ಕ್ರಿಶ್ಚಿಯನ್ ಧರ್ಮ
ಹಿಂದೆ

ಧರ್ಮೋಪದೇಶಕಾಂಡ 10

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ಆ ಕಾಲದಲ್ಲಿ ಯೆಹೋವನು ನನಗೆ, “ನೀನು ಮೊದಲಿನ ಕಲ್ಲಿನ ಹಲಿಗೆಗಳಂತೆ ಬೇರೆ ಎರಡು ಹಲಿಗೆಗಳನ್ನು ಸಿದ್ಧಪಡಿಸಿಕೊಂಡು, ಬೆಟ್ಟವನ್ನು ಹತ್ತಿ ನನ್ನ ಬಳಿಗೆ ಬಾ; ಮತ್ತು ಒಂದು ಮರದ ಮಂಜೂಷವನ್ನು ಮಾಡಿಸಿಕೊಳ್ಳಬೇಕು.

2ನೀನು ಒಡೆದುಬಿಟ್ಟ ಆ ಮೊದಲಿನ ಹಲಿಗೆಗಳಲ್ಲಿ ಬರೆದಿದ್ದ ಮಾತುಗಳನ್ನು ನಾನು ಈ ಹಲಿಗೆಗಳ ಮೇಲೆ ಬರೆಯುವೆನು. ತರುವಾಯ ನೀನು ಅವುಗಳನ್ನು ಆ ಮಂಜೂಷದಲ್ಲಿ ಇಡಬೇಕು” ಎಂದು ಆಜ್ಞಾಪಿಸಿದನು.

3ಆದಕಾರಣ ನಾನು ಜಾಲೀಮರದಿಂದ ಮಂಜೂಷವನ್ನು ಮಾಡಿಸಿ ಮೊದಲಿನ ಕಲ್ಲಿನ ಹಲಿಗೆಗಳಂತೆ ಬೇರೆ ಎರಡು ಹಲಿಗೆಗಳನ್ನು ಸಿದ್ಧಪಡಿಸಿ, ಆ ಎರಡು ಹಲಿಗೆಗಳನ್ನು ಕೈಯಲ್ಲಿ ಹಿಡಿದುಕೊಂಡು ಬೆಟ್ಟವನ್ನು ಹತ್ತಿದೆನು.

4ಯೆಹೋವನು ಬೆಟ್ಟದ ಮೇಲೆ ಅಗ್ನಿಜ್ವಾಲೆಯೊಳಗಿಂದ ನೀವು ಸಭೆ ಕೂಡಿದ ದಿನದಲ್ಲಿ ನಿಮ್ಮ ಸಂಗಡ ಹೇಳಿದ ಮಾತುಗಳನ್ನು, ಅಂದರೆ ಆ ಹತ್ತು ಕಟ್ಟಳೆಗಳನ್ನು ಆತನು ಮೊದಲಿನಂತೆಯೇ ಆ ಹಲಿಗೆಗಳ ಮೇಲೆ ಬರೆದನು.

5ಯೆಹೋವನು ಆ ಹಲಿಗೆಗಳನ್ನು ನನ್ನ ವಶಕ್ಕೆ ಕೊಟ್ಟ ನಂತರ ನಾನು ಬೆಟ್ಟದಿಂದ ಇಳಿದು ಬಂದು ನನ್ನಿಂದ ಸಿದ್ಧವಾಗಿದ್ದ ಮಂಜೂಷದಲ್ಲಿ ಆತನ ಅಪ್ಪಣೆಯ ಮೇರೆಗೆ ಅವುಗಳನ್ನು ಇಟ್ಟೆನು; ಅವು ಇಂದಿನವರೆಗೂ ಅದರಲ್ಲೇ ಇವೆ.

6(ಇಸ್ರಾಯೇಲರು ಯಾಕಾನ್ಯರ ಬಾವಿಗಳ ಬಳಿಯಿಂದ ಪ್ರಯಾಣಮಾಡಿ ಮೋಸೇರಕ್ಕೆ ಬಂದರು. ಅಲ್ಲಿ ಆರೋನನು ಸಾಯಲಾಗಿ ಅವನನ್ನು ಅಲ್ಲಿಯೇ ಸಮಾಧಿ ಮಾಡಿದರು. ಅವನ ಮಗನಾದ ಎಲ್ಲಾಜಾರನು ಅವನಿಗೆ ಬದಲಾಗಿ ಮಹಾಯಾಜಕನಾದನು.

7ಅಲ್ಲಿಂದ ಅವರು ಗುದ್ಗೋದಕ್ಕೂ, ಗುದ್ಗೋದದಿಂದ ನೀರಿನ ಹಳ್ಳಗಳುಳ್ಳ ಯೊಟ್ಬಾತಕ್ಕೂ ಪ್ರಯಾಣ ಮಾಡಿದರು.)

8ಆ ಕಾಲದಲ್ಲಿ ಯೆಹೋವನು ಲೇವಿ ಕುಲದವರನ್ನು ಪ್ರತ್ಯೇಕಿಸಿ ತನ್ನ ಒಡಂಬಡಿಕೆಯ ಮಂಜೂಷವನ್ನು ಹೊರುವುದಕ್ಕೂ, ತನ್ನ ಸನ್ನಿಧಿಯಲ್ಲಿ ಸೇವೆ ಮಾಡುವುದಕ್ಕೂ ಮತ್ತು ತನ್ನ ಹೆಸರಿನಿಂದ ಜನರನ್ನು ಆಶೀರ್ವದಿಸುವುದಕ್ಕೂ ಅವರನ್ನು ನೇಮಿಸಿದನು. ಅವರು ಇಂದಿನ ವರೆಗೂ ಆ ಕೆಲಸವನ್ನು ನಡಿಸುತ್ತಾರೆ.

9ಆದುದರಿಂದ ಉಳಿದ ಇಸ್ರಾಯೇಲರಿಗೆ ದೊರಕಿದಂತೆ ಲೇವಿಯರಿಗೆ ಸ್ವಂತವಾದ ಭೂಸ್ಥಿತಿಯು ದೊರೆಯಲಿಲ್ಲ. ನಿಮ್ಮ ದೇವರಾದ ಯೆಹೋವನು ಅವರಿಗೆ ಹೇಳಿದಂತೆ ಯೆಹೋವನೇ ಅವರಿಗೆ ಸ್ವತ್ತು.

10ನಾನು ಮೊದಲಿನಂತೆ ಹಗಲಿರುಳು ನಲ್ವತ್ತು ದಿನವೂ ಬೆಟ್ಟದ ಮೇಲೆ ಇರಲಾಗಿ ಯೆಹೋವನು ಆ ಕಾಲದಲ್ಲಿಯೂ ನನ್ನ ಪ್ರಾರ್ಥನೆಯನ್ನು ಕೇಳಿ ನಿಮ್ಮನ್ನು ನಾಶಮಾಡಬೇಕೆಂಬ ಆಲೋಚನೆಯನ್ನು ಬಿಟ್ಟುಬಿಟ್ಟನು.

11ತರುವಾಯ ಯೆಹೋವನು ನನಗೆ, “ನೀನು ಈ ಜನರ ಮುಂದೆ ಹೋಗು; ನಾನು ಇವರ ಪೂರ್ವಿಕರಿಗೆ ಪ್ರಮಾಣಮಾಡಿಕೊಟ್ಟ ದೇಶವನ್ನು ಇವರು ಸೇರಿ ಸ್ವಾಧೀನಮಾಡಿಕೊಳ್ಳಲಿ” ಎಂದು ಆಜ್ಞಾಪಿಸಿದನು.

12ಆದುದರಿಂದ ಇಸ್ರಾಯೇಲರೇ, ನೀವು ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ, ಎಲ್ಲಾ ವಿಷಯಗಳಲ್ಲಿಯೂ ಆತನು ಹೇಳುವ ಮಾರ್ಗದಲ್ಲೇ ನಡೆಯುತ್ತಾ, ಆತನನ್ನು ಪ್ರೀತಿಸುತ್ತಾ, ಸಂಪೂರ್ಣವಾದ ಹೃದಯದಿಂದಲೂ, ಮನಸ್ಸಿನಿಂದಲೂ ಸೇವೆ ಮಾಡುತ್ತಾ,

13ನಾನು ನಿಮ್ಮ ಮೇಲಿಗಾಗಿ ಈಗ ಬೋಧಿಸುವ ಆತನ ಆಜ್ಞಾವಿಧಿಗಳನ್ನು ಅನುಸರಿಸುತ್ತಾ ಇರುವುದನ್ನೇ ಹೊರತು ನಿಮ್ಮ ದೇವರಾದ ಯೆಹೋವನು

14ನಿಮ್ಮಿಂದ ಬೇರೇನೂ ಕೇಳಿಕೊಳ್ಳುತ್ತಾನೆ? ಆಲೋಚಿಸಿರಿ; ಉನ್ನತವಾದ ಆಕಾಶಮಂಡಲವೂ ಮತ್ತು ಭೂಮಿಯೂ, ಅದರಲ್ಲಿರುವ ಎಲ್ಲವೂ ನಿಮ್ಮ ದೇವರಾದ ಯೆಹೋವನವೇ.

15ಆದರೂ ಆತನು ನಿಮ್ಮ ಪೂರ್ವಿಕರಲ್ಲಿ ಇಷ್ಟವುಳ್ಳವನಾಗಿ ಅವರನ್ನು ಪ್ರೀತಿಸಿದ್ದರಿಂದ ಈಗ ನಿಮ್ಮ ಅನುಭವಕ್ಕೆ ಬಂದಂತೆ ಅವರ ತರುವಾಯ ಅವರ ಸಂತತಿಯವರಾದ ನಿಮ್ಮನ್ನೇ ಎಲ್ಲಾ ಜನಾಂಗಗಳೊಳಗಿಂದ ಆರಿಸಿಕೊಂಡನು.

16ಆದುದರಿಂದ ನೀವು ಆಜ್ಞೆಗೆ ಮಣಿಯದ ನಿಮ್ಮ ದುಷ್ಟಸ್ವಭಾವವನ್ನು ಬಿಟ್ಟು ನಿಮ್ಮ ಹೃದಯದಲ್ಲೇ ಸುನ್ನತಿಮಾಡಿಕೊಳ್ಳಿರಿ.

17ನಿಮ್ಮ ದೇವರಾದ ಯೆಹೋವನು ದೇವಾಧಿದೇವನಾಗಿಯೂ, ಕರ್ತರ ಕರ್ತನಾಗಿಯೂ ಇದ್ದಾನೆ. ಆತನು ಪರಮದೇವರೂ, ಪರಾಕ್ರಮಿಯೂ ಮತ್ತು ಭಯಂಕರನೂ ಆಗಿದ್ದಾನೆ. ಆತನು ಪಕ್ಷಪಾತ ಮಾಡುವವನಲ್ಲ ಹಾಗೂ ಲಂಚತೆಗೆದುಕೊಳ್ಳುವವನಲ್ಲ.

18ಆತನು ಅನಾಥರ ಮತ್ತು ವಿಧವೆಯರ ನ್ಯಾಯವನ್ನು ಸ್ಥಾಪಿಸುತ್ತಾನೆ. ಪರದೇಶಿಗಳಾದವರಲ್ಲಿ ಪ್ರೀತಿಯಿಟ್ಟು ಅವರಿಗೆ ಅನ್ನವಸ್ತ್ರಗಳನ್ನು ಕೊಡುತ್ತಾನೆ.

19ಐಗುಪ್ತದೇಶದಲ್ಲಿ ನೀವೇ ಪರದೇಶಿಗಳಾಗಿದ್ದದ್ದನ್ನು ಜ್ಞಾಪಿಸಿಕೊಂಡು ಪರದೇಶದವರಲ್ಲಿ ಪ್ರೀತಿಯಿಡಿರಿ.

20ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ, ಆತನನ್ನೇ ಸೇವಿಸಬೇಕು; ಆತನನ್ನು ಹೊಂದಿಕೊಂಡು, ಆತನ ಹೆಸರಿನ ಮೇಲೆಯೇ ಪ್ರಮಾಣಮಾಡಬೇಕು.

21ಆತನೊಬ್ಬನೇ ನಿಮ್ಮ ಸ್ತುತಿ ಸ್ತೋತ್ರಕ್ಕೆ ಪಾತ್ರನು; ಆತನು ನಿಮ್ಮ ದೇವರು; ನೀವು ನೋಡಿದ ಆ ಅದ್ಭುತವಾದ ಮಹತ್ಕಾರ್ಯಗಳನ್ನು ನಿಮಗೋಸ್ಕರ ನಡಿಸಿದವನು ಆತನೇ.

22ನಿಮ್ಮ ಪೂರ್ವಿಕರಲ್ಲಿ ಎಪ್ಪತ್ತು ಜನರು ಮಾತ್ರ ಐಗುಪ್ತದೇಶಕ್ಕೆ ಹೋದರು; ಈಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಆಕಾಶದ ನಕ್ಷತ್ರಗಳಷ್ಟು ಅಸಂಖ್ಯರಾಗಿರುವಂತೆ ಮಾಡಿದ್ದಾನೆ.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath