ಕ್ರಿಶ್ಚಿಯನ್ ಧರ್ಮ
ಹಿಂದೆ

ಎಜ್ರನು 1

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ಪರ್ಷಿಯ ಅರಸನಾದ ಕೋರೆಷನ ಮೊದಲನೆಯ ವರ್ಷದಲ್ಲಿ ಯೆಹೋವನು ತಾನು ಯೆರೆಮೀಯನ ಮುಖಾಂತರ ಹೇಳಿಸಿದ ವಾಕ್ಯವನ್ನು ನೆರವೇರಿಸುವುದಕ್ಕಾಗಿ ಆ ಪರ್ಷಿಯ ರಾಜನಾದ ಕೋರೆಷನ ಮನಸ್ಸನ್ನು ಪ್ರೇರೇಪಿಸಿದನು.

2ಅವನು ತನ್ನ ರಾಜ್ಯದಲ್ಲೆಲ್ಲಾ ಡಂಗುರದಿಂದಲೂ, ಪತ್ರಗಳಿಂದಲೂ, “ಪರ್ಷಿಯ ರಾಜನಾದ ಕೋರೆಷನೆಂಬ ನನ್ನ ಮಾತನ್ನು ಕೇಳಿರಿ. ಪರಲೋಕದೇವರಾದ ಯೆಹೋವನು ನನಗೆ ಭೂಲೋಕದ ಎಲ್ಲಾ ರಾಜ್ಯಗಳನ್ನೂ ಕೊಟ್ಟು, ತನಗೋಸ್ಕರ ಯೆಹೂದ ದೇಶದ ಯೆರೂಸಲೇಮಿನಲ್ಲಿ ಆಲಯವನ್ನು ಕಟ್ಟಿಸಬೇಕು ಎಂದು ಆಜ್ಞಾಪಿಸಿದ್ದಾನೆ.

3ನಿಮ್ಮಲ್ಲಿ ಯಾರು ಆತನ ಪ್ರಜೆಗಳಾಗಿರುತ್ತಾರೋ, ಅವರು ಯೆಹೂದ ದೇಶದ ಯೆರೂಸಲೇಮಿಗೆ ಹೋಗಿ ಅಲ್ಲಿ ವಾಸಿಸುತ್ತಿರುವ ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಆಲಯವನ್ನು ಕಟ್ಟಲಿ. ಅವರ ದೇವರು ಅವರ ಸಂಗಡ ಇರಲಿ.

4ಸೆರೆಯವರಲ್ಲಿ ಉಳಿದವರು ಯಾವ ಊರುಗಳಲ್ಲಿ ಪ್ರವಾಸಿಗಳಾಗಿರುತ್ತಾರೋ ಆ ಊರುಗಳವರು ಯೆರೂಸಲೇಮಿನ ದೇವಾಲಯಕ್ಕೋಸ್ಕರ ಕಾಣಿಕೆಗಳನ್ನಲ್ಲದೆ ಬೆಳ್ಳಿಬಂಗಾರ, ಸರಕು, ಪಶು ಇವುಗಳನ್ನೂ ಕೊಟ್ಟು ಅವರಿಗೆ ಸಹಾಯ ಮಾಡಲಿ” ಎಂದು ಪ್ರಕಟಿಸಿದನು.

5ಆಗ ಯೆಹೂದ ಮತ್ತು ಬೆನ್ಯಾಮೀನ್ ಗೋತ್ರ ಪ್ರಧಾನರಲ್ಲಿಯೂ, ಯಾಜಕರಲ್ಲಿಯೂ ಮತ್ತು ಲೇವಿಯರಲ್ಲಿಯೂ ದೇವಪ್ರೇರಣೆಗೆ ಒಳಗಾದವರೆಲ್ಲರೂ ಯೆರೂಸಲೇಮಿನಲ್ಲಿ ಯೆಹೋವನಿಗೋಸ್ಕರ ಆಲಯವನ್ನು ಕಟ್ಟುವುದಕ್ಕಾಗಿ ಹೊರಟುಹೋದರು.

6ಅವರ ನೆರೆಯವರೆಲ್ಲರೂ ಕಾಣಿಕೆಗಳನ್ನು ಕೊಟ್ಟಿದ್ದಲ್ಲದೆ ಅವರಿಗೆ ಬೆಳ್ಳಿಯ ಸಾಮಾನು, ಬಂಗಾರ, ಸರಕು, ಪಶು, ಶ್ರೇಷ್ಠವಸ್ತು ಇವುಗಳನ್ನೂ ಕೊಟ್ಟು ಸಹಾಯಮಾಡಿದರು.

7ಅಲ್ಲಿಂದ ನೆಬೂಕದ್ನೆಚ್ಚರನು ಯೆರೂಸಲೇಮಿನಿಂದ ಕೊಳ್ಳೆಯಾಗಿ ತಂದು ತನ್ನ ದೇವರ ಗುಡಿಯಲ್ಲಿ ಇಟ್ಟಿದ್ದ ಯೆಹೋವನ ಆಲಯದ ಸಾಮಾನುಗಳನ್ನು ಪರ್ಷಿಯ ರಾಜನಾದ ಕೋರೆಷನು ಅಲ್ಲಿಂದ ತೆಗೆಸಿದನು.

8ಅವನು ಅವುಗಳನ್ನು ಖಜಾನೆಯ ಅಧಿಕಾರಿಯಾದ ಮಿತ್ರದಾತನಿಗೆ ಒಪ್ಪಿಸಿದನು. ಇವನು ಅವುಗಳನ್ನು ಯೆಹೂದದ ಪ್ರಭುವಾಗಿರುವ ಶೆಷ್ಬಚ್ಚರನಿಗೆ ಲೆಕ್ಕಮಾಡಿ ಕೊಟ್ಟನು.

9ಆ ಸಾಮಾನುಗಳ ಲೆಕ್ಕ: ಬಂಗಾರದ ಬೋಗುಣಿಗಳು ಮೂವತ್ತು; ಬೆಳ್ಳಿಯ ಬೋಗುಣಿಗಳು ಒಂದು ಸಾವಿರ; ಕತ್ತಿಗಳು ಇಪ್ಪತ್ತೊಂಭತ್ತು;

10ಚಿನ್ನದ ಬಟ್ಟಲುಗಳು ಮೂವತ್ತು; ಎರಡನೆಯ ದರ್ಜೆಯ ಬೆಳ್ಳಿಯ ಬಟ್ಟಲುಗಳು ನಾನೂರಹತ್ತು ಮತ್ತು ಇತರ ಪಾತ್ರೆಗಳು ಒಂದು ಸಾವಿರ.

11ಬೆಳ್ಳಿಬಂಗಾರದ ಎಲ್ಲಾ ಸಾಮಾನುಗಳ ಒಟ್ಟು ಸಂಖ್ಯೆಯು ಐದು ಸಾವಿರದ ನಾನೂರು. ಶೆಷ್ಬಚ್ಚರನು ಸೆರೆಯಲ್ಲಿದ್ದವರನ್ನು ಬಾಬಿಲೋನಿನಿಂದ ಯೆರೂಸಲೇಮಿಗೆ ಕರೆದುಕೊಂಡು ಬಂದಾಗ ಈ ಎಲ್ಲಾ ಸಾಮಾನುಗಳನ್ನು ತೆಗೆದುಕೊಂಡು ಬಂದನು.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath