ಕ್ರಿಶ್ಚಿಯನ್ ಧರ್ಮ
ಹಿಂದೆ

ಧರ್ಮೋಪದೇಶಕಾಂಡ 27

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ಮೋಶೆ ಮತ್ತು ಇಸ್ರಾಯೇಲರ ಹಿರಿಯರ ಸಹಿತ ಜನರಿಗೆ, “ನಾನು ಈಗ ನಿಮಗೆ ಆಜ್ಞಾಪಿಸಿದ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸಬೇಕು.

2ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ಪ್ರವೇಶಿಸುವುದಕ್ಕೆ ನೀವು ಯೊರ್ದನ್ ನದಿಯನ್ನು ದಾಟುವಾಗ ನೀವು ದೊಡ್ಡ ಕಲ್ಲುಗಳನ್ನು ನಿಲ್ಲಿಸಿ, ಅವುಗಳಿಗೆ ಗಿಲಾವು ಮಾಡಿಸಬೇಕು.

3ನಿಮ್ಮ ಪೂರ್ವಿಕರ ದೇವರಾದ ಯೆಹೋವನು ತಾನು ವಾಗ್ದಾನಮಾಡಿದಂತೆ ನಿಮಗೆ ಕೊಡುವ ಹಾಲೂ ಮತ್ತು ಜೇನೂ ಹರಿಯುವ ದೇಶವನ್ನು ಪ್ರವೇಶಿಸುವುದಕ್ಕೆ ನೀವು ಯೊರ್ದನ್ ನದಿಯನ್ನು ದಾಟುವಾಗ ಈ ಧರ್ಮಶಾಸ್ತ್ರದ ವಾಕ್ಯಗಳನ್ನೆಲ್ಲಾ ಆ ದೊಡ್ಡ ಕಲ್ಲುಗಳ ಮೇಲೆ ಬರೆಯಿಸಬೇಕು.

4ನೀವು ಯೊರ್ದನ್ ನದಿಯನ್ನು ದಾಟಿದ ನಂತರ ನಾನು ಈಗ ಆಜ್ಞಾಪಿಸಿದ ಕಲ್ಲುಗಳನ್ನು ಏಬಾಲ್ ಬೆಟ್ಟದ ಮೇಲೆ ನಿಲ್ಲಿಸಿ ಅವುಗಳಿಗೆ ಗಿಲಾವು ಮಾಡಿಸಬೇಕು.

5“ಅಲ್ಲಿ ನಿಮ್ಮ ದೇವರಾದ ಯೆಹೋವನಿಗೋಸ್ಕರ ನೀವು ಕಲ್ಲುಗಳಿಂದ ಯಜ್ಞವೇದಿಯನ್ನು ಕಟ್ಟಿಸಬೇಕು.

6ಉಳಿ ಮುಂತಾದದ್ದನ್ನು ಉಪಯೋಗಿಸದೆ ಹುಟ್ಟುಕಲ್ಲುಗಳಿಂದಲೇ ನಿಮ್ಮ ದೇವರಾದ ಯೆಹೋವನ ಯಜ್ಞವೇದಿಯನ್ನು ಕಟ್ಟಿಸಬೇಕು.

7ಅಲ್ಲಿ ಸರ್ವಾಂಗಹೋಮಗಳನ್ನೂ ಮತ್ತು ಸಮಾಧಾನಯಜ್ಞಗಳನ್ನೂ ಸಮರ್ಪಿಸಿ, ಸಹಭೋಜನಮಾಡಿ, ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂಭ್ರಮಿಸಬೇಕು.

8ನೀವು ಆ ಕಲ್ಲುಗಳ ಮೇಲೆ ಈ ಧರ್ಮಶಾಸ್ತ್ರದ ವಾಕ್ಯಗಳನ್ನೆಲ್ಲಾ ಸ್ಪಷ್ಟವಾಗಿ ಬರೆಯಬೇಕು” ಎಂದು ಆಜ್ಞಾಪಿಸಿದನು.

9ಮೋಶೆ, ಯಾಜಕರು ಮತ್ತು ಲೇವಿಯರೊಡನೆ ಇಸ್ರಾಯೇಲರೆಲ್ಲರಿಗೆ, “ಇಸ್ರಾಯೇಲರೇ, ನಿಶ್ಯಬ್ದವಾಗಿದ್ದು ಕೇಳಿರಿ, ನೀವು ಈಗ ನಿಮ್ಮ ದೇವರಾದ ಯೆಹೋವನ ಜನರಾಗಿದ್ದೀರಷ್ಟೆ.

10ಆದುದರಿಂದ ಈಗ ನಾನು ನಿಮಗೆ ಹೇಳುವ ನಿಮ್ಮ ದೇವರಾದ ಯೆಹೋವನ ಮಾತುಗಳಿಗೆ ಕಿವಿಗೊಟ್ಟು ಆತನ ಆಜ್ಞಾವಿಧಿಗಳನ್ನು ಅನುಸರಿಸಬೇಕು” ಎಂದು ಹೇಳಿದನು.

11ಮೋಶೆ ಆ ದಿನದಲ್ಲಿ ಜನರಿಗೆ ಆಜ್ಞಾಪಿಸಿದ್ದೇನೆಂದರೆ,

12“ನೀವು ಯೊರ್ದನ್ ನದಿಯನ್ನು ದಾಟಿದಾಗ ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಯೋಸೇಫ್ ಮತ್ತು ಬೆನ್ಯಾಮೀನ್ ಎಂಬ ಈ ಕುಲಗಳವರು ಗೆರಿಜ್ಜೀಮ್ ಬೆಟ್ಟದ ಮೇಲೆ ನಿಂತುಕೊಂಡು ಆಶೀರ್ವಾದಗಳನ್ನು ಉಚ್ಚರಿಸಬೇಕು.

13ರೂಬೇನ್, ಗಾದ್, ಆಶೇರ್, ಜೆಬುಲೂನ್, ದಾನ್ ಮತ್ತು ನಫ್ತಾಲಿ ಎಂಬ ಈ ಕುಲಗಳವರು ಏಬಾಲ್ ಬೆಟ್ಟದ ಮೇಲೆ ನಿಂತುಕೊಂಡು ಶಾಪೋಕ್ತಿಗಳನ್ನು ಉಚ್ಚರಿಸಬೇಕು.

14“ಲೇವಿಯರು ಗಟ್ಟಿಯಾದ ಸ್ವರದಿಂದ ಇಸ್ರಾಯೇಲರೆಲ್ಲರಿಗೂ,

15‘ಶಿಲ್ಪಿಯ ಕೆಲಸವಾಗಿರುವ ಮರದ ವಿಗ್ರಹ ಮತ್ತು ಲೋಹವಿಗ್ರಹ ಯೆಹೋವನಿಗೆ ಅಸಹ್ಯವಾದುದರಿಂದ ಅವುಗಳನ್ನು ಮಾಡಿಸಿ ಗುಪ್ತವಾಗಿ ನಿಲ್ಲಿಸಿಕೊಂಡವನು ಶಾಪಗ್ರಸ್ತನು’ ಎಂದು ಹೇಳಲು ಜನರೆಲ್ಲರೂ, ‘ಆಮೆನ್’” ಅನ್ನಬೇಕು.

16“ಲೇವಿಯರು, ತಂದೆತಾಯಿಗಳನ್ನು ಅವಮಾನಪಡಿಸಿದವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.

17“ಅವರು, ಮತ್ತೊಬ್ಬನ ಗಡಿಮೇರೆಯನ್ನು ಮೀರಿಬಂದವನು ಶಾಪಗ್ರಸ್ತನು” ಎಂದು ಹೇಳಲು, “ಆಮೆನ್” ಅನ್ನಬೇಕು.

18“ಅವರು, ಕುರುಡರಿಗೆ ದಾರಿತಪ್ಪಿಸಿದವನು ಶಾಪಗ್ರಸ್ತನು” ಎಂದು ಹೇಳಲು, “ಆಮೆನ್” ಅನ್ನಬೇಕು.

19“ಅವರು, ಪರದೇಶಿ, ಅನಾಥ, ಇವರ ವ್ಯಾಜ್ಯದಲ್ಲಿ ನ್ಯಾಯ ಬಿಟ್ಟು ತೀರ್ಪುಹೇಳಿದವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.

20“ಅವರು, ಮಲತಾಯಿಯನ್ನು ಸಂಗಮಿಸಿ ತಂದೆಗೆ ಅವಮಾನಪಡಿಸಿದವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.

21“ಅವರು, ಪಶುಸಂಗಮ ಮಾಡಿದವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.

22“ಅವರು, ತಂದೆಯ ಮಗಳನ್ನಾಗಲಿ ಅಥವಾ ತಾಯಿಯ ಮಗಳನ್ನಾಗಲಿ ಸಂಗಮಿಸಿದವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.

23“ಅವರು, ಅತ್ತೆಯನ್ನು ಸಂಗಮಿಸಿದವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.

24“ಅವರು, ರಹಸ್ಯವಾಗಿ ನರಹತ್ಯಮಾಡಿದವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.

25“ಅವರು, ಹಣ ತೆಗೆದುಕೊಂಡು ನಿರಪರಾಧಿಯನ್ನು ಕೊಂದವನು ಶಾಪಗ್ರಸ್ತನು” ಎನ್ನಲಾಗಿ ಜನರೆಲ್ಲರೂ, “ಆಮೆನ್” ಅನ್ನಬೇಕು.

26“ಅವರು, ಈ ಧರ್ಮಶಾಸ್ತ್ರವಾಕ್ಯಗಳಿಗೆ ಒಡಂಬಟ್ಟು ಕೈಕೊಳ್ಳದೆ ಇರುವವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath