ಯೆಹೆಜ್ಕೇಲನು 41
ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ
1ಆಮೇಲೆ ಅವನು ನನ್ನನ್ನು ದೇವಾಲಯದ ಪರಿಶುದ್ಧ ಸ್ಥಳಕ್ಕೆ ಕರೆದುಕೊಂಡು ಬಂದು, ಅದರ ದ್ವಾರಕಂಬಗಳನ್ನು ಅಳತೆ ಮಾಡಲು, ಅದರ ಎರಡು ಕಡೆಗಳು ಆರು ಮೊಳ ಅಗಲವಾಗಿತ್ತು.
2ದ್ವಾರದ ಅಗಲವು ಹತ್ತು ಮೊಳಗಳೂ, ದ್ವಾರದ ಎರಡು ಪಕ್ಕದ ಗೋಡೆಗಳ ಅಗಲವು ಐದೈದು ಮೊಳಗಳೂ ಆಗಿದ್ದವು. ಅವನು ಪರಿಶುದ್ಧ ಸ್ಥಳವನ್ನು ಅಳತೆಮಾಡಿದಾಗ ಅದರ ಉದ್ದ ನಲ್ವತ್ತು ಮೊಳಗಳೂ, ಅಗಲ ಇಪ್ಪತ್ತು ಮೊಳಗಳೂ ಇದ್ದವು.
3ಆಮೇಲೆ ಅವನು ಇನ್ನೂ ಮುಂದಕ್ಕೆ ಹೋಗಿ, ಮಹಾಪರಿಶುದ್ಧ ಸ್ಥಳದ ಕಂಬಗಳನ್ನು ಅಳತೆ ಮಾಡಲು ದ್ವಾರದ ಒಂದೊಂದು ಕಂಬದ ಅಗಲ ಎರಡೆರಡು ಮೊಳಗಳೂ, ದ್ವಾರದ ಅಗಲವು ಆರು ಮೊಳಗಳೂ, ದ್ವಾರದ ಪಕ್ಕದ ಗೋಡೆಗಳ ಅಗಲವು ಏಳು ಮೊಳವೆಂದು ಅಳೆದನು.
4ಅದರ ಕೋಣೆಗಳ ಉದ್ದವು ಇಪ್ಪತ್ತು ಮೊಳಗಳೂ, ಅಗಲವು ಇಪ್ಪತ್ತು ಮೊಳಗಳೂ ಇದ್ದವು. ಆಗ ಅವನು ನನಗೆ, “ಇದು ಮಹಾಪರಿಶುದ್ಧ ಸ್ಥಳ” ಎಂದು ಹೇಳಿದನು.
5ಆಮೇಲೆ ಅವನು ಅಳತೆ ಮಾಡಲು, ದೇವಸ್ಥಾನದ ಗೋಡೆಯ ಅಗಲ ಆರು ಮೊಳಗಳೂ, ದೇವಸ್ಥಾನದ ಸುತ್ತುಮುತ್ತಲೂ ಎಲ್ಲಾ ಕಡೆ ಅದರ ಪಕ್ಕಗಳಿಗೆ ಅಂಟಿಕೊಂಡಿದ್ದ ಕೊಠಡಿಗಳ ಅಗಲ ನಾಲ್ಕು ನಾಲ್ಕು ಮೊಳಗಳೂ ಇದ್ದವು.
6ಆ ಕೊಠಡಿಗಳು ಒಂದರ ಮೇಲೊಂದು ಮೂರು ಅಂತಸ್ತು ಆಗಿದ್ದವು; ಒಂದೊಂದು ಅಂತಸ್ತಿನಲ್ಲಿ ಮೂವತ್ತು ಕೊಠಡಿಗಳಿದ್ದವು; ದೇವಸ್ಥಾನದ ಗೋಡೆಯು ಮೆಟ್ಟಿಲುಗಳಿಂದ ಕಟ್ಟಲ್ಪಟ್ಟಿತ್ತು. ಗೋಡೆಯಲ್ಲಿ ರಂಧ್ರವಿಲ್ಲದೆ ಆ ಮೆಟ್ಟಿಲುಗಳೇ ಸುತ್ತಣ ಕೊಠಡಿಗಳ ತೊಲೆಗಳಿಗೆ ಆಧಾರವಾಗಿದ್ದವು. ಆದರೆ ಮನೆಯ ಗೋಡೆಗೆ ಯಾವ ಆಧಾರವಿರಲಿಲ್ಲ.
7ಸುತ್ತಣ ಅಂತಸ್ತುಗಳು ಮೇಲೆ ಹೋದ ಹಾಗೆಲ್ಲಾ ಆಯಾ ಕೊಠಡಿಗಳ ಅಗಲವು ಹೆಚ್ಚುತ್ತಾ ಬಂದಿತು. ಅವು ದೇವಸ್ಥಾನವನ್ನು ಸುತ್ತಿಕೊಂಡು ಮೇಲೆ ಹೋದ ಹಾಗೆಲ್ಲಾ ಅದನ್ನು ಬಿಗಿಯಾಗಿ ತಬ್ಬಿಕೊಂಡಂತೆ ಕಟ್ಟಲ್ಪಟ್ಟಿತ್ತು. ಹೀಗೆ ಮೇಲಿನ ಅಂತಸ್ತುಗಳು ದೇವಸ್ಥಾನದ ಕಡೆಗೆ ಅಗಲವಾಗುತ್ತಾ ಬಂದವು. ಕೆಳಗಿನ ಅಂತಸ್ತಿನಿಂದ ಮಧ್ಯದ ಅಂತಸ್ತಿನ ಮಾರ್ಗವಾಗಿ ಮೇಲಿನ ಅಂತಸ್ತಿಗೆ ಹತ್ತುತ್ತಿದ್ದರು.
8ದೇವಸ್ಥಾನದ ಸುತ್ತುಮುತ್ತಲೂ ಒಂದು ಜಗಲಿಯು ಕಾಣಿಸಿತು; ಅದು ಕೊಠಡಿಗಳಿಗೆ ತಳಹದಿಯಾಗಿ ನೆಲಮಟ್ಟದಿಂದ ಸುಮಾರು ಆರು ಮೊಳದ ಅಳತೆ ಕೋಲಿನಷ್ಟು ಎತ್ತರವಾಗಿತ್ತು.
9ಕೊಠಡಿಗಳ ಹೊರ ಗೋಡೆಯ ದಪ್ಪವು ಐದು ಮೊಳವಿತ್ತು ಮತ್ತು ಉಳಿದದ್ದು, ಒಳಗಿನ ಪಕ್ಕದ ಕೊಠಡಿಗಳ ಸ್ಥಳವಾಗಿತ್ತು.
10ದೇವಸ್ಥಾನಕ್ಕೆ ಅಂಟಿಕೊಂಡ ಆ ಕೊಠಡಿಗಳಿಗೂ, ಪ್ರತ್ಯೇಕಿಸಿದ ಸ್ಥಳದ ಕೋಣೆಗಳಿಗೂ ನಡುವೆ ದೇವಸ್ಥಾನದ ಸುತ್ತುಮುತ್ತಲೂ ಇಪ್ಪತ್ತು ಮೊಳ ಅಂತರವಿತ್ತು.
11ಆ ಎಲ್ಲಾ ಕೊಠಡಿಗಳ ಪ್ರವೇಶಕ್ಕೂ ಎರಡೇ ಬಾಗಿಲು, ಉತ್ತರಕ್ಕೊಂದು, ದಕ್ಷಿಣಕ್ಕೊಂದು. ಅವೆರಡೂ ಜಗಲಿಯ ಕಡೆಗಿದ್ದವು. ಆ ಜಗಲಿಗಳೂ ಎಲ್ಲಾ ಸುತ್ತಲಿನ ಅಗಲವು ಐದು ಮೊಳವಾಗಿತ್ತು.
12ಪಶ್ಚಿಮದಲ್ಲಿ ಪ್ರತ್ಯೇಕಿಸಿದ ಸ್ಥಳದ ಹಿಂದಿನ ಶಾಲೆಯ ಅಗಲ ಎಪ್ಪತ್ತು ಮೊಳವೂ, ಉದ್ದ ತೊಂಭತ್ತು ಮೊಳವೂ, ಅದರ ಗೋಡೆಯ ದಪ್ಪ ಐದು ಮೊಳವಾಗಿತ್ತು.
13ಆ ಪುರುಷನು ಅಳೆಯಲು, ದೇವಸ್ಥಾನದ ಉದ್ದ ನೂರು ಮೊಳವೂ, ಪ್ರತ್ಯೇಕಿಸಿದ ಸ್ಥಳವನ್ನೂ ಮತ್ತು ಕಟ್ಟಡವನ್ನೂ ಗೋಡೆಗಳ ಸಹಿತವಾಗಿ ನೂರು ಮೊಳ ಉದ್ದವೆಂದು ಅಳೆದನು.
14ಇದಲ್ಲದೆ ದೇವಸ್ಥಾನದ ಮುಂಭಾಗ ಮತ್ತು ಪೂರ್ವದ ಕಡೆಗೆ ಇದ್ದ ಪ್ರತ್ಯೇಕ ಸ್ಥಳ ಇವುಗಳ ಒಟ್ಟು ಅಗಲ ನೂರು ಮೊಳವಾಗಿದ್ದವು.
15ಅವನು ಪ್ರತ್ಯೇಕಿಸಿದ ಸ್ಥಳವನ್ನೂ, ಹಿಂದಿನ ಶಾಲೆಯನ್ನು ಆ ಪ್ರಾಕಾರದ ಕಡೆಯಲ್ಲಿ ಅಳತೆ ಮಾಡಲು ಅದರ ಉದ್ದ ಎರಡು ಪಕ್ಕದ ಗೋಡೆಗಳ ಸಹಿತ ನೂರು ಮೊಳವಿತ್ತು.
16ಅವನು ಬಾಗಿಲುಗಳ ಕಂಬಗಳನ್ನೂ, ಇಕ್ಕಟ್ಟಾದ ಕಿಟಕಿಗಳನ್ನೂ ಮತ್ತು ಅದರ ಸುತ್ತಲೂ ಇದ್ದಂತಹ ಮೂರು ಅಂತಸ್ತಿನ ಬಾಗಿಲಿಗೆ ಎದುರಾಗಿ ಸುತ್ತಲೂ ಕಟ್ಟಲ್ಪಟ್ಟ ಗೋಡೆಗಳನ್ನೂ ಅಳೆದನು.
17ದ್ವಾರದಿಂದ ಗರ್ಭಗೃಹದವರೆಗೂ ಮತ್ತು ಗೃಹದ ಗೋಡೆಗೆಲ್ಲಾ ಸುತ್ತುಮುತ್ತಲೂ ಕೆರೂಬಿಗಳ ಮತ್ತು ಖರ್ಜೂರ ಮರಗಳ ಚಿತ್ರಗಳಿಗಿದ್ದವು.
18ಗೋಡೆಯ ಚೌಕಗಳಲ್ಲಿ ಕೆರೂಬಿಗಳೂ ಮತ್ತು ಖರ್ಜೂರ ಮರಗಳೂ ಚಿತ್ರಿತವಾಗಿದ್ದವು; ಎರಡೆರಡು ಕೆರೂಬಿಗಳ ನಡುವೆ ಒಂದೊಂದು ಖರ್ಜೂರ ಮರ; ಒಂದೊಂದು ಕೆರೂಬಿಗೆ ಎರಡೆರಡು ಮುಖಗಳಿತ್ತು.
19ಖರ್ಜೂರ ಮರದ ಒಂದು ಪಕ್ಕ ಮನುಷ್ಯನ ಮುಖಕ್ಕೆ ಎದುರಾಗಿಯೂ, ಇನ್ನೊಂದು ಪಕ್ಕ ಸಿಂಹದ ಮುಖಕ್ಕೆ ಎದುರಾಗಿತ್ತು. ಹೀಗೆ ದೇವಸ್ಥಾನದ ಒಳಗಿನ ಭಾಗವೆಲ್ಲಾ ಮತ್ತು ಸುತ್ತುಮುತ್ತಲೂ ಚಿತ್ರಮಯವಾಗಿತ್ತು.
20ನೆಲದಿಂದ ದ್ವಾರದ ಮೇಲಿನ ತನಕ ಕೆರೂಬಿಗಳ ಮತ್ತು ಖರ್ಜೂರ ಮರಗಳ ಚಿತ್ರಗಳಿದ್ದವು.
21ಪರಿಶುದ್ಧ ಸ್ಥಳದ ಇನ್ನೊಂದು ಕಡೆಯ ಗೋಡೆಯ ಬಾಗಿಲ ಚೌಕಟ್ಟು ಚಚ್ಚೌಕವಾಗಿತ್ತು. ಮಹಾಪರಿಶುದ್ಧ ಸ್ಥಳದ ಈಚಿನ ಗೋಡೆಯ ಚೌಕಟ್ಟೂ ಹಾಗೆಯೇ ಇತ್ತು.
22ಅಲ್ಲಿ ಮರದ ವೇದಿಕೆಯೊಂದಿತ್ತು. ಅದರ ಎತ್ತರ ಮೂರು ಮೊಳ, ಉದ್ದ ಎರಡು ಮೊಳವಾಗಿತ್ತು. ಅದರ ಮೂಲೆಗಳೂ, ಪೀಠವೂ, ಪಕ್ಕಗಳೂ ಮರದ್ದೇ ಆಗಿದ್ದವು. ಆ ಪುರುಷನು ನನಗೆ, “ಇದು ಯೆಹೋವನ ಸಮ್ಮುಖದ ಮೇಜು” ಎಂದು ಹೇಳಿದನು.
23ಪರಿಶುದ್ಧ ಸ್ಥಳಕ್ಕೆ ಮತ್ತು ಮಹಾಪರಿಶುದ್ಧ ಸ್ಥಳಕ್ಕೆ ಎರಡೆರಡು ಬಾಗಿಲುಗಳಿದ್ದವು.
24ಒಂದೊಂದು ಬಾಗಿಲಿಗೆ ಎರಡೆರಡು ಮಡಚುವ ಭಾಗಗಳಿದ್ದವು. ಈ ಕಡೆಯ ಬಾಗಿಲಿಗೆ ಎರಡು ಭಾಗ, ಆ ಕಡೆಯ ಬಾಗಿಲಿಗೆ ಎರಡು ಭಾಗಗಳು ಇದ್ದವು.
25ಆ ಬಾಗಿಲುಗಳಲ್ಲಿ ಅಂದರೆ ಪರಿಶುದ್ಧ ಸ್ಥಳದ ಬಾಗಿಲುಗಳಲ್ಲಿ ಕೆರೂಬಿಗಳ ಮತ್ತು ಖರ್ಜೂರ ಮರಗಳ ಚಿತ್ರಗಳು ಗೋಡೆಗಳಲ್ಲಿ ಚಿತ್ರಿಸಲ್ಪಟ್ಟ ಹಾಗೆಯೇ ಇದ್ದವು. ದ್ವಾರಮಂಟಪದ ಹೊರಗಡೆ ಮರದ ಹಲಗೆಗಳಿದ್ದವು.
26ದ್ವಾರಮಂಟಪದ ಪಕ್ಕದ ಗೋಡೆಗಳಲ್ಲಿ ತೆರೆಯಲಾಗದ ಕಿಟಕಿಗಳೂ ಇದ್ದವು. ಅವುಗಳ ಮೇಲೆ ಖರ್ಜೂರ ಮರಗಳು ಚಿತ್ರಿತವಾಗಿದ್ದವು ಮತ್ತು ಮೇಲೆ ತೂಗಾಡುವ ಮೇಲ್ಛಾವಣಿಗಳು ಇದ್ದವು.
WEBREATH · 11:11
«He himself gives everyone life and breath and everything else» — Acts 17:25
Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.
WEBREATH — the Minute at 11:11, your own local time — we are One Breath