ಕ್ರಿಶ್ಚಿಯನ್ ಧರ್ಮ
ಹಿಂದೆ

ಅಪೊಸ್ತಲರ ಕೃತ್ಯಗಳು 8

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ಸೌಲನಿಗೆ ಅವನ ಕೊಲೆಗೆ ಸಮ್ಮತಿಸಿದನು. ಸಭೆ ಹಿಂಸೆಗೆ ಗುರಿಯಾದದ್ದು ಮತ್ತು ಚದರಿಹೋದದ್ದು ಆ ದಿನದಲ್ಲಿ ಯೆರೂಸಲೇಮಿನಲ್ಲಿದ್ದ ಸಭೆಗೆ ದೊಡ್ಡ ಹಿಂಸೆ ಉಂಟಾಯಿತು. ಅಪೊಸ್ತಲರು ಹೊರತಾಗಿ ಎಲ್ಲರೂ ಯೂದಾಯ, ಸಮಾರ್ಯ ಸೀಮೆಗಳಿಗೆ ಚದರಿಹೋದರು.

2ಭಕ್ತರಾದ ಜನರು ಸ್ತೆಫನನ ದೇಹವನ್ನು ಹೂಣಿಟ್ಟು ಅವನಿಗೋಸ್ಕರ ಬಹಳವಾಗಿ ಗೋಳಾಡಿದರು.

3ಆದರೆ ಸೌಲನು ಮನೆಮನೆಗಳಿಗೆ ನುಗ್ಗಿ ಗಂಡಸರನ್ನೂ ಹೆಂಗಸರನ್ನೂ ಎಳೆದುಕೊಂಡು ಬಂದು ಸೆರೆಮನೆಗೆ ಹಾಕಿಸಿ ಸಭೆಯನ್ನು ನಾಶಮಾಡುತ್ತಿದ್ದನು.

4ಚದರಿಹೋದವರು ಅಲ್ಲಲ್ಲಿ ಹೋಗಿ ಸುವಾರ್ತೆಯನ್ನು ಸಾರುತ್ತಿದ್ದರು.

5ಫಿಲಿಪ್ಪನು ಸಮಾರ್ಯವೆಂಬ ಪಟ್ಟಣಕ್ಕೆ ಹೋಗಿ ಕ್ರಿಸ್ತನ ವಿಷಯವಾಗಿ ಅಲ್ಲಿರುವವರಿಗೆ ಪ್ರಚುರಪಡಿಸಿದನು.

6ಗುಂಪಾಗಿ ಕೂಡಿದ ಜನಗಳು ಫಿಲಿಪ್ಪನ ಮಾತುಗಳನ್ನು ಕೇಳಿ ಅವನು ಮಾಡಿದ ಸೂಚಕಕಾರ್ಯಗಳನ್ನು ನೋಡಿ ಅವನು ಹೇಳಿದ ಸಂಗತಿಗಳಿಗೆ ಒಮ್ಮನಸ್ಸಿನಿಂದ ಗಮನಕೊಟ್ಟರು.

7ಏಕೆಂದರೆ ಅನೇಕರೊಳಗಿಂದ ದೆವ್ವಗಳು ಮಹಾಶಬ್ದದಿಂದ ಕೂಗಿ ಹೊರಗೆ ಬಂದವು; ಮತ್ತು ಅನೇಕ ಪಾರ್ಶ್ವವಾಯು ರೋಗಿಗಳೂ ವಿಕಲಾಂಗರು ಸ್ವಸ್ಥರಾದರು.

8ಆ ಪಟ್ಟಣದಲ್ಲಿ ಬಹು ಸಂತೋಷವುಂಟಾಯಿತು.

9ಆದರೆ ಕೆಲವು ಕಾಲದಿಂದ ಆ ಪಟ್ಟಣದಲ್ಲಿದ್ದ ಸೀಮೋನನೆಂಬ ಒಬ್ಬ ಮನುಷ್ಯನು ತಾನು ಏನೋ ಒಬ್ಬ ಮಹಾತ್ಮನೆಂದು ಹೇಳಿಕೊಂಡು ಮಂತ್ರತಂತ್ರಗಳನ್ನು ನಡಿಸಿ ಸಮಾರ್ಯದ ಜನರಲ್ಲಿ ಬೆರಗನ್ನು ಹುಟ್ಟಿಸುತ್ತಿದ್ದನು.

10ಚಿಕ್ಕವರು ಮೊದಲುಗೊಂಡು ದೊಡ್ಡವರವರೆಗೂ ಎಲ್ಲರೂ, “ಇವನು ಮಹಾಶಕ್ತಿ ಎನಿಸಿಕೊಂಡಿರುವ ದೇವರ ಶಕ್ತಿಯೇ” ಎಂದು ಹೇಳುತ್ತಾ ಅವನಿಗೆ ಲಕ್ಷ್ಯಕೊಡುತ್ತಿದ್ದರು.

11ಬಹುಕಾಲದಿಂದಲೂ ಅವನ ಮಂತ್ರತಂತ್ರಗಳಿಗೆ ಮಾರುಹೋಗಿದ್ದ ಜನರು ಇವನ ಮಾತಿಗೆ ಕಿವಿಗೊಡುತ್ತಿದ್ದರು.

12ಆದರೆ ಫಿಲಿಪ್ಪನು ದೇವರ ರಾಜ್ಯದ ವಿಷಯದಲ್ಲಿಯೂ ಯೇಸು ಕ್ರಿಸ್ತನ ಹೆಸರಿನ ವಿಷಯದಲ್ಲಿಯೂ ಶುಭವರ್ತಮಾನವನ್ನು ಸಾರಲು ಗಂಡಸರೂ ಹೆಂಗಸರೂ ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡರು.

13ಆಗ ಸೀಮೋನನೂ ಕೂಡ ನಂಬಿ ದೀಕ್ಷಾಸ್ನಾನಮಾಡಿಸಿಕೊಂಡು ಫಿಲಿಪ್ಪನ ಸಂಗಡ ಯಾವಾಗಲೂ ಇದ್ದು ಸೂಚಕಕಾರ್ಯಗಳೂ ಮಹತ್ಕಾರ್ಯಗಳೂ ಆಗುತ್ತಿದ್ದುದನ್ನು ನೋಡಿ ಬೆರಗಾಗುತ್ತಿದ್ದನು.

14ಸಮಾರ್ಯದವರು ದೇವರ ವಾಕ್ಯವನ್ನು ಸ್ವೀಕರಿಸಿದ ವರ್ತಮಾನವನ್ನು ಯೆರೂಸಲೇಮಿನಲ್ಲಿದ್ದ ಅಪೊಸ್ತಲರು ಕೇಳಿ, ಪೇತ್ರ ಯೋಹಾನರನ್ನು ಅವರ ಬಳಿಗೆ ಕಳುಹಿಸಿದರು.

15ಇವರು ಅಲ್ಲಿಗೆ ಬಂದು ಆ ಜನರಿಗೆ ಪವಿತ್ರಾತ್ಮವರವು ದೊರೆಯಬೇಕೆಂದು ಅವರಿಗೋಸ್ಕರ ಪ್ರಾರ್ಥನೆಮಾಡಿದರು.

16ಏಕೆಂದರೆ ಪವಿತ್ರಾತ್ಮವರವು ಅವರಲ್ಲಿ ಒಬ್ಬನ ಮೇಲಾದರೂ ಇನ್ನೂ ಬಂದಿರಲಿಲ್ಲ. ಅವರು ಕರ್ತನಾದ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನವನ್ನು ಮಾತ್ರ ಮಾಡಿಸಿಕೊಂಡಿದ್ದರು

17ಅಪೊಸ್ತಲರು ಅವರ ಮೇಲೆ ಕೈಗಳನ್ನಿಡಲು ಅವರು ಪವಿತ್ರಾತ್ಮವರವನ್ನು ಹೊಂದಿದರು.

18ಅಪೊಸ್ತಲರು ಕೈಗಳನ್ನಿಡುವುದರ ಮೂಲಕವಾಗಿ ಪವಿತ್ರಾತ್ಮದಾನವಾಗುವುದನ್ನು ಸೀಮೋನನು ಕಂಡು ಹಣವನ್ನು ತಂದು ಅವರ ಮುಂದಿಟ್ಟು,

19“ನಾನು ಯಾರ ಮೇಲೆ ಕೈಗಳನ್ನಿಡುತ್ತೇನೋ ಅವರು ಪವಿತ್ರಾತ್ಮವರವನ್ನು ಹೊಂದುವಂತೆ ಈ ಅಧಿಕಾರವನ್ನು ನನಗೂ ಕೊಡಿರಿ” ಅಂದನು.

20ಆದರೆ ಪೇತ್ರನು ಅವನಿಗೆ, “ನಿನ್ನ ಬೆಳ್ಳಿಯು ನಿನ್ನ ಕೂಡ ಹಾಳಾಗಿಹೋಗಲಿ. ದೇವರ ವರವನ್ನು ಹಣಕ್ಕೆ ಕೊಂಡುಕೊಳ್ಳಬಹುದೆಂದು ಭಾವಿಸುತ್ತೀಯೋ?

21ಈ ಕಾರ್ಯದಲ್ಲಿ ನಿನಗೆ ಭಾಗವೂ ಇಲ್ಲ, ಯಾವ ಪಾಲೂ ಇಲ್ಲ; ಏಕೆಂದರೆ ನಿನ್ನ ಹೃದಯವು ದೇವರ ಮುಂದೆ ಸರಿಯಲ್ಲ.

22ಆದುದರಿಂದ ಈ ನಿನ್ನ ಕೆಟ್ಟತನವನ್ನು ಬಿಟ್ಟು ಪಶ್ಚಾತ್ತಾಪದಿಂದ ದೇವರ ಕಡೆಗೆ ತಿರುಗಿಕೋ ಕರ್ತನು ನಿನ್ನ ಮನಸ್ಸಿನ ಆಲೋಚನೆಯನ್ನು ಕ್ಷಮಿಸುವನೋ ಏನೋ ಆತನನ್ನು ಬೇಡಿಕೋ.

23ನೀನು ಕಡು ಕಹಿಯಾದ ದ್ವೇಷದಿಂದಲೂ ಮತ್ತು ವಿಷಕಾರಕವಾದ ಅನೀತಿಯಿಂದಲೂ ತುಂಬಿದವನಾಗಿರುವುದನ್ನು ನಾನು ಕಾಣುತ್ತಿದ್ದೇನೆ” ಅಂದನು

24ಅದಕ್ಕೆ ಸೀಮೋನನು, “ನೀವು ಹೇಳಿರುವ ಸಂಗತಿಗಳಲ್ಲಿ ಯಾವುದೂ ನನ್ನ ಮೇಲೆ ಬಾರದಂತೆ ನನಗೋಸ್ಕರ ಕರ್ತನನ್ನು ಬೇಡಿಕೊಳ್ಳಿರಿ” ಎಂದು ಹೇಳಿದನು.

25ಹೀಗಿರಲಾಗಿ ಅವರು ಕರ್ತನ ವಾಕ್ಯವನ್ನು ಪ್ರಮಾಣಪೂರ್ವಕವಾಗಿ ಹೇಳಿದ ಮೇಲೆ ಯೆರೂಸಲೇಮಿಗೆ ಹಿಂತಿರುಗಿ ಬಂದು ಸಮಾರ್ಯದವರ ಅನೇಕ ಊರುಗಳಲ್ಲಿ ಸುವಾರ್ತೆಯನ್ನು ಸಾರಿದರು.

26ಅಷ್ಟರಲ್ಲಿ ಕರ್ತನ ದೂತನು ಫಿಲಿಪ್ಪನಿಗೆ, “ನೀನು ಎದ್ದು ದಕ್ಷಿಣದ ಕಡೆಗೆ ಯೆರೂಸಲೇಮಿನಿಂದ ಗಾಜಕ್ಕೆ ಹೋಗುವ ದಾರಿಯಲ್ಲಿ ಹೋಗು, ಅದು ಅಡವಿ” ಎಂದು ಹೇಳಿದನು.

27ಅವನು ಎದ್ದು ಹೊರಟು ಹೋಗುತ್ತಿರುವಾಗ ಇಥಿಯೋಪ್ಯ ದೇಶದ ಒಬ್ಬ ಮನುಷ್ಯನನ್ನು ಕಂಡನು. ಅವನು ಕಂಚುಕಿಯೂ ಇಥಿಯೋಪ್ಯದವರ ರಾಣಿಯಾಗಿದ್ದ ಕಂದಾಕೆಯ ಕೈಕೆಳಗೆ ದೊಡ್ಡ ಅಧಿಕಾರಿಯೂ ಹಾಗೂ ಆಕೆಯ ಎಲ್ಲಾ ಖಜಾನೆಯ ಮೇಲ್ವಿಚಾರಕನೂ ಆಗಿದ್ದನು.

28ಅವನು ದೇವಾರಾಧನೆಗೋಸ್ಕರ ಯೆರೂಸಲೇಮಿಗೆ ಬಂದು ಹಿಂತಿರುಗಿ ಹೋಗುವಾಗ ತನ್ನ ರಥದಲ್ಲಿ ಕುಳಿತುಕೊಂಡು ಪ್ರವಾದಿ ಯೆಶಾಯನ ಗ್ರಂಥವನ್ನು ಓದುತ್ತಿದ್ದನು.

29ದೇವರಾತ್ಮನು ಫಿಲಿಪ್ಪನಿಗೆ, “ನೀನು ಆ ರಥದ ಹತ್ತಿರ ಹೋಗಿ ಅದರೊಂದಿಗೆ ಸೇರಿ ನಡೆ” ಎಂದು ಹೇಳಿದನು.

30ಫಿಲಿಪ್ಪನು ಓಡಿಹೋಗಿ ಆ ಮನುಷ್ಯನು ಪ್ರವಾದಿಯಾದ ಯೆಶಾಯನ ಗ್ರಂಥವನ್ನು ಓದುತ್ತಿರುವುದನ್ನು ಕೇಳಿ, “ಎಲೈ, ನೀನು ಓದುತ್ತಿರುವುದು ನಿನಗೆ ಅರ್ಥವಾಗುತ್ತಿದೆಯೋ?” ಎಂದು ಕೇಳಿದನು.

31ಅದಕ್ಕೆ ಅವನು, “ಯಾರಾದರೂ ನನಗೆ ಅರ್ಥ ತಿಳಿಸಿಕೊಡದ ಹೊರತು ಅದು ನನಗೆ ಹೇಗೆ ತಿಳಿದೀತು?” ಎಂದು ಹೇಳಿ, ನೀನು ರಥವನ್ನು ಹತ್ತಿ ನನ್ನ ಬಳಿಯಲ್ಲಿ ಕುಳಿತುಕೋ ಎಂಬುದಾಗಿ ಫಿಲಿಪ್ಪನನ್ನು ಕೇಳಿಕೊಂಡನು.

32ಅವನು ಓದುತ್ತಿದ್ದ ಶಾಸ್ತ್ರವಚನವು ಯಾವುದೆಂದರೆ, “ವಧಿಸುವಸ್ಥಾನಕ್ಕೆ ಒಯ್ಯಲ್ಪಡುವ ಕುರಿಮರಿಯಂತೆ ಆತನು ಒಯ್ಯಲ್ಪಟ್ಟನು; ಮತ್ತು ಕುರಿಮರಿಯು ಉಣ್ಣೆ ಕತ್ತರಿಸುವವನ ಮುಂದೆ ಮೌನವಾಗಿರುವಂತೆ ಆತನು ಬಾಯಿ ತೆರೆಯದೆ ಮೌನವಾಗಿದ್ದನು.

33ಆತನಿಗಾದ ಅವಮಾನದ ನ್ಯಾಯವಿಚಾರಣೆಯಲ್ಲಿ ಆತನಿಗೆ ನ್ಯಾಯ ಸಿಗಲಿಲ್ಲ. ಆತನ ಪೀಳಿಗೆಯ ಕುರಿತಾಗಿ ಯಾರು ವಿವರಿಸಬಲ್ಲರು? ಆತನ ಜೀವವನ್ನು ಭೂಮಿಯಿಂದ ತೆಗೆದುಬಿಟ್ಟರಲ್ಲಾ” ಎಂಬುದೇ.

34ಕಂಚುಕಿಯು ಈ ವಚನವನ್ನು ಕುರಿತು, “ಪ್ರವಾದಿಯು ಇದನ್ನು ಯಾರ ಬಗ್ಗೆ ಹೇಳಿದ್ದಾನೆ? ತನ್ನನ್ನು ಕುರಿತೋ ಅಥವಾ ಮತ್ತೊಬ್ಬನ ವಿಷಯದಲ್ಲಿಯೋ?” ದಯಮಾಡಿ ಹೇಳಬೇಕು ಎಂದು ಫಿಲಿಪ್ಪನನ್ನು ಕೇಳಲು

35ಫಿಲಿಪ್ಪನು ಬೋಧಿಸುವುದಕ್ಕೆ ತೊಡಗಿ ಅದೇ ವಚನವನ್ನು ಆಧಾರಮಾಡಿಕೊಂಡು ಅವನಿಗೆ ಯೇಸುವಿನ ವಿಷಯವಾದ ಸುವಾರ್ತೆಯನ್ನು ತಿಳಿಸಿದನು.

36ಅವರು ದಾರಿಯಲ್ಲಿ ಹೋಗುತ್ತಿರುವಾಗ ನೀರಿರುವ ಜಾಗಕ್ಕೆ ಬಂದರು.

37ಕಂಚುಕಿಯು, “ಆಗೋ, ನೀರು; ನನಗೆ ದೀಕ್ಷಾಸ್ನಾನವಾಗುವುದಕ್ಕೆ ಅಡ್ಡಿ ಏನು?” ಎಂದು ಹೇಳಿ ರಥವನ್ನು ನಿಲ್ಲಿಸು ಎಂದು ಅಪ್ಪಣೆ ಕೊಟ್ಟನು;

38ಫಿಲಿಪ್ಪನು ಕಂಚುಕಿಯು ಇಬ್ಬರೂ ನೀರಿನೊಳಗೆ ಇಳಿದರು. ಫಿಲಿಪ್ಪನು ಅವನಿಗೆ ದೀಕ್ಷಾಸ್ನಾನ ಮಾಡಿಸಿದನು.

39ಅವರು ನೀರನ್ನು ಬಿಟ್ಟು ಮೇಲಕ್ಕೆ ಬಂದಾಗ ಕರ್ತನ ಆತ್ಮ ಫಿಲಿಪ್ಪನನ್ನು ಎತ್ತಿಕೊಂಡು ಹೋಗಲಾಗಿ ಆ ಕಂಚುಕಿಯು ಫಿಲಿಪ್ಪನನ್ನು ಪುನಃ ಕಾಣಲಿಲ್ಲ. ಅವನು ಸಂತೋಷವುಳ್ಳವನಾಗಿ ತನ್ನ ಪ್ರಯಾಣವನ್ನು ಮುಂದುವರಿಸಿದನು.

40ತರುವಾಯ ಫಿಲಿಪ್ಪನು ಅಜೋತ್ ಎಂಬಲ್ಲಿ ಕಾಣಿಸಿಕೊಂಡು ಅಲ್ಲಿಂದ ಕೈಸರೈಯದ ತನಕ ಎಲ್ಲಾ ಊರುಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ಹೋದನು.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath