ಕ್ರಿಶ್ಚಿಯನ್ ಧರ್ಮ
ಹಿಂದೆ

ಧರ್ಮೋಪದೇಶಕಾಂಡ 16

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ನೀವು ಚೈತ್ರ ಮಾಸದಲ್ಲಿ ಪಸ್ಕಹಬ್ಬವನ್ನು ನಿಮ್ಮ ದೇವರಾದ ಯೆಹೋವನಿಗೋಸ್ಕರ ಆಚರಿಸಬೇಕು. ಆ ಮಾಸದ ಒಂದು ರಾತ್ರಿ ನಿಮ್ಮ ದೇವರಾದ ಯೆಹೋವನು ನಿಮ್ಮ ಪೂರ್ವಜರನ್ನು ಐಗುಪ್ತದೇಶದಿಂದ ಬಿಡಿಸಿದ ನೆನಪಿಗಾಗಿ ಪಸ್ಕಹಬ್ಬವನ್ನು ಆಚರಿಸಬೇಕು.

2ನೀವು ಆಡು ಕುರಿಗಳಲ್ಲಾಗಲಿ, ದನಗಳಲ್ಲಾಗಲಿ ಪಸ್ಕದ ಪಶುವನ್ನು ಯೆಹೋವನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆರಿಸಿಕೊಳ್ಳುವ ಸ್ಥಳದಲ್ಲೇ ಆತನಿಗಾಗಿ ವಧಿಸಬೇಕು.

3ಅದರೊಂದಿಗೆ ಹುಳಿಹಾಕಿದ ರೊಟ್ಟಿಯನ್ನು ತಿನ್ನಬಾರದು; ಯಾಕೆಂದರೆ ನೀವು (ರೊಟ್ಟಿಗೆ ಹುಳಿಹಾಕುವುದಕ್ಕೆ ಅವಕಾಶವಿಲ್ಲದೆ) ಅವಸರದಿಂದ ಐಗುಪ್ತದೇಶವನ್ನು ಬಿಟ್ಟು ಬಂದಿರಿ. ನಿಮಗೆ ಬಿಡುಗಡೆಯಾದ ಆ ದಿನವು ನಿಮ್ಮ ಜೀವಮಾನದಲ್ಲೆಲ್ಲಾ ನೆನಪಿನಲ್ಲಿಟ್ಟುಕೊಳ್ಳುವಂತೆ ನೀವು ಕಷ್ಟವನ್ನು ಸೂಚಿಸುವ ಹುಳಿಯಿಲ್ಲದ ರೊಟ್ಟಿಗಳನ್ನು ಏಳು ದಿನಗಳ ವರೆಗೂ ತಿನ್ನಬೇಕು.

4ಆ ಏಳು ದಿನಗಳು ನಿಮ್ಮ ದೇಶದಲ್ಲೆಲ್ಲಾ ಹುಳಿಬೆರೆತ ಯಾವ ಪದಾರ್ಥವೂ ನಿಮ್ಮ ಬಳಿಯಲ್ಲಿ ಇರಲೇಬಾರದು. ಮೊದಲನೆಯ ದಿನದ ಸಂಜೆಯಲ್ಲಿ ನೀವು ವಧಿಸಿದ ಪಶುಮಾಂಸದಲ್ಲಿ ಸ್ವಲ್ಪವನ್ನೂ ಮರುದಿನದ ವರೆಗೆ ಉಳಿಸಬಾರದು.

5ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ಯಾವ ಊರಲ್ಲಿಯಾದರೂ ಪಸ್ಕದ ಪಶುವನ್ನು ವಧಿಸದೆ,

6ಆತನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆರಿಸಿಕೊಳ್ಳುವ ಸ್ಥಳದಲ್ಲೇ, ನೀವು ಐಗುಪ್ತದೇಶದಿಂದ ಹೊರಟುಬಂದ ಸಮಯ, ಅಂದರೆ ಸಾಯಂಕಾಲದಲ್ಲಿ ಪಸ್ಕದ ಯಜ್ಞವನ್ನು ಸಮರ್ಪಿಸಬೇಕು.

7ಆ ಸ್ಥಳದಲ್ಲಿಯೇ ನೀವು ಅದನ್ನು ಅಡಿಗೆಮಾಡಿ ತಿನ್ನಬೇಕು. ಮರುದಿನ ನಿಮ್ಮ ನಿಮ್ಮ ಮನೆಗಳಿಗೆ ನೀವು ಹೊರಟು ಹೋಗಬಹುದು.

8ಆರು ದಿನ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು; ಏಳನೆಯ ದಿನದಲ್ಲಿ ನಿಮ್ಮ ದೇವರಾದ ಯೆಹೋವನಿಗಾಗಿ ಸಭೆ ಸೇರಿಬರಬೇಕು; ಆ ದಿನದಲ್ಲಿ ಯಾವ ಕೆಲಸವ ಮಾಡಬಾರದು.

9ಬೆಳೆ ಕೊಯ್ಯುವುದಕ್ಕೆ ಕುಡುಗೋಲು ಹಾಕುವ ಕಾಲ ಮೊದಲುಗೊಂಡು ಏಳು ವಾರಗಳನ್ನು ಎಣಿಸಿ,

10ಆ ಏಳು ವಾರಗಳಾದ ನಂತರ ಪಂಚಾಶತ್ತಮ ದಿನದ ಹಬ್ಬವನ್ನು ಆಚರಿಸಬೇಕು. ನಿಮ್ಮ ದೇವರಾದ ಯೆಹೋವನು ನಿಮಗೆ ಅನುಗ್ರಹಿಸಿದ ಬೆಳೆಗೆ ತಕ್ಕಷ್ಟು ಕಾಣಿಕೆಯನ್ನು ನೀವು ಆಗ ಆತನಿಗೋಸ್ಕರ ತರಬೇಕು.

11ಮತ್ತು ಆತನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆರಿಸಿಕೊಳ್ಳುವ ಸ್ಥಳದಲ್ಲಿ ನೀವೂ ನಿಮ್ಮ ಗಂಡು ಹೆಣ್ಣು ಮಕ್ಕಳೂ, ದಾಸ ದಾಸಿಯರೂ, ನಿಮ್ಮ ಊರಲ್ಲಿರುವ ಲೇವಿಯರೂ, ಪರದೇಶದವರೂ, ಅನಾಥರು ಮತ್ತು ವಿಧವೆಯರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂಭ್ರಮಿಸಬೇಕು.

12ಐಗುಪ್ತದೇಶದಲ್ಲಿ ದಾಸರಾಗಿದ್ದೆವೆಂಬುದನ್ನು ನೀವು ನೆನಪಿಗೆ ತಂದುಕೊಂಡು ಈ ವಿಧಿಗಳನ್ನು ಅನುಸರಿಸಿ ನಡೆಯಬೇಕು.

13ನೀವು ಕಣದ ಕೆಲಸವನ್ನೂ, ದ್ರಾಕ್ಷಿ ಆಲೆಯ ಕೆಲಸವನ್ನೂ ಪೂರೈಸಿ, ಬೆಳೆಯನ್ನು ಮನೆಗೆ ತಂದಾಗ ಏಳು ದಿನಗಳವರೆಗೂ ಪರ್ಣಶಾಲೆಗಳ ಹಬ್ಬವನ್ನು ಆಚರಿಸಬೇಕು.

14ಅದರಲ್ಲಿ ನೀವೂ, ನಿಮ್ಮ ಗಂಡು ಹೆಣ್ಣು ಮಕ್ಕಳೂ, ದಾಸ ಮತ್ತು ದಾಸಿಯರೂ, ನಿಮ್ಮ ಊರಲ್ಲಿರುವ ಲೇವಿಯರೂ, ಪರದೇಶದವರೂ, ಅನಾಥರು ಮತ್ತು ವಿಧವೆಯರೂ ಸಂಭ್ರಮಿಸಬೇಕು.

15ನಿಮ್ಮ ದೇವರಾದ ಯೆಹೋವನು ಆರಿಸಿಕೊಳ್ಳುವ ಸ್ಥಳದಲ್ಲಿ ನೀವು ಏಳು ದಿನವೂ ಆ ಜಾತ್ರೆಯನ್ನು ಆಚರಿಸಬೇಕು. ನಿಮ್ಮ ವ್ಯವಸಾಯವನ್ನೂ ಮತ್ತು ಬೇರೆ ಎಲ್ಲಾ ಕೆಲಸಗಳನ್ನೂ ಆತನು ಸಫಲ ಮಾಡಿದ್ದರಿಂದ ನೀವು ಬಹಳ ಆನಂದದಿಂದಿರಬೇಕು.

16ಹುಳಿಯಿಲ್ಲದ ರೊಟ್ಟಿಗಳ ಹಬ್ಬದಲ್ಲಿಯೂ, ಪಂಚಾಶತ್ತಮ ದಿನದ ಹಬ್ಬದಲ್ಲಿಯೂ ಮತ್ತು ಪರ್ಣಶಾಲೆಗಳ ಹಬ್ಬದಲ್ಲಿಯೂ ಅಂತು ವರ್ಷಕ್ಕೆ ಮೂರಾವರ್ತಿ ನಿಮ್ಮಲ್ಲಿರುವ ಗಂಡಸರೆಲ್ಲರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಆತನು ಆರಿಸಿಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು. ಒಬ್ಬರೂ ಕೈಯಲ್ಲಿ ಕಾಣಿಕೆಯಿಲ್ಲದೆ ಆತನ ಸನ್ನಿಧಿಗೆ ಬರಬಾರದು.

17ಪ್ರತಿಯೊಬ್ಬನು ತನಗೆ ಯೆಹೋವನು ಅನುಗ್ರಹಿಸಿದ ಆದಾಯದ ಮೇರೆಗೆ ತನ್ನ ಶಕ್ತ್ಯಾನುಸಾರ ಕೊಡಬೇಕು.

18ಪ್ರತಿಯೊಂದು ಕುಲವು ಇರುವ ಪ್ರದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ಎಲ್ಲಾ ಊರುಗಳಲ್ಲಿಯೂ, ನ್ಯಾಯಾಧಿಪತಿಗಳನ್ನೂ ಮತ್ತು ಅಧಿಕಾರಿಗಳನ್ನೂ ನೀವು ನೇಮಿಸಬೇಕು. ಅವರು ಜನರಿಗೋಸ್ಕರ ನ್ಯಾಯವನ್ನು ವಿಚಾರಿಸಿ ಸರಿಯಾದ ತೀರ್ಪುಕೊಡಬೇಕು.

19ನೀವು ನ್ಯಾಯವನ್ನು ಬಿಟ್ಟು ತೀರ್ಮಾನ ಮಾಡಬಾರದು, ಪಕ್ಷಪಾತಮಾಡಬಾರದು, ಲಂಚತೆಗೆದುಕೊಳ್ಳಬಾರದು. ಲಂಚವು ಬುದ್ಧಿವಂತರನ್ನೂ ಕುರುಡರಂತೆ ಮಾಡುತ್ತದೆ; ನಿರಪರಾಧಿಗಳ ನ್ಯಾಯವನ್ನು ಕೆಡಿಸುತ್ತದೆ.

20ನೀವು ಕೇವಲ ನ್ಯಾಯವನ್ನೇ ಅನುಸರಿಸಬೇಕು. ಹಾಗೆ ನಡೆದರೆ ನೀವು ಬದುಕಿಕೊಂಡು ನಿಮ್ಮ ದೇವರಾದ ಯೆಹೋವನು ಕೊಡುವ ದೇಶವನ್ನು ಸ್ವಾಧೀನಮಾಡಿಕೊಳ್ಳುವಿರಿ.

21ನಿಮ್ಮ ದೇವರಾದ ಯೆಹೋವನಿಗೋಸ್ಕರ ನೀವು ಕಟ್ಟಿಸಿಕೊಳ್ಳುವ ಯಜ್ಞವೇದಿಯ ಬಳಿಯಲ್ಲಿ, ಅಶೇರ ವಿಗ್ರಹಕ್ಕೆ ಸಂಬಂಧಪಟ್ಟ ಯಾವ ಮರದ ಸ್ತಂಭವನ್ನೂ ನೆಡಬಾರದು.

22ಪವಿತ್ರ ಕಲ್ಲಿನ ಕಂಬವನ್ನೂ ನಿಲ್ಲಿಸಬಾರದು; ಇದು ನಿಮ್ಮ ದೇವರಾದ ಯೆಹೋವನಿಗೆ ವಿರುದ್ಧವಾದದ್ದು.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath