ಕ್ರಿಶ್ಚಿಯನ್ ಧರ್ಮ
ಹಿಂದೆ

ಪ್ರಸಂಗಿ 3

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ಪ್ರತಿಯೊಂದು ಕಾರ್ಯಕ್ಕೂ ನಿಗದಿಯಾದ ಸಮಯವಿದೆ, ಆಕಾಶದ ಕೆಳಗೆ ನಡೆಯುವ ಒಂದೊಂದು ಕೆಲಸಕ್ಕೂ ತಕ್ಕ ಸಮಯವುಂಟು.

2ಹುಟ್ಟುವ ಸಮಯ, ಸಾಯುವ ಸಮಯ, ನೆಡುವ ಸಮಯ, ನೆಟ್ಟದ್ದನ್ನು ಕಿತ್ತುಹಾಕುವ ಸಮಯ,

3ಕೊಲ್ಲುವ ಸಮಯ, ಸ್ವಸ್ಥಮಾಡುವ ಸಮಯ ಕೆಡುವಿಬಿಡುವ ಸಮಯ, ಕಟ್ಟುವ ಸಮಯ,

4ಅಳುವ ಸಮಯ, ನಗುವ ಸಮಯ, ಗೋಳಾಡುವ ಸಮಯ, ಕುಣಿದಾಡುವ ಸಮಯ,

5ಕಲ್ಲುಗಳನ್ನು ಚೆಲ್ಲುವ ಸಮಯ, ಕಲ್ಲುಗಳನ್ನು ಕೂಡಿಸುವ ಸಮಯ, ಅಪ್ಪಿಕೊಳ್ಳುವ ಸಮಯ ಅಪ್ಪಿಕೊಳ್ಳದಿರುವ ಸಮಯ,

6ಸಂಪಾದಿಸುವ ಸಮಯ, ಕಳೆದುಕೊಳ್ಳುವ ಸಮಯ, ಕಾಪಾಡುವ ಸಮಯ, ಬಿಸಾಡುವ ಸಮಯ,

7ಹರಿಯುವ ಸಮಯ, ಹೊಲಿಯುವ ಸಮಯ, ಸುಮ್ಮನಿರುವ ಸಮಯ, ಮಾತನಾಡುವ ಸಮಯ,

8ಪ್ರೀತಿಸುವ ಸಮಯ, ದ್ವೇಷಿಸುವ ಸಮಯ, ಯುದ್ಧದ ಸಮಯ, ಸಮಾಧಾನದ ಸಮಯ.

9ದುಡಿಯುವವನಿಗೆ ಅವನ ಪ್ರಯಾಸದಿಂದ ಲಾಭವೇನು?

10ಮನುಷ್ಯನಿಗೆ ಕರ್ತವ್ಯವೆಂದು ದೇವರು ನೇಮಿಸಿರುವ ಪ್ರಯಾಸವನ್ನು ನೋಡಿದ್ದೇನೆ.

11ಒಂದೊಂದು ವಸ್ತುವನ್ನು ಸಮಯಕ್ಕೆ ತಕ್ಕ ಹಾಗೆ ಅಂದವಾಗಿ ನಿರ್ಮಿಸಿದ್ದಾನೆ. ಇದಲ್ಲದೆ ಮನುಷ್ಯರ ಹೃದಯದಲ್ಲಿ ಅನಂತಕಾಲದ ಯೋಚನೆಯನ್ನು ಇಟ್ಟಿದ್ದಾನೆ. ಆದರೂ ದೇವರು ನಡೆಸುತ್ತಿರುವ ಕೆಲಸವನ್ನು ಅವರು ಗ್ರಹಿಸಲಾರದಂತೆ ಮಾಡಿದ್ದಾನೆ.

12ಮನುಷ್ಯರು ತಮ್ಮ ಜೀವಮಾನದಲ್ಲೆಲ್ಲಾ ಉಲ್ಲಾಸವಾಗಿ ಸುಖವನ್ನು ಅನುಭವಿಸುವುದಕ್ಕಿಂತ ಇನ್ನೇನೂ ಅವರಿಗೆ ಮೇಲಿಲ್ಲವೆಂದು ನಾನು ಗ್ರಹಿಸಿದ್ದೇನೆ.

13ಇದಲ್ಲದೆ ಪ್ರತಿಯೊಬ್ಬನೂ ಅನ್ನಪಾನಗಳನ್ನು ತೆಗೆದುಕೊಂಡು ತನ್ನ ನಾನಾ ಪ್ರಯಾಸಗಳಲ್ಲಿಯೂ ಸುಖವನ್ನನುಭವಿಸುವುದು ದೇವರ ಅನುಗ್ರಹವೇ ಎಂದು ನನಗೆ ಗೊತ್ತಿದೆ.

14ದೇವರ ಕಾರ್ಯವೆಲ್ಲವು ನಿತ್ಯವೆಂದು ಬಲ್ಲೆನು. ಅದಕ್ಕೆ ಯಾವುದನ್ನೂ ಸೇರಿಸಲಾರೆವು. ಅದರಿಂದ ಯಾವುದನ್ನೂ ತೆಗೆಯಲಾರೆವು. ದೇವರ ಈ ನಿಯಮಕ್ಕೆ ಮನುಷ್ಯರು ತನ್ನ ಎದುರಿನಲ್ಲಿ ಭಯಭಕ್ತಿ ಉಳ್ಳವರಾಗಿರಬೇಕೆಂಬುದೇ ಕಾರಣ.

15ಈಗಿನದು ಹಿಂದೆ ಇತ್ತು; ಮುಂದಿನದು ಈಗಲೂ ಇದೆ. ಗತಿಸಿ ಹೋದದ್ದನ್ನು ದೇವರು ತಿರುಗಿ ಬರಮಾಡುವನು.

16ಇದಲ್ಲದೆ ನಾನು ಲೋಕದಲ್ಲಿ ದೃಷ್ಟಿಸಿ ನ್ಯಾಯಸ್ಥಾನದಲ್ಲಿಯೂ, ಧರ್ಮಸ್ಥಾನದಲ್ಲಿಯೂ ಅಧರ್ಮವಿರುವುದೆಂದು ನೋಡಿದೆನು.

17ಆಗ ನಾನು ಮನಸ್ಸಿನಲ್ಲಿ, “ದೇವರು ನೀತಿವಂತನಿಗೂ, ಅನೀತಿವಂತನಿಗೂ ನ್ಯಾಯತೀರಿಸುವನು. ಆತನ ನ್ಯಾಯಕ್ರಮಗಳಿಗೂ, ಎಲ್ಲಾ ಕೆಲಸಕಾರ್ಯಗಳಿಗೂ ತಕ್ಕ ಸಮಯ ಉಂಟು” ಎಂದು ಅಂದುಕೊಂಡೆನು.

18ನಾನು ನನ್ನ ಮನಸ್ಸಿನಲ್ಲಿ ಹೀಗೆ ಯೋಚಿಸಿದೆನು, “ದೇವರು ಮನುಷ್ಯರನ್ನು ಪರೀಕ್ಷಿಸಿ, ಅವರು ಪಶುಗಳಿಗೆ ಸಮಾನರು ಎಂಬುದನ್ನು ತೋರಿಸುತ್ತಾನೆ.”

19ಮನುಷ್ಯನ ಗತಿಯೂ ಪಶುವಿನ ಗತಿಯೂ ಒಂದೇ. ಪಶುವಿಗೆ ಸಾವು ಬರುವ ಹಾಗೆ ಮನುಷ್ಯನಿಗೂ ಬರುವುದು. ಎಲ್ಲಕ್ಕೂ ಪ್ರಾಣ ಒಂದೇ. ಮನುಷ್ಯನು ಪಶುವಿಗಿಂತ ಶ್ರೇಷ್ಠನಲ್ಲ. ಎಲ್ಲವು ವ್ಯರ್ಥವೇ.

20ಎಲ್ಲಾ ಪ್ರಾಣಿಗಳು ಒಂದೇ ಸ್ಥಳಕ್ಕೆ ಹೋಗುವವು. ಎಲ್ಲವು ಮಣ್ಣಿನಿಂದಾದವು. ಎಲ್ಲವೂ ಮಣ್ಣಿಗೆ ಪುನಃ ಸೇರುವವು.

21ಮನುಷ್ಯನ ಆತ್ಮವು ಮೇಲಕ್ಕೆ ಏರುತ್ತದೋ, ಪಶುವಿನ ಆತ್ಮವು ಕೆಳಕ್ಕೆ ಇಳಿದು ಭೂಮಿಗೆ ಸೇರುತ್ತದೋ ಯಾರಿಗೆ ಗೊತ್ತು?

22ಈ ಪ್ರಕಾರ ನಾನು ಯೋಚಿಸಿ ಮನುಷ್ಯನು ತನ್ನ ಕಾರ್ಯಗಳಲ್ಲಿ ಉಲ್ಲಾಸಗೊಳ್ಳುವುದಕ್ಕಿಂತ ಅವನಿಗೆ ಯಾವ ಮೇಲೂ ಇಲ್ಲ. ಇದೇ ಅವನ ಪಾಲು ಎಂದು ಗ್ರಹಿಸಿಕೊಂಡೆನು. ಜೀವಮಾನದ ನಂತರ ಸಂಭವಿಸುವವುಗಳನ್ನು ನೋಡುವುದಕ್ಕೆ ಮನುಷ್ಯನನ್ನು ಯಾರು ಪುನಃ ಬರಮಾಡುವರು?

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath