ವಿಮೋಚನಕಾಂಡ 24
ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ
1ಯೆಹೋವನು ಮೋಶೆಗೆ, “ನೀನು, ಆರೋನ್, ನಾದಾಬ್, ಅಬೀಹೂ ಹಾಗೂ ಇಸ್ರಾಯೇಲರ ಹಿರಿಯರಲ್ಲಿ ಎಪ್ಪತ್ತು ಮಂದಿ ಈ ಬೆಟ್ಟವನ್ನು ಹತ್ತಿ ಯೆಹೋವನ ಬಳಿಗೆ ಬಂದು ದೂರದಲ್ಲಿ ನಿಂತು ಅಡ್ಡಬಿದ್ದು ಆರಾಧಿಸಬೇಕು.
2ಮೋಶೆ ಒಬ್ಬನೇ ಯೆಹೋವನ ಸಮೀಪಕ್ಕೆ ಬರಬೇಕೇ ಹೊರತು ಬೇರೆ ಯಾರು ಸಮೀಪಕ್ಕೆ ಬರಬಾರದು. ಮಿಕ್ಕ ಜನರು ಬೆಟ್ಟವನ್ನು ಹತ್ತಲೇಬಾರದು” ಎಂದು ಹೇಳಿದನು.
3ಮೋಶೆ ಜನರ ಬಳಿಗೆ ಬಂದು ಯೆಹೋವನ ಎಲ್ಲಾ ಮಾತುಗಳನ್ನೂ ಮತ್ತು ಅಜ್ಞಾವಿಧಿಗಳನ್ನೂ ವಿವರಿಸಲು ಜನರೆಲ್ಲರೂ, “ಯೆಹೋವನ ಮಾತುಗಳನ್ನೆಲ್ಲಾ ಅನುಸರಿಸಿ ನಡೆಯುವೆವು” ಎಂದು ಒಕ್ಕೊರಳಿನಿಂದ ಉತ್ತರಕೊಟ್ಟರು.
4ಮೋಶೆಯು ಯೆಹೋವನ ಆಜ್ಞೆಗಳನ್ನೆಲ್ಲಾ ಬರೆದಿಟ್ಟನು. ಬೆಳಿಗ್ಗೆ ಎದ್ದು ಆ ಬೆಟ್ಟದ ತಪ್ಪಲಲ್ಲಿ ಯಜ್ಞವೇದಿಯನ್ನು ಕಟ್ಟಿಸಿ ಇಸ್ರಾಯೇಲರ ಹನ್ನೆರಡು ಕುಲಗಳಿಗೆ ಸರಿಯಾಗಿ ಹನ್ನೆರಡು ಕಲ್ಲಿನ ಕಂಬಗಳನ್ನು ಸ್ಥಾಪನೆಮಾಡಿಸಿದನು.
5ಇಸ್ರಾಯೇಲರ ಯೌವನಸ್ಥರಿಗೆ ನೀವು ಯೆಹೋವನಿಗೋಸ್ಕರ ಸರ್ವಾಂಗಹೋಮಗಳನ್ನು ಮಾಡಿ ಸಮಾಧಾನ ಯಜ್ಞಕ್ಕಾಗಿ ಹೋರಿಗಳನ್ನು ಸಮರ್ಪಿಸಬೇಕೆಂದು ಅಪ್ಪಣೆಕೊಟ್ಟು ಕಳುಹಿಸಿದನು.
6ಅನಂತರ ಮೋಶೆ ಆ ರಕ್ತದಲ್ಲಿ ಅರ್ಧವನ್ನು ತೆಗೆದುಕೊಂಡು ಬಟ್ಟಲುಗಳಲ್ಲಿ ತುಂಬಿ ಅರ್ಧವನ್ನು ಯಜ್ಞವೇದಿಯ ಮೇಲೆ ಪ್ರೋಕ್ಷಿಸಿದನು.
7ತರುವಾಯ ಒಡಂಬಡಿಕೆಯ ಗ್ರಂಥವನ್ನು ತೆಗೆದುಕೊಂಡು ಜನರಿಗೆ ಕೇಳಿಸುವಂತೆ ಓದಿದನು. ಅವರು ಕೇಳಿ, “ಯೆಹೋವನ ಆಜ್ಞೆಗಳನ್ನೆಲ್ಲಾ ನಾವು ಅನುಸರಿಸಿ ವಿಧೇಯರಾಗುವೆವು” ಅಂದರು.
8ಆಗ ಮೋಶೆಯು ಆ ರಕ್ತವನ್ನು ತೆಗೆದುಕೊಂಡು ಜನರ ಮೇಲೆ ಚಿಮುಕಿಸಿ, “ಇಗೋ ಈ ಗ್ರಂಥದಲ್ಲಿ ಹೇಳಿರುವ ಎಲ್ಲಾ ಆಜ್ಞೆಗಳ ಪ್ರಕಾರ ಯೆಹೋವನು ನಿಮ್ಮ ಸಂಗಡ ಮಾಡಿಕೊಂಡ ಒಡಂಬಡಿಕೆಯ ರಕ್ತವು ಇದೇ” ಅಂದನು.
9ಮೋಶೆ, ಆರೋನ್, ನಾದಾಬ್, ಅಬೀಹೂ ಹಾಗೂ ಇಸ್ರಾಯೇಲರ ಹಿರಿಯರಲ್ಲಿ ಎಪ್ಪತ್ತು ಜನರು ಬೆಟ್ಟವನ್ನು ಹತ್ತಿದರು.
10ಅವರಿಗೆ ಇಸ್ರಾಯೇಲರ ದೇವರ ದರ್ಶನವಾಯಿತು. ಅವರು ದೇವರನ್ನು ನೋಡಿದರು. ಆಕಾಶಮಂಡಲದಂತೆ ಅತಿ ನಿರ್ಮಲವಾದ ಇಂದ್ರನೀಲಮಣಿಯ ನೆಲಗಟ್ಟು ಆತನ ಪಾದಪೀಠವಾಗಿತ್ತು.
11ಆತನು ಇಸ್ರಾಯೇಲರ ಮುಖಂಡರಿಗೆ ಯಾವ ಕೇಡನ್ನೂ ಮಾಡಲಿಲ್ಲ. ಅವರು ದೇವರನ್ನು ನೋಡಿ ಅನ್ನಪಾನಗಳನ್ನು ತೆಗೆದುಕೊಂಡರು.
12ಯೆಹೋವನು ಮೋಶೆಗೆ, “ನೀನು ಬೆಟ್ಟವನ್ನು ಹತ್ತಿ ಬಂದು ನನ್ನ ಹತ್ತಿರದಲ್ಲೇ ಇರು. ನೀನು ಆ ಧರ್ಮಶಾಸ್ತ್ರವನ್ನೂ ಮತ್ತು ಆಜ್ಞೆಗಳನ್ನೂ ಜನರಿಗೆ ಬೋಧಿಸುವಂತೆ ನಾನು ಅವುಗಳನ್ನು ಬರೆದಿರುವ ಶಿಲಾಶಾಸನಗಳನ್ನು ನಿನಗೆ ಕೊಡುತ್ತೇನೆ” ಎಂದು ಹೇಳಿದನು.
13ಮೋಶೆಯು ತನ್ನ ಶಿಷ್ಯನಾದ ಯೆಹೋಶುವನೊಂದಿಗೆ ಎದ್ದು ದೇವರ ಬೆಟ್ಟದ ಮೇಲಕ್ಕೆ ಹೋದನು.
14ಇದಕ್ಕೆ ಮೊದಲು ಅವನು ಹಿರಿಯರಿಗೆ, “ನಾವು ತಿರುಗಿ ನಿಮ್ಮ ಬಳಿಗೆ ಬರುವ ತನಕ ನೀವು ಇಲ್ಲೇ ಕಾದುಕೊಂಡಿರಿ. ಆರೋನನು ಮತ್ತು ಹೂರನು ನಿಮ್ಮ ಬಳಿಯಲ್ಲಿರುವರು. ಯಾರಿಗಾದರೂ ವ್ಯಾಜ್ಯವಿದ್ದ ಪಕ್ಷಕ್ಕೆ ಅವರ ಹತ್ತಿರಕ್ಕೆ ಹೋಗಲಿ” ಎಂದು ಹೇಳಿದನು.
15ಮೋಶೆಯು ಬೆಟ್ಟವನ್ನು ಹತ್ತಿದನು ಮತ್ತು ಮೇಘವು ಬೆಟ್ಟವನ್ನು ಆವರಿಸಿಕೊಂಡಿತು.
16ಯೆಹೋವನ ತೇಜಸ್ಸು ಸೀನಾಯಿಬೆಟ್ಟದ ಮೇಲೆ ನೆಲೆಗೊಂಡಿತ್ತು ಮತ್ತು ಆ ಮೇಘವು ಆರು ದಿನಗಳ ವರೆಗೂ ಬೆಟ್ಟವನ್ನು ಆವರಿಸಿಕೊಂಡಿತ್ತು. ಏಳನೆಯ ದಿನದಲ್ಲಿ ಯೆಹೋವನು ಮೇಘದೊಳಗಿನಿಂದ ಮೋಶೆಯನ್ನು ಕೂಗಿ ಕರೆದನು.
17ಯೆಹೋವನ ತೇಜಸ್ಸು ಬೆಟ್ಟದ ತುದಿಯಲ್ಲಿ ದಹಿಸುವ ಬೆಂಕಿಯಂತೆ ಇಸ್ರಾಯೇಲರಿಗೆ ಕಾಣಿಸಿತು.
18ಮೋಶೆಯು ಆ ಮೇಘದೊಳಗೆ ಪ್ರವೇಶಿಸಿ ಬೆಟ್ಟವನ್ನೇರಿದನು. ಅವನು ಆ ಬೆಟ್ಟದಲ್ಲಿ ನಲ್ವತ್ತು ದಿನ ಹಗಲಿರುಳು ಆ ಬೆಟ್ಟದಲ್ಲಿಯೇ ಇದ್ದನು.
WEBREATH · 11:11
«He himself gives everyone life and breath and everything else» — Acts 17:25
Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.
WEBREATH — the Minute at 11:11, your own local time — we are One Breath