ವಿಮೋಚನಕಾಂಡ 37
ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ
1ಬೆಚಲೇಲನು ಜಾಲೀಮರದಿಂದ ಮಂಜೂಷವನ್ನು ಮಾಡಿಸಿದನು. ಅದು ಎರಡುವರೆ ಮೊಳ ಉದ್ದ, ಒಂದುವರೆ ಮೊಳ ಅಗಲ ಹಾಗೂ ಒಂದುವರೆ ಮೊಳ ಎತ್ತರವೂ ಆಗಿತ್ತು.
2ಚೊಕ್ಕ ಬಂಗಾರದ ತಗಡುಗಳನ್ನು ಅದರ ಹೊರಗಡೆಯೂ ಮತ್ತು ಒಳಗಡೆಯೂ ಹೊದಿಸಿದನು. ಅದರ ಮೇಲೆ ಸುತ್ತಲು ಚಿನ್ನದ ಕಿರೀಟವನ್ನು ಕಟ್ಟಿಸಿದನು.
3ನಾಲ್ಕು ಬಂಗಾರದ ಬಳೆಗಳನ್ನು ಎರಕಹೊಯಿಸಿ ಅದರ ನಾಲ್ಕು ಮೂಲೆಗಳಲ್ಲಿ ಅಂದರೆ, ಒಂದೊಂದು ಕಡೆಯಲ್ಲಿ ಎರಡೆರಡು ಬಳೆಗಳನ್ನು ಇರಿಸಿದನು.
4ಮತ್ತು ಜಾಲೀಮರದ ಕಂಬಗಳನ್ನು ಮಾಡಿ ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿದನು.
5ಮಂಜೂಷವನ್ನು ಹೊರುವುದಕ್ಕಾಗಿ ಕಂಬಗಳನ್ನು ಮಂಜೂಷದ ಪಾರ್ಶ್ವಗಳಲ್ಲಿರುವ ಬಳೆಗಳಲ್ಲಿ ಅದನ್ನು ಸಿಕ್ಕಿಸಿದನು.
6ಇದಲ್ಲದೆ ಚೊಕ್ಕಬಂಗಾರದಿಂದ ಕೃಪಾಸನವನ್ನು ಮಾಡಿದನು. ಅದು ಎರಡುವರೆ ಮೊಳ ಉದ್ದವು, ಒಂದುವರೆ ಮೊಳ ಅಗಲವೂ ಆಗಿತ್ತು.
7ಬೆಚಲೇಲನು ಕೃಪಾಸನದ ಎರಡು ಕೊನೆಗಳಲ್ಲಿ ಕೆರೂಬಿಗಳ ಎರಡು ಬಂಗಾರದ ಆಕಾರಗಳನ್ನು ನಕಾಸಿಕೆಲಸದಿಂದ ಮಾಡಿಸಿದನು.
8ಕೃಪಾಸನದ ಒಂದೊಂದು ಕೊನೆಯಲ್ಲಿ ಒಂದೊಂದು ಕೆರೂಬಿಗಳನ್ನು ಮಾಡಿ ಅವುಗಳನ್ನು ಕೃಪಾಸನಕ್ಕೆ ಜೋಡಿಸಿದನು.
9ಆ ಕೆರೂಬಿಗಳು ಮೇಲಕ್ಕೆ ರೆಕ್ಕೆಗಳನ್ನು ಚಾಚಿರುವಂತೆಯೂ, ಕೃಪಾಸನವನ್ನು ತಮ್ಮ ರೆಕ್ಕೆಗಳಿಂದ ಮುಚ್ಚುವಂತೆಯೂ ಇದ್ದವು. ಅವುಗಳ ಮುಖಗಳು ಎದುರು ಬದುರಾಗಿ ಕೃಪಾಸನವನ್ನು ನೋಡುತ್ತಿದ್ದವು.
10ಬೆಚಲೇಲನು ಜಾಲೀಮರದಿಂದ ಮೇಜನ್ನು ಮಾಡಿದನು. ಅದು ಎರಡು ಮೊಳ ಉದ್ದವೂ ಒಂದು ಮೊಳ ಅಗಲವೂ ಒಂದುವರೆ ಮೊಳ ಎತ್ತರವೂ ಆಗಿತ್ತು.
11ಅದಕ್ಕೆ ಚೊಕ್ಕ ಬಂಗಾರದ ತಗಡುಗಳನ್ನು ಹೊದಿಸಿ ಸುತ್ತಲೂ ಚಿನ್ನದ ತೋರಣಗಳನ್ನು ಕಟ್ಟಿದನು.
12ಮೇಜಿನ ಸುತ್ತಲು ಅಂಗೈ ಅಗಲದ ಅಡ್ಡಪಟ್ಟಿಗಳನ್ನು ಮಾಡಿ ಅದಕ್ಕೂ ನಾಲ್ಕು ಚಿನ್ನದ ತೋರಣ ಕಟ್ಟಿದನು.
13ಮೇಜನ್ನು ಎತ್ತುವ ಕಂಬಗಳನ್ನು ಸೇರಿಸುವುದಕ್ಕಾಗಿ ಅದಕ್ಕೆ ನಾಲ್ಕು ಚಿನ್ನದ ಬಳೆಗಳನ್ನು ಎರಕಹೊಯಿಸಿ ಅದರ ನಾಲ್ಕು ಕಾಲುಗಳಲ್ಲಿ ಜೋಡಿಸಿದನು.
14ಆ ಬಳೆಗಳು ಅಡ್ಡಪಟ್ಟಿಗೆ ಸೇರಿಕೊಂಡಿದ್ದವು.
15ಮೇಜನ್ನು ಹೊತ್ತುಕೊಂಡು ಹೋಗುವವರಿಗಾಗಿ ಜಾಲೀಮರದಿಂದ ಕಂಬಗಳನ್ನು ಮಾಡಿ, ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿದನು.
16ಮೇಜಿನ ಮೇಲೆ ಇಡಬೇಕಾದ ಉಪಕರಣಗಳನ್ನು ಅಂದರೆ ಹರಿವಾಣಗಳು, ಧೂಪಾರತಿಗಳು, ಹೂಜಿಗಳು, ಪಾನದ್ರವ್ಯವನ್ನು ಅರ್ಪಿಸುವುದಕ್ಕೆ ಬೇಕಾದ ಬಟ್ಟಲುಗಳು ಇವುಗಳನ್ನು ಚೊಕ್ಕ ಬಂಗಾರದಿಂದ ಮಾಡಿದನು.
17ಮತ್ತು ಚೊಕ್ಕ ಬಂಗಾರದ ದೀಪಸ್ತಂಭವನ್ನು ಮಾಡಿದನು. ಅದರ ಬುಡವನ್ನು ಮತ್ತು ಕಂಬವನ್ನು ನಕಾಸಿಕೆಲಸದಿಂದ ಮಾಡಿದನು. ಆ ದೀಪಸ್ತಂಭವನ್ನು ಅಖಂಡವಾಗಿ ಪುಷ್ಪದಗೊಂಚಲುಗಳು, ಪುಷ್ಪಗಳು, ಮೊಗ್ಗುಗಳು ಅಲಂಕಾರವಾಗಿ ಅದರಿಂದಲೇ ಹೊರಟಂತೆ ಕೆತ್ತಲಾಗಿತ್ತು.
18ಕಂಬದ ಒಂದೊಂದು ಪಾರ್ಶ್ವದಲ್ಲಿ ಮೂರು ಮೂರು ಕೊಂಬೆಗಳಂತೆ ಒಟ್ಟು ಆರು ಕೊಂಬೆಗಳು ಇದ್ದವು.
19ಪ್ರತಿಯೊಂದು ಕೊಂಬೆಯಲ್ಲಿ ಬಾದಾಮಿ ಹೂವುಗಳಂತಿರುವ ಮೂರು ಮೂರು ಪುಷ್ಪಾಕೃತಿಗಳಿದ್ದವು; ಒಂದೊಂದು ಆಕೃತಿಗೆ ಒಂದೊಂದು ಪುಷ್ಪವೂ, ಒಂದು ಮೊಗ್ಗು ಇದ್ದವು. ಆರು ಕೊಂಬೆಗಳಲ್ಲಿಯೂ ಹಾಗೆಯೇ ಇದ್ದವು.
20ದೀಪಸ್ತಂಭದಲ್ಲಿ ಬಾದಾಮಿ ಹೂವುಗಳಂತಿರುವ ಪುಷ್ಪಗಳೂ, ಮೊಗ್ಗುಗಳೂ ಇರುವ ಹೂ ಗೊಂಚಲುಗಳಂತೆ ನಾಲ್ಕು ಪುಷ್ಪಾಕೃತಿಗಳು ಇದ್ದವು.
21ಎರಡೆರಡು ಕೊಂಬೆಗಳು ಕವಲು ಒಡೆದಿರುವ ಸ್ಥಳಗಳಲ್ಲೆಲ್ಲಾ ಒಂದೊಂದು ಮೊಗ್ಗು, ಕೊಂಬೆಗಳ ಕೆಳಗೆ ಕವಲೊಡೆದಿರುವ ಜಾಗಗಳಲ್ಲಿಯೂ ಒಂದೊಂದು ಮೊಗ್ಗು ಹೀಗೆ ಕೊಂಬೆಗಳ ಆರು ಶಾಖೆಗಳಲ್ಲಿಯೂ ಮೊಗ್ಗುಗಳಿದ್ದವು.
22ಮೊಗ್ಗುಗಳು, ಶಾಖೆಗಳು ಒಂದೇ ಕಡೆಯಿಂದ ಉದ್ಭವಗೊಂಡಿದ್ದವು. ದೀಪಸ್ತಂಭವನ್ನೆಲ್ಲಾ ಒಟ್ಟಿಗೆ ಚೊಕ್ಕಬಂಗಾರದಿಂದ ಏಕವಾಗಿ ಮಾಡಲಾಗಿತ್ತು.
23ಅದರ ಏಳು ಹಣತೆಗಳನ್ನೂ ಅದರ ಕತ್ತರಿಗಳನ್ನೂ ದೀಪದ ಕುಡಿತೆಗೆಯುವ ಬಟ್ಟಲುಗಳನ್ನೂ ಚೊಕ್ಕ ಬಂಗಾರದಿಂದ ಮಾಡಲಾಗಿತ್ತು.
24ದೀಪಸ್ತಂಭವನ್ನೂ ಅದರ ಎಲ್ಲಾ ಉಪಕರಣಗಳನ್ನೂ ಒಂದು ತಲಾಂತು ಚೊಕ್ಕ ಬಂಗಾರದಿಂದ ಮಾಡಲಾಗಿತ್ತು.
25ಅವನು ಜಾಲೀಮರದಿಂದ ಧೂಪವೇದಿಯನ್ನು ಮಾಡಿಸಿದನು. ಅದು ಒಂದು ಮೊಳ ಉದ್ದವಾಗಿಯೂ, ಒಂದು ಮೊಳ ಅಗಲವಾಗಿಯು ಇದ್ದು ಚಚ್ಚೌಕವಾಗಿತ್ತು; ಅದರ ಎತ್ತರವು ಎರಡು ಮೊಳವಾಗಿತ್ತು. ಅದರ ಕೊಂಬುಗಳು ಅದರೊಂದಿಗೆ ಏಕವಾಗಿದ್ದವು.
26ಅದರ ಮೇಲ್ಭಾಗಕ್ಕೂ ಹಲಗೆಗಳಿಗೂ ನಾಲ್ಕು ಪಕ್ಕಗಳಲ್ಲಿದ್ದ ಹಲಗೆಗಳಿಗೂ ಮತ್ತು ಕೊಂಬುಗಳಿಗೂ ಚೊಕ್ಕ ಬಂಗಾರದ ತಗಡುಗಳನ್ನು ಹೊದಿಸಿದನು. ಸುತ್ತಲೂ ಚಿನ್ನದ ತೋರಣ ಕಟ್ಟಿಸಿದನು.
27ಅದನ್ನು ಎತ್ತುವ ಕೋಲುಗಳನ್ನು ಸೇರಿಸುವುದಕ್ಕಾಗಿ ತೋರಣದ ಕೆಳಗೆ ವೇದಿಕೆಯ ಎರಡು ಪಾರ್ಶ್ವಗಳ ಮೂಲೆಗಳಲ್ಲಿ ಎರಡೆರಡು ಚಿನ್ನದ ಬಳೆಗಳನ್ನು ಜೋಡಿಸಿದನು.
28ಜಾಲೀಮರದಿಂದ ಕೋಲುಗಳನ್ನು ಮಾಡಿ ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿದನು.
29ಅದಲ್ಲದೆ ಅವನು ದೇವರ ಪವಿತ್ರ ಸೇವೆಗೆ ನೇಮಕವಾದ ಪಟ್ಟಾಭಿಷೇಕತೈಲವನ್ನೂ ಪರಿಮಳದ್ರವ್ಯಗಳಿಂದ ಮಾಡಿದ ಸ್ವಚ್ಛವಾದ ಧೂಪದ್ರವ್ಯವನ್ನೂ ಸುಗಂಧದ್ರವ್ಯಮಾಡುವವರ ವಿಧಾನದ ಪ್ರಕಾರವೇ ತಯಾರಿಸಿದನು.
WEBREATH · 11:11
«He himself gives everyone life and breath and everything else» — Acts 17:25
Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.
WEBREATH — the Minute at 11:11, your own local time — we are One Breath