ಕ್ರಿಶ್ಚಿಯನ್ ಧರ್ಮ
ಹಿಂದೆ

ಪ್ರಸಂಗಿ 10

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ಸತ್ತ ನೊಣಗಳಿಂದ ಗಂಧದತೈಲವು ಕೊಳೆತು ನಾರುವುದು. ಹಾಗೆಯೇ ಸ್ವಲ್ಪ ಹುಚ್ಚುತನವು ಜ್ಞಾನ ಮತ್ತು ಘನತೆಗಳನ್ನು ಕೆಡಿಸುತ್ತದೆ.

2ಜ್ಞಾನಿಯ ಬುದ್ಧಿಯು ಅವನ ಬಲಗಡೆಯಿರುವುದು. ಅಜ್ಞಾನಿಯ ಬುದ್ಧಿಯು ಅವನ ಎಡಗಡೆಯಿರುವುದು.

3ಇದಲ್ಲದೆ ಹುಚ್ಚನು ಬುದ್ಧಿತಪ್ಪಿ ತಿರುಗುವ ದಾರಿಯಲ್ಲಿ ತನ್ನ ಹುಚ್ಚುತನವನ್ನು ಎಲ್ಲರಿಗೆ ಪ್ರಕಟಮಾಡುವನು.

4ದೊರೆಯು ನಿನ್ನ ಮೇಲೆ ಸಿಟ್ಟುಗೊಂಡರೆ ಉದ್ಯೋಗವನ್ನು ಬಿಡಬೇಡ. ತಾಳ್ಮೆಯು ದೊಡ್ಡ ಸಿಟ್ಟನ್ನು ಅಡಗಿಸುತ್ತದೆ.

5ಲೋಕದಲ್ಲಿ ಒಂದು ಸಂಕಟವನ್ನು ಕಂಡಿದ್ದೇನೆ. ಅದು ಆಳುವವನ ಸಮ್ಮುಖದಿಂದ ಹೊರಟುಬರುವ ಹಾಗೆಯೇ ತೋರುತ್ತದೆ.

6ಮೂಢರಿಗೆ ಮಹಾ ಪದವಿ ದೊರೆಯುವುದು. ಘನವಂತರೂ ಹೀನಸ್ಥಿತಿಯಲ್ಲಿರುವರು.

7ಆಳುಗಳು ಕುದುರೆ ಸವಾರಿ ಮಾಡುವುದನ್ನೂ, ಪ್ರಭುಗಳು ಆಳುಗಳಂತೆ ನೆಲದ ಮೇಲೆ ನಡೆಯುವುದನ್ನೂ ನೋಡಿದ್ದೇನೆ.

8ಗುಂಡಿಯನ್ನು ತೋಡುವವನು ತಾನೇ ಅದರಲ್ಲಿ ಬೀಳುವನು, ಗೋಡೆಯನ್ನು ಒಡೆಯುವವನಿಗೆ, ಹಾವು ಕಚ್ಚುವುದು.

9ಯಾವನು ಕಲ್ಲುಗಳನ್ನು ಕೀಳುವನೋ ಅವನಿಗೆ ಹಾನಿ ಆಗುವುದು. ಮರವನ್ನು ಕಡೆಯುವವನಿಗೆ ಅಪಾಯವಿದೆ.

10ಮೊಂಡು ಕೊಡಲಿಯ ಬಾಯಿಯನ್ನು ಮಸೆಯದಿದ್ದರೆ ಅವನು ಹೆಚ್ಚು ಬಲವನ್ನು ಪ್ರಯೋಗಿಸಬೇಕು. ಕಾರ್ಯಸಿದ್ಧಿಗೆ ಜ್ಞಾನವೇ ಸಾಧನ.

11ಹಾವಾಡಿಸುವುದರೊಳಗೆ ಹಾವು ಕಚ್ಚಿದರೆ, ಹಾವಾಡಿಗನಿಗೆ ಯಾವ ಪ್ರಯೋಜನವೂ ಇಲ್ಲ.

12ಜ್ಞಾನಿಯ ಮಾತು ಹಿತ. ಅಜ್ಞಾನಿಯ ಬಾಯಿ ತನ್ನನ್ನೇ ನುಂಗಿಬಿಡುವುದು.

13ಅಜ್ಞಾನಿಯ ಮಾತುಗಳು ಆರಂಭದಲ್ಲಿ ಬುದ್ಧಿಹೀನತೆ, ಅಂತ್ಯದಲ್ಲಿ ಅಪಾಯದ ಮರಳುತನ.

14ಮನುಷ್ಯನು ಮುಂದೆ ಆಗುವುದನ್ನು ತಿಳಿಯನು. ತಾನು ಕಾಲವಾದ ಮೇಲೆ ಹೀಗೆಯೇ ಆಗುವುದೆಂದು ಅವನು ಯಾರಿಂದ ತಿಳಿದುಕೊಂಡಾನು? ಅಜ್ಞಾನಿಯ ಮಾತುಗಳೋ ಬಹಳ.

15ಪಟ್ಟಣದ ದಾರಿ ತಿಳಿಯದವನಿಗೆ ಮೂಢರು ತಿಳಿಸಲು, ಪಡುವ ಪ್ರಯಾಸದಿಂದ ಆಯಾಸವೇ.

16ದೇಶದ ಅರಸನು ಯುವಕನಾಗಿದ್ದರೆ, ಪ್ರಭುಗಳು ಹೊತ್ತಾರೆ ಔತಣಕ್ಕೆ ಕುಳಿತುಕೊಂಡರೆ ನಿನಗೆ ದೌರ್ಭಾಗ್ಯವೇ!

17ದೇಶದ ಅರಸನು ಕುಲೀನನಾಗಿದ್ದರೆ, ಪ್ರಭುಗಳು ಅಮಲಿಗಾಗಿ ಅಲ್ಲ, ಆದರೆ ಶಕ್ತಿಗಾಗಿ ಸಕಾಲದಲ್ಲಿ ಊಟಕ್ಕೆ ಕುಳಿತರೆ ನಿನಗೆ ಭಾಗ್ಯವೇ!

18ಸೋಮಾರಿತನದಿಂದ ತೊಲೆಗಳು ಬೊಗ್ಗುವವು. ಜೋಲುಗೈಯಿಂದ ಮನೆ ಸೋರುವುದು.

19ನಗುವಿಗಾಗಿ ಔತಣವು, ದ್ರಾಕ್ಷಾರಸದಿಂದ ಜೀವನಕ್ಕೆ ಆನಂದವು, ಧನವು ಎಲ್ಲವನ್ನೂ ಒದಗಿಸಿಕೊಡುವುದು.

20ಮನಸ್ಸಿನಲ್ಲಿಯೂ ಅರಸನನ್ನು ದೂಷಿಸದಿರು. ಮಲಗುವ ಕೋಣೆಯಲ್ಲಿಯೂ ಧನಿಕನನ್ನು ಬಯ್ಯದಿರು. ಆಕಾಶದ ಹಕ್ಕಿಯು ಆ ಶಬ್ದವನ್ನು ಮುಟ್ಟಿಸುವವು; ಪಕ್ಷಿಯು ಆ ವಿಷಯವನ್ನು ತಿಳಿಸುವುದು.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath