ಯೆಹೆಜ್ಕೇಲನು 2
ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ
1ಯೆಹೋವನು ನನಗೆ, “ನರಪುತ್ರನೇ, ಎದ್ದು ನಿಂತುಕೋ, ನಿನ್ನ ಸಂಗಡ ಮಾತನಾಡುವೆನು” ಎಂದು ಹೇಳಿದನು.
2ಆತನು ಈ ಮಾತನ್ನು ಹೇಳುವಾಗ ದೇವರಾತ್ಮವು ನನ್ನೊಳಗೆ ಪ್ರವೇಶಿಸಿ, ನಾನು ಎದ್ದು ನಿಂತುಕೊಳ್ಳುವಂತೆ ಮಾಡಿತು; ಆಗ ನನ್ನೊಡನೆ ಮಾತನಾಡಿದಾತನ ನುಡಿಯನ್ನು ಕೇಳಿದೆನು.
3ಆತನು ನನಗೆ ಹೀಗೆ ಹೇಳಿದನು, “ನರಪುತ್ರನೇ, ನನ್ನ ವಿರುದ್ಧವಾಗಿ ತಿರುಗಿಬಿದ್ದು ದ್ರೋಹಮಾಡಿದ ಜನಾಂಗದವರಾದ ಇಸ್ರಾಯೇಲರ ಬಳಿಗೆ ನಿನ್ನನ್ನು ಕಳುಹಿಸುತ್ತೇನೆ; ಈ ದಿನದವರೆಗೆ ಅವರೂ, ಅವರ ಪೂರ್ವಿಕರೂ ನನ್ನ ವಿರುದ್ಧವಾಗಿ ಪಾಪಮಾಡುತ್ತಲೇ ಇದ್ದಾರೆ.
4“ನಾನು ಯಾವ ಸಂತಾನದವರ ಬಳಿಗೆ ನಿನ್ನನ್ನು ಕಳುಹಿಸುತ್ತೇನೋ ಆ ಸಂತಾನದವರು ನಾಚಿಕೆಗೆಟ್ಟವರೂ, ಹಟಗಾರರೂ ಆಗಿರುತ್ತಾರೆ; ನೀನು ಅವರಿಗೆ, ‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ’ ಎಂದು ನುಡಿ.
5ಅವರು ಕೇಳಲಿ ಅಥವಾ ಕೇಳದೇ ಇರಲಿ ಏಕೆಂದರೆ ಅವರು ತಿರುಗಿ ಬೀಳುವ ವಂಶದವರು. ಆದರೆ ಒಬ್ಬ ಪ್ರವಾದಿಯು ತಮ್ಮ ಮಧ್ಯದಲ್ಲಿ ಇದ್ದಾನೆಂದು ತಿಳಿದುಕೊಳ್ಳುವರು.”
6“ನರಪುತ್ರನೇ, ನೀನು ಮುಳ್ಳುಪೊದೆಗಳಲ್ಲಿ ಸಿಕ್ಕಿಕೊಂಡು, ಚೇಳುಗಳ ನಡುವೆ ವಾಸಿಸುವಂತೆ ಅವರ ಮಧ್ಯದಲ್ಲಿದ್ದರೂ ಅವರಿಗೆ ಭಯಪಡಬೇಡ, ಅವರ ಗದರಿಕೆಗೆ ಹೆದರದಿರು; ಅವರು ತಿರುಗಿ ಬೀಳುವ ವಂಶದವರು; ಅವರ ಬಿರುನುಡಿಗೆ ಭಯಪಡಬೇಡ, ಅವರ ಬಿರುನೋಟಕ್ಕೆ ಹೆದರದಿರು.
7ಅವರು ಕೇಳಿದರೂ, ಕೇಳದೆ ಹೋದರೂ ನೀನು ನನ್ನ ಮಾತುಗಳನ್ನು ಅವರಿಗೆ ಹೇಳಬೇಕು; ಅವರು ಖಂಡಿತವಾಗಿ ದ್ರೋಹಿಗಳೇ.”
8ಇದಲ್ಲದೆ ಆತನು, “ನರಪುತ್ರನೇ, ನಾನು ನಿನಗೆ ಹೇಳುವ ಮಾತನ್ನು ಕೇಳು; ಅವಿಧೇಯರಾದ ಆ ವಂಶದವರಂತೆ ನೀನು ಅವಿಧೇಯನಾಗಬೇಡ; ನಾನು ಕೊಡುವುದನ್ನು ಬಾಯಿದೆರೆದು ತಿಂದುಬಿಡು” ಅಂದನು.
9ಇಗೋ, ನಾನು ನೋಡುತ್ತಿರಲಾಗಿ ಒಂದು ಕೈ ನನ್ನ ಕಡೆಗೆ ಚಾಚಿತ್ತು, ಇಗೋ ಅದರಲ್ಲಿ ಗ್ರಂಥದ ಸುರುಳಿಯು ಕಾಣಿಸಿತು.
10ಆತನು ಆ ಸುರುಳಿಯನ್ನು ನನ್ನೆದುರಿನಲ್ಲಿ ಬಿಚ್ಚಿದನು; ಅದರ ಎರಡು ಪಕ್ಕಗಳಲ್ಲಿಯೂ ಬರೆದಿತ್ತು; ಅದರಲ್ಲಿ ಬರೆದದ್ದು ಪ್ರಲಾಪ, ಗೋಳಾಟ, ಶೋಕ ಇವುಗಳೇ.
WEBREATH · 11:11
«He himself gives everyone life and breath and everything else» — Acts 17:25
Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.
WEBREATH — the Minute at 11:11, your own local time — we are One Breath