ಕೊಲೊಸ್ಸೆಯವರಿಗೆ 2
ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ
1ನಿಮಗಾಗಿಯೂ, ಲವೊದಿಕೀಯದವರಿಗಾಗಿಯೂ ಹಾಗೂ ನನ್ನನ್ನು ಮುಖಾಮುಖಿಯಾಗಿ ನೋಡದಿರುವವರೆಲ್ಲರಿಗಾಗಿಯೂ,
2ಅವರ ಹೃದಯಗಳು ಉತ್ತೇಜನಗೊಂಡು, ಪ್ರೀತಿಯಿಂದ ಒಂದಾಗಿದ್ದು, ದೇವರ ಮರ್ಮವನ್ನು ಅಂದರೆ ಕ್ರಿಸ್ತನನ್ನು ತಿಳಿದುಕೊಳ್ಳುವ ಮೂಲಕ ಬರುವ ನಿಶ್ಚಯವಾದ ಭಾಗ್ಯವನ್ನು ಪಡೆಯಬೇಕೆಂಬುದೇ ನನ್ನ ಅಪೇಕ್ಷೆ. ಅದಕ್ಕಾಗಿಯೇ ನಾನು ಎಷ್ಟು ಪ್ರಯಾಸಪಡುತ್ತಿದ್ದೇನೆಂಬುದು ನಿಮಗೆ ತಿಳಿದಿರಬೇಕೆಂದು ಬಯಸುತ್ತೇನೆ.
3ಈ ಕ್ರಿಸ್ತನಲ್ಲಿಯೇ ಜ್ಞಾನ ಮತ್ತು ವಿವೇಕದ ಸರ್ವಸಂಪತ್ತು ಅಡಗಿದೆ.
4ಯಾರೂ ನಿಮ್ಮನ್ನು ತಮ್ಮ ಮನವೊಲಿಸುವ ಮಾತುಗಳಿಂದ ಮೋಸಗೊಳಿಸದಿರಲಿ ಎಂದು ನಾನು ನಿಮಗೆ ಇದನ್ನು ಹೇಳುತ್ತಿದ್ದೇನೆ.
5ನಾನು ಶರೀರದಿಂದ ನಿಮ್ಮ ಬಳಿಯಲ್ಲಿ ಇಲ್ಲದಿದ್ದರೂ ಆತ್ಮನಿಂದ ನಿಮ್ಮೊಂದಿಗಿದ್ದು ನೀವು ಕ್ರಮಬದ್ಧವಾಗಿ ನಡೆಯುವುದನ್ನು ಮತ್ತು ಕ್ರಿಸ್ತ ನಂಬಿಕೆಯಲ್ಲಿ ದೃಢವಾಗಿ ನಿಂತಿರುವುದನ್ನೂ ನೋಡಿ ಸಂತೋಷಪಡುತ್ತೇನೆ.
6ನೀವು ಕರ್ತನಾದ ಯೇಸು ಕ್ರಿಸ್ತನನ್ನು ಸ್ವೀಕರಿಸಿದಂತೆಯೇ ಆತನಲ್ಲಿದ್ದವರಾಗಿ ಬಾಳಿರಿ.
7ಆತನಲ್ಲಿ ಬೇರೂರಿಕೊಂಡು, ಆತನಲ್ಲಿ ಕಟ್ಟಲ್ಪಟ್ಟು ಮತ್ತು ನಿಮಗೆ ಬೋಧಿಸಲ್ಪಟ್ಟ ಉಪದೇಶದ ಪ್ರಕಾರವೇ ಕ್ರಿಸ್ತ ನಂಬಿಕೆಯಲ್ಲಿ ನೆಲೆಗೊಂಡು ದೇವರಿಗೆ ಹೆಚ್ಚೆಚ್ಚಾಗಿ ಸ್ತೋತ್ರ ಸಲ್ಲಿಸುವವರಾಗಿರಿ.
8ಮೋಸಕರವಾದ ಮತ್ತು ವ್ಯರ್ಥವಾದ ತತ್ವಜ್ಞಾನ ಬೋಧನೆಯಿಂದ ಯಾರೂ ನಿಮ್ಮನ್ನು ವಶಮಾಡಿಕೊಳ್ಳದಂತೆ ಎಚ್ಚರಿಕೆಯಾಗಿರಿ. ಇವುಗಳು ಮನುಷ್ಯರ ಸಂಪ್ರದಾಯಗಳಿಗೆ ಮತ್ತು ಪ್ರಾಪಂಚಿಕ ಮೂಲ ಬೋಧನೆಗಳಿಗೆ ಸಂಬಂಧಿಸಿದವುಗಳೇ ಹೊರತು ಕ್ರಿಸ್ತನಿಗಲ್ಲ.
9ದೇವರ ಸರ್ವಸಂಪೂರ್ಣತೆಯು ಕ್ರಿಸ್ತನ ದೇಹದಲ್ಲಿ ವಾಸಮಾಡುತ್ತಿದೆ,
10ಆತನು ಎಲ್ಲಾ ದೊರೆತನಗಳಿಗೂ ಹಾಗೂ ಅಧಿಕಾರಿಗಳಿಗೂ ತಲೆಯಾಗಿರುವುದರಿಂದ ಆತನಲ್ಲಿದ್ದುಕೊಂಡೇ ನೀವು ಪರಿಪೂರ್ಣತೆಯನ್ನು ಹೊಂದಿದವರಾಗಿದ್ದೀರಿ.
11ದೇವರು ಆತನಲ್ಲಿ ನಿಮಗೆ ಮನುಷ್ಯರ ಕೈಯಿಂದ ಮಾಡಲಾಗದಂತಹ ಸುನ್ನತಿಯನ್ನು ಮಾಡಿದ್ದಾನೆ. ಕ್ರಿಸ್ತನ ಸುನ್ನತಿಯು ಶಾರೀರಿಕವಾದ ಪಾಪಸ್ವಭಾವವನ್ನು ತೆಗೆದುಹಾಕುವುದೇ.
12ನೀವು ದೀಕ್ಷಾಸ್ನಾನದಲ್ಲಿ ಕ್ರಿಸ್ತನೊಂದಿಗೆ ಹೂಣಲ್ಪಟ್ಟಿದ್ದೀರಿ, ಮತ್ತು ಆತನನ್ನು ಸತ್ತವರೊಳಗಿಂದ ಎಬ್ಬಿಸಿದ ದೇವರ ಶಕ್ತಿಯಲ್ಲಿ ನಂಬಿಕೆಯಿಡುವುದರ ಮೂಲಕ ಆತನ ಜೊತೆಯಲ್ಲಿ ನೀವು ಎದ್ದು ಬಂದಿದ್ದೀರಿ.
13ಅಪರಾಧಗಳನ್ನು ಮಾಡುವುದರಿಂದಲೂ ಹಾಗೂ ಸುನ್ನತಿಯಿಲ್ಲದ ಶರೀರಭಾವದಿಂದಲೂ ಸತ್ತವರಾಗಿದ್ದ ನಿಮ್ಮನ್ನು ದೇವರು ಕ್ರಿಸ್ತನೊಂದಿಗೆ ಬದುಕಿಸಿದ್ದಾನೆ ಮತ್ತು ನಮ್ಮ ಅಪರಾಧಗಳನ್ನೆಲ್ಲಾ ಕ್ಷಮಿಸಿದ್ದಾನೆ.
14ನಮ್ಮ ಮೇಲೆ ದೋಷಾರೋಪಣೆ ಮಾಡಿದಂಥ ಆಜ್ಞಾರೂಪವಾಗಿದ್ದಂಥ ಪತ್ರವನ್ನು ತೊಡೆದುಹಾಕಿ ಅದನ್ನು ಶಿಲುಬೆಗೆ ಜಡಿದು ಇಲ್ಲದಂತಾಗಿ ಮಾಡಿದನು.
15ಆತನು ದೊರೆತನಗಳನ್ನೂ ಮತ್ತು ಅಧಿಕಾರಗಳನ್ನೂ ನಿರಾಯುಧರನ್ನಾಗಿ ಮಾಡಿ, ತನ್ನ ಶಿಲುಬೆಯ ಮೂಲಕ ಅವುಗಳನ್ನು ಜಯಿಸಿ ಬಹಿರಂಗಪಡಿಸಿದನು.
16ಹೀಗಿರುವುದರಿಂದ, ಅನ್ನಪಾನಗಳ ವಿಷಯದಲ್ಲಿಯೂ ಅಥವಾ ಹಬ್ಬ ಅಮಾವಾಸ್ಯೆ ಹಾಗೂ ಸಬ್ಬತ್ತು ಎಂಬಿವುಗಳ ವಿಷಯದಲ್ಲಿಯೂ ನಿಮ್ಮನ್ನು ದೋಷಿಗಳೆಂದು ಯಾರೂ ನಿರ್ಣಯಿಸದಿರಲಿ.
17ಇವುಗಳು ಮುಂದೆ ಬರಬೇಕಾಗಿದ್ದ ಕಾರ್ಯಗಳ ಛಾಯೆಯಾಗಿವೆ, ಇವುಗಳ ನಿಜಸ್ವರೂಪವು ಕ್ರಿಸ್ತನೇ.
18ಮಿಥ್ಯಾ ದೀನತೆಯನ್ನು ಅಪೇಕ್ಷಿಸಿ ದೇವದೂತರ ಆರಾಧನೆಯಲ್ಲಿ ಆಸಕ್ತರಾಗಿದ್ದು, ದರ್ಶನಗಳಾದವೆಂದು ಕೊಚ್ಚಿಕೊಂಡು, ಪ್ರಾಪಂಚಿಕ ಬುದ್ಧಿಯಿಂದಾಗಿ, ಕಾರಣವಿಲ್ಲದೆ ಉಬ್ಬಿಕೊಂಡು ಇರುವಂಥವರಿಗೆ ನಿಮಗೆ ದೊರಕಿರುವ ಬಿರುದನ್ನು ಅಪಹರಿಸುವುದಕ್ಕೆ ಅವಕಾಶಕೊಡಬೇಡಿರಿ.
19ಇಂಥವನು ಕ್ರಿಸ್ತನೆಂಬ ತಲೆಯೊಂದಿಗೆ ಸಂಬಂಧ ಕಳೆದುಕೊಂಡವನಾಗಿದ್ದಾನೆ, ತಲೆಯಿಂದಲೇ ದೇಹವೆಲ್ಲಾ ಕೀಲುನರಗಳ ಮೂಲಕ ಬೇಕಾದ ಪೋಷಣೆಯನ್ನು ಹೊಂದಿ, ಒಂದಾಗಿ ಜೋಡಿಸಲ್ಪಟ್ಟ ದೇಹವಾಗಿ, ದೇವರು ಕೊಡುವ ಅಭಿವೃದ್ಧಿಯಿಂದ ಬೆಳೆಯುತ್ತಾ ಬರುತ್ತದೆ.
20ಪ್ರಾಪಂಚಿಕವಾದ ಪ್ರಥಮಬೋಧನೆಯ ಪಾಲಿಗೆ ನೀವು ಕ್ರಿಸ್ತನೊಂದಿಗೆ ಸತ್ತವರಾಗಿದ್ದರೆ, ಇನ್ನೂ ಪ್ರಾಪಂಚಿಕರಾಗಿ ಬದುಕುವವರಂತೆ ಮನುಷ್ಯಕಲ್ಪಿತ ಆಜ್ಞೆಗಳನ್ನು ಮತ್ತು ಉಪದೇಶಗಳನ್ನು ಅನುಸರಿಸಿ,
21“ಇದನ್ನು ಹಿಡಿಯಬೇಡ, ಇದರ ರುಚಿನೋಡಬೇಡ, ಅದನ್ನು ಮುಟ್ಟಬೇಡ” ಎನ್ನುವ ನಿಬಂಧನೆಗಳಿಗೆ ಅಧೀನರಾಗಿರುವುದೇತಕ್ಕೆ? ಈ ಮಾನವ ಆಜ್ಞೆಗಳೂ ಹಾಗೂ ಬೋಧನೆಗಳೂ ಉಪಯೋಗದಿಂದ ನಾಶವಾಗುವ ಪದಾರ್ಥಗಳಿಗೆ ಅನುಸಾರವಾಗಿದೆ.
23ಇಂಥ ಉಪದೇಶಗಳು ಮನುಷ್ಯಕಲ್ಪಿತವಾದ ಆಚರಣೆಗಳಿಂದಲೂ, ಕಪಟದೀನತೆಯಿಂದಲೂ ಮತ್ತು ದೇಹದಂಡನೆಯಿಂದಲೂ ಜ್ಞಾನವುಳ್ಳದೆಂದು ತೋರಿಬರುತ್ತವೆ, ಆದರೆ ಶಾರೀರಿಕ ಇಚ್ಛೆಗಳನ್ನು ನಿಯಂತ್ರಿಸುವಲ್ಲಿ ಇವುಗಳಿಂದ ಯಾವ ಪ್ರಯೋಜನವೂ ಉಂಟಾಗುವುದಿಲ್ಲ.
WEBREATH · 11:11
«He himself gives everyone life and breath and everything else» — Acts 17:25
Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.
WEBREATH — the Minute at 11:11, your own local time — we are One Breath