ಕ್ರಿಶ್ಚಿಯನ್ ಧರ್ಮ
ಹಿಂದೆ

ಧರ್ಮೋಪದೇಶಕಾಂಡ 11

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ಆದುದರಿಂದ ನೀವು ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ, ಆತನ ನಿಯಮಗಳನ್ನು ಕೈಕೊಂಡು, ಆತನ ಆಜ್ಞಾವಿಧಿನಿಯಮಗಳನ್ನು ಯಾವಾಗಲೂ ಅನುಸರಿಸಬೇಕು.

2ನೀವು ನಿಮ್ಮ ದೇವರಾದ ಯೆಹೋವನ ಶಿಕ್ಷಣ ಕ್ರಮವನ್ನೂ, ಮಹಿಮೆಯನ್ನೂ, ಭುಜಬಲವನ್ನೂ ಮತ್ತು ಶಿಕ್ಷಾಹಸ್ತವನ್ನೂ ಅಂದರೆ,

3ಆತನು ಐಗುಪ್ತದೇಶದಲ್ಲಿ ಫರೋಹನನ್ನೂ ಹಾಗೂ ಅವನ ದೇಶವನ್ನೂ ಶಿಕ್ಷಿಸುವುದಕ್ಕಾಗಿ ನಡಿಸಿದ ಸೂಚಕಕಾರ್ಯಗಳನ್ನೂ ಮತ್ತು ಮಹತ್ಕಾರ್ಯಗಳನ್ನೂ,

4ಐಗುಪ್ತ್ಯರ ಸೈನ್ಯ ಅಂದರೆ, ಅವರ ರಥಾಶ್ವಬಲಗಳು ನಿಮ್ಮನ್ನು ಹಿಂದಟ್ಟಿ ಬಂದಾಗ ಆತನು ಕೆಂಪು ಸಮುದ್ರದ ನೀರನ್ನು ಅವರ ಮೇಲೆ ಬರಮಾಡಿ ಸಂಪೂರ್ಣವಾಗಿ ನಾಶಮಾಡಿದ್ದನ್ನೂ,

5ನೀವು ಈ ಸ್ಥಳಕ್ಕೆ ಸೇರುವ ತನಕ ಆತನು ನಿಮಗೋಸ್ಕರ ಅರಣ್ಯದಲ್ಲಿ ಉಪಕಾರಮಾಡಿದ್ದನ್ನೂ,

6ರೂಬೇನನ ಮೊಮ್ಮಕ್ಕಳೂ, ಎಲೀಯಾಬನ ಮಕ್ಕಳೂ ಆದ ದಾತಾನ್ ಮತ್ತು ಅಬೀರಾಮರು ತಿರುಗಿ ಬಿದ್ದಾಗ ಭೂಮಿಯು ಬಾಯ್ದೆರೆದು ಅವರನ್ನೂ, ಅವರ ಮನೆಯವರನ್ನೂ, ಅವರ ಡೇರೆಗಳನ್ನೂ ಮತ್ತು ಅವರಿಗೆ ಸೇರಿದ ಎಲ್ಲಾ ಪ್ರಾಣಿಗಳನ್ನೂ ಇಸ್ರಾಯೇಲರ ನಡುವೆ ನುಂಗಿಬಿಟ್ಟದ್ದನ್ನೂ ಈಗ ಜ್ಞಾಪಕಮಾಡಿಕೊಳ್ಳಿರಿ.

7ಯೆಹೋವನು ನಡಿಸಿದ ಆ ವಿಶೇಷ ಕಾರ್ಯಗಳನ್ನು ಪ್ರತ್ಯಕ್ಷವಾಗಿ ನೋಡಿದವರಾದ ನಿಮಗೇ ಹೇಳುತ್ತಿದ್ದೇನೆ.

8ಆದುದರಿಂದಲೇ ನಾನು ಈಗ ನಿಮಗೆ ಬೋಧಿಸುವ ಈ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸಬೇಕು. ಆಗ ನೀವು ಬಲವುಳ್ಳವರಾಗಿ ಈ ನದಿಯನ್ನು ದಾಟಿ ಆಚೆಯಿರುವ

9ದೇಶವನ್ನು ಸೇರಿ ಸ್ವಾಧೀನ ಮಾಡಿಕೊಳ್ಳುವಿರಿ. ಯೆಹೋವನು ನಿಮ್ಮ ಪೂರ್ವಿಕರಿಗೂ ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣಮಾಡಿದ ಆ ದೇಶದಲ್ಲಿ ನೀವು ಬಹುಕಾಲ ಬದುಕುವಿರಿ. ಅದು ಹಾಲೂ ಮತ್ತು ಜೇನೂ ಹರಿಯುವ ದೇಶ.

10ನೀವು ಸ್ವತಂತ್ರಿಸಿಕೊಳ್ಳುವುದಕ್ಕೆ ಹೋಗುವ ದೇಶವು ಬಿಟ್ಟುಬಂದ ಐಗುಪ್ತದೇಶದ ಹಾಗಲ್ಲ. ಐಗುಪ್ತದೇಶದಲ್ಲಿ ನೀವು ಹೊಲಗದ್ದೆಗಳಲ್ಲಿ ಬೀಜ ಬಿತ್ತಿದ ಮೇಲೆ ಕಾಯಿಪಲ್ಯಗಳ ತೋಟವನ್ನು ವ್ಯವಸಾಯ ಮಾಡುವ ರೀತಿಯಲ್ಲಿ ಏತವನ್ನು ತುಳಿದು ನೀರು ಕಟ್ಟುತ್ತಿದ್ದಿರಿ.

11ಆದರೆ ನೀವು ಸ್ವಾಧೀನ ಮಾಡಿಕೊಳ್ಳುವುದಕ್ಕೆ ಹೋಗುವ ದೇಶವೋ ಹಳ್ಳದಿಣ್ಣೆಗಳ ದೇಶ; ಆಕಾಶದಿಂದ ಮಳೆಬಿದ್ದ ಪ್ರಕಾರವೇ ಅದಕ್ಕೆ ನೀರು ದೊರೆಯುವುದು.

12ಅದು ನಿಮ್ಮ ದೇವರಾದ ಯೆಹೋವನು ಪರಾಂಬರಿಸುವ ದೇಶ; ವರ್ಷದ ಪ್ರಾರಂಭ ಮೊದಲುಗೊಂಡು ಕೊನೆಯ ವರೆಗೂ ಆತನು ಅದನ್ನು ಸದಾ ಕಟಾಕ್ಷಿಸುವನು.

13ನಾನು ಈಗ ನಿಮಗೆ ಬೋಧಿಸುವ ಯೆಹೋವನ ಆಜ್ಞೆಗಳಿಗೆ ನೀವು ಲಕ್ಷ್ಯಕೊಟ್ಟು, ನಿಮ್ಮ ದೇವರಾದ ಯೆಹೋವನನ್ನು ಸಂಪೂರ್ಣ ಹೃದಯದಿಂದಲೂ, ಸಂಪೂರ್ಣ ಮನಸ್ಸಿನಿಂದಲೂ ಪ್ರೀತಿಸಿ ಆತನನ್ನು ಸೇವಿಸಿದರೆ,

14ನಿಮಗೆ ಗೋದಿ, ದ್ರಾಕ್ಷಿ, ಎಣ್ಣೇಕಾಯಿ ಇವುಗಳ ಬೆಳೆ ಚೆನ್ನಾಗಿ ಉಂಟಾಗುವಂತೆ ಆತನು ನಿಮ್ಮ ಭೂಮಿಗೆ ಬೇಕಾದ ಮುಂಗಾರು ಮತ್ತು ಹಿಂಗಾರು ಮಳೆಯನ್ನು ಸರಿಯಾಗಿ ಕೊಡುವನು.

15ಅಡವಿಯಲ್ಲಿ ದನಕರುಗಳಿಗೆ ಬೇಕಾದಷ್ಟು ಹುಲ್ಲನ್ನು ಕೊಡುವನು; ನೀವು ಆಹಾರದಿಂದ ತೃಪ್ತರಾಗಿರುವಿರಿ.

16ಆದರೆ ನೀವು ಎಚ್ಚರದಿಂದಿರಬೇಕು; ನಿಮ್ಮ ಹೃದಯವು ಮರುಳುಗೊಂಡು ಯೆಹೋವನು ಹೇಳಿದ ಮಾರ್ಗವನ್ನು ಬಿಟ್ಟು, ಇತರ ದೇವರುಗಳನ್ನು ಅವಲಂಬಿಸಿ ಪೂಜಿಸಿದರೆ,

17ಆತನು ನಿಮ್ಮ ಮೇಲೆ ಸಿಟ್ಟುಗೊಂಡು ಮಳೆಬಾರದಂತೆ ಆಕಾಶವನ್ನು ಮುಚ್ಚಿಬಿಟ್ಟಾನು; ಆಗ ಭೂಮಿಯಲ್ಲಿ ಬೆಳೆಯಾಗದೆ ಯೆಹೋವನು ನಿಮಗೆ ಕೊಡುವ ಆ ಉತ್ತಮ ದೇಶದಲ್ಲಿ ನೀವು ಉಳಿಯದೆ ಬೇಗ ನಾಶವಾಗಿ ಹೋಗುವಿರಿ.

18ಆದುದರಿಂದ ನೀವು ಈ ನನ್ನ ಮಾತುಗಳನ್ನು ನಿಮ್ಮ ಹೃದಯದಲ್ಲಿಯೂ, ಮನಸ್ಸಿನಲ್ಲಿಯೂ ಇಟ್ಟುಕೊಳ್ಳಬೇಕು. ಇವುಗಳನ್ನು ಜ್ಞಾಪಕಾರ್ಥವಾಗಿ ಕೈಗೆ ಕಟ್ಟಿಕೊಳ್ಳಬೇಕು. ಇವು ನಿಮ್ಮ ಹಣೆಗೆ ಕಟ್ಟಿಕೊಳ್ಳುವ ಜ್ಞಾಪಕದ ಪಟ್ಟಿಯಂತಿರಬೇಕು.

19ನೀವು ಮನೆಯಲ್ಲಿರುವಾಗಲೂ, ಪ್ರಯಾಣದಲ್ಲಿರುವಾಗಲೂ, ಮಲಗುವಾಗಲೂ ಮತ್ತು ಏಳುವಾಗಲೂ ಇವುಗಳ ವಿಷಯದಲ್ಲಿ ಮಾತನಾಡುತ್ತಾ ನಿಮ್ಮ ಮಕ್ಕಳಿಗೆ ಇವುಗಳನ್ನು ಅಭ್ಯಾಸಮಾಡಿಸಬೇಕು.

20ನಿಮ್ಮ ಮನೆ ಬಾಗಿಲಿನ ನಿಲುವುಪಟ್ಟಿಗಳಲ್ಲಿಯೂ ಮತ್ತು ಹೆಬ್ಬಾಗಿಲುಗಳ ಮೇಲೆಯೂ ಇವುಗಳನ್ನು ಬರೆಯಬೇಕು.

21ಹೀಗೆ ಮಾಡಿದರೆ ಭೂಮಿಯ ಮೇಲೆ ಆಕಾಶವು ಎಷ್ಟು ಕಾಲ ಇರುವುದೋ, ಅಷ್ಟು ಕಾಲದ ವರೆಗೆ ನೀವೂ ಮತ್ತು ನಿಮ್ಮ ಸಂತತಿಯವರೂ ಯೆಹೋವನು ನಿಮ್ಮ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದ ಆ ದೇಶದಲ್ಲಿ ಬಾಳುವಿರಿ.

22ನಾನು ನಿಮಗೆ ಬೋಧಿಸುವ ಈ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸುವವರಾಗಿ, ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ, ಎಲ್ಲಾ ವಿಷಯಗಳಲ್ಲಿಯೂ ಆತನು ಹೇಳುವ ಮಾರ್ಗದಲ್ಲೇ ನಡೆದು, ಆತನನ್ನೇ ಹೊಂದಿಕೊಂಡಿರಬೇಕು.

23ಆಗ ಆತನು ಆ ಜನಾಂಗಗಳನ್ನೆಲ್ಲಾ ನಿಮ್ಮ ಎದುರಿನಿಂದ ಹೊರಡಿಸುವನು. ನಿಮಗಿಂತಲೂ ಮಹಾಬಲಿಷ್ಠ ಜನಾಂಗಗಳ ದೇಶವನ್ನು ನೀವು ಸ್ವಾಧೀನ ಮಾಡಿಕೊಳ್ಳುವಿರಿ.

24ನೀವು ಹೆಜ್ಜೆಯಿಡುವ ಎಲ್ಲಾ ಸ್ಥಳಗಳು ನಿಮ್ಮದಾಗುವವು. ಅರಣ್ಯ ಮೊದಲುಗೊಂಡು ಲೆಬನೋನ್ ಪರ್ವತದ ವರೆಗೂ ಮತ್ತು ಯೂಫ್ರೆಟಿಸ್ ನದಿಯಿಂದ ಪಶ್ಚಿಮ ಸಮುದ್ರದವರೆಗೂ ನಿಮ್ಮ ಸೀಮೆ ವ್ಯಾಪಿಸುವುದು.

25ಯಾರೂ ನಿಮ್ಮ ಮುಂದೆ ನಿಲ್ಲುವುದಿಲ್ಲ. ತಾನು ನಿಮಗೆ ಹೇಳಿದಂತೆ ನೀವು ಕಾಲಿಡುವ ಎಲ್ಲಾ ಪ್ರದೇಶಗಳ ಜನಗಳಿಗೂ ನಿಮ್ಮಿಂದ ದಿಗಿಲೂ ಮತ್ತು ಹೆದರಿಕೆಯೂ ಉಂಟಾಗುವಂತೆ ನಿಮ್ಮ ದೇವರಾದ ಯೆಹೋವನು ಮಾಡುವನು.

26ಇಗೋ ನೋಡಿರಿ, ಈ ಹೊತ್ತು ನಾನು ಆಶೀರ್ವಾದವನ್ನೂ ಮತ್ತು ಶಾಪವನ್ನೂ ನಿಮ್ಮ ಮುಂದೆ ಇಡುತ್ತಾ ಇದ್ದೇನೆ.

27ನಾನು ಈಗ ನಿಮಗೆ ಬೋಧಿಸುವ ನಿಮ್ಮ ದೇವರಾದ ಯೆಹೋವನ ಆಜ್ಞೆಗಳಿಗೆ ನೀವು ವಿಧೇಯರಾಗಿ ನಡೆದರೆ ಆಶೀರ್ವಾದವೂ,

28ಈ ಆಜ್ಞೆಗಳಿಗೆ ಅವಿಧೇಯರಾಗಿ, ನಾನು ಈಗ ಬೋಧಿಸುವ ಮಾರ್ಗವನ್ನು ಬಿಟ್ಟು ನಿಮಗೆ ಗೊತ್ತಿಲ್ಲದ ಇತರ ದೇವರುಗಳನ್ನು ಅವಲಂಬಿಸಿದರೆ ಶಾಪವೂ ನಿಮಗುಂಟಾಗುವವು.

29ನೀವು ಸ್ವಾಧೀನ ಮಾಡಿಕೊಳ್ಳುವುದಕ್ಕೆ ಹೋಗುವ ಆ ದೇಶಕ್ಕೆ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಸೇರಿಸಿದ ನಂತರ ನೀವು ಗೆರಿಜ್ಜೀಮ್ ಬೆಟ್ಟದ ಮೇಲೆ ಆಶೀರ್ವಾದವನ್ನೂ ಮತ್ತು ಏಬಾಲ್ ಬೆಟ್ಟದ ಮೇಲೆ ಶಾಪವನ್ನೂ ಪ್ರಕಟಿಸಬೇಕು.

30ಆ ಬೆಟ್ಟಗಳು ಯೊರ್ದನ್ ನದಿಯ ಆಚೆ, ಪಡುವಣ ದಾರಿಯ ಪಶ್ಚಿಮದಲ್ಲಿ ಕಾನಾನ್ಯರು ವಾಸಿಸುವ ಅರಾಬಾ ಪ್ರದೇಶದಲ್ಲಿ, ಗಿಲ್ಗಾಲಿಗೆ ಎದುರಾಗಿ ಮೋರೆ ಎಂಬ ವೃಕ್ಷದ ಬಳಿಯಲ್ಲಿ ಇವೆ.

31ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ಸ್ವಾಧೀನ ಮಾಡಿಕೊಳ್ಳುವುದಕ್ಕೆ ನೀವು ಯೊರ್ದನ್ ನದಿಯನ್ನು ದಾಟಬೇಕು. ನೀವು ಆ ದೇಶವನ್ನು ಸ್ವಾಧೀನಮಾಡಿಕೊಂಡು, ಅದರಲ್ಲಿ ವಾಸಮಾಡುವಾಗ

32ನಾನು ಈಗ ನಿಮಗೆ ತಿಳಿಸುವ ಎಲ್ಲಾ ಆಜ್ಞಾವಿಧಿಗಳನ್ನು ಅನುರಿಸಿ ನಡೆಯಲೇಬೇಕು.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath