ಕ್ರಿಶ್ಚಿಯನ್ ಧರ್ಮ
ಹಿಂದೆ

ಪ್ರಸಂಗಿ 8

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ಜ್ಞಾನಿಯ ಹಾಗೆ ಇರುವವನು ಯಾರು? ವಿಷಯವನ್ನು ವಿವರಿಸಬಲ್ಲವರು ಯಾರು? ಜ್ಞಾನದಿಂದ ಒಬ್ಬನ ಮುಖವು ಪ್ರಕಾಶಗೊಳ್ಳುವುದು, ಒರಟು ಮುಖವು ಬದಲಾಗುವುದು.

2ದೇವರ ಮೇಲೆ ಇಟ್ಟ ಆಣೆಯ ನಿಮಿತ್ತ ರಾಜನ ಆಜ್ಞೆಯನ್ನು ಕೈಕೊಳ್ಳಬೇಕೆಂಬುದು ನನ್ನ ಬೋಧನೆ.

3ಅರಸನ ಸನ್ನಿಧಿಯಿಂದ ತೊಲಗಿಬಿಡಲು ಆತುರಪಡಬೇಡ. ದ್ರೋಹಕ್ಕೆ ಸೇರದಿರು. ಅವನು ಇಷ್ಟಬಂದಂತೆ ಮಾಡಬಲ್ಲನು.

4ಅರಸನ ಮಾತಿಗೆ ಅಧಿಕಾರವುಂಟು “ನೀನು ಏನು ಮಾಡುತ್ತಿರುವೆ?” ಎಂದು ಅವನನ್ನು ಯಾರು ತಾನೇ ಕೇಳಬಹುದು.

5ಅರಸನ ಆಜ್ಞೆಗಳನ್ನು ಕೈಕೊಳ್ಳುವವನು ಕೇಡನ್ನು ಅನುಭವಿಸುವುದಿಲ್ಲ. ಜ್ಞಾನಿಯ ಹೃದಯವು ಕಾಲ ಮತ್ತು ನ್ಯಾಯ ಎರಡನ್ನು ತಿಳಿದುಕೊಳ್ಳುತ್ತದೆ.

6ಪ್ರತಿಯೊಂದು ಕಾರ್ಯಕ್ಕೂ ಒಂದು ಕಾಲ ಮತ್ತು ಒಂದು ಕ್ರಮ ಇರುತ್ತದೆಯಲ್ಲವೇ, ಮನುಷ್ಯನು ಪಡುವ ಕಷ್ಟವು ಅವನಿಗೆ ಘೋರವಾಗಿದೆ.

7ಮುಂದೆ ಏನಾಗುವುದು ಯಾರಿಗೂ ಗೊತ್ತಿಲ್ಲ. ಮುಂದೆ ಆಗುವುದನ್ನು ಅವನಿಗೆ ವಿವರಿಸಬಲ್ಲವರು ಯಾರು?

8ಗಾಳಿಯನ್ನು ತಡೆಯುವ ಶಕ್ತಿಯು ಹೇಗೆ ಯಾರಿಗೂ ಇಲ್ಲವೋ, ಹಾಗೆಯೇ ತಮ್ಮ ಮರಣ ದಿನವನ್ನು ತಡೆಯುವ ಶಕ್ತಿಯು ಯಾರಿಗೂ ಇಲ್ಲ. ಯುದ್ಧ ಕಾಲದಲ್ಲಿ ಹೇಗೆ ವಿರಾಮ ದೊರೆಯುವುದಿಲ್ಲವೋ, ಹಾಗೆಯೇ ದುಷ್ಟನಿಗೆ ದುಷ್ಟತನದಿಂದ ಬಿಡುಗಡೆಯೇ ಇಲ್ಲ.

9ನಾನು ಇದನ್ನೆಲ್ಲಾ ನೋಡಿ, ಈ ಲೋಕದೊಳಗೆ ನಡೆಯುವ ಸಕಲ ಕಾರ್ಯಗಳನ್ನೂ ಪರಿಶೀಲಿಸಿದ್ದೇನೆ. ಒಬ್ಬ ಮನುಷ್ಯನು ಇನ್ನೊಬ್ಬನ ಮೇಲೆ ಅಧಿಕಾರ ನಡೆಸಿ ಅವನಿಗೆ ಹಾನಿಯನ್ನು ಉಂಟುಮಾಡುವ ಕಾಲವೂ ಇದೆ.

10ಇದಲ್ಲದೆ ದುಷ್ಟರಿಗೆ ಸಮಾಧಿಯಾಗುವುದನ್ನು ಕಂಡೆನು. ಅವರು ಸುಖವಾಗಿ ಗತಿಸುವರು. ಧಾರ್ಮಿಕರೋ ಪರಿಶುದ್ಧ ಸ್ಥಾನದಿಂದ ತೊಲಗಬೇಕಾಯಿತು. ಪಟ್ಟಣದಲ್ಲಿ ಅವರ ಜ್ಞಾಪಕವೇ ಇಲ್ಲವಾಯಿತು. ಇದೂ ವ್ಯರ್ಥವೇ.

11ಅಪರಾಧಕ್ಕೆ ವಿಧಿಸಿದ ದಂಡನೆಯು ಕೂಡಲೇ ನಡೆಯದಿರುವ ಕಾರಣ ಅಪರಾಧ ಮಾಡಬೇಕೆಂಬ ಯೋಚನೆಯು ಮನುಷ್ಯರ ಹೃದಯದಲ್ಲಿ ತುಂಬಿ ತುಳುಕುವುದು.

12ಪಾಪಿಯು ನೂರು ಸಲ ಅಧರ್ಮ ಮಾಡಿ ಬಹು ಕಾಲ ಬದುಕಿದರೂ, ದೇವರ ಮುಂದೆ ಹೆದರಿ, ಆತನಲ್ಲಿ ಭಯಭಕ್ತಿಯುಳ್ಳವರಿಗೆ ಒಳ್ಳೆಯದೇ ಆಗುವುದೆಂದು ಬಲ್ಲೆನು.

13ಆದರೆ ದುಷ್ಟನಿಗೆ ಒಳ್ಳೆಯದಾಗುವುದಿಲ್ಲ. ನೆರಳಿನಂತಿರುವ ಅವನ ದಿನಗಳು ಹೆಚ್ಚುವುದಿಲ್ಲ. ಏಕೆಂದರೆ ಅವನು ದೇವರಿಗೆ ಭಯಪಡುವುದಿಲ್ಲ.

14ಲೋಕದಲ್ಲಿ ನಡೆಯುವ ವ್ಯರ್ಥಕಾರ್ಯವು ಒಂದುಂಟು. ದುಷ್ಟರ ನಡತೆಗೆ ತಕ್ಕ ಗತಿಯು ಶಿಷ್ಟನಿಗೆ ಆಗುವುದು. ಶಿಷ್ಟರ ನಡತೆಗೆ ತಕ್ಕ ಗತಿಯು ದುಷ್ಟರಿಗೆ ಆಗುವುದು. ಇದು ವ್ಯರ್ಥವೆಂದು ನಾನು ಹೇಳಿದೆನು.

15ಆದುದರಿಂದಲೇ ನಾನು ಸಂತೋಷವನ್ನು ಹೊಗಳಿದೆನು. ಏಕೆಂದರೆ ಮನುಷ್ಯನಿಗೆ ಲೋಕದಲ್ಲಿ ಕುಡಿಯುವುದೂ, ತಿನ್ನುವುದೂ, ಸಂತೋಷಪಡುವುದೇ ಹೊರತು ಬೇರೇನೂ ಒಳ್ಳೆಯದು ಇಲ್ಲ. ಲೋಕದಲ್ಲಿ ದೇವರು ಅವನಿಗೆ ಅನುಗ್ರಹಿಸುವ ದಿನಗಳಲ್ಲಿ ಅವನು ಪಡುವ ಪ್ರಯಾಸದಲ್ಲಿ ಸಂತೋಷವೇ ಸೇರಿರುವುದು.

16ನಾನು ನನ್ನ ಹೃದಯದಲ್ಲಿ ಜ್ಞಾನವನ್ನು ಪಡೆಯಲು, ಲೋಕದಲ್ಲಿ ನಡೆಯುವುದನ್ನು ಅರಿತುಕೊಳ್ಳಲು ಪ್ರಯತ್ನಿಸಿದಾಗ, ನಾನು ಕಂಡುಕೊಂಡ ಸಂಗತಿಯೇನೆಂದರೆ, “ಒಬ್ಬನು ರಾತ್ರಿಹಗಲು ಕಣ್ಣುಗಳಿಗೆ ನಿದ್ರೆಕೊಡದೆ ಕೆಲಸ ಮಾಡಿದರೂ,

17ದೇವರ ಎಲ್ಲಾ ಕಾರ್ಯಗಳನ್ನೂ ಮತ್ತು ಲೋಕದಲ್ಲಿ ಮಾಡುವ ಕೆಲಸಗಳನ್ನೂ ಮನುಷ್ಯನು ಗ್ರಹಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಮನುಷ್ಯನು ಅದನ್ನು ಹುಡುಕುವುದಕ್ಕೆ ಎಷ್ಟು ಪ್ರಯಾಸಪಟ್ಟರೂ ಅದನ್ನು ಕಂಡುಕೊಳ್ಳಲಾರನು. ಹೌದು, ಜ್ಞಾನಿಯು ಅದನ್ನು ಗ್ರಹಿಸಿಕೊಳ್ಳಲು ಯೋಚಿಸಿದರೂ ಅವನು ಅದನ್ನು ಗ್ರಹಿಸಲಾರನು.”

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath