ಕ್ರಿಶ್ಚಿಯನ್ ಧರ್ಮ
ಹಿಂದೆ

ಆಮೋಸನು 6

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ಅಯ್ಯೋ! ಚೀಯೋನಿನಲ್ಲಿ ನೆಮ್ಮದಿಯಾಗಿರುವವರ ಗತಿಯನ್ನು ಏನೆಂದು ಹೇಳಲಿ, ಪ್ರಮುಖ ಜನಾಂಗದಲ್ಲಿ ಹೆಸರುಗೊಂಡು ಇಸ್ರಾಯೇಲರ ನ್ಯಾಯವಿಚಾರಕರಾಗಿ, ಸಮಾರ್ಯದ ಬೆಟ್ಟದಲ್ಲಿ ನಿಶ್ಚಿಂತರಾಗಿರುವವರ, ಗತಿಯನ್ನು ಏನೆಂದು ಹೇಳಲಿ!

2ನಿಮ್ಮ ಪ್ರಮುಖರು, “ಕಲ್ನೆಗೆ ಹೋಗಿ ನೋಡಲಿ; ಅಲ್ಲಿಂದ ಮಹಾ ಪಟ್ಟಣವಾದ ಹಮಾತಿಗೆ ತೆರಳಿರಿ; ಆ ಮೇಲೆ ಫಿಲಿಷ್ಟಿಯರ ಗತ್ ಊರಿಗೆ ಇಳಿಯಿರಿ. ಅವು ಈ ರಾಜ್ಯಗಳಿಗಿಂತ ಶ್ರೇಷ್ಠವೋ? ಅವುಗಳ ಪ್ರಾಂತ್ಯವು ನಿಮ್ಮ ಪ್ರಾಂತ್ಯಗಳಿಗಿಂತ ದೊಡ್ಡದೋ?”

3ಆಹಾ! ಆ ಪ್ರಮುಖರು ಆಪತ್ತಿನ ದಿನದ ಯೋಚನೆಯನ್ನು ದೂರಕ್ಕೆ ತಳ್ಳುತ್ತಾರೆ ಮತ್ತು ಅನ್ಯಾಯದ ಪೀಠಗಳನ್ನು ಹತ್ತಿರಕ್ಕೆ ತಂದುಕೊಳ್ಳುತ್ತಾರೆ.

4ದಂತದ ಮಂಚಗಳ ಮೇಲೆ ಮಲಗುತ್ತಾರೆ ಮತ್ತು ತಮ್ಮ ಗದ್ದುಗೆಗಳಲ್ಲಿ ಹಾಯಾಗಿ ಒರಗಿಕೊಳ್ಳುತ್ತಾರೆ. ಹಿಂಡಿನ ಕುರಿಮರಿಗಳನ್ನು, ಕೊಟ್ಟಿಗೆಯ ಕರುಗಳನ್ನು ತಿನ್ನುತ್ತಾರೆ.

5ವೀಣೆಯ ಮೇಲೆ ಮನಸ್ಸು ಬಂದಂತೆ ಹಾಡುತ್ತಾರೆ; ದಾವೀದನ ಹಾಗೆ ಗಾನವಾದ್ಯಗಳನ್ನು ಕಲ್ಪಿಸಿಕೊಳ್ಳುತ್ತಾರೆ.

6ದ್ರಾಕ್ಷಾರಸವನ್ನು ಬೋಗುಣಿಯಲ್ಲಿ ಕುಡಿಯುತ್ತಾರೆ ಮತ್ತು ಉತ್ತಮ ಅಭಿಷೇಕ ತೈಲಗಳನ್ನು ಹಚ್ಚಿಕೊಳ್ಳುತ್ತಾರೆ, ಆದರೆ ಯೋಸೇಫನ ನಷ್ಟಕ್ಕೆ ವ್ಯಸನಪಡುವುದಿಲ್ಲ.

7ಆದುದರಿಂದ ಸೆರೆಗೆ ಒಯ್ಯುವವರ ಮುಂದುಗಡೆಯೇ, ಅವರು ಸೆರೆಗೆ ಹೋಗುವರು, ಮತ್ತು ಭೋಗಮಾಡುವವರ ಹರ್ಷಧ್ವನಿಯು ನಿಂತುಹೋಗುವುದು.

8ಸೇನಾಧೀಶ್ವರ ದೇವರಾದ ಯೆಹೋವನ ನುಡಿಯನ್ನು ಕೇಳಿರಿ ಕರ್ತನಾದ ಯೆಹೋವನು ತನ್ನ ಮೇಲೆ ಆಣೆಯಿಟ್ಟು ಹೀಗೆಂದಿದ್ದಾನೆ, “ನಾನು ಯಾಕೋಬಿನ ಅಟ್ಟಹಾಸಕ್ಕೆ ಅಸಹ್ಯಪಟ್ಟು; ಅದರ ಕೋಟೆಗಳನ್ನು ಹಗೆಮಾಡುತ್ತೇನೆ. ಆದುದರಿಂದ ನಾನು ರಾಜಧಾನಿಯನ್ನೂ, ಅದರ ಸಕಲ ಸಮೃದ್ಧಿಯನ್ನೂ ಆಪತ್ತಿಗೆ ಗುರಿಮಾಡುವೆನು”

9ಒಂದು ಮನೆಯಲ್ಲಿ ಹತ್ತು ಜನ ಉಳಿದರೂ ಅವರೆಲ್ಲರೂ ಸಾಯುವರು.

10ಶವವನ್ನು ಸುಡಲು ಬಂದ ಸಂಬಂಧಿಕರು, ಹೆಣವನ್ನು ಮನೆಯೊಳಗಿಂದ ತೆಗೆದುಕೊಂಡು ಹೋದಾಗ, “ನಿಮ್ಮ ಹತ್ತಿರ ಇನ್ನೂ ಯಾರಾದರೂ ಇದ್ದಾರೋ?” ಎಂದು ಮನೆಯಲ್ಲಿರುವವರನ್ನು ಕೇಳುವಾಗ ಅವನು, “ಇಲ್ಲ” ಎನ್ನುವನು. ಆಗ ಸಂಬಂಧಿಕನು, “ಸುಮ್ಮನಿರು, ನಾವು ಯೆಹೋವನ ಹೆಸರನ್ನು ನೆನಪುಮಾಡಿಕೊಳ್ಳಬಾರದು.”

11ಇಗೋ, ನೋಡಿರಿ, ಯೆಹೋವನು ಆಜ್ಞಾಪಿಸಲು, ದೊಡ್ಡ ಮನೆಯು ಕೆಡವಲ್ಪಟ್ಟು ಚೂರುಚೂರಾಯಿತು, ಚಿಕ್ಕ ಮನೆಯೂ ಮುರಿದುಹೋಗುವುದು.

12ಕುದುರೆಗಳು ಬಂಡೆಯ ಮೇಲೆ ಓಡಾಡುವುವೋ? ಅದನ್ನು ಎತ್ತುಗಳಿಂದ ಉಳುವರೋ? ಆದರೆ ನೀವು ನ್ಯಾಯವನ್ನು ವಿಷವನ್ನಾಗಿ ಮಾಡಿ, ಧರ್ಮದ ಸುಫಲವನ್ನು ಕಹಿಯಾಗಿಸಿದಿರಿ.

13ನೀವು ಲೋ ದೆಬಾರ್ ಪಟ್ಟಣದಲ್ಲಿ ಉಲ್ಲಾಸಪಡುವವರೇ, ಸ್ವಬಲದಿಂದ ಕರ್ನಾಯಿಮ್ ಪಟ್ಟಣವನ್ನು ಪಡೆದುಕೊಂಡಿಲ್ಲವೇ ಎಂದುಕೊಳ್ಳುವವರೇ.

14ಸೇನಾಧೀಶ್ವರ ದೇವರಾದ ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲರ ವಂಶದವರೇ, ಇಗೋ, ನಾನು ನಿಮಗೆ ವಿರುದ್ಧವಾಗಿ ಒಂದು ಜನಾಂಗವನ್ನು ಎಬ್ಬಿಸುವೆನು; ಅವರು ಹಮಾತಿನ ದಾರಿಯಿಂದ ಅರಾಬಾ ತಗ್ಗಿನ ಹೊಳೆಯ ತನಕ, ನಿಮ್ಮನ್ನು ಹಿಂಸಿಸುವರು.”

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath