ಎಫೆಸದವರಿಗೆ 6
ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ
1ಮಕ್ಕಳೇ, ನೀವು ಕರ್ತನಲ್ಲಿರುವವರಿಗೆ ತಕ್ಕ ಹಾಗೆ ನಿಮ್ಮ ತಂದೆತಾಯಿಗಳ ವಿಧೇಯರಾಗಿರಿ. ಇದು ನ್ಯಾಯವಾದದ್ದು.
2ವಾಗ್ದಾನಸಹಿತವಾದ ಮೊದಲನೆಯ ಆಜ್ಞೆಯನ್ನು ಕೇಳಿರಿ, “ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು,
3ಗೌರವಿಸಿದರೆ ನಿನಗೆ ಶುಭವಾಗುವುದು, ನೀನು ಭೂಮಿಯ ಮೇಲೆ ಬಹುಕಾಲ ಬದುಕುವಿ.”
4ತಂದೆಗಳೇ, ನಿಮ್ಮ ಮಕ್ಕಳಿಗೆ ಕೋಪವನ್ನೆಬ್ಬಿಸದೆ, ಕರ್ತನಿಗೆ ಮೆಚ್ಚಿಗೆಯಾಗುವ ರೀತಿಯಲ್ಲಿ ಅವರನ್ನು ಶಿಸ್ತಿನಲ್ಲಿಯೂ ಉಪದೇಶದಲ್ಲಿಯೂ ಸಾಕಿ ಸಲಹಿರಿ.
5ದಾಸರೇ, ಈ ಲೋಕದಲ್ಲಿ ನಿಮಗೆ ಯಜಮಾನರಾಗಿರುವವರಿಗೆ ಕ್ರಿಸ್ತನಿಗೆ ವಿಧೇಯರಾಗುವ ಹಾಗೆಯೇ ಮನೋಭೀತಿಯಿಂದ ನಡುಗುವವರಾಗಿಯೂ ಸರಳಹೃದಯರಾಗಿಯೂ ವಿಧೇಯರಾಗಿರಿ.
6ಮನುಷ್ಯರನ್ನು ಮೆಚ್ಚಿಸುವವರಂತೆ ತೋರಿಕೆಗೆ ಯಜಮಾನರು ನೋಡುತ್ತಿರುವಾಗ ಮಾತ್ರ ಸೇವೆಮಾಡದೇ, ಕ್ರಿಸ್ತನ ದಾಸರಿಗೆ ತಕ್ಕ ಹಾಗೆ ದೇವರ ಚಿತ್ತವನ್ನು ಮನಃಪೂರ್ವಕವಾಗಿ ನಡಿಸಿರಿ.
7ಮನುಷ್ಯರಿಗೋಸ್ಕರವಲ್ಲ, ಕರ್ತನಿಗೋಸ್ಕರ ಸೇವೆಮಾಡುತ್ತೇವೆಂದು ಮನಃಪೂರ್ವಕವಾಗಿ ಸೇವೆಮಾಡಿರಿ.
8ಯಾಕೆಂದರೆ ಒಬ್ಬನು ದಾಸನಾಗಲಿ ಸ್ವತಂತ್ರನಾಗಲಿ ತಾನು ಯಾವ ಸತ್ಕಾರ್ಯವನ್ನು ಮಾಡುತ್ತಾನೋ ಅದರ ಪ್ರತಿಫಲವನ್ನು ಕರ್ತನಿಂದ ಹೊಂದುವನೆಂಬುದನ್ನು ನೀವು ತಿಳಿದವರಾಗಿದ್ದೀರಿ.
9ಯಜಮಾನರೇ, ನಿಮ್ಮ ದಾಸರ ವಿಷಯದಲ್ಲಿ ಅದೇ ರೀತಿಯಾಗಿ ನಡೆದುಕೊಳ್ಳಿರಿ. ಪರಲೋಕದಲ್ಲಿ ನಿಮಗೂ ಅವರಿಗೂ ಯಜಮಾನನಾಗಿರುವಾತನು ಇದ್ದಾನೆಂತಲೂ ಆತನಲ್ಲಿ ಪಕ್ಷಪಾತವಿಲ್ಲವೆಂತಲೂ ತಿಳಿದು ನಿಮ್ಮ ದಾಸರನ್ನು ಬೆದರಿಸುವ ಪದ್ಧತಿಯನ್ನು ಬಿಟ್ಟುಬಿಡಿರಿ.
10ಕಡೆಯದಾಗಿ, ನೀವು ಕರ್ತನಲ್ಲಿಯೂ ಆತನ ಅತ್ಯಧಿಕವಾದ ಶಕ್ತಿಯಲ್ಲಿಯೂ ಬಲಗೊಳ್ಳಿರಿ.
11ಸೈತಾನನ ತಂತ್ರೋಪಾಯಗಳನ್ನು ನೀವು ಎದುರಿಸಿ ನಿಲ್ಲುವುದಕ್ಕೆ ಶಕ್ತರಾಗುವಂತೆ ದೇವರು ದಯಪಾಲಿಸುವ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ.
12ನಮಗೆ ಹೋರಾಟವಿರುವುದು ಮನುಷ್ಯಮಾತ್ರದವರ ಸಂಗಡವಲ್ಲ. ರಾಜತ್ವಗಳ ಮೇಲೆಯೂ, ಅಧಿಕಾರಿಗಳ ಮೇಲೆಯೂ, ಈ ಅಂಧಕಾರದ ಲೋಕಾಧಿಪತಿಗಳ ಮೇಲೆಯೂ, ಆಕಾಶ ಮಂಡಲಗಳಲ್ಲಿರುವ ದುರಾತ್ಮಗಳ ಸೇನೆಯ ಮೇಲೆಯೂ ನಾವು ಹೋರಾಡುವವರಾಗಿದ್ದೇವೆ.
13ಆದ್ದರಿಂದ ಆ ದುಷ್ಟ ದಿನದಲ್ಲಿ ವೈರಿಗಳನ್ನು ಎದುರಿಸುವುದಕ್ಕೂ ಮಾಡಬೇಕಾದದ್ದೆಲ್ಲವನ್ನು ಮಾಡಿ ದೃಢವಾಗಿ ನಿಲ್ಲುವುದಕ್ಕೂ ಶಕ್ತರಾಗುವಂತೆ ದೇವರು ದಯಪಾಲಿಸುವ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ.
14ಸತ್ಯವೆಂಬ ನಡುಕಟ್ಟನ್ನು ಸೊಂಟಕ್ಕೆ ಕಟ್ಟಿಕೊಂಡು, ನೀತಿಯೆಂಬ ಎದೆಕವಚವನ್ನು ಧರಿಸಿಕೊಂಡು,
15ಸಮಾಧಾನದ ಸುವಾರ್ತೆಯನ್ನು ಪ್ರಚುರಪಡಿಸುವುದಕ್ಕೆ ಸಿದ್ಧ ಮನಸ್ಸೆಂಬ ಕೆರಗಳನ್ನು ಮೆಟ್ಟಿಕೊಂಡು ನಿಲ್ಲಿರಿ.
16ಎಲ್ಲಾದಕ್ಕಿಂತ ಹೆಚ್ಚಾಗಿ ನಂಬಿಕೆಯೆಂಬ ಗುರಾಣಿಯನ್ನು ಹಿಡಿದುಕೊಳ್ಳಿರಿ. ಅದರಿಂದ ನೀವು ಕೆಡುಕನ ಅಗ್ನಿಬಾಣಗಳನ್ನೆಲ್ಲಾ ನಂದಿಸುವುದಕ್ಕೆ ಶಕ್ತರಾಗುವಿರಿ.
17ಇದಲ್ಲದೆ ರಕ್ಷಣೆಯೆಂಬ ಶಿರಸ್ತ್ರಾಣವನ್ನು ಇಟ್ಟುಕೊಂಡು ಪವಿತ್ರಾತ್ಮನು ಕೊಡುವ ದೇವರ ವಾಕ್ಯವೆಂಬ ಕತ್ತಿಯನ್ನು ಹಿಡಿದುಕೊಳ್ಳಿರಿ.
18ನೀವು ಪವಿತ್ರಾತ್ಮಪ್ರೇರಿತರಾಗಿ ಎಲ್ಲಾ ಸಮಯಗಳಲ್ಲಿ ಸಕಲವಿಧವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಗಳಿಂದಲೂ ದೇವರನ್ನು ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ದೇವಜನರೆಲ್ಲರ ವಿಷಯದಲ್ಲಿ ವಿಜ್ಞಾಪನೆಮಾಡುತ್ತಾ ಎಚ್ಚರವಾಗಿರಿ. ನನಗಾಗಿಯೂ ಪ್ರಾರ್ಥನೆ ಮಾಡಿರಿ.
19ನಾನು ಮಾತನಾಡಲು ಬಾಯಿ ತೆರೆಯುವಾಗ ಪೂರ್ವಕಾಲದಲ್ಲಿ ಗುಪ್ತವಾಗಿದ್ದ ಸುವಾರ್ತಾಸತ್ಯಗಳನ್ನು ಭಯವಿಲ್ಲದೆ ತಿಳಿಸುವುದಕ್ಕೆ ಬೇಕಾದ ಮಾತುಗಳನ್ನು ದೇವರು ನನಗೆ ಅನುಗ್ರಹಿಸಬೇಕೆಂದು ಪ್ರಾರ್ಥಿಸಿರಿ.
20ಆ ಸುವಾರ್ತೆಯ ನಿಮಿತ್ತವಾಗಿ ರಾಯಭಾರಿಯಾದ ನಾನು ಸೆರೆಮನೆಯಲ್ಲಿ ಬಿದ್ದಿದ್ದೇನಲ್ಲಾ. ಅದರ ವಿಷಯದಲ್ಲಿ ನಾನು ಮಾತನಾಡಬೇಕಾದ ಹಾಗೆಯೇ ಧೈರ್ಯವಾಗಿ ನಾನು ಮಾತನಾಡುವಂತೆ ನನಗಾಗಿ ಬೇಡಿಕೊಳ್ಳಿರಿ.
21ನನ್ನ ವಿಷಯಗಳು ನನ್ನ ಕೆಲಸಕಾರ್ಯಗಳು ನಿಮಗೆ ಗೊತ್ತಾಗುವ ಹಾಗೆ ಪ್ರಿಯ ಸಹೋದರನೂ ಕರ್ತನಲ್ಲಿ ನಂಬಿಗಸ್ತ ಸೇವಕನಾಗಿರುವ ತುಖಿಕನು ನಿಮಗೆ ಎಲ್ಲವನ್ನೂ ತಿಳಿಸಿಕೊಡುವನು.
22ನೀವು ನಮ್ಮ ಸಂಗತಿಗಳನ್ನು ತಿಳಿದುಕೊಳ್ಳುವಂತೆಯೂ, ಅವನು ನಿಮ್ಮ ಹೃದಯಗಳನ್ನು ಸಂತೈಸುವಂತೆಯೂ ಅವನನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ.
23ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ಶಾಂತಿಯೂ, ನಂಬಿಕೆಯಿಂದ ಕೂಡಿದ ಪ್ರೀತಿಯೂ ಸಹೋದರರೆಲ್ಲರಿಗೆ ಉಂಟಾಗಲಿ.
24ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ನಿರಂತರವಾಗಿ ಪ್ರೀತಿಸುವವರೆಲ್ಲರ ಮೇಲೆ ದೇವರ ಕೃಪೆಯು ಇರಲಿ.
WEBREATH · 11:11
«He himself gives everyone life and breath and everything else» — Acts 17:25
Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.
WEBREATH — the Minute at 11:11, your own local time — we are One Breath