉಪ್ಪಿನ ತಗ್ಗಿನಲ್ಲಿ ಅರಾಮ್ಯರ ಹದಿನೆಂಟು ಸಾವಿರ ಮಂದಿ ಸೈನಿಕರನ್ನು ಸೋಲಿಸಿದಂದಿನಿಂದ ಬಹು ಪ್ರಖ್ಯಾತಿ ಹೊಂದಿದನು.
14ದಾವೀದನು ಎದೋಮಿನಲ್ಲೆಲ್ಲಾ ಕಾವಲುದಂಡನ್ನಿರಿಸಿದನು. ಎದೋಮ್ಯರೆಲ್ಲರೂ ದಾವೀದನ ದಾಸರಾದರು. ಯೆಹೋವನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯವುಂಟಾಯಿತು.
15ದಾವೀದನು ಇಸ್ರಾಯೇಲ್ಯರ ಅರಸನಾಗಿ, ಎಲ್ಲಾ ಪ್ರಜೆಗಳನ್ನು ನೀತಿನ್ಯಾಯಗಳಿಂದ ನಡೆಸುತ್ತಾ ಬಂದನು.
16ಚೆರೂಯಳ ಮಗನಾದ ಯೋವಾಬನೂ ಅವನ ಸೇನಾಧಿಪತಿಯೂ ಅಹೀಲೂದನ ಮಗನಾದ ಯೆಹೋಷಾಫಾಟನು ರಾಜವಂಶಸ್ಥದ ಇತಿಹಾಸಕಾರನಾಗಿದ್ದನು.
17ಅಹೀಟೂಬನ ಮಗನಾದ ಚಾದೋಕನೂ ಅಹೀಮೆಲೆಕನ ಮಗನಾದ ಎಬ್ಯಾತಾರನೂ ಅವನ ಯಾಜಕರು, ಸೆರಾಯನು ಲೇಖಕನು,
18ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯ ಮತ್ತು ಪೆಲೇತ್ಯ ಎಂಬ ಕಾವಲು ದಂಡುಗಳ ಮುಖ್ಯಸ್ಥನು. ದಾವೀದನ ಮಕ್ಕಳು ರಾಜನ ಮುಖ್ಯಸಲಹೆಗಾರರಾಗಿದ್ದರು.
WEBREATH · 11:11
«He himself gives everyone life and breath and everything else» — Acts 17:25
Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.
WEBREATH — the Minute at 11:11, your own local time — we are One Breath