ಕ್ರಿಶ್ಚಿಯನ್ ಧರ್ಮ
ಹಿಂದೆ

ಕೊಲೊಸ್ಸೆಯವರಿಗೆ 4

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ಯಜಮಾನರೇ, ಪರಲೋಕದಲ್ಲಿ ನಿಮಗೂ ಯಜಮಾನನೊಬ್ಬನಿದ್ದಾನೆಂದು ತಿಳಿದು ನಿಮ್ಮ ದಾಸರೊಂದಿಗೆ ನೀತಿಯಿಂದಲೂ ನ್ಯಾಯದಿಂದಲೂ ವರ್ತಿಸಿರಿ.

2ಪ್ರಾರ್ಥನೆಯನ್ನು ತಪ್ಪದೆ ಮಾಡುವವರಾಗಿ, ಎಚ್ಚರವಾಗಿದ್ದು ದೇವರಿಗೆ ಕೃತಜ್ಞತಾಸ್ತುತಿಮಾಡಿರಿ.

3ಕ್ರಿಸ್ತನ ಮರ್ಮವನ್ನು ಅಂದರೆ ಸುರ್ವಾತೆಯನ್ನು ನಾವು ಸಾರುವುದಕ್ಕೆ ದೇವರು ನಮಗೆ ಬಾಗಿಲನ್ನು ತೆರೆದು ಕೊಡುವುದಕ್ಕಾಗಿ ನಮಗೋಸ್ಕರವಾಗಿ ಪ್ರಾರ್ಥಿಸಿರಿ. ಈ ಸುರ್ವಾತೆಯ ನಿಮಿತ್ತವೇ ನಾನು ಸೆರೆಯಲ್ಲಿದ್ದೇನಲ್ಲಾ.

4ನಾನು ಆ ಸತ್ಯಾರ್ಥವನ್ನು ಹೇಳಬೇಕಾದ ರೀತಿಯಲ್ಲಿ ಸ್ಪಷ್ಟವಾಗಿ ಹೇಳುವಂತೆ ಪ್ರಾರ್ಥಿಸಿರಿ.

5ಸಮಯವನ್ನು ಸದುಪಯೋಗಿಸಿಕೊಂಡು ಹೊರಗಿನವರೊಂದಿಗೆ ಜ್ಞಾನವುಳ್ಳವರಾಗಿ ನಡೆದುಕೊಳ್ಳಿರಿ.

6ನಿಮ್ಮ ಸಂಭಾಷಣೆಯು ಯಾವಾಗಲೂ ಕೃಪೆಯುಳ್ಳದ್ದಾಗಿಯೂ, ಉಪ್ಪಿನಂತೆ ರುಚಿಕರವಾಗಿಯೂ ಇರಲಿ. ಹೀಗೆ ನೀವು ಪ್ರತಿಯೊಬ್ಬರಿಗೂ ಯಾವಾವ ರೀತಿಯಲ್ಲಿ ಉತ್ತರಹೇಳಬೇಕು ಎಂಬುದನ್ನು ತಿಳಿದುಕೊಳ್ಳುವಿರಿ.

7ಪ್ರಿಯ ಸಹೋದರನೂ, ನಂಬಿಗಸ್ತನಾದ ಸೇವಕನೂ ಮತ್ತು ಕರ್ತನಲ್ಲಿ ಜೊತೆಯ ದಾಸನೂ ಆಗಿರುವ ತುಖಿಕನು ನನ್ನ ವಿಷಯಗಳನ್ನೆಲ್ಲಾ ನಿಮಗೆ ತಿಳಿಸುವನು.

8ನೀವು ನಮ್ಮ ಕುರಿತು ತಿಳಿದುಕೊಳ್ಳುವಂತೆ, ಅವನು ನಿಮ್ಮ ಹೃದಯಗಳನ್ನು ಉರಿದುಂಬಿಸುವಂತೆ,

9ಅವನನ್ನು ನಂಬಿಗಸ್ತನು ಮತ್ತು ಪ್ರಿಯ ಸಹೋದರನಾಗಿರುವ ನಿಮ್ಮ ಊರಿನವನೇ ಆದ ಓನೇಸಿಮನ ಜೊತೆಯಲ್ಲಿ ಕಳುಹಿಸಿದ್ದೇನೆ. ಅವರು ಇಲ್ಲಿ ನಡೆಯುತ್ತಿರುವ ವಿಷಯಗಳನ್ನೆಲ್ಲಾ ನಿಮಗೆ ತಿಳಿಸುವರು.

10ನನ್ನ ಜೊತೆ ಸೆರೆಯವನಾದ ಅರಿಸ್ತಾರ್ಕನೂ ಮತ್ತು ಬಾರ್ನಬನ ಸೋದರಸಂಬಂಧಿಯಾಗಿರುವ ಮಾರ್ಕನೂ ನಿಮಗೆ ವಂದನೆ ಹೇಳುತ್ತಾರೆ. ಅವನು ನಿಮ್ಮ ಬಳಿಗೆ ಬಂದರೆ ಅವನನ್ನು ಸೇರಿಸಿಕೊಳ್ಳಿರಿ. ಅವನ ವಿಷಯದಲ್ಲಿ ಅಪ್ಪಣೆಗಳನ್ನು ಹೊಂದಿದ್ದೀರಲ್ಲಾ.

11ಯುಸ್ತನೆನಿಸಿಕೊಳ್ಳುವ ಯೇಸು ಸಹ ನಿಮಗೆ ವಂದನೆ ಹೇಳುತ್ತಾನೆ. ಸುನ್ನತಿಯವರೊಳಗೆ ಇವರು ಮಾತ್ರವೇ ದೇವರ ರಾಜ್ಯಕ್ಕಾಗಿ ನನ್ನ ಜೊತೆಸೇವಕರಾಗಿದ್ದಾರೆ, ಇವರಿಂದ ನನಗೆ ಆದರಣೆ ಉಂಟಾಯಿತು.

12ಕ್ರಿಸ್ತಯೇಸುವಿನ ದಾಸನಾಗಿರುವ ನಿಮ್ಮ ಊರಿನವನಾದ ಎಪಫ್ರನು ನಿಮಗೆ ವಂದನೆ ಹೇಳುತ್ತಾನೆ, ನೀವು ಪ್ರವೀಣರಾಗಿಯೂ ದೇವರ ಎಲ್ಲಾ ಚಿತ್ತದಲ್ಲಿ ಪೂರ್ಣ ನಿಶ್ಚಯವುಳ್ಳವರಾಗಿರಬೇಕೆಂದು ನಿಮಗೋಸ್ಕರ ಯಾವಾಗಲೂ ಪ್ರಾರ್ಥನೆಯಲ್ಲಿ ಹೋರಾಡುತ್ತಾನೆ.

13ಇವನು ನಿಮಗಾಗಿಯೂ, ಲವೊದಿಕೀಯದವರಿಗಾಗಿಯೂ ಮತ್ತು ಹಿರಿಯಾಪೋಲಿಯದವರಿಗಾಗಿಯೂ ಬಹಳ ಪ್ರಯಾಸ ಪಡುತ್ತಾನೆಂದು ನಾನು ಸಾಕ್ಷಿಹೇಳುತ್ತೇನೆ.

14ಪ್ರಿಯ ವೈದ್ಯನಾಗಿರುವ ಲೂಕನು ಮತ್ತು ದೇಮನು ನಿಮಗೆ ವಂದನೆ ಹೇಳುತ್ತಾರೆ.

15ಲವೊದಿಕೀಯದಲ್ಲಿರುವ ಸಹೋದರರಿಗೂ ಮತ್ತು ನುಂಫಳಿಗೂ ಹಾಗೂ ಆಕೆಯ ಮನೆಯಲ್ಲಿ ಸೇರಿಬರುವ ಸಭೆಯವರಿಗೂ ವಂದನೆ ಹೇಳಿರಿ.

16ನಿಮ್ಮಲ್ಲಿ ಈ ಪತ್ರವನ್ನು ಓದಿದ ತರುವಾಯ ಲವೊದಿಕೀಯದವರ ಸಭೆಯಲ್ಲಿಯೂ ಇದನ್ನು ಓದಿಸಿರಿ ಮತ್ತು ನಾನು ಬರೆದ ಪತ್ರವನ್ನು ಲವೊದಿಕೀಯದಿಂದ ತರಿಸಿ ನೀವೂ ಓದಿಕೊಳ್ಳಿರಿ.

17ಅರ್ಖಿಪ್ಪನಿಗೆ, “ನೀನು ಕರ್ತನಿಂದ ಹೊಂದಿರುವ ಸೇವೆಯನ್ನು ಎಚ್ಚರವಾಗಿದ್ದು ನೆರವೇರಿಸಬೇಕೆಂದು” ಹೇಳಿರಿ.

18ಇದು ಪೌಲನೆಂಬ ನಾನು ಸ್ವಂತ ಕೈಯಿಂದಲೇ ಬರೆದ ವಂದನೆ. ನಾನು ಸೆರೆಯಲ್ಲಿದ್ದೇನೆಂಬುದನ್ನು ಜ್ಞಾಪಕ ಮಾಡಿಕೊಳ್ಳಿರಿ. ಕೃಪೆಯು ನಿಮ್ಮೊಂದಿಗಿರಲಿ.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath