ಕ್ರಿಶ್ಚಿಯನ್ ಧರ್ಮ
ಹಿಂದೆ

ಯೆಹೆಜ್ಕೇಲನು 18

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ಯೆಹೋವನು ಮತ್ತೊಂದು ವಾಕ್ಯವನ್ನು ನನಗೆ ದಯಪಾಲಿಸಿದನು,

2“ತಂದೆಗಳು ಹುಳಿ ದ್ರಾಕ್ಷಿಯನ್ನು ತಿಂದರು ಆದರೆ, ಮಕ್ಕಳ ಹಲ್ಲುಗಳು ಚಳಿತುಹೋಗಿವೆ ಎಂಬ ಗಾದೆಯನ್ನು ನೀವು ಇಸ್ರಾಯೇಲ್ ದೇಶದ ವಿಷಯವಾಗಿ ಹೇಳುವುದೇಕೆ?”

3ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ನೀವು ಈ ಗಾದೆಯನ್ನು ಇಸ್ರಾಯೇಲಿನಲ್ಲಿ ಇನ್ನು ಎತ್ತಬೇಕಾಗುವುದಿಲ್ಲ.

4ಇಗೋ, ಸಕಲ ನರಪ್ರಾಣಿಗಳು ನನ್ನವೇ; ತಂದೆಯೇನು, ಮಗನೇನು, ನರಪ್ರಾಣಿಗಳೆಲ್ಲವೂ ನನ್ನ ಅಧೀನದಲ್ಲಿವೆ; ಪಾಪಮಾಡುವ ಪ್ರಾಣಿಯೇ ಸಾಯುವನು.

5“ಒಬ್ಬನು ಸದ್ಧರ್ಮಿಯಾಗಿ ನೀತಿ ನ್ಯಾಯಗಳನ್ನು ನಡೆಸಿ,

6ಗುಡ್ಡಗಳ ಮೇಲೆ ಯಜ್ಞಶೇಷವನ್ನು ತಿನ್ನದೆ, ಇಸ್ರಾಯೇಲ್ ವಂಶದವರ ವಿಗ್ರಹಗಳ ಕಡೆಗೆ ಕಣ್ಣೆತ್ತದೆ, ನೆರೆಯವನ ಹೆಂಡತಿಯನ್ನು ಕೆಡಿಸದೆ,

7ಮುಟ್ಟಿನ ಹೆಂಗಸನ್ನು ಸೇರದೆ, ಯಾರನ್ನೂ ಹಿಂಸಿಸದೆ, ಸಾಲಮಾಡಿದವನ ಒತ್ತೆಯನ್ನು ಬಿಗಿಹಿಡಿಯದೆ, ಯಾರ ಸೊತ್ತನ್ನೂ ಅಪಹರಿಸದೆ, ಹಸಿದವನಿಗೆ ಅನ್ನಕೊಟ್ಟು, ಬೆತ್ತಲೆಯಿರುವವನಿಗೆ ಹೊದಿಕೆಯನ್ನು ಹೊದಿಸಿ,

8ಸಾಲಕ್ಕೆ ಬಡ್ಡಿತೆಗೆಯದೆ, ಲಾಭಕ್ಕೆ ಹಣಕೊಡದೆ, ಅನ್ಯಾಯಕ್ಕೆ ಕೈಹಾಕದೆ, ವಾದಿ ಪ್ರತಿವಾದಿಗಳಿಗೆ ಸರಿಯಾಗಿ ನ್ಯಾಯತೀರಿಸಿ,

9ನನ್ನ ನಿಯಮಗಳನ್ನು ಅನುಸರಿಸಿ, ನನ್ನ ವಿಧಿಗಳನ್ನು ಕೈಕೊಂಡು, ಸತ್ಯಪರನಾಗಿಯೇ ನಡೆದರೆ ಇಂಥವನು ಸದ್ಧರ್ಮಿಯಾಗಿರುವುದರಿಂದ ಖಂಡಿತವಾಗಿ ಜೀವಿಸುವನು” ಇದು ಕರ್ತನಾದ ಯೆಹೋವನ ನುಡಿ.

10“ಇಂಥವನನ್ನು ಪಡೆದ ಮಗನು, ಈಗ ಹೇಳಿದ ದುಷ್ಕೃತ್ಯಗಳಲ್ಲಿ ಯಾವುದನ್ನಾದರೂ ನಡೆಸಿ,

11ಒಳ್ಳೆಕಾರ್ಯಗಳಲ್ಲಿ ಯಾವುದನ್ನೂ ನಡೆಸದೆ ಗುಡ್ಡಗಳ ಮೇಲೆ ಯಜ್ಞಶೇಷವನ್ನು ತಿಂದು ನೆರೆಯವನ ಹೆಂಡತಿಯನ್ನು ಕೆಡಿಸಿ,

12ದೀನದರಿದ್ರರನ್ನು ಹಿಂಸಿಸಿ, ಜನರ ಸೊತ್ತನ್ನು ಅಪಹರಿಸಿ, ಸಾಲಗಾರನ ಒತ್ತೆಯನ್ನು ಬಿಗಿಹಿಡಿದು, ವಿಗ್ರಹಗಳ ಕಡೆಗೆ ಕಣ್ಣೆತ್ತಿ,

13ಅಸಹ್ಯಕಾರ್ಯವನ್ನು ಮಾಡಿ, ಸಾಲಕ್ಕೆ ಬಡ್ಡಿತೆಗೆದು, ಲಾಭಕ್ಕೆ ಹಣಕೊಟ್ಟು, ಬಲಾತ್ಕಾರಿಯೂ ಮತ್ತು ರಕ್ತಸುರಿಸುವವನೂ ಆಗಿದ್ದರೆ ಜೀವಿಸುವನೇ? ಖಂಡಿತ ಜೀವಿಸುವುದಿಲ್ಲ; ಈ ದುರಾಚಾರಗಳನ್ನೆಲ್ಲಾ ನಡೆಸಿದನಲ್ಲವೇ? ಅವನು ಸಾಯುವುದು ಖಂಡಿತ; ತನ್ನ ಮರಣ ದಂಡನೆಗೆ ತಾನೇ ಕಾರಣ.

14“ಇಗೋ, ಇವನು ಪಡೆದ ಮಗನು, ತನ್ನ ತಂದೆಯು ಮಾಡಿದ ಪಾಪಗಳನ್ನೆಲ್ಲಾ ಕಂಡು ಭಯಪಟ್ಟು ಇಂಥಾ ಕಾರ್ಯಗಳನ್ನು ನಡೆಸದೆ,

15“ಗುಡ್ಡಗಳ ಮೇಲೆ ಯಜ್ಞಶೇಷವನ್ನು ತಿನ್ನದೆ, ಇಸ್ರಾಯೇಲ್ ವಂಶದವರ ವಿಗ್ರಹಗಳ ಕಡೆಗೆ ಕಣ್ಣೆತ್ತದೆ, ನೆರೆಯವನ ಹೆಂಡತಿಯನ್ನು ಕೆಡಿಸದೆ,

16ಯಾರನ್ನೂ ಹಿಂಸಿಸದೆ, ಒತ್ತೆಯನ್ನು ಕೇಳದೆ, ಯಾರ ಸೊತ್ತನ್ನೂ ಅಪಹರಿಸದೆ, ಹಸಿದವನಿಗೆ ಅನ್ನಕೊಟ್ಟು, ಬೆತ್ತಲೆಯಿರುವವನಿಗೆ ಹೊದಿಕೆಯನ್ನು ಹೊದಿಸಿ,

17ಬಡವನ ಮೇಲೆ ಕೈಮಾಡದೆ, ಬಡ್ಡಿಯನ್ನು ಕೇಳದೆ, ಲಾಭಕ್ಕೆ ಹಣಕೊಡದೆ, ನನ್ನ ವಿಧಿಗಳನ್ನು ಆಚರಿಸಿ, ನನ್ನ ನಿಯಮಗಳನ್ನು ಅನುಸರಿಸಿದರೆ ತನ್ನ ತಂದೆಯ ಅಧರ್ಮದ ನಿಮಿತ್ತ ಸಾಯುವುದಿಲ್ಲ, ಖಂಡಿತವಾಗಿ ಜೀವಿಸುವನು.

18ಇವನ ತಂದೆಯೋ, ಸ್ವಕುಲದವರನ್ನು ಬಹಳವಾಗಿ ಅರೆದು, ಸುಲಿದು, ಸ್ವಜನರ ನಡುವೆ ಕೆಟ್ಟದನ್ನು ನಡೆಸಿದ ಕಾರಣ, ಇಗೋ, ತನ್ನ ಅಧರ್ಮದಿಂದಲೇ ಸಾಯುವನು.

19“ಆದರೆ ನೀವು, ‘ತಂದೆಯ ದೋಷಫಲವನ್ನು ಮಗನು ಅನುಭವಿಸುವುದು ಖಂಡಿತ’ ಎಂದು ಆಕ್ಷೇಪಿಸುವಿರೋ? ಮಗನು ನೀತಿನ್ಯಾಯಗಳನ್ನು ನಡೆಸಿ, ನನ್ನ ವಿಧಿಗಳನ್ನೆಲ್ಲಾ ಕೈಕೊಂಡು ಆಚರಿಸಿದರೆ ಖಂಡಿತವಾಗಿ ಜೀವಿಸುವನು.

20ಪಾಪ ಮಾಡುವವನೇ ಸಾಯುವನು; ಮಗನು ತಂದೆಯ ದೋಷಫಲವನ್ನು ಅನುಭವಿಸನು; ಶಿಷ್ಟನ ಶಿಷ್ಟತನದ ಫಲವು ಶಿಷ್ಟನದೇ, ದುಷ್ಟನ ದುಷ್ಟತನದ ಫಲವು ದುಷ್ಟನದೇ.

21“ಆದರೆ ದುಷ್ಟನು ತಾನು ಮಾಡುತ್ತಿದ್ದ ಪಾಪಗಳನ್ನೆಲ್ಲಾ ಬಿಟ್ಟುಬಿಟ್ಟು, ನನ್ನ ಸಕಲ ವಿಧಿಗಳನ್ನು ಕೈಕೊಂಡು, ನೀತಿನ್ಯಾಯಗಳನ್ನು ನಡೆಸಿದರೆ ಸಾಯುವುದಿಲ್ಲ, ಖಂಡಿತವಾಗಿ ಜೀವಿಸುವನು.

22ಅವನು ಮಾಡಿದ ಯಾವ ಅಪರಾಧವು ಅವನ ಲೆಕ್ಕಕ್ಕೆ ಸೇರಿಸಲ್ಪಡುವುದಿಲ್ಲ, ಅವನು ಮಾಡುತ್ತಿರುವ ಸದ್ಧರ್ಮದಿಂದಲೇ ಅವನು ಜೀವಿಸುವನು.”

23ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ದುಷ್ಟನ ಸಾವಿನಲ್ಲಿ ನನಗೆ ಸ್ವಲ್ಪವಾದರೂ ಸಂತೋಷವಿಲ್ಲ. ಅವನು ತನ್ನ ದುರ್ಮಾರ್ಗವನ್ನು ಬಿಟ್ಟು ಬಾಳುವುದೇ ನನಗೆ ಸಂತೋಷ.

24ಆದರೆ ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು, ಅಧರ್ಮಮಾಡಿ, ದುಷ್ಟನು ನಡೆಸುವ ದುರಾಚಾರಗಳನ್ನೆಲ್ಲಾ ನಡೆಸಿದರೆ ಅವನು ಜೀವಿಸುವನೋ? ಅವನು ಮಾಡಿದ ಯಾವ ಸುಕೃತ್ಯವು ಅವನ ಲೆಕ್ಕಕ್ಕೆ ಸೇರಿಸಲ್ಪಡುವುದಿಲ್ಲ, ಅವನು ಮಾಡುತ್ತಿರುವ ಪಾಪ ಅಪರಾಧಗಳಿಂದಲೇ ಸಾಯುವನು.

25“ಆದರೆ ನೀವು, ‘ಕರ್ತನ ಕ್ರಮವು ಸರಿಯಲ್ಲ’ ಎಂದು ಹೇಳುತ್ತಿದ್ದೀರಿ; ಇಸ್ರಾಯೇಲ್ ವಂಶದವರೇ, ನನ್ನ ಕ್ರಮವು ಸರಿಯಲ್ಲವೋ? ನಿಮ್ಮ ಕ್ರಮವೇ ಸರಿಯಲ್ಲ.

26ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು, ಅಧರ್ಮಮಾಡಿ, ಅದರಲ್ಲಿ ಸತ್ತರೆ ತಾನು ಮಾಡಿದ ಅಧರ್ಮದಿಂದಲೇ ಸಾಯಬೇಕಾಯಿತು.

27ದುಷ್ಟನು ತಾನು ಮಾಡುತ್ತಿದ್ದ ದುಷ್ಟತನವನ್ನು ಬಿಟ್ಟು, ನೀತಿನ್ಯಾಯಗಳನ್ನು ನಡೆಸಿದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳುವನು.

28ಅವನು ಯೋಚಿಸಿ, ತಾನು ಮಾಡುತ್ತಿದ್ದ ಅಪರಾಧಗಳನ್ನೆಲ್ಲಾ ಬಿಟ್ಟದ್ದರಿಂದ ಸಾಯುವುದಿಲ್ಲ, ಖಂಡಿತವಾಗಿ ಜೀವಿಸುವನು.

29ಆದರೆ ಇಸ್ರಾಯೇಲ್ ವಂಶದವರು ಕರ್ತನ ಕ್ರಮವು ಸಮವಲ್ಲ ಎಂದು ಹೇಳುತ್ತಿದ್ದಾರೆ; ಇಸ್ರಾಯೇಲ್ ವಂಶದವರೇ, ನನ್ನ ಕ್ರಮವು ಸರಿಯಿಲ್ಲವೋ? ನಿಮ್ಮ ಕ್ರಮವೇ ಸರಿಯಿಲ್ಲವಷ್ಟೆ.”

30ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲ್ ವಂಶದವರೇ, ನಿಮ್ಮ ನಿಮ್ಮ ನಡತೆಗೆ ತಕ್ಕ ಹಾಗೆ ನಾನು ನಿಮಗೆ ತೀರ್ಪುಮಾಡುವೆನು; ಅಧರ್ಮವು ನಿಮ್ಮನ್ನು ನಾಶಮಾಡದಂತೆ ತಿರುಗಿಕೊಂಡು ನಿಮ್ಮ ಅಪರಾಧಗಳನ್ನೆಲ್ಲಾ ಬಿಟ್ಟುಬಿಡಿರಿ.

31“ನೀವು ಮಾಡುತ್ತಾ ಬಂದಿರುವ ಅಪರಾಧಗಳನ್ನೆಲ್ಲಾ ನಿಮ್ಮಿಂದ ತೊಲಗಿಸಿಬಿಟ್ಟು ನಿಮ್ಮ ಹೃದಯವನ್ನೂ ಮತ್ತು ಸ್ವಭಾವವನ್ನೂ ನೂತನಪಡಿಸಿಕೊಳ್ಳಿರಿ; ಇಸ್ರಾಯೇಲ್ ವಂಶದವರೇ, ನೀವು ಸಾಯಬೇಕೇ?

32ಯಾರ ಸಾವಿನಲ್ಲೂ ನನಗೆ ಸಂತೋಷವಿಲ್ಲ; ಪಾಪದಿಂದ ತಿರುಗಿಕೊಂಡು ಜೀವಿಸಿರಿ” ಇದು ಕರ್ತನಾದ ಯೆಹೋವನ ನುಡಿ.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath