ಯೆಹೆಜ್ಕೇಲನು 8
ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ
1ಯೆಹೋಯಾಖೀನನು ಸೆರೆಯಾದ ಆರನೆಯ ವರ್ಷದ, ಆರನೆಯ ತಿಂಗಳಿನ, ಐದನೆಯ ದಿನದಲ್ಲಿ ನಾನೂ ಮತ್ತು ಯೆಹೂದದ ಹಿರಿಯರೂ ನನ್ನ ಮನೆಯೊಳಗೆ ಎದುರಾಗಿ ಕುಳಿತಿರಲು ಕರ್ತನಾದ ಯೆಹೋವನ ಹಸ್ತಸ್ಪರ್ಶದಿಂದ ನಾನು ಪರವಶನಾದೆನು.
2ಇಗೋ, ನಾನು ನೋಡಲಾಗಿ ಬೆಂಕಿಯು ಉರಿಯುತ್ತದೋ ಎಂಬಂತೆ ನನಗೆ ತೇಜೋರೂಪವು ಕಾಣಿಸಿತು; ಸೊಂಟದ ಹಾಗೆ ತೋರುವ ಅದರ ಮಧ್ಯಭಾಗದಿಂದ ಕೆಳಗಡೆ ಬೆಂಕಿಯು ಉರಿಯುತ್ತಿತ್ತು; ಅದರ ಮಧ್ಯಭಾಗದಿಂದ ಮೇಲ್ಗಡೆ ಸುವರ್ಣವು ಥಳಥಳಿಸುತ್ತದೋ ಎಂಬಂತೆ ಅದ್ಭುತಕಾಂತಿಯು ಹೊಳೆಯಿತು.
3ಆಗ ಆ ತೇಜೋರೂಪಿಯು ಮನುಷ್ಯ ಹಸ್ತದಂಥ ಹಸ್ತವನ್ನು ಚಾಚಿ ನನ್ನ ತಲೆಯ ಕೂದಲಿನಿಂದ ಹಿಡಿಯಲು ದೇವರಾತ್ಮವು ನನ್ನನ್ನು ಎತ್ತಿಕೊಂಡು ಭೂಮ್ಯಾಕಾಶಗಳ ನಡುವೆ ಯೆರೂಸಲೇಮಿನವರೆಗೆ ಒಯ್ದು, ಒಳಗಣ ಪ್ರಾಕಾರದ ಉತ್ತರ ಬಾಗಿಲ ಮುಂದೆ, ದೇವರನ್ನು ರೋಷಗೊಳಿಸುವ ವಿಗ್ರಹವು ಮೊದಲಿದ್ದ ಸ್ಥಳದಲ್ಲಿ ನಿಲ್ಲಿಸಿದ ಹಾಗೆ ಆ ದೇವದರ್ಶನದಲ್ಲಿ ನನಗೆ ಕಂಡು ಬಂದಿತು.
4ಆಹಾ, ಇಸ್ರಾಯೇಲಿನ ದೇವರ ಮಹಿಮೆಯ ದರ್ಶನವು ಬಯಲು ಸೀಮೆಯಲ್ಲಿ ಆದಂತೆ ಇಲ್ಲಿಯೂ ನನಗಾಯಿತು.
5ಆಗ ಆತನು ನನಗೆ, “ನರಪುತ್ರನೇ, ಉತ್ತರ ದಿಕ್ಕಿಗೆ ಕಣ್ಣೆತ್ತಿ ನೋಡು” ಎಂದು ಹೇಳಿದನು; ಹಾಗೆ ನಾನು ಉತ್ತರ ದಿಕ್ಕಿಗೆ ಕಣ್ಣೆತ್ತಿ ನೋಡಲು, ಇಗೋ, ದೇವರನ್ನು ರೋಷಗೊಳಿಸುವ ಆ ವಿಗ್ರಹವು ಯಜ್ಞವೇದಿಯ ಉತ್ತರದಿಕ್ಕಿನ ಬಾಗಿಲಿನ ಪ್ರವೇಶದ್ವಾರದ ಮುಂದೆ ನಿಂತಿತ್ತು.
6ಆಗ ಆತನು ನನಗೆ, “ನರಪುತ್ರನೇ, ಇವರು ಮಾಡುವುದನ್ನು ನೋಡಿದೆಯಾ? ಇಸ್ರಾಯೇಲ್ ವಂಶದವರು ಇಲ್ಲಿ ನಡೆಸುವ ಅಧಿಕ ದುರಾಚಾರಗಳನ್ನು ಕಂಡೆಯಾ? ಇದರಿಂದ ನಾನು ನನ್ನ ಪವಿತ್ರಾಲಯವನ್ನು ಬಿಟ್ಟು ದೂರ ಹೋಗಬೇಕಾಯಿತು. ಬಾ, ಇವುಗಳಿಗಿಂತ ಇನ್ನು ಹೆಚ್ಚಾದ ದುರಾಚಾರಗಳನ್ನು ನೋಡುವೆ” ಎಂದು ಹೇಳಿದನು.
7ಆಮೇಲೆ ಆತನು ನನ್ನನ್ನು ಪ್ರಾಕಾರದ ಬಾಗಿಲಿಗೆ ಬರ ಮಾಡಿದನು; ಇಗೋ, ಆ ಗೋಡೆಯಲ್ಲಿ ಒಂದು ರಂಧ್ರವು ನನಗೆ ಕಾಣಿಸಿತು.
8ಆಗ ಆತನು ನನಗೆ, “ನರಪುತ್ರನೇ, ಗೋಡೆಯನ್ನು ತೋಡು” ಎಂದು ಹೇಳಿದನು. ನಾನು ಗೋಡೆಯನ್ನು ತೋಡಲಾಗಿ ಅಲ್ಲಿ, ಒಂದು ಬಾಗಿಲು ಕಾಣಿಸಿತು.
9ಆತನು ನನಗೆ, “ನೀನು ಒಳಕ್ಕೆ ಹೋಗಿ ಜನರು ಇಲ್ಲಿ ನಡೆಸುವ ಅಸಹ್ಯವಾದ ದುಷ್ಕಾರ್ಯಗಳನ್ನು ನೋಡು” ಎಂದು ಹೇಳಿದಾಗ ನಾನು ಹೋಗಿ ನೋಡಿದೆನು.
10ಇಗೋ, ಎಲ್ಲಾ ಜಾತಿಯ ಕ್ರಿಮಿಕೀಟಗಳೂ, ಅಸಹ್ಯ ಮೃಗಗಳೂ ಮತ್ತು ಇಸ್ರಾಯೇಲ್ ವಂಶದವರು ಪೂಜಿಸುವ ಸಕಲ ಮೂರ್ತಿಗಳೂ ಆ ಗೋಡೆಯ ಸುತ್ತಲೂ ಚಿತ್ರಿಸಲ್ಪಟ್ಟಿದ್ದವು.
11ಇಸ್ರಾಯೇಲ್ ವಂಶದ ಎಪ್ಪತ್ತು ಮಂದಿ ಹಿರಿಯರೂ ಮತ್ತು ಅವರ ಮಧ್ಯದಲ್ಲಿ ಶಾಫಾನನ ಮಗನಾದ ಯಾಜನ್ಯನೂ ತಮ್ಮ ತಮ್ಮ ಕೈಗಳಲ್ಲಿ ಧೂಪಾರತಿಗಳನ್ನು ಹಿಡಿದುಕೊಂಡು ಆ ಚಿತ್ರಗಳ ಮುಂದೆ ನಿಂತಿದ್ದರು; ಧೂಪದ ಸುವಾಸನೆಯ ಧೂಮವು ಮೇಘವಾಗಿ ಏರುತ್ತಿತ್ತು.
12ಆಗ ಆತನು ನನಗೆ, “ನರಪುತ್ರನೇ, ಇಸ್ರಾಯೇಲ್ ವಂಶದ ಹಿರಿಯರೆಲ್ಲರೂ ನಾನಾ ರೂಪಗಳಿಂದ ಚಿತ್ರಿಸಲ್ಪಟ್ಟ ತಮ್ಮ ತಮ್ಮ ಕೋಣೆಗಳೊಳಗೆ ಕತ್ತಲೆಯಲ್ಲಿ ನಡೆಸುವ ಕೆಲಸವನ್ನು ನೋಡಿದೆಯಾ? ‘ಯೆಹೋವನು ನಮ್ಮನ್ನು ನೋಡುವುದಿಲ್ಲ, ಯೆಹೋವನು ದೇಶವನ್ನು ತೊರೆದುಬಿಟ್ಟಿದ್ದಾನೆ’ ಎಂದು ಮಾತನಾಡಿಕೊಳ್ಳುತ್ತಾರಷ್ಟೆ” ಎಂಬುದಾಗಿ ಹೇಳಿದನು.
13ಆಮೇಲೆ ಆತನು ನನಗೆ, “ಇವುಗಳಿಗಿಂತ ಇನ್ನೂ ಹೆಚ್ಚಾದ ದುರಾಚಾರಗಳನ್ನು ನೋಡುವಿ” ಎಂದು ಹೇಳಿದನು.
14ಆತನು ನನ್ನನ್ನು ಯೆಹೋವನ ಆಲಯದ ಉತ್ತರದ ಬಾಗಿಲ ಮುಂದಕ್ಕೆ ಕರೆತಂದನು; ಇಗೋ, ಅಲ್ಲಿ ಸ್ತ್ರೀಯರು “ತಮ್ಮೂಜ್ ” ದೇವತೆಗಾಗಿ ಅಳುತ್ತಾ ಕುಳಿತಿದ್ದರು.
15ಇದಾದ ಮೇಲೆ ಆತನು ನನಗೆ, “ನರಪುತ್ರನೇ, ಇದನ್ನು ನೋಡಿದೆಯಾ? ಇವುಗಳಿಗಿಂತ ಇನ್ನೂ ಹೆಚ್ಚಾದ ದುರಾಚಾರಗಳನ್ನು ನೋಡುವೆ” ಎಂದು ಹೇಳಿದನು.
16ಆತನು ಯೆಹೋವನ ಆಲಯದ ಒಳಗಣ ಪ್ರಾಕಾರದೊಳಕ್ಕೆ ನನ್ನನ್ನು ಕರೆತಂದನು; ಇಗೋ, ಯೆಹೋವನ ಆಲಯದ ಬಾಗಿಲ ಮುಂದೆ ಮಂಟಪಕ್ಕೂ ಮತ್ತು ಯಜ್ಞವೇದಿಗೂ ನಡುವೆ ಸುಮಾರು ಇಪ್ಪತ್ತೈದು ಜನರು ಯೆಹೋವನ ಆಲಯಕ್ಕೆ ಬೆನ್ನು ಮಾಡಿ ಪೂರ್ವದ ಕಡೆಗೆ ಮುಖ ಮಾಡಿ ಉದಯಕಾಲದ ಸೂರ್ಯನನ್ನು ಪೂಜಿಸುತ್ತಿದ್ದರು.
17ಆಗ ಆತನು ನನಗೆ, “ನರಪುತ್ರನೇ, ಇದನ್ನು ನೋಡಿದೆಯಾ? ಯೆಹೂದ ವಂಶದವರು ತಾವು ಇಲ್ಲಿ ನಡೆಸುವ ಅಸಹ್ಯಕಾರ್ಯಗಳು ಅಲ್ಪವೆಂದು ಭಾವಿಸಿದ್ದಾರೋ? ದೇಶವನ್ನು ಹಿಂಸೆಯಿಂದ ತುಂಬಿಸಿದ್ದಲ್ಲದೆ, ನನ್ನನ್ನು ಕೆಣಕಬೇಕೆಂದೇ ಮತ್ತೆ ಯತ್ನಿಸುತ್ತಿದ್ದಾರೆ; ನೋಡು, ಕೊಂಬೆಗಳನ್ನು ಮೂಗಿಗೆ ಒತ್ತಿಕೊಳ್ಳುತ್ತಾರೆ.
18ಆದಕಾರಣ ನಾನು ಕೋಪೋದ್ರೇಕದಿಂದ ವರ್ತಿಸುವೆನು, ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ; ಅವರು ಕೂಗಿಕೊಳ್ಳುವ ಮಹಾ ಶಬ್ದವು ನನ್ನ ಕಿವಿಗೆ ಬಿದ್ದರೂ ಆಲಿಸುವುದಿಲ್ಲ.”
WEBREATH · 11:11
«He himself gives everyone life and breath and everything else» — Acts 17:25
Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.
WEBREATH — the Minute at 11:11, your own local time — we are One Breath