ಕ್ರಿಶ್ಚಿಯನ್ ಧರ್ಮ
ಹಿಂದೆ

2 ತಿಮೊಥೆಯನಿಗೆ 4

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ನಾನು ದೇವರ ಸಮಕ್ಷಮದಲ್ಲಿ ಮತ್ತು ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರಿಸುವುದಕ್ಕೆ ಬರುವ ಕ್ರಿಸ್ತ ಯೇಸುವಿನ ಪ್ರತ್ಯಕ್ಷತೆಯನ್ನೂ, ಆತನ ರಾಜ್ಯವನ್ನೂ ಮುಂದಿಟ್ಟು ನಿನಗೆ ಖಂಡಿತವಾಗಿ ಹೇಳುವುದೇನಂದರೆ,

2ದೇವರ ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತನಾಗಿರು. ಪೂರ್ಣ ದೀರ್ಘಶಾಂತಿಯಿಂದ ಉಪದೇಶಿಸುತ್ತಾ ಖಂಡಿಸು, ಗದರಿಸು, ಎಚ್ಚರಿಸು.

3ಯಾಕೆಂದರೆ ಜನರು ಸ್ವಸ್ಥಬೋಧನೆಯನ್ನು ಒಪ್ಪಲಾರದ ಕಾಲವು ಬರುತ್ತದೆ. ಅದರಲ್ಲಿ ಅವರು ಕಿವಿಗೆ ಇಂಪಾಗುವ ಹಾಗೆ ತಮ್ಮ ದುರಾಶೆಗಳಿಗೆ ಅನುಕೂಲವಾದ ಉಪದೇಶಗಳನ್ನು ನೀಡುವ ಅನೇಕ ಉಪದೇಶಕರನ್ನು ಇಟ್ಟುಕೊಳ್ಳುವರು.

4ಅವರು ಸತ್ಯ ಬೋಧನೆಗೆ ಕಿವಿಗೊಡದೆ ಕಟ್ಟುಕಥೆಗಳನ್ನು ಕೇಳುವುದಕ್ಕೆ ಇಚ್ಛಿಸುವರು.

5ಆದರೆ ನೀನು ಎಲ್ಲಾ ವಿಷಯಗಳಲ್ಲಿಯೂ ಸ್ವಸ್ಥಚಿತ್ತನಾಗಿರು, ಹಿಂಸೆಯನ್ನು ತಾಳಿಕೋ, ಸುವಾರ್ತಿಕನ ಕೆಲಸವನ್ನು ಮಾಡು, ನಿನಗೆ ನೇಮಿಸಿರುವ ಸೇವೆಯನ್ನು ಲೋಪವಿಲ್ಲದೆ ಮಾಡು.

6ಯಾಕೆಂದರೆ ನಾನಂತೂ ಈಗಲೇ ಪಾನದ್ರವ್ಯವಾಗಿ ಅರ್ಪಿತನಾಗುತ್ತಾ ಇದ್ದೇನೆ. ನನ್ನ ನಿರ್ಗಮನದ ಸಮಯವು ಸಮೀಪವಾಗುತ್ತಾ ಬಂದಿದೆ.

7ಶ್ರೇಷ್ಠ ಹೋರಾಟವನ್ನು ಮಾಡಿದ್ದೇನೆ, ನನ್ನ ಓಟವನ್ನು ಓಡಿಮುಗಿಸಿದ್ದೇನೆ, ಕ್ರಿಸ್ತ ನಂಬಿಕೆಯನ್ನು ಕಾಪಾಡಿಕೊಂಡಿದ್ದೇನೆ.

8ನೀತಿವಂತರಿಗೆ ದೊರಕುವ ಜಯಮಾಲೆಯು ಮುಂದೆ ನನಗಾಗಿ ಸಿದ್ಧವಾಗಿದೆ, ಅದನ್ನು ನೀತಿವಂತನಾದ ನ್ಯಾಯಾಧಿಪತಿಯಾಗಿರುವ ಕರ್ತನು ಆ ದಿನದಲ್ಲಿ ನನಗೆ ಕೊಡುವನು, ನನಗೆ ಮಾತ್ರವಲ್ಲದೆ ತನ್ನ ಪ್ರತ್ಯಕ್ಷತೆಯನ್ನು ಪ್ರೀತಿಸುವವರೆಲ್ಲರಿಗೂ ಕೊಡುವನು.

9ನೀನು ನನ್ನ ಬಳಿಗೆ ಬೇಗನೇ ಬರುವುದಕ್ಕೆ ಪ್ರಯತ್ನಪಡು,

10ಯಾಕೆಂದರೆ ದೇಮನು ಇಹಲೋಕವನ್ನು ಪ್ರೀತಿಸಿ, ನನ್ನನ್ನು ಬಿಟ್ಟು ಥೆಸಲೋನಿಕಕ್ಕೆ ಹೋದನು. ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋದರು.

11ಲೂಕನು ಮಾತ್ರ ನನ್ನ ಜೊತೆಯಲ್ಲಿದ್ದಾನೆ. ಮಾರ್ಕನನ್ನು ನಿನ್ನ ಸಂಗಡ ಕರೆದುಕೊಂಡು ಬಾ, ಅವನು ನನಗೆ ಸೇವೆಯಲ್ಲಿ ಉಪಯುಕ್ತನಾಗಿದ್ದಾನೆ.

12ತುಖಿಕನನ್ನು ಎಫೆಸಕ್ಕೆ ಕಳುಹಿಸಿದೆನು. ತ್ರೋವದಲ್ಲಿ ನಾನು ಕರ್ಪನ ಬಳಿಯಲ್ಲಿ ಬಿಟ್ಟು ಬಂದ ಮೇಲಂಗಿಯನ್ನೂ, ಪುಸ್ತಕಗಳನ್ನೂ, ಮುಖ್ಯವಾಗಿ ಚರ್ಮದ ಕಾಗದಗಳನ್ನೂ ನೀನು ಬರುವಾಗ ತೆಗೆದುಕೊಂಡು ಬಾ.

14ಕಂಚುಗಾರನಾದ ಅಲೆಕ್ಸಾಂದ್ರನು ನನಗೆ ಬಹಳ ಕೇಡುಮಾಡಿದನು. ಕರ್ತನು ಅವನ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಅವನಿಗೆ ಕೊಡುವನು.

15ನೀನು ಸಹ ಅವನ ವಿಷಯದಲ್ಲಿ ಎಚ್ಚರಿಕೆಯಾಗಿರು, ಅವನು ನಮ್ಮ ಮಾತುಗಳನ್ನು ಬಹಳವಾಗಿ ಎದುರಿಸಿದನು.

16ನಾನು ಮೊದಲನೆ ಸಾರಿ ಪ್ರತಿವಾದ ಮಾಡಿದಾಗ ಯಾರೂ ನನ್ನ ಸಂಗಡ ಇರಲಿಲ್ಲ, ಎಲ್ಲರೂ ನನ್ನನ್ನು ಕೈಬಿಟ್ಟರು. ಇದು ಅವರಿಗೆ ದೋಷವಾಗಿ ಎಣಿಸಲ್ಪಡದೆ ಇರಲಿ.

17ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸುವಾರ್ತೆಯು ಸಂಪೂರ್ಣವಾಗಿ ಸಾರಲ್ಪಡುವಂತೆಯೂ, ಅನ್ಯ ಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು. ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.

18ಪ್ರತಿಯೊಂದು ದುಷ್ಕೃತ್ಯದಿಂದ ಕರ್ತನು ನನ್ನನ್ನು ಕಾಪಾಡಿ ತನ್ನೊಂದಿಗೆ ಪರಲೋಕ ರಾಜ್ಯಕ್ಕೆ ಸೇರಿಸುವನು. ಯುಗಯುಗಾಂತರಗಳಲ್ಲಿಯೂ ಆತನಿಗೆ ಸ್ತೋತ್ರ. ಆಮೆನ್.

19ಪ್ರಿಸ್ಕಿಲ್ಲಳಿಗೂ, ಅಕ್ವಿಲ್ಲನಿಗೂ, ಒನೇಸಿಪೊರನ ಮನೆಯವರಿಗೂ ವಂದನೆಹೇಳು.

20ಎರಸ್ತನು ಕೊರಿಂಥದಲ್ಲಿ ನಿಂತನು. ತ್ರೊಫಿಮನು ಅಸ್ವಸ್ಥನಾಗಿದ್ದುದರಿಂದ ಅವನನ್ನು ಮಿಲೇತದಲ್ಲಿ ಬಿಟ್ಟೆನು.

21ಚಳಿಗಾಲಕ್ಕೆ ಮುಂಚೆಯೇ ಬರುವುದಕ್ಕೆ ಪ್ರಯತ್ನಿಸು. ಯುಬೂಲನು, ಪೊದೆಯನೂ, ಲೀನನೂ, ಕ್ಲೌದ್ಯಳೂ ಉಳಿದ ಸಹೋದರರೆಲ್ಲರೂ ನಿನಗೆ ವಂದನೆ ಹೇಳುತ್ತಾರೆ.

22ಕರ್ತನು ನಿನ್ನ ಆತ್ಮದೊಂದಿಗೆ ಇರಲಿ. ಆತನ ಕೃಪೆಯು ನಿಮ್ಮೊಂದಿಗಿರಲಿ.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath