ವಿಮೋಚನಕಾಂಡ 22
ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ
1ಒಬ್ಬನು ಎತ್ತನ್ನಾಗಲಿ, ಕುರಿಯನ್ನಾಗಲಿ ಕದ್ದುಕೊಂಡು ಕೊಯ್ದರೆ ಇಲ್ಲವೆ ಮಾರಿದರೆ ಅವನು ಒಂದು ಎತ್ತಿಗೆ ಬದಲಾಗಿ ಐದು ಎತ್ತುಗಳನ್ನು ಒಂದು ಕುರಿಗೆ ಬದಲಾಗಿ ನಾಲ್ಕು ಕುರಿಗಳನ್ನು ಕೊಡಬೇಕು.
2ಒಬ್ಬ ಕಳ್ಳನು ಕಳ್ಳತನ ಮಾಡುತ್ತಿರುವಾಗಲೇ ಕೈಗೆ ಸಿಕ್ಕಿದಾಗ ಅವನನ್ನು ಕೊಂದರೆ ಅದನ್ನು ನರಹತ್ಯೆಯೆಂದು ಎಣಿಸಕೂಡದು.
3ಸೂರ್ಯೋದಯವಾದ ನಂತರ ಒಬ್ಬನು ಕಳ್ಳತನಮಾಡಿ ಸಿಕ್ಕಿಬಿದ್ದಾಗ, ಅವನನ್ನು ಹೊಡೆದು ಕೊಂದರೆ ಅದನ್ನು ನರಹತ್ಯೆಯೆಂದು ಎಣಿಸಬೇಕು. ಅವನು ಕದ್ದದ್ದನ್ನೆಲ್ಲಾ ಪೂರ್ತಿಯಾಗಿ ಹಿಂತಿರುಗಿಸಬೇಕು. ಅವನಲ್ಲಿ ಕೊಡಲು ಏನೂ ಇಲ್ಲದ ಪಕ್ಷಕ್ಕೆ ಅವನು ಆ ಕಳ್ಳತನ ಮಾಡಿದ್ದರಿಂದ ಗುಲಾಮನಾಗಿ ಮಾರಲ್ಪಡಬೇಕು.
4ಕಳ್ಳತನ ಮಾಡಿದ ಎತ್ತಾಗಲಿ, ಕತ್ತೆಯಾಗಲಿ, ಆಡು, ಕುರಿಯಾದರೂ ಜೀವದಿಂದಲೇ ಕದ್ದವನ ಬಳಿಯಲ್ಲಿ ಸಿಕ್ಕಿದರೆ ಅವನು ಎರಡರಷ್ಟು ಈಡು ಕೊಡಬೇಕು.
5ಒಬ್ಬನು ತನ್ನ ಹೊಲದಲ್ಲಾಗಲಿ, ದ್ರಾಕ್ಷಿತೋಟದಲ್ಲಾಗಲಿ ತನ್ನ ದನಗಳನ್ನು ಮೇಯಿಸಿ, ಮತ್ತೊಬ್ಬನ ಹೊಲದಲ್ಲಾಗಲಿ, ದ್ರಾಕ್ಷಿತೋಟದಲ್ಲಾಗಲಿ ಮೇಯುವಂತೆ ಮಾಡಿದರೆ, ತನ್ನ ಹೊಲದ ಅಥವಾ ದ್ರಾಕ್ಷಿತೋಟದ ಉತ್ತಮ ಭಾಗವನ್ನು ಅವನಿಗೆ ಈಡು ಕೊಡಬೇಕು.
6ಒಬ್ಬನು ಹೊತ್ತಿಸಿದ ಬೆಂಕಿ ಆಕಸ್ಮಾತ್ತಾಗಿ ಮುಳ್ಳಿನ ಗಿಡಗಳಿಗೆ ಬೆಂಕಿ ಹತ್ತಿಕೊಂಡು ಮತ್ತೊಬ್ಬನ ದವಸದ ರಾಶಿಗಳಾಗಲಿ, ಬೆಳೆಯಾಗಲಿ, ಹೊಲವಾಗಲಿ ಸುಟ್ಟು ಹೋದರೆ ಬೆಂಕಿ ಹೊತ್ತಿಸಿದವನು ಅದಕ್ಕೆ ಈಡುಕೊಡಬೇಕು.
7ಒಬ್ಬನು ಹಣವನ್ನಾಗಲಿ, ಒಡವೆಗಳನ್ನಾಗಲಿ ಕಾಪಾಡುವುದಕ್ಕೆ ಮತ್ತೊಬ್ಬನಿಗೆ ಒಪ್ಪಿಸಿದಾಗ ಅದು ಆ ಮನುಷ್ಯನ ಮನೆಯಲ್ಲಿ ಕಳ್ಳತನವಾಗಿ, ಕಳ್ಳನು ಸಿಕ್ಕಿಕೊಂಡರೆ ಎರಡರಷ್ಟು ದಂಡವನ್ನು ಕೊಡಬೇಕು.
8ಕಳ್ಳನು ಸಿಕ್ಕದೇ ಹೋದರೆ ಆ ಮನೆಯ ಯಜಮಾನನು ತಾನೇ ಆ ಒಡವೆಗಳನ್ನು ಕದ್ದನೋ ಇಲ್ಲವೋ ಎಂಬುದನ್ನು ದೃಢಪಡಿಸುವುದಕ್ಕಾಗಿ ದೇವರ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬೇಕು.
9ವಂಚನೆಯಾಯಿತೆಂಬ ಅನುಮಾನ ಹುಟ್ಟಿದ ಪ್ರತಿಯೊಂದರ ವಿಷಯದಲ್ಲಿಯೂ, ಅದು ಎತ್ತು, ಕತ್ತೆ, ಕುರಿ ಅಥವಾ ಬಟ್ಟೆಗಳ ವಿಷಯವಾದರೂ, ಕಳೆದುಕೊಂಡ ಬೇರೆ ಯಾವ ವಸ್ತುವಿನ ವಿಷಯವಾದರೂ, ಇಬ್ಬರು ಅದು ತಮ್ಮದೆಂದು ಹೇಳುವಾಗ ಆ ಇಬ್ಬರ ವ್ಯಾಜ್ಯವು ದೇವರ ಸನ್ನಿಧಿಗೆ ಬರಬೇಕು. ದೇವರು ಯಾರನ್ನು ದ್ರೋಹಿಯೆಂದು ನಿರ್ಣಯಿಸುತ್ತಾನೋ ಅವನು ಎರಡರಷ್ಟು ತನ್ನ ನೆರೆಯವನಿಗೆ ಕೊಡಬೇಕು.
10ಒಬ್ಬನು ತನ್ನ ನೆರೆಯವನಿಗೆ ಕತ್ತೆಯನ್ನಾಗಲಿ, ಎತ್ತನ್ನಾಗಲಿ, ಕುರಿಯನ್ನಾಗಲಿ ಬೇರೆ ಯಾವ ಪಶುವನ್ನಾಗಲಿ ಕಾಪಾಡುವುದಕ್ಕೆ ಕೊಟ್ಟಿದ್ದು, ಅದು ಸತ್ತರೆ ಇಲ್ಲವೆ ಗಾಯಗೊಂಡರೆ ಇಲ್ಲವೆ ಯಾರೂ ತಿಳಿಯದಂತೆ ಕಳ್ಳತನವಾದರೆ,
11ಆ ಮನುಷ್ಯನು ತಾನೇ ಆ ಸೊತ್ತಿನ ವಿಷಯದಲ್ಲಿ ಮೋಸಮಾಡಲಿಲ್ಲ ಎಂಬುದನ್ನು ದೃಢಪಡಿಸುವುದಕ್ಕಾಗಿ ಯೆಹೋವನ ಮೇಲೆ ಪ್ರಮಾಣಮಾಡಬೇಕು. ಆಗ ಪಶುವಿನ ಒಡೆಯನು ಆ ಪ್ರಮಾಣವಾಕ್ಯವನ್ನು ನಂಬಬೇಕು. ಪ್ರಮಾಣಮಾಡಿದವನು ಅದಕ್ಕೆ ಈಡುಕೊಡಬೇಕಾದ ಅಗತ್ಯವಿರುವುದಿಲ್ಲ.
12ಆದರೆ ಆ ಪಶುವು ಅವನ ಬಳಿಯಿಂದ ಕಳವಾದರೆ ಆ ವ್ಯಕ್ತಿ ಅದರ ಯಜಮಾನನಿಗೆ ಪ್ರತಿಯಾಗಿ ಈಡುಕೊಡಬೇಕು.
13ಕಾಡುಮೃಗವು ಆ ಪಶುವನ್ನು ಕೊಂದಿದ್ದರೆ, ಅದರ ಹೆಣವನ್ನು ಗುರುತಿಗಾಗಿ ತೋರಿಸಲಿ. ಕಾಡುಮೃಗ ಕೊಂದಿದ್ದಕ್ಕೆ ಈಡು ಕೊಡಬೇಕಾದ ಅಗತ್ಯವಿಲ್ಲ.
14ಒಬ್ಬನು ಮತ್ತೊಬ್ಬನಿಂದ ಪಶುವನ್ನು ಸ್ವಲ್ಪ ಕಾಲಕ್ಕೆ ಬಾಡಿಗೆಗೆ ತೆಗೆದುಕೊಂಡಿರಲಾಗಿ ಆ ಪಶುವಿನ ಒಡೆಯನು ಅದರ ಹತ್ತಿರವಿಲ್ಲದ ಸಮಯದಲ್ಲಿ ಅದು ಗಾಯಗೊಂಡರೆ ಇಲ್ಲವೆ ಸತ್ತುಹೋದರೆ ಸಾಲ ತೆಗೆದುಕೊಂಡವನು ಈಡುಕೊಡಬೇಕು.
15ಯಜಮಾನನು ಅದರ ಹತ್ತಿರದಲ್ಲೇ ಇದಿದ್ದರೆ, ಅವನಿಗೆ ಈಡುಕೊಡಬೇಕಾದ ಅಗತ್ಯವಿಲ್ಲ. ಅದನ್ನು ಬಾಡಿಗೆಗೆ ತೆಗೆದುಕೊಂಡಿದ್ದರೆ ಅದಕ್ಕೆ ಉಂಟಾದ ನಷ್ಟವು ಬಾಡಿಗೆಯ ಲೆಕ್ಕಕ್ಕೆ ಎಣಿಕೆಯಾಗಬೇಕು.
16ನಿಶ್ಚಿತಾರ್ಥವಾಗದ ಹೆಣ್ಣನ್ನು ಒಬ್ಬನು ಮರುಳುಗೊಳಿಸಿ ಸಂಗಮಿಸಿದರೆ ಅವಳಿಗೋಸ್ಕರ ತಕ್ಕ ತೆರವನ್ನು ಕೊಟ್ಟು ಅವಳನ್ನು ಮದುವೆಮಾಡಿಕೊಳ್ಳಬೇಕು.
17ಅವಳ ತಂದೆ ಅವಳನ್ನು ಅವನಿಗೆ ಕೊಡುವುದಕ್ಕೆ ಒಪ್ಪದೇ ಹೋದರೆ ಆ ಮನುಷ್ಯನು ತಕ್ಕ ಹಣವನ್ನು ದಂಡವಾಗಿ ಕೊಡಬೇಕು.
18ಮಾಟಗಾರ್ತಿಯನ್ನು ಜೀವದಿಂದ ಉಳಿಸಬಾರದು.
19ಪಶುಸಂಗ ಮಾಡಿದವನಿಗೆ ಮರಣಶಿಕ್ಷೆಯಾಗಬೇಕು.
20ಯೆಹೋವನೊಬ್ಬನಿಗೇ ಹೊರತಾಗಿ ಬೇರೊಬ್ಬ ದೇವರಿಗೆ ಯಜ್ಞ ಅರ್ಪಿಸುವವನು ಸಂಪೂರ್ಣವಾಗಿ ನಾಶವಾಗಬೇಕು.
21ಪರದೇಶದವನಿಗೆ ಅನ್ಯಾಯ ಮಾಡಬಾರದು ಉಪದ್ರವ ಕೊಡಬಾರದು ನೀವು ಐಗುಪ್ತ ದೇಶದಲ್ಲಿ ಪರದೇಶಿಗಳಾಗಿದ್ದೀರಲ್ಲವೇ?
22ವಿಧವೆಯರನ್ನಾಗಲಿ, ದಿಕ್ಕಿಲ್ಲದ ಮಕ್ಕಳನ್ನಾಗಲಿ, ತೊಂದರೆಪಡಿಸಬಾರದು.
23ನೀವು ಇಂಥವರನ್ನು ತೊಂದರೆಪಡಿಸಿದರೆ ಅವರು ನನಗೆ ಮೊರೆಯಿಡುವರು ಆ ಮೊರೆಗೆ ನಾನು ಕಿವಿಗೊಡುವೆನೆಂದು ತಿಳಿದುಕೊಳ್ಳಿರಿ.
24ನಾನು ಕೋಪಗೊಂಡು ನಿಮ್ಮ ಶತ್ರುಗಳನ್ನು ಕತ್ತಿಯಿಂದ ಸಂಹಾರಮಾಡಿಸುವೆನು. ನಿಮ್ಮ ಹೆಂಡತಿಯರು ವಿಧವೆಯರಾಗುವರು. ನಿಮ್ಮ ಮಕ್ಕಳು ದಿಕ್ಕಿಲ್ಲದವರಾಗುವರು.
25ನನ್ನ ಜನರಲ್ಲಿ ಒಬ್ಬ ಬಡವನಿಗೆ ನೀನು ಹಣ ಕೊಟ್ಟರೆ ಅವನನ್ನು ಸಾಲಗಾರನಂತೆ ಕಾಣಬಾರದು. ಅವನಿಂದ ಬಡ್ಡಿಯನ್ನು ಕೇಳಬಾರದು.
26ನೀನು ಒಬ್ಬನ ಕಂಬಳಿಯನ್ನು ಅಡವು ಇಟ್ಟುಕೊಂಡರೆ ಸೂರ್ಯನು ಮುಳುಗುವಷ್ಟರಲ್ಲಿ ಅದನ್ನು ಹಿಂದಕ್ಕೆ ಕೊಡಬೇಕು.
27ಏಕೆಂದರೆ ಅದು ಅವನಿಗೆ ಒಂದೇ ಹೊದಿಕೆಯಾಗಿದೆ. ಅದೇ ಅವನ ಮೈಗೆ ಉಡುಪು. ಅವನು ಬೇರೆ ಯಾವುದನ್ನು ಹೊದ್ದುಕೊಂಡು ಮಲಗಬೇಕು? ಅವನು ನನಗೆ ಮೊರೆಯಿಟ್ಟರೆ ನಾನು ಕಿವಿಗೊಟ್ಟು ಕೇಳುವೆನು. ಏಕೆಂದರೆ ನಾನು ದಯಾಪರನು.
28ದೇವರನ್ನು ದೂಷಿಸಬಾರದು. ನಿನ್ನ ಜನರ ಅಧಿಕಾರಿಗಳನ್ನು ನೀನು ಶಪಿಸಬಾರದು.
29ನಿಮ್ಮ ಕಣದಿಂದ ಹಾಗೂ ದ್ರಾಕ್ಷಾಲತೆಯಿಂದ ನನಗೆ ಸಲ್ಲಿಸತಕ್ಕದ್ದನ್ನು ಸಮರ್ಪಿಸುವುದಕ್ಕೆ ತಡಮಾಡಬಾರದು. ನಿಮ್ಮ ಚೊಚ್ಚಲು ಗಂಡು ಮಕ್ಕಳನ್ನು ನನಗೆ ಸಮರ್ಪಿಸಬೇಕು.
30ಅದರಂತೆಯೇ ನಿಮ್ಮ ಕುರಿ, ದನಗಳ ಚೊಚ್ಚಲು ಮರಿಗಳನ್ನು ನನಗೆ ಸಮರ್ಪಿಸಬೇಕು. ಏಳು ದಿನಗಳ ಕಾಲ ಆ ಮರಿ ತನ್ನ ತಾಯಿಯೊಂದಿಗಿರಲಿ. ಎಂಟನೆಯ ದಿನದಲ್ಲಿ ಅದನ್ನು ನನಗೆ ಸಮರ್ಪಿಸಬೇಕು.
31ನೀವು ನನಗೆ ಪರಿಶುದ್ಧ ಜನರಾಗಿರಬೇಕು. ಆದುದರಿಂದ ಕಾಡುಮೃಗ ಕೊಂದದ್ದನ್ನು ನೀವು ತಿನ್ನಬಾರದು, ಅದನ್ನು ನಾಯಿಗಳಿಗೆ ಬಿಡಬೇಕು.
WEBREATH · 11:11
«He himself gives everyone life and breath and everything else» — Acts 17:25
Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.
WEBREATH — the Minute at 11:11, your own local time — we are One Breath