ಕ್ರಿಶ್ಚಿಯನ್ ಧರ್ಮ
ಹಿಂದೆ

ವಿಮೋಚನಕಾಂಡ 25

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ,

2“ಇಸ್ರಾಯೇಲರು ನನಗಾಗಿ ಕಾಣಿಕೆಯನ್ನು ತರಬೇಕೆಂದು ಅವರಿಗೆ ಹೇಳು. ಮನಃಪೂರ್ವಕವಾಗಿ ಕೊಡುವವರಿಂದಲೇ ಆ ಕಾಣಿಕೆಯನ್ನು ತೆಗೆದುಕೊಳ್ಳಬೇಕು.

3ನೀನು ಅವರಿಂದ ತೆಗೆದುಕೊಳ್ಳಬೇಕಾದ ಕಾಣಿಕೆಗಳು ಯಾವುವೆಂದರೆ, ಚಿನ್ನ, ಬೆಳ್ಳಿ, ಹಾಗೂ ತಾಮ್ರ ಎಂಬ ಲೋಹಗಳು,

4ನೀಲಿ, ನೇರಳೆ, ರಕ್ತಗೆಂಪು ವರ್ಣಗಳುಳ್ಳ ದಾರಗಳೂ, ನಾರುಬಟ್ಟೆಗಳೂ, ಆಡು ಕೂದಲಿನ ಉಣ್ಣೆಯ ಬಟ್ಟೆಗಳೂ,

5ಹದಮಾಡಿರುವ ಕೆಂಪುಬಣ್ಣದ ಟಗರಿನ ತೊಗಲುಗಳು, ಕಡಲಪ್ರಾಣಿಯ ತೊಗಲುಗಳೂ, ಜಾಲೀಮರವೂ,

6ದೀಪಕ್ಕೆ ಬೇಕಾದ ಎಣ್ಣೆಯೂ, ಅಭಿಷೇಕ ತೈಲಕ್ಕೆ ಮತ್ತು ಪರಿಮಳಧೂಪಕ್ಕೆ ಬೇಕಾದ ಸುಗಂಧದ್ರವ್ಯಗಳೂ,

7ಮಹಾಯಾಜಕನ ಕವಚಕ್ಕೆ ಹಾಗೂ ಎದೆಗೆ ಧರಿಸುವ ಪದಕದ ಮೇಲೆ ಇರಿಸಲು ಬೇಕಾಗಿರುವ ಗೋಮೇಧಕರತ್ನಗಳು ಹಾಗೂ ಇತರ ರತ್ನಗಳೂ ಇವೇ.

8“ನಾನು ಅವರ ಮಧ್ಯದಲ್ಲಿ ವಾಸಮಾಡುವುದಕ್ಕೆ ನನಗೆ ಒಂದು ಗುಡಾರವನ್ನು ಕಟ್ಟಿಸಬೇಕು.

9ನಾನು ನಿನಗೆ ತೋರಿಸುವ ಮಾದರಿಯಲ್ಲಿಯೇ ಗುಡಾರವನ್ನೂ ಅದರಲ್ಲಿರುವ ಎಲ್ಲಾ ಸಾಮಾನುಗಳನ್ನೂ ಮಾಡಿಸಬೇಕು.

10“ನೀನು ಜಾಲೀಮರದಿಂದ ಒಂದು ಮಂಜೂಷವನ್ನು ಮಾಡಿಸಬೇಕು. ಅದು ಎರಡುವರೆ ಮೊಳ ಉದ್ದವು, ಒಂದುವರೆ ಮೊಳ ಅಗಲವು ಹಾಗೂ ಒಂದುವರೆ ಮೊಳ ಎತ್ತರವು ಆಗಿರಬೇಕು.

11ಚೊಕ್ಕ ಬಂಗಾರದ ತಗಡುಗಳನ್ನು ಅದರ ಹೊರಗಡೆಯೂ ಹಾಗೂ ಒಳಗಡೆಯೂ ಹೊದಿಸಬೇಕು. ಅದರ ಮೇಲೆ ಸುತ್ತಲೂ ಚಿನ್ನದ ತೋರಣ ಕಟ್ಟಿಸಬೇಕು.

12ನಾಲ್ಕು ಬಂಗಾರದ ಬಳೆಗಳನ್ನು ಅದರ ನಾಲ್ಕು ಮೂಲೆಗಳಲ್ಲಿರುವ ಒಂದೊಂದು ಕಾಲಿಗೂ ಎರಡೆರಡು ಬಳೆಗಳನ್ನು ಹಾಕಬೇಕು.

13ಆ ಮಂಜೂಷವನ್ನು ಹೊರುವುದಕ್ಕಾಗಿ ನೀನು ಜಾಲೀಮರದ ಕಂಬಗಳನ್ನು ಮಾಡಿಸಿ ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿ,

14ಮಂಜೂಷದ ಎರಡು ಕಡೆಗಳಲ್ಲಿರುವ ಬಳೆಗಳಲ್ಲಿ ಸೇರಿಸಬೇಕು.

15ಆ ಕಂಬಗಳನ್ನು ಮಂಜೂಷದ ಬಳೆಗಳಿಂದ ತೆಗೆಯದೇ ಅವುಗಳಲ್ಲಿಯೇ ಬಿಟ್ಟಿರಬೇಕು.

16ಆ ಮಂಜೂಷದಲ್ಲಿ ನಾನು ನಿನಗೆ ಕೊಡುವ ಆಜ್ಞಾಶಾಸನವನ್ನು ಇಡಬೇಕು.

17ಚೊಕ್ಕ ಬಂಗಾರದ ಕೃಪಾಸನವನ್ನು ಮಾಡಿಸಬೇಕು. ಅದು ಎರಡುವರೆ ಮೊಳ ಉದ್ದವು, ಒಂದುವರೆ ಮೊಳ ಅಗಲವೂ ಆಗಿರಬೇಕು.

18ಕೃಪಾಸನದ ಎರಡು ಕೊನೆಗಳಲ್ಲಿ ಎರಡು ಬಂಗಾರದ ಕೆರೂಬಿಗಳನ್ನು ಕೆತ್ತನೆ ಕೆಲಸದಿಂದ ಮಾಡಿಸಬೇಕು.

19ಕೃಪಾಸನದ ಒಂದೊಂದು ಕೊನೆಯಲ್ಲಿ ಒಂದೊಂದು ಕೆರೂಬಿಯನ್ನು ಮಾಡಿಸಿ ಅವುಗಳನ್ನು ಕೃಪಾಸನಕ್ಕೆ ಜೋಡಿಸಬೇಕು.

20ಆ ಕೆರೂಬಿಗಳು ಮೇಲಕ್ಕೆ ರೆಕ್ಕೆಗಳನ್ನು ಚಾಚಿರುವಂತೆಯೂ ಮತ್ತು ಕೃಪಾಸನವನ್ನು ತಮ್ಮ ರೆಕ್ಕೆಗಳಿಂದ ಮುಚ್ಚಿರುವಂತೆಯೂ ಇರಿಸಬೇಕು. ಅವುಗಳ ಮುಖಗಳು ಎದುರುಬದುರಾಗಿ ಕೃಪಾಸನವನ್ನು ನೋಡುವಂತಿರಬೇಕು.

21ಆ ಕೃಪಾಸನವನ್ನು ಮಂಜೂಷದ ಮೇಲಿರಿಸಬೇಕು. ನಾನು ನಿನಗೆ ಕೊಡುವ ಆಜ್ಞಾಶಾಸನಗಳನ್ನು ಆ ಮಂಜೂಷದೊಳಗೆ ಇರಿಸಬೇಕು

22ಅಲ್ಲಿಯೇ ನಾನು ನಿನಗೆ ದರ್ಶನವನ್ನು ಕೊಡುವೆನು. ಕೃಪಾಸನದ ಮೇಲೆ ಆಜ್ಞಾಶಾಸನಗಳನ್ನು ಇಟ್ಟಿರುವ ಮಂಜೂಷದ ಮೇಲಣ ಎರಡು ಕೆರೂಬಿಗಳ ನಡುವೆಯೇ ನಾನು ಇದ್ದು ನಿನ್ನ ಸಂಗಡ ಮಾತನಾಡಿ ನೀನು ಇಸ್ರಾಯೇಲರಿಗೆ ಆಜ್ಞಾಪಿಸಬೇಕಾಗಿರುವ ಎಲ್ಲಾ ಸಂಗತಿಗಳನ್ನು ತಿಳಿಸುವೆನು.

23“ನೀನು ಜಾಲೀಮರದಿಂದ ಒಂದು ಮೇಜನ್ನು ಮಾಡಿಸಬೇಕು. ಅದು ಎರಡು ಮೊಳ ಉದ್ದವಾಗಿಯೂ, ಒಂದು ಮೊಳ ಅಗಲವಾಗಿಯೂ, ಒಂದುವರೆ ಮೊಳ ಎತ್ತರವಾಗಿಯೂ ಇರಬೇಕು.

24ಅದಕ್ಕೆ ಚೊಕ್ಕ ಬಂಗಾರದ ತಗಡುಗಳನ್ನು ಹೊದಿಸಿ, ಸುತ್ತಲೂ ಚಿನ್ನದ ತೋರಣ ಕಟ್ಟಿಸಬೇಕು.

25ಮೇಜಿನ ಸುತ್ತಲೂ ಅಂಗೈ ಅಗಲದ ಅಡ್ಡ ಪಟ್ಟಿಯನ್ನು ಮಾಡಿಸಿ ಅದಕ್ಕೂ ಚಿನ್ನದ ತೋರಣ ಕಟ್ಟಿಸಬೇಕು.

26ನಾಲ್ಕು ಚಿನ್ನದ ಬಳೆಗಳನ್ನು ಮಾಡಿಸಿ ಮೇಜಿನ ನಾಲ್ಕು ಕಾಲುಗಳಿಗೆ ಹಾಕಬೇಕು.

27ಆ ಬಳೆಗಳು ಅಡ್ಡಪಟ್ಟಿಗೆಗೆ ಅಂಟಿಕೊಂಡಿರಬೇಕು. ಮೇಜನ್ನು ಎತ್ತುವುದಕ್ಕಾಗಿ ಕೋಲುಗಳನ್ನು ಅವುಗಳಲ್ಲಿ ಸೇರಿಸಬೇಕು.

28ಆ ಕೋಲುಗಳನ್ನು ಜಾಲೀಮರದಿಂದ ಮಾಡಿಸಿ ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಬೇಕು. ಅವುಗಳಿಂದಲೇ ಮೇಜನ್ನು ಎತ್ತಬೇಕು.

29ಮೇಜಿನ ಮೇಲಿಡಬೇಕಾದ ಹರಿವಾಣಗಳನ್ನು, ಧೂಪಾರತಿಗಳನ್ನು, ಹೂಜಿಗಳನ್ನು, ಪಾನದ್ರವ್ಯವನ್ನು ಅರ್ಪಿಸುವುದಕ್ಕೆ ಬೇಕಾದ ಬಟ್ಟಲುಗಳನ್ನು ಚೊಕ್ಕ ಬಂಗಾರದಿಂದಲೇ ಮಾಡಿಸಬೇಕು.

30ನೈವೇದ್ಯದ ರೊಟ್ಟಿಗಳು ಪ್ರತಿದಿನ ಆ ಮೇಜಿನ ಮೇಲೆ ನನ್ನ ಸಮ್ಮುಖದಲ್ಲಿಯೇ ಇಟ್ಟಿರಬೇಕು.

31“ಚೊಕ್ಕ ಬಂಗಾರದ ದೀಪಸ್ತಂಭವನ್ನು ಮಾಡಿಸಬೇಕು. ಅದರ ಕೆಳಭಾಗವನ್ನು ಕಂಬವನ್ನೂ ನಕಾಸಿ ಕೆಲಸದಿಂದ ಮಾಡಿಸಬೇಕು. ಆ ದೀಪಸ್ತಂಭದ ಬುಡದಿಂದಲೇ ಅಖಂಡವಾಗಿ ಪುಷ್ಪದ ಗೊಂಚಲುಗಳು, ಅರಳಿದ ಪುಷ್ಪಗಳು ಮೊಗ್ಗುಗಳು ಅಲಂಕಾರವಾಗಿ ಕೆತ್ತಿರಬೇಕು.

32ಕಂಬದ ಒಂದೊಂದು ಪಾರ್ಶ್ವದಲ್ಲಿಯೂ ಮೂರು ಮೂರು ಕೊಂಬೆಗಳಂತೆ ಹಾಗೆ ಆರು ಕೊಂಬೆಗಳೂ ಇರಬೇಕು.

33ಪ್ರತಿಯೊಂದು ಕೊಂಬೆಗಳಲ್ಲಿ ಬಾದಾಮಿ ಹೂವುಗಳಂತಿರುವ ಮೂರು ಮೂರು ಹೂವುಗಳೂ ಮೊಗ್ಗುಗಳೂ ಇರಬೇಕು. ದೀಪಸ್ತಂಭದಿಂದ ಬರುವ ಆರು ಕೊಂಬೆಗಳನ್ನು ಹಾಗೆಯೇ ಮಾಡಿಸಬೇಕು.

34ದೀಪಸ್ತಂಭದ ಕಂಬದಲ್ಲಿ ಪುಷ್ಪಗುಚ್ಛಗಳೂ, ಪುಷ್ಪಗಳೂ, ಮೊಗ್ಗುಗಳು ಇರುವ ಬಾದಾಮಿ ಹೂವುಗಳಂತೆ ನಾಲ್ಕು ಪುಷ್ಪಾಲಂಕಾರಗಳೂ ಇರಬೇಕು.

35ಎರಡೆರಡು ಕೊಂಬೆಗಳು ಕವಲು ಒಡೆದಿರುವ ಸ್ಥಳಗಳಲ್ಲೆಲ್ಲಾ ಒಂದೊಂದು ಮೊಗ್ಗು ಇರಬೇಕು.

36ಪುಷ್ಪಪಾತ್ರೆಗಳೂ, ಕೊಂಬುಗಳೂ ಸಹಿತವಾದ ದೀಪಸ್ತಂಭವನ್ನೆಲ್ಲಾ ಒಟ್ಟಿಗೆ ಚೊಕ್ಕ ಬಂಗಾರದಿಂದ ನಕಾಸಿ ಕೆಲಸದಿಂದ ಮಾಡಿಸಬೇಕು.

37ಅದಕ್ಕೆ ಏಳು ಹಣತೆಗಳನ್ನು ಮಾಡಿಸಬೇಕು. ಆ ಹಣತೆಗಳ ಬೆಳಕು ಎದುರಿನಿಂದ ಬೀಳುವಂತೆ ಅವುಗಳನ್ನು ಹಚ್ಚಿರಬೇಕು.

38ದೀಪದ ಕುಡಿತೆಗೆಯುವ ಕತ್ತರಿಗಳೂ, ಕತ್ತರಿಸಿದ ಕುಡಿಗಳನ್ನು ಹಾಕುವ ಬಟ್ಟಲುಗಳನ್ನೂ ಚೊಕ್ಕ ಬಂಗಾರದಿಂದಲೇ ಮಾಡಿಸಬೇಕು.

39ದೀಪಸ್ತಂಭವೂ ಅದರ ಎಲ್ಲಾ ಉಪಕರಣಗಳೂ ಒಂದು ತಲಾಂತು ಚೊಕ್ಕ ಬಂಗಾರವಾಗಿರಬೇಕು.

40ನೋಡು, ಬೆಟ್ಟದಲ್ಲಿ ನಾನು ನಿನಗೆ ತೋರಿಸಿದ ಮಾದರಿಯಲ್ಲಿಯೇ ಎಲ್ಲವನ್ನು ಎಚ್ಚರಿಕೆಯಿಂದ ಮಾಡಿಸಬೇಕು.”

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath