ಕ್ರಿಶ್ಚಿಯನ್ ಧರ್ಮ
ಹಿಂದೆ

ಎಸ್ತೇರಳು 5

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ಮೂರನೆಯ ದಿನದಲ್ಲಿ ಎಸ್ತೇರಳು ರಾಜವಸ್ತ್ರಭೂಷಿತಳಾಗಿ ಅರಮನೆಯ ಒಳಗಣ ಪ್ರಾಕಾರವನ್ನು ಪ್ರವೇಶಿಸಿ, ರಾಜಮಂದಿರದ ಎದುರಿನಲ್ಲಿ ನಿಂತಳು. ಅರಸನು ಆ ಮಂದಿರದಲ್ಲಿ ರಾಜಸಿಂಹಾಸನದ ಮೇಲೆ ಬಾಗಿಲಿಗೆ ಎದುರಾಗಿ ಕುಳಿತುಕೊಂಡಿದ್ದನು.

2ಅವನು ಪ್ರಾಕಾರದಲ್ಲಿ ನಿಂತಿರುವ ಎಸ್ತೇರ್ ರಾಣಿಯನ್ನು ಕಂಡ ಕೂಡಲೆ ಆಕೆಯ ಮೇಲೆ ದಯವಿಟ್ಟು ತನ್ನ ಕೈಯಲ್ಲಿದ್ದ ಸುವರ್ಣದಂಡವನ್ನು ಆಕೆಯ ಕಡೆಗೆ ಚಾಚಿದನು.

3ಎಸ್ತೇರಳು ಅರಸನ ಸಮೀಪಕ್ಕೆ ಹೋಗಿ ದಂಡದ ತುದಿಯನ್ನು ಮುಟ್ಟಿದಳು. ಆಗ ಅರಸನು ಆಕೆಗೆ, “ಎಸ್ತೇರ್ ರಾಣಿಯೇ, ನಿನಗೇನು ಬೇಕು? ನಿನ್ನ ವಿಜ್ಞಾಪನೆ ಯಾವುದು? ನನ್ನ ಅರ್ಧರಾಜ್ಯವನ್ನು ಕೇಳಿದರೂ ನಿನಗೆ ಕೊಡುತ್ತೇನೆ” ಅಂದನು.

4ಅದಕ್ಕೆ ಎಸ್ತೇರಳು, “ಅರಸನು ಒಪ್ಪುವುದಾದರೆ ನಾನು ಈಹೊತ್ತು ತಮಗೋಸ್ಕರ ಸಿದ್ಧಮಾಡಿಸಿರುವ ಔತಣಕ್ಕೆ ಹಾಮಾನನೊಡನೆ ಬರೋಣವಾಗಲಿ” ಎಂದು ಅರಿಕೆಮಾಡಿದಳು.

5ಕೂಡಲೆ ಅರಸನು, “ಎಸ್ತೇರಳ ವಿಜ್ಞಾಪನೆಯನ್ನು ನೆರವೇರಿಸುವುದಕ್ಕೆ ಹಾಮಾನನನ್ನು ಕರೆದುಕೊಂಡು ಬನ್ನಿರಿ” ಎಂದು ಅಪ್ಪಣೆಮಾಡಿ ಎಸ್ತೇರಳು ಮಾಡಿಸಿದ್ದ ಔತಣಕ್ಕೆ ಹಾಮಾನನ ಜೊತೆಯಲ್ಲಿ ಹೋದನು.

6ದ್ರಾಕ್ಷಾರಸ ಪಾನಮಾಡುವಾಗ ಅರಸನು ತಿರುಗಿ ಎಸ್ತೇರಳಿಗೆ, “ನಿನ್ನ ವಿಜ್ಞಾಪನೆ ಯಾವುದು ಹೇಳು; ಅದನ್ನು ನೆರವೇರಿಸುವೆನು. ನೀನು ನನ್ನ ಅರ್ಧರಾಜ್ಯವನ್ನು ಕೇಳಿಕೊಂಡರೂ ಸರಿಯೇ, ಅದನ್ನು ನಿನಗೆ ಕೊಡುವೆನು” ಅಂದನು.

7ಅದಕ್ಕೆ ಎಸ್ತೇರಳು, “ಅರಸನು ನನ್ನ ಮೇಲೆ ಕಟಾಕ್ಷವಿಟ್ಟು ನಾನು ಕೇಳುವುದನ್ನು ಕೊಡುವುದಕ್ಕೂ ನನ್ನ ವಿಜ್ಞಾಪನೆಯನ್ನು ನೆರವೇರಿಸುವುದಕ್ಕೂ ಮನಸ್ಸುಳ್ಳವರಾಗಿದ್ದರೆ

8ನಾನು ತಮಗೋಸ್ಕರ ಸಿದ್ಧಮಾಡಿಸುವ ಔತಣಕ್ಕೆ ನಾಳೆಯೂ ಹಾಮಾನನ ಜೊತೆಯಲ್ಲಿ ಬರೋಣವಾಗಲಿ; ಆಗ ಅರಸರು ಹೇಳಿದಂತೆ ಮಾಡುವೆನು. ಇದೇ ನನ್ನ ಮನವಿ” ಎಂದು ಉತ್ತರಕೊಟ್ಟಳು.

9ಆ ದಿನ ಹಾಮಾನನು ಆನಂದಲಹರಿಯಲ್ಲಿ ಮನೆಗೆ ಹೋಗುತ್ತಿರುವಾಗ ಮೊರ್ದೆಕೈಯು ತನಗೆ ಭಯಪಡದೆ, ತನ್ನ ಮುಂದೆ ಏಳದೆ ಅರಮನೆಯ ಹೆಬ್ಬಾಗಿಲಿನಲ್ಲಿ ಕುಳಿತಿರುವುದನ್ನು ಕಂಡು ಅವನ ಮೇಲೆ ಕೋಪಭರಿತನಾದನು.

10ಆದರೂ ತನ್ನ ಕೋಪವನ್ನು ಬಿಗಿಹಿಡಿದುಕೊಂಡು ಮನೆಗೆ ಹೋಗಿ ತನ್ನ ಆಪ್ತರನ್ನೂ, ಪತ್ನಿಯಾದ ಜೆರೆಷಳನ್ನೂ ಕರೆದನು.

11ಅವರ ಮುಂದೆ ತನ್ನ ಘನೈಶ್ವರ್ಯಗಳನ್ನೂ, ಪುತ್ರಲಾಭಾತಿಶಯವನ್ನೂ, ಅರಸನು ತನ್ನನ್ನು ಸನ್ಮಾನಿಸಿ ಎಲ್ಲಾ ಸರದಾರರಿಗಿಂತ, ರಾಜಸೇವಕರಿಗಿಂತ ತನಗೇ ಶ್ರೇಷ್ಠಸ್ಥಾನವನ್ನು ಅನುಗ್ರಹಿಸಿದ್ದನ್ನೂ ವರ್ಣಿಸಿ,

12“ಇದಲ್ಲದೆ ಎಸ್ತೇರ್ ರಾಣಿಯು ತಾನು ಸಿದ್ಧಮಾಡಿಸಿದ ಔತಣಕ್ಕೆ ಅರಸನ ಜೊತೆಯಲ್ಲಿ ನನ್ನ ಹೊರತಾಗಿ ಇನ್ನಾರನ್ನೂ ಆಹ್ವಾನಿಸಲಿಲ್ಲ. ನಾಳೆಯೂ ಅರಸನ ಜೊತೆಯಲ್ಲಿ ಬರಬೇಕೆಂದು ನನಗೆ ಹೇಳಿದ್ದಾಳೆ.

13ಆದರೂ ಮೊರ್ದೆಕೈ ಎಂಬ ಯೆಹೂದ್ಯನು ಅರಮನೆಯ ಬಾಗಿಲಿನಲ್ಲಿ ನನ್ನ ಕಣ್ಣ ಮುಂದೆ ಕುಳಿತಿರುವವರೆಗೂ ಇದೆಲ್ಲದರಿಂದ ನನಗೆ ತೃಪ್ತಿಯಾಗುವುದಿಲ್ಲ” ಅಂದನು.

14ಅದಕ್ಕೆ ಅವನ ಪತ್ನಿಯಾದ ಜೆರೆಷಳೂ ಅವನ ಎಲ್ಲಾ ಆಪ್ತರೂ, “ಐವತ್ತು ಮೊಳ ಎತ್ತರವಾದ ಒಂದು ಗಲ್ಲುಗಂಬವನ್ನು ಸಿದ್ಧಮಾಡಿಸಿ ನಾಳೆ ಅರಸನ ಅಪ್ಪಣೆಯನ್ನು ಪಡೆದುಕೊಂಡು ಮೊರ್ದೆಕೈಯನ್ನು ಅದಕ್ಕೆ ನೇತುಹಾಕಿಸಬೇಕು; ಆ ಮೇಲೆ ನೀನು ಸಂತೋಷದಿಂದ ಅರಸನ ಜೊತೆಯಲ್ಲಿ ಔತಣಕ್ಕೆ ಹೋಗಬಹುದು” ಎಂದು ಹೇಳಿದರು. ಹಾಮಾನನು ಈ ಮಾತಿಗೆ ಮೆಚ್ಚಿ ಗಲ್ಲುಗಂಬವನ್ನು ಸಿದ್ಧಮಾಡಿಸಿದನು.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath