ಕ್ರಿಶ್ಚಿಯನ್ ಧರ್ಮ
ಹಿಂದೆ

ಧರ್ಮೋಪದೇಶಕಾಂಡ 15

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ಪ್ರತಿ ಏಳನೆಯ ವರ್ಷದ ಕೊನೆಯಲ್ಲಿ ಸಾಲವನ್ನು ಬಿಟ್ಟುಬಿಡಬೇಕು.

2ಹೇಗೆಂದರೆ ಯೆಹೋವನು ನೇಮಿಸಿದ ಬಿಡುಗಡೆಯ ವರ್ಷವು ಬಂತೆಂದು ಪ್ರಕಟವಾದುದರಿಂದ ಸಾಲಕೊಟ್ಟವನು ತೆಗೆದುಕೊಂಡವನಿಗೆ ಆ ಸಾಲವನ್ನು ಬಿಟ್ಟುಬಿಡಬೇಕು. ಅವನು ಸ್ವದೇಶದವನಿಗೆ ಕೊಟ್ಟ ಸಾಲವನ್ನು ಕೇಳಬಾರದು.

3ಅನ್ಯದೇಶದವರಿಗೆ ಕೊಟ್ಟ ಸಾಲವನ್ನು ಕೇಳಿ ತೆಗೆದುಕೊಳ್ಳಬಹುದೇ ಹೊರತು ಸ್ವದೇಶದವನಿಗೆ ಕೊಟ್ಟಿರುವುನ್ನು ಕೇಳಬಾರದು.

4ಆದರೆ ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಟ್ಟು, ನಾನು ಈಗ ನಿಮಗೆ ಬೋಧಿಸುವ ಈ ಧರ್ಮೋಪದೇಶವನ್ನೆಲ್ಲಾ ಅನುಸರಿಸಿದರೆ,

5ಯೆಹೋವನು ತಾನು ನಿಮಗೆ ಸ್ವದೇಶವಾಗಿ ಕೊಡುವ ದೇಶದಲ್ಲಿ ನೀವು ಅಭಿವೃದ್ಧಿ ಹೊಂದುವುದರಿಂದ ನಿಮ್ಮಲ್ಲಿ ಬಡವರೇ ಇರುವುದಿಲ್ಲ.

6ನಿಮ್ಮ ದೇವರಾದ ಯೆಹೋವನು ವಾಗ್ದಾನಮಾಡಿದಂತೆ ನಿಮ್ಮನ್ನು ಅಭಿವೃದ್ಧಿಪಡಿಸುವನು. ನೀವು ಅನೇಕ ಜನಗಳಿಗೆ ಸಾಲಕೊಡುವಿರೇ ಹೊರತು ಅವರಿಂದ ಸಾಲ ತೆಗೆದುಕೊಳ್ಳುವುದಿಲ್ಲ. ನೀವು ಅನೇಕ ಜನಾಂಗಗಳ ಮೇಲೆ ದೊರೆತನ ಮಾಡುವಿರೇ ಹೊರತು ಅವರು ನಿಮ್ಮ ಮೇಲೆ ದೊರೆತನ ಮಾಡುವುದಿಲ್ಲ.

7ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದ ಯಾವ ಊರಿನಲ್ಲಾದರೂ ಸ್ವದೇಶದವನಾದ ಬಡವನು ಇದ್ದರೆ, ನೀವು ಆ ಬಡ ಸಹೋದರನಿಗೆ ಮನಸ್ಸನ್ನು ಕಠಿಣಮಾಡಿಕೊಂಡು ಅವನಿಗೆ ಸಹಾಯಮಾಡದೆ ಇರಬಾರದು.

8ನೀವು ಕೈತೆರೆದು ಅವನಿಗೆ ಅವಶ್ಯವಾಗಿ ಬೇಕಾದದ್ದನ್ನು ಕೊಟ್ಟು ಸಹಾಯ ಮಾಡಬೇಕು.

9ನೀವು “ಬಿಡುಗಡೆಯುಂಟಾಗುವ ಏಳನೆಯ ವರ್ಷವು ಸಮೀಪವಾಯಿತು” ಎಂಬ ನೀಚವಾದ ಆಲೋಚನೆಯನ್ನು ಮಾಡಿ, ಆ ಬಡ ಸಹೋದರನಿಗೆ ಏನೂ ಕೊಡದೆ ಇರಬಾರದು, ಎಚ್ಚರಿಕೆ! ಹಾಗೆ ಧಿಕ್ಕರಿಸಿದರೆ ಅವನು ಒಂದು ವೇಳೆ ನಿಮ್ಮ ವಿಷಯದಲ್ಲಿ ಯೆಹೋವನಿಗೆ ಮೊರೆಯಿಟ್ಟಾನು, ನೀವು ದೋಷಿಗಳಾಗಿ ಕಂಡುಬರುವಿರಿ.

10ನೀವು ಕೊಡುವಾಗ ಬೇಸರಗೊಳ್ಳದೆ ಉದಾರವಾದ ಮನಸ್ಸಿನಿಂದಲೇ ಕೊಡಬೇಕು. ಇದರಿಂದ ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಕೆಲಸಗಳಲ್ಲಿಯೂ ಮತ್ತು ಪ್ರಯತ್ನಗಳಲ್ಲಿಯೂ ನಿಮ್ಮನ್ನು ಅಭಿವೃದ್ಧಿಪಡಿಸುವನು.

11ದೇಶದಲ್ಲಿ ಯಾವಾಗಲೂ ಬಡವರು ಇರುವರಷ್ಟೆ; ಆದುದರಿಂದ, “ನೀವು ಸ್ವದೇಶದವರಾದ ನಿಮ್ಮ ಸಹೋದರರಿಗೂ, ಬಡವರಿಗೂ ಮತ್ತು ಗತಿಯಿಲ್ಲದವರಿಗೂ ಕೈನೀಡಿ ಸಹಾಯಮಾಡಬೇಕು” ಎಂದು ನಾನು ನಿಮಗೆ ಆಜ್ಞಾಪಿಸಿದ್ದೇನೆ.

12ಸ್ವದೇಶದವರೊಳಗೆ ಯಾವ ಇಬ್ರಿಯ ಪುರುಷನಾಗಲಿ, ಸ್ತ್ರೀಯಾಗಲಿ ನಿಮಗೆ ದಾಸರಾಗಿರುವುದಕ್ಕಾಗಿ ಮಾರಲ್ಪಡುವ ಪಕ್ಷಕ್ಕೆ, ಅಂಥವರು ಆರು ವರ್ಷಗಳವರೆಗೂ ನಿಮ್ಮ ಸೇವೆ ಮಾಡಲಿ; ಏಳನೆಯ ವರ್ಷದಲ್ಲಿ ನೀವು ಅವರನ್ನು ಬಿಡುಗಡೆ ಮಾಡಬೇಕು.

13ಬಿಡುಗಡೆ ಮಾಡುವಾಗ ಬರಿಗೈಯಲ್ಲಿ ಕಳುಹಿಸಿಬಿಡಬಾರದು.

14ನಿಮ್ಮ ದೇವರಾದ ಯೆಹೋವನು ನಿಮಗೆ ಅನುಗ್ರಹಿಸಿರುವ ಮೇರೆಗೆ ನಿಮಗಿರುವ ಹಿಂಡು, ದವಸ, ದ್ರಾಕ್ಷಿ ಆಲೆ ಮತ್ತು ಕಣ ಇವುಗಳಲ್ಲಿ ಉದಾರವಾಗಿ ಕೊಟ್ಟು ಕಳುಹಿಸಿಬಿಡಬೇಕು.

15ಐಗುಪ್ತದೇಶದಲ್ಲಿ ನೀವೇ ದಾಸರಾಗಿರಲು ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಬಿಡುಗಡೆಮಾಡಿದನು ಎಂಬುದನ್ನು ಜ್ಞಾಪಕಮಾಡಿಕೊಳ್ಳಿರಿ. ಇದಕ್ಕೋಸ್ಕರವಾಗಿಯೇ ನಾನು ಈ ಆಜ್ಞೆಯನ್ನು ನಿಮಗೆ ಈಗ ಕೊಟ್ಟಿದ್ದೇನೆ.

16ಒಂದು ವೇಳೆ ಆ ದಾಸನು ನಿಮ್ಮ ಬಳಿಯಲ್ಲಿ ಸುಖವಾಗಿದ್ದು, ನಿಮ್ಮನ್ನೂ ಮತ್ತು ನಿಮ್ಮ ಮನೆಯವರನ್ನೂ ಪ್ರೀತಿಸಿ, ತಾನು ಬಿಡುಗಡೆಯಾಗಿ ಹೋಗುವುದಿಲ್ಲ ಎಂದು ಹೇಳುವ ಪಕ್ಷಕ್ಕೆ,

17ನೀವು ದಬ್ಬಳದಿಂದ ಅವನ ಕಿವಿಯನ್ನು ಚುಚ್ಚಿ, ಕದಕ್ಕೆ ಸಿಕ್ಕಿಸಬೇಕು. ಆ ದಿನದಿಂದ ಅವನು ನಿಮಗೆ ಶಾಶ್ವತ ದಾಸನಾಗಿರಬೇಕು. ಅದೇ ರೀತಿಯಾಗಿ ದಾಸಿಯರ ವಿಷಯದಲ್ಲಿಯೂ ನಡೆದುಕೊಳ್ಳಬೇಕು.

18ದಾಸನನ್ನು ಬಿಡುಗಡೆಮಾಡುವುದು ಕಷ್ಟವೆಂದು ಹೇಳಿಕೊಳ್ಳಬಾರದು. ಅವನು ಆರು ವರ್ಷಗಳು ನಿಮ್ಮ ದಾಸನಾಗಿದ್ದು ಕೂಲಿಯಾಳಿಗಿಂತ ಎರಡರಷ್ಟು ಪ್ರಯೋಜನವನ್ನು ಉಂಟುಮಾಡಿದನಲ್ಲಾ. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಪ್ರಯತ್ನಗಳನ್ನು ಸಫಲಗೊಳಿಸುವನು.

19ದನಗಳಲ್ಲಿಯೂ ಮತ್ತು ಆಡುಕುರಿಗಳಲ್ಲಿಯೂ ಚೊಚ್ಚಲಾದ ಗಂಡನ್ನು ನಿಮ್ಮ ದೇವರಾದ ಯೆಹೋವನಿಗಾಗಿ ಪ್ರತಿಷ್ಠಿಸಬೇಕು. ಚೊಚ್ಚಲಾದ ಹೋರಿಯಿಂದ ಕೆಲಸಮಾಡಿಸಬಾರದು; ಚೊಚ್ಚಲಾದ ಕುರಿಯ ಉಣ್ಣೆಯನ್ನು ಕತ್ತರಿಸಬಾರದು.

20ಪ್ರತಿ ವರ್ಷದಲ್ಲಿ ನೀವೂ ಮತ್ತು ನಿಮ್ಮ ಮನೆಯವರೂ ಅವುಗಳನ್ನು ನಿಮ್ಮ ದೇವರಾದ ಯೆಹೋವನು ಆರಿಸಿಕೊಳ್ಳುವ ಸ್ಥಳದಲ್ಲಿ ಆತನ ಸನ್ನಿಧಿಯಲ್ಲೇ ಕೊಯಿದು ತಿನ್ನಬೇಕು.

21ಅದು ಕುಂಟಾಗಿ, ಕುರುಡಾಗಿ ಇಲ್ಲವೆ ಬೇರೆ ವಿಧದಿಂದ ವಿರೂಪವಾಗಿದ್ದರೆ ಅದನ್ನು ನಿಮ್ಮ ದೇವರಾದ ಯೆಹೋವನಿಗೆ ಸಮರ್ಪಿಸಬಾರದು.

22ಅದನ್ನು ನಿಮ್ಮ ಊರಲ್ಲೇ ತಿನ್ನಬೇಕು. ಶುದ್ಧರೂ ಮತ್ತು ಅಶುದ್ಧರೂ ಜಿಂಕೆ ದುಪ್ಪಿಗಳ ಮಾಂಸವನ್ನು ತಿನ್ನುವ ಪ್ರಕಾರ ಇವುಗಳನ್ನೂ ತಿನ್ನಬಹುದು.

23ನೀವು ರಕ್ತವನ್ನು ಮಾತ್ರ ಊಟಮಾಡಬಾರದು; ಅದನ್ನು ನೀರಿನಂತೆ ಭೂಮಿಯ ಮೇಲೆ ಸುರಿದುಬಿಡಬೇಕು.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath